ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೈಲಹೊಂಗಲ ಠಾಣಾ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು ಆತನಿಂದ ಬೈಲಹೊಂಗಲ ಠಾಣಾ ವ್ಯಾಪ್ತಿಯ 3 ಮನೆ ಕಳ್ಳತನ ಪ್ರಕರಣದಲ್ಲಿ ಕಳ್ಳತನವಾಗಿದ್ದ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ದಿವಸ ಯಮಕನಮರಡಿ ಮತ್ತು ನಂದಗಡ ಪೊಲೀಸ್ ಠಾಣಾ ವತಿಯಿಂದ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಮತ್ತು ದ್ವಿಚಕ್ರ ವಾಹನ ಚಾಲಕರಿಗೆ ಕಡ್ಡಾಯ ಹೆಲ್ಮೆಟ್ ಧರಿಸುವ ಬಗ್ಗೆ ಅರಿವು ಮೂಡಿಸಲಾಯಿತು.