ದ್ವೇಷದ ಭಾಷಣಕ್ಕಾಗಿ ಪ್ರಧಾನಿ ಮೋದಿ ವಿರುದ್ಧ ಕ್ರಮ ಕೋರಿ 2,200ಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಮನವಿ
Click 👉 https://t.co/3hgz7Y7IK9
#NarendraModi#ElectionCommission
ನಿಜವಾದ ದೇಶಪ್ರೇಮಿಗಳು ಇಂತಹ ಪ್ರಬುದ್ಧತೆಯುಳ್ಳವರು, ಎಂಟು ವರ್ಷಗಳ ಹಿಂದೆ ನಾನು ಸಹ ಈ ರೀತಿಯ ಯೋಚನೆಯಲ್ಲೆ ಮಾತಾಡೋದು ಶುರು ಮಾಡಿದೆ..
ಈಗ ಈ ಕಿತ್ತೋದ್ ಧರ್ಮಾಂಧಾತೆಯ ವ್ಯವಸ್ಥೆಯಲ್ಲಿ ಸತ್ಯ ಹೇಳುವ ನಮ್ಮಂತವರನ್ನೆ ಕೆಟ್ಟದಾಗಿ ಬಿಂಬಿಸುತ್ತಾರೆ..
ಆದರೂ ಸಹ ನನ್ನ ಮನಸ್ಸಿಗೆ ನಾನು ಮೋಸ ಮಾಡಿಕೊಳ್ಳುವುದಿಲ್ಲ..
#NewIndia
ಬರ ಪರಿಹಾರದ ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಹಂತದ ಜಯ ಸಿಕ್ಕಿದೆ.
ಒಂದು ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಕೇಂದ್ರ ಸರ್ಕಾರ ಒಪ್ಪಿದೆ.
ಚುನಾವಣಾ ಭಾಷಣದಲ್ಲಿ ಸುಳ್ಳು ಹೇಳುವ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಬಾಲ ಮುದುರಿ ಒಪ್ಪಿಕೊಂಡಿದೆ.
ಕನ್ನಡಿಗರ ಹಿತ ಕಾಯುವ ದೃಷ್ಟಿಯಿಂದ ಕೋರ್ಟ್ ಮೆಟ್ಟಿಲೇರುವ ಕರ್ನಾಟಕ ಸರ್ಕಾರದ ದಿಟ್ಟ ನಿರ್ಧಾರದಿಂದ ಕನ್ನಡದ ರೈತರಲ್ಲಿ ಆಶಾಭಾವನೆ ಮೂಡುವಂತಾಗಿದೆ.
ಈ ಹೋರಾಟದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜೊತೆ ಕೈಜೋಡಿಸಿ ಬೆಂಬಲವಾಗಿ ನಿಂತ ರಾಜ್ಯದ ರೈತರು ಹಾಗೂ ಪ್ರಜ್ಞಾವಂತ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇವೆ.
ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹು��: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ?
ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು.
‘’ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ’’ ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು.
‘ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು' ಎಂದು ಹಾರ��ಸಿದೆ.
ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ ಅಸಂಖ್ಯ ದೇಶಭಕ್ತರ ಬಲಿದಾನದ ಫಲ. ದೇಶಕೋಸ್ಕರ ಸರ್ವಸ್ವವನ್ನು ತ್ಯಾಗ ಮಾಡಿದ ನಾಯಕರನ್ನ ಸ್ಮರಿಸಿ, ಸರ್ವರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಸಬಲ ಸ���ೃಢ ಭಾರತ ನಿರ್ಮಾಣದ ಸಂಕಲ್ಪ ಯಶಸ್ವಿಯಾಗಲಿ.
ಜೈ ಹಿಂದ್