Wonderful to see this. This isn't a new rule, it's the OG way- Mannina Ganesha, visarjana, and the water stays clean. Good to see Karnataka hold the line on PoP. Thank you for pushing this, @krishnabgowda. Our lakes will thank us too. 🙏
ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ ವಂಚಿತರಿಗೆ ಮೀಸಲಾತಿ ಸಿಗಲೇಬೇಕು. ನಾವ್ಯಾರು ದಡ್ಡರಲ್ಲ, ಆದರೆ ಅವಕಾಶ ವಂಚಿತರು. ನಮ್ಮ ಬುದ್ಧಿವಂತಿಕೆ ಪ್ರದರ್ಶನಕ್ಕೆ ಅವಕಾಶ ಸಿಕ್ಕಿರಲಿಲ್ಲ. ಈ ಅವಕಾಶವನ್ನು ಮೀಸಲಾತಿ ವ್ಯವಸ್ಥೆ ನೀಡುತ್ತಿದೆ.
ಬುದ್ಧನ ಕಾಲದಿಂದಲೂ ಇಲ್ಲಿ ಜಾತಿ ವ್ಯವಸ್ಥೆ ಇದೆ, ಅದರ ವಿರುದ್ಧ ಸುಧಾರಣಾ ಚಳವಳಿಗಳು ನಡೆಯುತ್ತಿದೆ, ಇದು ಹೋಗಬೇಕು ಎಂದು ಎಲ್ಲರೂ ಹೇಳುತ್ತಾರೆ, ಆದರೂ ಇನ್ನೂ ಜಾತಿ ಜೀವಂತವಿದೆ ಎನ್ನುವುದು ವಿಪರ್ಯಾಸ.
ನನಗೆ ಸಮಾಜ ಅರ್ಥಮಾಡಿಕೊಳ್ಳುವ ವಯಸ್ಸು ಆದಾಗಿನಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಲೇ ಇದ್ದೇನೆ. ಮುಂದೆಯೂ ಹೋರಾಟ ಮಾಡುತ್ತೇನೆ. ಪಟ್ಟಭದ್ರರು ಬಹಳಾ ಮುಂದಾಲೋಚನೆ ಮಾಡಿ ಈ ಜಾತಿ ವ್ಯವಸ್ಥೆಯನ್ನು ಮಾಡಿದ್ದಾರೆ. ವರ್ಣ ವ್ಯವಸ್ಥೆ ನಾಶವಾಗಬೇಕು. ಇದಕ್ಕೆ ಎಲ್ಲಾ ಶೋಷಿತ ಜಾತಿಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಶಕ್ತಿಯನ್ನು ತುಂಬುವುದೇ ಪರಿಹಾರವಾಗಿದೆ.
ಮಂಡಲ್ ಕಮಿಷನ್ ವರದಿ ಜಾರಿಗೆ ಬಂದಾಗ ಮೀಸಲಾತಿ ವಿರೋಧಿಗಳು ಅಮಾಯಕ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ, ಅವರು ಬೆಂಕಿಹಚ್ಚಿಕೊಂಡು ಪ್ರಾಣ ಕಳೆದುಕೊಳ್ಳುವಂತೆ ಮಾಡಿದರು. ಒಂದು ವೇಳೆ ವಿ.ಪಿ.ಸಿಂಗ್ ಅವರು ಪ್ರಧಾನಿಯಾಗಿರದೇ ಹೋಗಿದ್ದರೆ ಮಂಡಲ್ ಕಮಿಷನ್ ವರದಿ ಜಾರಿ ಆಗುವುದು ಅನುಮಾನವಿತ್ತು.
ಮೀಸಲಾತಿಗಾಗಿ ನಾವು ಹೋರಾಟವನ್ನೇ ಮಾಡಿಲ್ಲ. ನಮ್ಮ ಮೀಸಲಾತಿ ಹೋರಾಟ ನಿರಂತರವಾಗಿ ನಡೆಯುತ್ತಲೇ ಇರಬೇಕು. ಸುಪ್ರೀಂ ಕೋರ್ಟ್ ಕೂಡ ಒಳಮೀಸಲಾತಿ ಬಗ್ಗೆ ಒಪ್ಪಿಕೊಂಡಿದೆ. ಕಾಂಗ್ರೆಸ್ ಪಕ್ಷ, ನಮ್ಮ ಸರ್ಕಾರ ಯಾವಾಗಲೂ ಒಳ ಮೀಸಲಾತಿ ಪರವಾಗಿದೆ. ಮೀಸಲಾತಿಗೆ ಯಾವತ್ತೂ ಕೂಡ ಭಿನ್ನಾಭಿಪ್ರಾಯಗಳು ಬರಬಾರದು. ಕೆಲವರು ಸ್ವಾರ್ಥಕ್ಕಾಗಿ ಮೀಸಲಾತಿ ವಿರುದ್ಧವಾಗಿರುವ ಜನರ ಜೊತೆಗೆ ಸೇರಿಕೊಳ್ಳುತ್ತಾರೆ. ಅದು ಆಗಬಾರದು. ಯಾವ ಪಕ್ಷ ಮೀಸಲಾತಿಗೆ ವಿರೋಧ ಇದೆಯೋ ಅವರ ಪರವಾಗಿ ನಿಲ್ಲುವುದು, ಆ ಪಕ್ಷದ ಸಿದ್ಧಾಂತಕ್ಕೆ ಜೈ ಅನ್ನುವುದು. ಇದು ಸ್ವಾರ್ಥ ಅಲ್ಲವೇ?
- ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ"ವನ್ನು ಉದ್ಘಾಟಿಸಿ ಮಾತನಾಡಿದೆ 1/3
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದ ಅಂಗವಾಗಿ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣ ಸಮೀಪವಿರುವ ರಾಯಣ್ಣ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ರಾಯಣ್ಣನ ತ್ಯಾಗ - ಬಲಿದಾನವನ್ನು ಸ್ಮರಿಸಿದೆ.
Fraand 😂😂 you may chose n deny voting rights of few citizens who may not elect you back to thrown.. but can you stop us from eventually bringing you down from your thrown #justasking
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ.
ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ.
ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷವಾಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ.
2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು - ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ.
ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡುಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೇನೆ.
ಐದು ದಶಕಗಳ ಕಾಲ ರಾಜ್ಯದ ಜನತೆ ನನ್ನನ್ನು ತಮ್ಮಲ್ಲೊಬ್ಬ ಎಂಬಂತೆ ಕಂಡಿದ್ದಾರೆ, ಪ್ರೀತಿಯಿಂದ ಸಲಹಿದ್ದಾರೆ. ಈ ಋಣಭಾರ ನನ್ನ ಮೇಲಿದೆ. ಹೀಗಾಗಿ ನನ್ನ ಮುಂದಿನ ಜೀವನ ಸಹ ಜನಸೇವೆಗೆ ಮುಡಿಪಾಗಿರುತ್ತದೆ.
- ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡು, ಮಾತನಾಡಿದೆ
@narendramodi Ask your officers to stop hitting students and remove the cases against students.
crocodile tears.... 😂
Shame shame shame..
On your governance 😌
Youth of my country are fighting for their future . a movement like freedom struggle is brewing again . i will continue to empower this churning.. i will continue to hold their hands.. give them my strength and stand by them for their future. 💪💪 #justasking
ನೀವು ಅವರ ಸಿದ್ಧಾಂತವನ್ನು ಒಪ್ಪಬಹುದು ಅಥವಾ ಒಪ್ಪದೇ ಇರಬಹುದು. ಆದರೆ ಅವರು ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಉದ್ದೇಶವನ್ನು ವಿರೋಧಿಸುವುದು ಕಷ್ಟ.
ಇದನ್ನೇ ನಿಜವಾದ ದೇಶಭಕ್ತಿ ಎಂದು ಕರೆಯುತ್ತಾರೆ. ಇದನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗದಿದ್ದರೆ, ಅದು ನಿಮ್ಮದೇ ನಷ್ಟ.
#SonamMeraHero#CJP
ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿ, ದೇವೇಗೌಡರ ಪತ್ನಿ ಚೆನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ, ಬಳಿಕ ದುಃಖತಪ್ತ ಕುಟುಂಬ ಸದಸ್ಯರನ್ನು ಸಂತೈಸಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು ಸಮೀಪದಿಂದ ಬಲ್ಲವನು.
ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ - ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು.
ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು.
ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ.
ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ.
ಕರ್ನಾಟಕ ಏಕೀಕರಣ ಚಳವಳಿಯ ರೂವಾರಿ, ಕನ್ನಡದ ಕುಲಪುರೋಹಿತ ಎಂದೇ ಖ್ಯಾತರಾದ ಶ್ರೀ ಆಲೂರು ವೆಂಕಟರಾಯ ಅವರ ಜನ್ಮದಿನದಂದು ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ.
ಮೈಸೂರು, ಬಾಂಬೆ ಪ್ರೆಸಿಡೆನ್ಸಿ ಹಾಗೂ ನಿಜಾಮರ ಹೈದರಾಬಾದ್ನಲ್ಲಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಪ್ರತ್ಯೇಕ ಕರ್ನಾಟಕ ರಾಜ್ಯ ನಿರ್ಮಾಣವಾಗಬೇಕು ಎಂಬ ಮಹತ್ತರ ಕನಸಿನೊಂದಿಗೆ ಕರ್ನಾಟಕ ಏಕೀಕರಣ ಚಳವಳಿಯನ್ನು ಮುನ್ನಡೆಸಿದ ಮಹಾನ್ ಚೇತನರ ಕೊಡುಗೆಗಳು ಅಪಾರ.
#ಆಲೂರು_ವೆಂಕಟರಾಯ
ಶತಮಾನಗಳ ಕಾಲ ಜಾತಿ, ವರ್ಣ, ಲಿಂಗದ ಹೆಸರಿನಲ್ಲಿ ನಡೆಯುತ್ತಿದ್ದ ಅನ್ಯಾಯ, ಅಧರ್ಮ, ಶೋಷಣೆಗಳ ವಿರುದ್ಧ ನ್ಯಾಯ, ಸಮಾನತೆ ಮತ್ತು ಸತ್ಯದ ಕಹಳೆ ಮೊಳಗಿಸಿದವರು ಹಡಪದ ಅಪ್ಪಣ್ಣನವರು.
ಸಮಸಮಾಜದ ಹರಿಕಾರರಾದ ಜಗಜ್ಯೋತಿ ಬಸವೇಶ್ವರರ ಅತ್ಯಾಪ್ತರಾಗಿದ್ದ ಅಪ್ಪಣ್ಣನವರು, ಸಮಾಜದ ಶೋಷಿತ, ತಳ ಸಮುದಾಯಗಳ ಜನರನ್ನು ಒಗ್ಗೂಡಿಸಿ, ಅವರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಸ್ವಾಭಿಮಾನಿ - ಸ್ವಾವಲಂಬಿಗಳಾಗಿ ಪರಿವರ್ತಿಸಿದವರು.
ಕಾಯಕನಿಷ್ಠೆ, ದಾಸೋಹನಿಷ್ಠೆ, ಭಕ್ತಿ, ವೈರಾಗ್ಯ, ಆಚಾರ - ವಿಚಾರಗಳನ್ನು ವಚನ ರೂಪದಲ್ಲಿ ಕಟ್ಟಿಕೊಟ್ಟ ಶರಣ ಅಪ್ಪಣ್ಣನವರಿಗೆ ಜಯಂತಿಯ ನಮನಗಳು.