ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ ರಾಜ್ಯ ಕಳ್ಳರನ್ನು ಬಂಧಿಸಿದ್ದು ಒಟ್ಟು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಒಡವೆ ಮತ್ತು 4,50,000 ಮೌಲ್ಯದ ಒಂದು ಬುಲೆನೋ ಕಾರು ವಶಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.
#CrimeDetection
ಇಂದು ಮೈಸೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಪರೇಷನ್ ರೈಸ್ (OperationRISE) ಉಪಕ್ರಮ ಹಾಗೂ #ಬೇಡBro ಎಂಬ ಡ್ರಗ್ಸ್ ವ್ಯಾಸನ ಮುಕ್ತ ಜಾಗೃತಿ ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.
@KarnatakaCops@Rangepol_SR@CPMysuru
ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಸಾಗಣೆ ಕಂಡು ಬಂದಲ್ಲಿ ತಕ್ಷಣವೇ KSP Mobile App ನಿಂದ ಮಾಹಿತಿ ನೀಡುವ ಮೂಲಕ ಪ್ರತಿಯೊಬ್ಬರು ಮಾದಕ ವ್ಯಸನ ಮುಕ್ತ ಜಿಲ್ಲೆಗಾಗಿ ಕೈಜೋಡಿಸೋಣ.
ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.
#SayNoToDrug@Rangepol_SR@KarnatakaCops
"ಮಾದಕ ದ್ರವ್ಯಗಳ ವಿರುದ್ಧ ಧ್ವನಿ ಎತ್ತೋಣ, ಸಶಕ್ತ ಮತ್ತು ಆರೋಗ್ಯವಂತ ಸಮಾಜವನ್ನು ಜೊತೆಯಾಗಿ ಕಟ್ಟೋಣ."
ಬದಲಾವಣೆ ನಮ್ಮಿಂದಲೇ ಆರಂಭವಾಗಲಿ.ಮಾದಕ ವ್ಯಸನಕ್ಕೆ ಧೈರ್ಯದಿಂದ ಹೇಳಿ #ಬೇಡBro
ನಂಜನಗೂಡು ಪಟ್ಟಣ ಠಾಣೆಯ ವ್ಯಾಪ್ತಿಯಲ್ಲಿ ಕಳೆದುಕೊಂಡಿದ್ದ ಮೊಬೈಲ್ ಫೋನ್ ಅನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಹಚ್ಚಲಾಯಿತು.
ಪತ್ತೆಯಾದ ಮೊಬೈಲ್ ಫೋನ್ ಅನ್ನು ಅದರ ಮಾಲೀಕರಿಗೆ ಮರಳಿ ಹಸ್ತಾಂತರಿಸಲಾಯಿತು.
#CEIRportal#mobiledetection
ಇಂದು ರಾಜ್ಯದ ಜಿಲ್ಲಾ ಪೊಲೀಸ್ ಘಟಕಗಳಿಗೆ ನಿಯೋಜಿಸಲಾಗುವ 32 ಅತ್ಯಾಧುನಿಕ ನೂತನ ಮೊಬೈಲ್ ಫೋರೆನ್ಸಿಕ್ ವ್ಯಾನ್ ಗಳು ಮತ್ತು 75 ಬೊಲೆರೋ ವಾಹನಗಳ ಲೋಕಾರ್ಪಣೆ ಸಮಾರಂಭ ವಿಧಾನ ಸೌಧದ ಮುಂಭಾಗ ಜರುಗಿತು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರು ವಾಹನಗಳಿಗೆ ವಿದ್ಯುಕ್ತವಾಗಿ ಹಸಿರು ನಿಶಾನೆ ತೋರಿಸಿದರು. 1/2
ಸಂಚಾರಿ ಇ - ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ಘೋಷಣೆ ಹಿನ್ನೆಲೆಯಲ್ಲಿ, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಶೇ. 50 ರಷ್ಟು ರಿಯಾಯಿತಿ ಪಡೆದು ದಂಡ ಪಾವತಿಸುತ್ತಿರುವುದು. ಈ ರಿಯಾಯಿತಿಯು ಜುಲೈ-10 ರವರೆಗೆ ಮಾತ್ರ..!
#MYSURU#TRAFFICFINE
ಇಂದು ಮೈಸೂರು ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ರವರು, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾದ 29 ಪ್ರಕರಣಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿ,
ಇಂದು ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ರವರು ನಿಸ್ತಂತು ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ LHBS ಹಾಗೂ 112 ಸೇವೆಗೆ ಸಂಬಂಧಿಸಿದ ವಿಷಯಗಳು ಮತ್ತು ಸಿಬ್ಬಂದಿಗಳ ಕುಂದು-ಕೊರತೆಗಳನ್ನು ಆಲಿಸಿ,
ಮೈಸೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ಸರಹದ್ದಿನಲ್ಲಿ "ಅಕ್ಕ ಪಡೆ"ಯ ಕಾರ್ಯನಿರ್ವಹಣೆ ಬಗ್ಗೆ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಮತ್ತು ಮಕ್ಕಳಿಗೆ ಅರಿವು ಮೂಡಿಸಿ ಮಹಿಳಾ ಸಹಾಯವಾಣಿ 181, ಮಕ್ಕಳ ಸಹಾಯವಾಣಿ 1098 ಹಾಗೂ ತುರ್ತು ಸಹಾಯವಾಣಿ 112 ಬಗ್ಗೆ ಮಾಹಿತಿ ನೀಡಲಾಯಿತು.
#ಅಕ್ಕಪಡೆ#181Helpline@Rangepol_SR@KarnatakaCops