ರಾಜ್ಯದ ಅಭಿವೃದ್ಧಿಗೆ ಹೊಸ ರೂಪ - ಹೊಸ ವೇಗ ನೀಡುವ ನನ್ನ ಸಂಕಲ್ಪಕ್ಕೆ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುನ್ನುಡಿ ಬರೆದಿದ್ದೇನೆ.
ರಾಜ್ಯದ ಜನರ ಸರ್ವತೋಮುಖ ಪ್ರಗತಿಯ ಭರವಸೆಯನ್ನಿತ್ತು ಅಧಿಕಾರಕ್ಕೆ ಬಂದಿರುವ ನಾವು ಜನತೆ ಕೊಟ್ಟ ಈ ಅವಕಾಶವನ್ನು ಅಧಿಕಾರವೆಂದು ಭಾವಿಸದೆ, ಸೇವೆಯ ಭಾಗ್ಯವೆಂದು ತಿಳಿದು ಈ ಎಲ್ಲಾ ನೂತನ ಕಾರ್ಯಕ್ರಮಗಳನ್ನು ನಾಡಿಗೆ ಜನತೆಗೆ ಅರ್ಪಿಸುತ್ತಿದ್ದೇನೆ.
* ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಎಲ್ಲಾ ಹಂತದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಸಂಬಂಧಪಟ್ಟ ಅರ್ಜಿ ವಿತರಣೆಯ ಬಗ್ಗೆ ಸಾರಿಗೆ ಇಲಾಖೆಯು ಸದ್ಯದಲ್ಲಿಯೇ ಕ್ರಮ ಕೈಗೊಳ್ಳಲಿದೆ.
* ರಾಜ್ಯದಲ್ಲಿ ಉದ್ಯೋಗದ ಸಮಸ್ಯೆಯನ್ನು ನೀಗಿಸುವ ದಿಸೆಯಲ್ಲಿ ಸರ್ಕಾರ, ಈಗಾಗಲೇ 56,000 ಹುದ್ದೆಗಳನ್ನು ಭರ್ತಿಗೊಳಿಸುವ ನಿರ್ಣಯವನ್ನು ಕೈಗೊಂಡಿದೆ. ಈ ಬಗ್ಗೆ ಎಲ್ಲಾ ತೊಡಕುಗಳನ್ನು ನಿವಾರಿಸಿ ನೇಮಕಾತಿ ಪ್ರಕ್ರಿಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಕರ್ನಾಟಕ ರಾಜ್ಯವು ಗುಣಮಟ್ಟದ ಮಾನವಸಂಪನ್ಮೂಲದಲ್ಲಿ ಭಾರತದ ರಾಜಧಾನಿಯೆಂದೇ ಹೆಸರು ಗಳಿಸಿದೆ. ಶಿಕ್ಷಣ, ಆರೋಗ್ಯ, ತಂತ್ರಜ್ಞಾನ, ಐಟಿ ಬಿಟಿ ಸೇರಿದಂತೆ ವಿವಿಧ ವಲಯಗಳಲ್ಲಿ ಕರ್ನಾಟಕದಿಂದ ಶ್ರೇಷ್ಠ ಮಾನವಸಂಪನ್ಮೂಲ ಮೂಡಿಬಂದಿದೆ. ಖಾಸಗಿ ರಂಗದಲ್ಲಿ ಉದ್ಯೋಗ ಬಯಸುವ ಯುವಜನರಿಗೆ ಹಾಗೂ ಖಾಸಗಿ ಕಂಪನಿಗಳ ಉದ್ಯೋಗದ ಬೇಡಿಕೆಗಳ ನಡುವೆ ಸಂಪರ್ಕ ಕಲ್ಪಿಸುವ 'ಯುವ ಉದ್ಯೋಗ ಸೇತು' ವ್ಯವಸ್ಥೆಯನ್ನು ರೂಪಿಸಲು ನಿರ್ಣಯಿಸಲಾಗಿದೆ.
ಈ ಸೌಲಭ್ಯ ಕೇಂದ್ರದಲ್ಲಿ ಕಂಪನಿಗಳಿಗೆ ಅಗತ್ಯವಿರುವ ತರಬೇತಿಯನ್ನೂ ನೀಡಿ, ಅಲ್ಲಿನ ಅಭ್ಯರ್ಥಿಗಳನ್ನು ಕಂಪನಿಗಳಿಗೆ ಆಯ್ಕೆ ಮಾಡಲಾಗುವುದು. ಕರ್ನಾಟಕದವರಿಗೆ, ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಪಾಲು ನೀಡಲಾಗುವುದು. ಕನ್ನಡಿಗರಿಗೆ ನೀಡಬೇಕಾದ ಉದ್ಯೋಗದ ಶೇಕಡಾವಾರನ್ನು ಕಂಪನಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು.
ಈ ರಾಜ್ಯದ ಯುವಕರು, ವಿದ್ಯಾರ್ಥಿಗಳು, ನಿರುದ್ಯೋಗಗಳ ಉದ್ಯೋಗದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಇಲ್ಲಿನ ಯುವಕರನ್ನು ಜಾಗತಿಕ ಮಟ್ಟದಲ್ಲಿ ತಯಾರು ಮಾಡುವ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದ್ದು, ತಿಂಗಳೊಳಗೆ ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು. ಎಲ್ಲವೂ ಆನ್ ಲೈನ್ ಮೂಲಕ ಲಭ್ಯವಾಗಲಿದೆ.
* 10,000 ಭಾರತ ಜೋಡೋ ಯುವಕ ಸಂಘ ರಚಿಸಲು ತೀರ್ಮಾನಿಸಲಾಗಿದ್ದು, ಪ್ರತಿ ಪಂಚಾಯತಿಗೂ ಒಂದು ಯುವಕ ಸಂಘ ರಚಿಸುತ್ತೇವೆ. ಸಂಘದಲ್ಲಿ ಕನಿಷ್ಠ 150 ರಿಂದ 200 ಜನರಿರುತ್ತಾರೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಯುವಕ ಸಂಘಗಳು ಕೈಗೊಳ್ಳುವುದಲ್ಲದೇ ನಾಯಕತ್ವ ಬೆಳವಣಿಗೆಗೆ, ಸಾಮಾಜಿಕ ಸಾಮರಸ್ಯ ಕಾಪಾಡಲು ಶ್ರಮಿಸಲಿವೆ. ಅವರ ಪ್ರತಿಭೆಗೂ ಇಲ್ಲಿ ಅವಕಾಶ ದೊರೆಯಲಿದೆ. ಭಾರತ ಜೋಡೋ ಯುವಕ ಸಂಘಗಳಿಗೆ ಸರ್ಕಾರ ತಲಾ 10 ಲಕ್ಷ ರೂ.ಗಳ ಅನುದಾನ ನೀಡಲಿದೆ.
* ಬೆಂಗಳೂರು ನಗರದಲ್ಲಿ ವಿದ್ಯುತ್ ಸಮಸ್ಯೆ ಇದ್ದು, 2500 ಅಡಿ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಒಸಿ (OC) ಮತ್ತು ಸಿಸಿ (CC) ಪಡೆಯುವುದರಿಂದ ಒಂದು ಬಾರಿ ಮಾತ್ರ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ.
* ಬಿ ಖಾತೆಯನ್ನು ಎ ಖಾತೆಯಾಗಿ ಪರಿವರ್ತಿಸುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ಆರನೇ ಗ್ಯಾರಂಟಿಯಾದ ಭೂ ಗ್ಯಾರಂಟಿಗೆ ಸೂಕ್ತ ದಾಖಲೆ ಮಾಡಿಕೊಡಲು ತೀರ್ಮಾನಿಸಲಾಗಿದೆ.
* ನಗರ ಮೂಲಸೌಕರ್ಯವನ್ನು ಉತ್ತಮಗೊಳಿಸಲು, ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಹೊರತುಪಡಿಸಿ ಜಿಬಿಎ, ಬಿಡಿಎ ವ್ಯಾಪ್ತಿ ಸೇರಿ ಕೇವಲ ರಸ್ತೆಗಳನ್ನು ಉತ್ತಮಪಡಿಸಲು 2000 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.
- ಮುಖ್ಯಮಂತ್ರಿ ಶ್ರೀ @DKShivakumar
ಸರ್ ಇವತ್ತಿಗೂ ಕೋಟಿ ಕೋಟಿ ಅಭಿಮಾನಿಗಳು ಇದ್ದಾರೆ ಸರ್..
ಇವ್ರು ಈ ತರ ಒಳಗೊಳಗೇ ಮಾತಾಡಿಕೊಂಡು
ಕೆಳಗಿಳಿಸುತ್ತಾರೆ ಅಂದ್ರೇ ಏನರ್ಥ?
ಒಬ್ಬ Mass Leader ಗೇ ಈ ತರ ಗೌರವ ಕೊಡೋದ?
ರಾಹುಲ್ ಗಾಂಧಿ ಚುತಿಯ ನನ್ಮಗ..
ಸ್ವಂತ ಒಂದು ಗಟ್ಟಿ ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ..
ಇಲ್ಲಿ ಕುಡುಕೇಶಿ ಬ್ಲಾಕ್ ಮೇಲ್ ಆಟ ಆಡಿದ್ದಾನೆ ಅಷ್ಟೇ..
ಕನಿಷ್ಟ ವೇತನ ಹೆಚ್ಚಿಸಬೇಕೆಂಬ ಕಾರ್ಮಿಕರ ಬೇಡಿಕೆಗೆ ಮನ್ನಣೆ ನೀಡಿ, ಕಾರ್ಮಿಕರ ಕನಿಷ್ಟ ವೇತನವನ್ನು ಸರಾಸರಿ ಶೇ.60 ರಷ್ಟು ಹೆಚ್ಚಿಸಿದ್ದೇವೆ.
ಇ - ಕಾಮರ್ಸ್, ಕೊರಿಯರ್, ಖಾಸಗಿ ಶಾಲೆ - ಕಾಲೇಜುಗಳ ಬೋಧಕೇತರ ಸಿಬ್ಬಂದಿ, ಆಸ್ಪತ್ರೆ, ಹೋಟೆಲ್, ಆಹಾರ ಸಂಸ್ಕರಣೆ, ಪೆಟ್ರೋಲ್ ಬಂಕ್, ಧಾರ್ಮಿಕ ಸಂಸ್ಥೆಗಳಲ್ಲಿ ದುಡಿಯುವ ಸಿಬ್ಬಂದಿ, ಖಾಸಗಿ ಫೈನಾನ್ಸ್ ಸೇರಿದಂತೆ 83ಕ್ಕೂ ಅಧಿಕ ಅನುಸೂಚಿತ ಉದ್ಯೋಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಇದರಿಂದ ಉಪಯೋಗವಾಗಲಿದೆ.
ವೇತನ ನಿಗದಿಗೆ ಈ ಹಿಂದೆ 4 ವಲಯಗಳಿದ್ದವು. ಆದರೆ ಈಗ ವೇತನ ನಿಗದಿ, ಪರಿಷ್ಕರಣೆಗೆ 3 ವಲಯಗಳನ್ನು ರಚಿಸಲಾಗಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪ್ರದೇಶಗಳು ವಲಯ ಒಂದರಲ್ಲಿ ಬರಲಿವೆ. ಎರಡನೇ ವಲಯದಲ್ಲಿ ಜಿಲ್ಲಾ ಕೇಂದ್ರಗಳು ಹಾಗೂ ಮೂರನೇ ವಲಯದಲ್ಲಿ ಉಳಿದ ಪ್ರದೇಶಗಳು ಸೇರಿಕೊಳ್ಳಲಿವೆ.
ಮೂರನೇ ವಲಯದ ಕೌಶಲ್ಯರಹಿತ ಕಾರ್ಮಿಕರಿಗೆ ಗರಿಷ್ಠ ₹19,300 ಹಾಗೂ ವಲಯ ಮೂರರ ಕೌಶಲ್ಯಯುತ ಕಾರ್ಮಿಕರಿಗೆ ₹31,100ರ ವರೆಗೆ ವೇತನ ಪರಿಷ್ಕರಿಸಲಾಗಿದೆ.
ಈ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಹಗಲು - ರಾತ್ರಿಯೆನ್ನದೆ ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ನಾವು ಬದ್ಧರಿದ್ದೇವೆ.
#GuaranteeSarkara
ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಂಪನ್ಮೂಲದ ಸಮರ್ಪಕ ಹಂಚಿಕೆಗೆ ದಾರಿ ತೋರುತ್ತದೆ.
ಜನಗಣತಿ 2027ರ ಅಂಗವಾಗಿ ನಾವು ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದ್ದೇವೆ. 2026ರ ಏಪ್ರಿಲ್ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (https://t.co/egEEwd8GRM) ನಲ್ಲಿ ಭರ್ತಿ ಮಾಡಬಹುದು. ಈ ಪ್ರಕ್ರಿಯೆ ಸರಳ ಮತ್ತು ಸುರಕ್ಷಿತವಾಗಿದೆ. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇದರಲ್ಲಿ ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ.
ಇದು ಕೇವಲ ಕರ್ತವ್ಯವಲ್ಲ, ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಕೊಡುಗೆ. ಇಂದು ನೀವು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು, ಸೇವೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲು ಆಧಾರವಾಗುತ್ತದೆ. 2026, ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಗಣತಿಯಲ್ಲಿ ಯಾರೂ ಬಿಟ್ಟು ಹೋಗದಂತೆ ನಾವು ಖಚಿತಪಡಿಸುತ್ತೇವೆ. ಆದ್ದರಿಂದ ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಕೈಜೋಡಿಸೋಣ.
- @siddaramaiah , ಮಾನ್ಯ ಮುಖ್ಯಮಂತ್ರಿಗಳು
ವಿಜಯಪುರ ಜಿಲ್ಲೆ ತಿಡಗುಂದಿಯಲ್ಲಿ ಬರಲಿದೆ ಅತ್ಯಾಧುನಿಕ ಕೈಗಾರಿಕಾ-ಲಾಜಿಸ್ಟಿಕ್ಸ್ ಪಾರ್ಕ್ | ದುಡಿಯುವ ಕೈಗಳಿಗೆ ಹೇರಳ ಉದ್ಯೋಗ | ಸ್ಥಳೀಯ ಆರ್ಥಿಕತೆಗೆ ಮತ್ತಷ್ಟು ಬಲ
▶️ 1,200 ಎಕರೆ ಪ್ರದೇಶ, 5-7 ವರ್ಷಗಳಲ್ಲಿ 25 ಸಾವಿರ ಕೋಟಿ ಹೂಡಿಕೆ ನಿರೀಕ್ಷೆ
▶️ ಉತ್ತಮ ಸಂಪರ್ಕ ಜಾಲ: ರಾಷ್ಟ್ರೀಯ ಹೆದ್ದಾರಿಗೆ ಸಮೀಪ
▶️ ಸಮೃದ್ಧವಾದ ಜಲಸಂಪನ್ಮೂಲ, ಕೌಶಲ್ಯಪೂರ್ಣ ಪ್ರತಿಭೆ ಮತ್ತು ವಿದ್ಯುತ್ ಉತ್ಪಾದನೆಯ ಹೆಗ್ಗಳಿಕೆ ಜೊತೆಗೆ ಕೃಷಿ-ತೋಟಗಾರಿಕೆಯ ಯಶಸ್ಸು ವಿಜಯಪುರವನ್ನು ಉತ್ತಮ ಸ್ಥಳವಾಗಿಸಿದೆ.
▶️ ಮರುಬಳಕೆ ಇಂಧನ, ಸೋಲಾರ್ ಬಿಡಿಭಾಗಗ ತಯಾರಿಸುವ ಮತ್ತು ಬ್ಯಾಟರಿ ತಂತ್ರಜ್ಞಾನ ಹೊಂದಿರುವ ಕಂಪನಿಗಳು ಹೆಚ್ಚಾಗಿ ಸ್ಥಾಪನೆಗೊಳ್ಳಲಿವೆ.
▶️ ಕೈಗಾರಿಕಾ ಬೆಳವಣಿಗೆಯ ವೇಗ ಹೆಚ್ಚಿಸಲು ಪ್ಲಗ್ ಅಂಡ್ ಪ್ಲೇ ಸೌಲಭ್ಯ.
▶️ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಉತ್ತೇಜನ, ಸಂಸ್ಕರಣೆ-ರಫ್ತು ಹೆಚ್ಚಾಗಲಿದೆ.
▶️ ಈ ಭಾಗದ ಯುವಜನರು ಉದ್ಯೋಗ ಹುಡುಕುತ್ತಾ ಬೆಂಗಳೂರು, ಮುಂಬಯಿ ಮುಂತಾದ ಕಡೆಗಳಿಗೆ ವಲಸೆ ಹೋಗುವುದು ತಪ್ಪಲಿದೆ.
▶️ ವಿಜಯಪುರ ವಿಮಾನ ನಿಲ್ದಾಣ ಯುಗಾದಿ ವೇಳೆಗೆ ಉದ್ಘಾಟನೆ ಆಗಲಿದ್ದು, ಇದು ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ಶಕ್ತಿ ತುಂಬಲಿದೆ.
ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ.
ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲದ ರಾಜಕೀಯದಲ್ಲಿದ್ದರು.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.
ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಿವಶಂಕರಪ್ಪ ಅವರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು, ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದೆ, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದೆ. ನನ್ನ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದೆ, ಅದಕ್ಕೂ ಸಾಕಷ್ಟು ಸಹಕಾರ ನೀಡಿದ್ದರು.
ಶಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು.
ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರು ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು, ಭಗವಂತ ಅವರೆಲ್ಲರಿಗೂ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಪ್ರಾರ್ಥಿಸುತ್ತೇನೆ.
- ಮುಖ್ಯಮಂತ್ರಿ @siddaramaiah ಅವರು ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ಸಂತಾಪ ಸೂಚಿಸಿ, ಮಾತನಾಡಿದರು.
ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ತಲಾ ₹200 ಕೋಟಿಯಂತೆ ₹1,400 ಕೋಟಿ ವಿಶೇಷ ಅನುದಾವನ್ನು ನೀಡಲಾಗಿದೆ.
ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳನ್ನಾಗಿ ಉನ್ನತೀಕರಿಸುವ ವೇಳೆ ಹತ್ತಿರ ಇರುವ ಗ್ರಾಮಾಂತರ ಪ್ರದೇಶಗಳನ್ನು ಸಹ ಸೇರ್ಪಡೆ ಮಾಡಿ ಸರಹದ್ದು ನಿಗದಿಪಡಿಸಲಾಗುತ್ತಿದೆ. ಆದರೆ ಕೆಲ ಶಾಸಕರು ನಗರಸಭೆ ವ್ಯಾಪ್ತಿಯಿಂದ ಗ್ರಾಮಗಳನ್ನು ಕೈಬಿಡುವಂತೆ ಮನವಿ ಮಾಡುತ್ತಾರೆ. ಇದು ಕಷ್ಟದ ಕೆಲಸವಾಗಿದೆ. ಸರ್ಕಾರ ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿದ ಗ್ರಾಮಗಳ ಅಭಿವೃದ್ಧಿಗೆ ಹಣ ನೀಡಲಿದೆ, ಶಾಸಕರು ತಾಳ್ಮೆ ವಹಿಸಬೇಕು.
ಕರ್ನಾಟಕ ಪೌರಸಭೆಗಳ ಅಧಿನಿಯಮದ ಮಾನದಂಡಗಳ ಪ್ರಕಾರ 20,000 ದಿಂದ 50,000 ಜನಸಂಖ್ಯೆ, ಅಥವಾ ಚದರ ಮೀಟರ್ಗೆ 1,500 ಜನಸಾಂದ್ರತೆ, ರೂ.9 ಲಕ್ಷ ರಾಜಸ್ವ ಆದಾಯ, ಇಲ್ಲವೆ ಶೇ.50 ರಷ್ಟು ಕೃಷಿಯೇತರ ಚಟುವಟಿಕೆ ನಡೆಯುತ್ತಿದ್ದರೆ ಅಂತಹ ಸ್ಥಳವನ್ನು ಪುರಸಭೆಯನ್ನಾಗಿ ಉನ್ನತೀಕರಿಸಲಾಗುವುದು. ಆದರೆ ಹೊನ್ನಾವರ ಪಟ್ಟಣದಲ್ಲಿ 2011ರ ಜನಗಣತಿ ಅನ್ವಯ 19,109 ಜನಸಂಖ್ಯೆಯಿದೆ. ಈ ಹಿನ್ನಲೆಯಲ್ಲಿ ಹೊನ್ನಾವರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ತಿರಸ್ಕರಿಸಲಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವರ ಪರವಾಗಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರ ಉತ್ತರ
#BelagaviWinterSession
A remarkable life comes to an end, but her legacy will keep giving shade for generations.
Padma Shri Saalumarada Thimmakka passes away at 114.
Heartfelt condolences.
May her soul rest in peace. 🙏🌿
'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ' ಚಿತ್ರಕ್ಕೆ ಅತ್ಯುತ್ತಮ ನಿರ್ದೇಶಕ ಮತ್ತು ಅತ್ಯುತ್ತಮ ಮನರಂಜನೆಯ ಚಿತ್ರ ಪ್ರಶಸ್ತಿ ಪಡೆದ ಪ್ರೀತಿಯ ರಿಷಬ್ ಶೆಟ್ಟಿಯವರಿಗೆ ಹೃತ್ಪೂರ್ವಕ ಅಭಿನಂದನೆಗಳು!
Hearty congratulations to our dearest @shetty_rishab on winning Best Director and Best Entertaining Film awards for #SarkariHiriyaPrathamikaShaale at the Karnataka State Film Awards 2018.
Another proud milestone in your remarkable journey.
ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಲಾವಿದರ ಮಾಸಾಶನ 2,000 ರೂ.ನಿಂದ 2,500 ರೂ.ಗೆ ಹೆಚ್ಚಳ ಮಾಡಿದ್ದೇವೆ. ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯಗೊಳಿಸಿದ್ದೇವೆ. ರಾಜ್ಯದ ಮದರಾಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭಿಸಲಾಗಿದೆ.
ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತವೇ ನಮ್ಮ ಮೊದಲ ಆದ್ಯತೆ.
#ಕನ್ನಡರಾಜ್ಯೋತ್ಸವ
#ಕನ್ನಡವೇಸಾರ್ವಭೌಮ
𝗧𝗛𝗘 𝗨𝗟𝗧𝗜𝗠𝗔𝗧𝗘 𝗜𝗡𝗗𝗜𝗔𝗡 𝗗𝗨𝗢! 🇮🇳
Rohit Sharma and Virat Kohli have now played the joint-most international matches for India! 💙🔥
Now that’s what you call partnership goals and unmatched longevity. ✨
#AUSvIND#ViratKohli#RohitSharma#SKC#Sportskeeda
ನಮ್ಮ ಸರ್ಕಾರವು ಉದ್ಯೋಗಾಧಾರಿತ ಶಿಕ್ಷಣಕ್ಕೆ ಅತಿ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಜಿಟಿಟಿಸಿ ಬಹು-ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ವಿಟಿಯು ಸಹಯೋಗದೊಂದಿಗೆ ಕೊಪ್ಪಳ ಜಿಲ್ಲೆಯ ತಳಕಲ್ಲ ಮತ್ತು ಕಲಬುರಗಿಯಲ್ಲಿ ತಲಾ 120 ಕೋಟಿ ರೂ.ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ.
60 ಕೋಟಿ ರೂ. ವೆಚ್ಚದಲ್ಲಿ ಕಂಪ್ಲಿ, ರಾಯಚೂರು, ಸಿಂಧನೂರ ಮತ್ತು ಜೇವರ್ಗಿ ತಾಲೂಕುಗಳಲ್ಲಿ ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದೇವೆ. ಕಲಬುರಗಿ ಜಿಲ್ಲೆಯ ಸೇಡಂನಲ್ಲಿರುವ ಸರ್ಕಾರಿ ಐಟಿಐಯನ್ನು 25 ಕೋಟಿ ರೂ. ಅನುದಾನದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಉನ್ನತೀಕರಿಸುತ್ತಿದ್ದೇವೆ.
ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ.
ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುತ್ತಿದ್ದು, ಒಟ್ಟಾರೆ 390 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ಜವಳಿ ಪಾರ್ಕಿಗೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ. ಇದರಿಂದ 1 ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ.
ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಒಎಸ್ಡಿಎ ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ಪ್ರತಿ ವರ್ಷ 2,500 ಅಭ್ಯರ್ಥಿಗಳಿಗೆ ಉದ್ಯೋಗಾಧಾರಿತ ವಸತಿ ಸಹಿತ ಕೌಶಲ್ಯ ತರಬೇತಿ ನೀಡಲಾಗುವುದು.
#KalyanaKarnatakaUtsava
ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರವು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ, ಸೇತುವೆಗಳು ಹಾಗೂ ಸಿಸಿ ರಸ್ತೆಗಳ ನಿರ್ಮಾಣ ಸೇರಿದಂತೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಈ ವರೆಗೆ ರೂ.14,690 ಕೋಟಿ ವ್ಯಯಿಸಿದೆ. ಈ ಸಾಲಿನಲ್ಲಿ ಇನ್ನಷ್ಟು ಯೋಜನೆಗಳು ಜಾರಿಯಾಗಲಿದ್ದು, ಮಳೆಯಿಂದಾಗಿ ರಸ್ತೆ, ಸೇತುವೆ ನಿರ್ಮಾಣದಂತಹ ಕಾಮಗಾರಿಗಳಿಗೆ ಅಡಚಣೆಯಾಗಿದೆ.
ಅವುಗಳನ್ನು ಅನುಷ್ಠಾನ ಮಾಡಿಯೇ ಮಾಡುತ್ತೇವೆ.
40% ಕಮಿಷನ್ ಆಸೆಗೆ ಬೇಕಾಬಿಟ್ಟಿ ಯೋಜನೆಗಳಿಗೆ ಅನುಮತಿ ಕೊಟ್ಟು, ಲಕ್ಷಾಂತರ ಕೋಟಿ ಸಾಲದ ಪಾಪದ ಗಂಟನ್ನು ನಮ್ಮ ತಲೆಗೆ ಹೊರಿಸಿ ಹೋದ ಬಿಜೆಪಿ ನಾಯಕರೇ ಯಾವ ಮುಖವಿಟ್ಟುಕೊಂಡು ನಮ್ಮ ಬಗ್ಗೆ ಟೀಕೆ ಮಾಡುತ್ತೀರಿ?