ಈ ವರ್ಷದ ಅದ್ಧೂರಿ ರಾಜ್ಯೋತ್ಸವದ ಮೊದಲ ಡ್ರೋನ್ ವಿಡಿಯೋ ನಿಮಗಾಗಿ 💛❤😍 ಸುಮಾರು 7-8 ಲಕ್ಷ ಜನಾ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಸೇರಿದ್ದರೆಂದು ಅಂದಾಜಿಸಲಾಗಿದೆ.
#belagavi#belagavika
ಆಡಳಿತ ಪಕ್ಷಕ್ಕೆ ಆಕ್ರೋಶ, ಹತಾಶೆ, ಆತಂಕ, ಅನುಕಂಪ ಇರಬೇಕು, ತಪ್ಪಲ್ಲ. ಆದರೆ, ಹೊಟ್ಟೆಯಲ್ಲಿರುವ ಅಸಹ್ಯವನ್ನೆಲ್ಲ ಬಾಯಲ್ಲಿ ಕಾರಿಕೊಳ್ಳುವ ವಿಕೃತಿ ಮಾತ್ರ ಇರಲೇಬಾರದು. ಹೀಗಂತ ಹೇಳಲು ನಾವು ಗಂಭೀರವಾಗಿ ವಿಷಾದಿಸುತ್ತೇವೆ.
*
ನಾಮ ಹಾಕುವುದರಲ್ಲಿ @INCKarnataka ಪರಮ ನಿಸ್ಸೀಮ; ಅದಕ್ಕೆ ಸಾವಿರದೆಂಟು ಉದಾಹರಣೆ ಕೊಡಬಹುದು. ಈಗ ಹೇಳಿ; ಕೊಳಕುಮಂಡಲ ಯಾವುದು? ಅದೇ ಕಾಂಗ್ರೆಸ್ ಅಲಿಯಾಸ್ ಕೊಳಕುಗ್ರೆಸ್!!
*
ಒಂದೆಡೆ ಆದಾಯ ತೆರಿಗೆಯವರಿಗೆ #SST, #YST ಬಾಬ್ತುಗಳ ಕಂತೆ ಕಂತೆ ಹಣ ಸಿಕ್ಕಿದೆ. ಸಿಎಂ, ಡಿಸಿಎಂ ಪಟಾಲಂ ಪರಿಶ್ರಮದಿಂದ ಬಾಚಿದ್ದ ಪಾಪದ ಹಣ ಕೈ ತಪ್ಪಿದೆ. ಐಟಿ, ಈಡಿ ಕುಣಿಕೆ ಯಾರಿಗೆಲ್ಲ ಬಿಗಿದುಕೊಳ್ಳಲಿದೆಯೋ ಗೊತ್ತಿಲ್ಲ. ಸಾಹುಕಾರ ಸಿವಕುಮಾರ ಸುಲ್ತಾನನಿಗೂ ಸಿಬಿಐ ಸಿಕ್ಕು ಬಿದ್ದಿದೆ. ಇದೆಲ್ಲಾ ಹೋಗಲಿ ಎಂದರೆ, @INCKarnataka ಸರಕಾರಕ್ಕೆ 5 ತಿಂಗಳು ತುಂಬುವ ಮೊದಲೇ ಬೆಳಗಾವಿ ಜ್ವಾಲೆ ಭುಗಿಲೆದ್ದಿದೆ. ಅಂತಃಪುರದ ಕಲಹ ಹಾದಿಬೀದಿಗಳಲ್ಲಿ ಮೂರು ಕಾಸಿಗೆ ಬಿಕರಿಯಾಗುತ್ತಿದೆ. ಇನ್ನು ಕಕ್ಕಿಕೊಳ್ಳುವುದು ಬಿಟ್ಟರೆ ಇನ್ನೇನಿದೆ?
*
ಕಾಂಗ್ರೆಸ್ ವಕ್ರರೇಖೆಗಳ ಹೊಲಸುಗುಚ್ಛ!! ಅಷ್ಟಾವಕ್ರನ ಅಪರಾವತಾರಿ. ನಾಮ, ಪಂಗನಾಮ, ಉಂಡೆನಾಮಗಳೆಲ್ಲ ಅದರ ಆಜನ್ಮ ಆಸ್ತಿ. ಕೊಳಕು, ಹುಳಕು, ಥಳುಕು ಅದರ ಪೇಟೆಂಟು. ಭಾರತೀಯ ಅಸ್ಮಿತೆಯ ನೈಜ ಶತ್ರು, ದೇಶದ್ರೋಹಿಗಳ ಆಪ್ತಬಂಧು, ಹಸ್ತಿನಾವತಿಯಲ್ಲೇ ಅಡ್ರಸ್ಸಿಲ್ಲದ ಪಕ್ಷ, ಕರ್ನಾಟಕ ಜೋಡೋ ಬದಲು ಕಾವೇರಿ ತೋಡೋ ಎನ್ನುತ್ತಿದೆ.
*
ಅನುಮಾನವೇಕೆ? ಕೊಳಕು ಮಂಡಲ, ಬಚ್ಚಲು ಬಾಯಿ ಎಂದರೆ ಅದು ಕಾಂಗ್ರೆಸ್ಸೇ.. ಈಗ ನಾಲಿಗೆ.. ನಾಲಿಗೆ ಎನ್ನುತ್ತಿದೆ, ಛೀ.. ಹೇಸಿಗೆ. ಕಾಂಗ್ರೆಸ್ ನಾಲಿಗೆ ಗಬ್ಬೆದ್ದು ಬಹಳ ವರ್ಷವೇ ಆಗಿದೆ. ಜಾತ್ಯತೀತತೆ ಎನ್ನುವುದು ಆ ಕೊಳಕು ಪಕ್ಷದ ಥಳುಕು ಬಳಕಷ್ಟೇ. ಗೆಲ್ಲುವ ತನಕ ಜಾತ್ಯತೀತ, ಗೆದ್ದ ಮೇಲೆ ಜಾತಿಗಣಿತ! ಇದೇ ಅದರ ಮತ ಗಳಿಕೆಯ ಮೂಲ ಬಂಡವಾಳ. ತನ್ನ ಮುಖವನ್ನು ಕನ್ನಡಿಯಲ್ಲೂ ನೋಡಿಕೊಳ್ಳಲಾಗದ ದೈನೇಸಿ ಡರ್ಟಿಪಾರ್ಟಿ, ಪರರ ಹಂಗಿನಲ್ಲಿಯೆ ಬದುಕುವ ಪರಾವಲಂಬಿ!
*
ಸರಕಾರಗಳನ್ನು ಕೊಲ್ಲುವ, ಹೆಗಲು ಕೊಟ್ಟವರನ್ನೇ ಮೇಲೆತ್ತಿದ ಪಕ್ಷಗಳನ್ನೇ ಕೊಳಕುಮಂಡಲದಂತೆ ಕಚ್ಚುವ ಕೈ ಪಕ್ಷ ರಾಮಾಯಣ, ಮಹಾಭಾರತದಿಂದ ಎರವಲು ಪಡೆದದ್ದೇ ಅದೇ ಮಂಥರೆ, ಶಕುನಿಯ ಕುತಂತ್ರವನ್ನೇ. ಆಶ್ರಯ, ಅನ್ನ ಕೊಟ್ಟ ಪಕ್ಷಕ್ಕೇ ಕನ್ನ ಕೊರೆಯುವ, ಉಂಡ ಮನೆಗೇ ಎರಡನ್ನು ಬಗೆಯುವ ಮೀರ್ʼಸಾದಿಕರ ಆಡಂಬೋಲವೇ ಕಾಂಗ್ರೆಸ್. 75 ವರ್ಷದ ಈ ಪರದೇಸಿ ಪಕ್ಷದ್ದು ಸಮಾಜವಾದ, ಸಮತಾವಾದ, ಪ್ರಜಾಪ್ರಭುತ್ವವಾದ ಅಲ್ಲ, ಅದರದ್ದೇನಿದ್ದರೂ 'ಮೀರುಸಾದಿಕವಾದ!'; ಆ ಹಸ್ತವಾಸಿ ಲೋಕವಿಖ್ಯಾತಿ.
*
ಕಾಂಗ್ರೆಸ್ ತನಗಿರುವ ಬಿರುದು ಬಾವಲಿಗಳನ್ನು ಇನ್ನೊಬ್ಬರ ಹಣೆಗೆ ಕಟ್ಟುವ ಕೀಳು ಕಸುಬಿಗೆ ಕೈ ಹಾಕಿದೆ. ಗೋಮುಖವ್ಯಾಘ್ರವೇ ಈಗ ಕುಮಾರಸ್ವಾಮಿ ಅವರನ್ನು ಗೋಸುಂಬೆ ಎಂದು ನಿಂದಿಸುತ್ತಿದೆ. ಅಕ್ರಮ, ಅವ್ಯವಹಾರ, ಅನಾಚಾರ.. ಅಷ್ಟೇ ಅಲ್ಲ, ವಾಮಾಚಾರದ ವೀರನೇ ರಾಜ್ಯ ಕಾಂಗ್ರೆಸ್ ಸಾರಥಿ.
*
ಜಾತ್ಯತೀತತೆ ತನ್ನದೇ ಗುತ್ತಿಗೆ ಎಂದು ಕರ್ಣಕಠೋರ ಸುಳ್ಳು ಹೇಳುತ್ತಾ ಅದನ್ನು ಬಿಹಾರದ ನಿತೀಶ್ ಕುಮಾರ್ ಅವರ ಮನೆ ಹಿತ್ತಲಲ್ಲಿ ಹೂತು ಸಮಾಧಿ ಮಾಡಿದೆ ಕಾಂಗ್ರೆಸ್. ಈಗ ಜಾತಿ-ಜಾತಿ ಎನ್ನುತ್ತಾ ಜಾತಿಗಣಿತ ಎಂಬ ಅಪಾಯಕಾರಿ ಆಟ ಆರಂಭಿಸಿ ಚುನಾವಣೆಗೆ ಮುನ್ನವೇ ಟೂಲ್ ಕಿಟ್ ರೆಡಿ ಮಾಡಿಟ್ಟಿದೆ. ಈ ದುಷ್ಟ ಟೂಲುಕಿಟ್ಟಿನ ಕಿರಾತಕ ಕಾರ್ಯಾಗಾರ ಇಟಲಿಯಲ್ಲಿದೆಯೋ ಅಥವಾ ಲುಲೂ ಮಾಲಿನ ಮೇಲಿದೆಯೋ?
*
ರಾಜ್ಯವನ್ನು ತುಷ್ಟೀಕರಣದ ಬಿಸಿತುಪ್ಪದಲ್ಲಿ ಬೇಯಿಸಲು ನಡೆಯುತ್ತಿರುವ ಟೂಲ್ ಕಿಟ್ ಕಾರ್ಯಾಗಾರದಲ್ಲಿ ಕೋಮು ಕುಂಡ ಸಿದ್ಧಪಡಿಸಿದೆ ಕೈ ಪಕ್ಷ. ಶಿವಮೊಗ್ಗದಲ್ಲಿ ನಡೆದಿದ್ದು ಅದರ ಸ್ಯಾಂಪಲ್ಲಾ? ಅದನ್ನು ರಾಜ್ಯವ್ಯಾಪಿ ವಿಸ್ತರಿಸಲು ಹುನ್ನಾರವಾ?
*
ಕುಮಾರಸ್ವಾಮಿ ಅವರನ್ನು ವಚನ ಭ್ರಷ್ಟರು ಎನ್ನುತ್ತೀರಿ. ಮೈತ್ರಿ ಸರಕಾರ ತೆಗೆದು ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೇ ಒಳಏಟು ಕೊಟ್ಟ ಸಿದ್ದಪುರುಷರನ್ನೇ ಸಿಎಂ ಮಾಡಿಕೊಂಡಿದ್ದೀರಿ. ಸಿಗ್ಗು, ಲಜ್ಜೆ ಇಲ್ಲವೇ? ಪಕ್ಷ ವಿರೋಧಿಗೇ ಪಟ್ಟ ಕಟ್ಟಿ, ಪಕ್ಷದ ಚಟ್ಟ ಎತ್ತಿದ ಈ ರಾಜಕಾರಣಕ್ಕೆ ಏನೆಂದು ಹೇಳಬೇಕು?
*
ಕಾಂಗ್ರೆಸ್ ಕಳ್ಳಸುಳ್ಳಿನ ಫ್ಯಾಕ್ಟರಿ. ಅಪ್ಪಟ ಅಸತ್ಯಗಳ ಅಡ್ಡೆ. ದೇಶದ್ರೋಹಿಗಳ ಪರವಿರುವ ಪಾತಕ ಪಕ್ಷ. ಒಂದು ಸಮುದಾಯದ ತುಷ್ಠೀಕರಣದ ನಗದೀಕರಣವೇ ಅದರ ಅರ್ಥಶಾಸ್ತ್ರ. ವಿ.ಪಿ.ಸಿಂಗ್, ಚಂದ್ರಶೇಖರ್, ಹೆಚ್.ಡಿ.ದೇವೇಗೌಡರು, ಐಕೆ ಗುಜ್ರಾಲ್ ಸರಕಾರಗಳನ್ನು ಬಲಿ ಪಡೆದ ಕೊಲೆಗೆಡುಕ ಪಕ್ಷ. ಕೇರಳದ EMS ನಂಬೂದರಿಪಾಡ್ ಅವರ ಸರಕಾರದಿಂದ ಮೊದಲುಗೊಂಡು ಆ ಪಕ್ಷ ನಡೆಸಿದ ರಾಜ್ಯ ಸರಕಾರಗಳ ನರಮೇಧದ ಪಟ್ಟಿಯೇ ಹನುಮನ ಬಾಲದಷ್ಟು. ನಯವಂಚನೆ, ವಿಶ್ವಾಸದ್ರೋಹವೇ ಕಾಂಗ್ರೆಸ್ ಲಾಂಛನ. ಮೈತ್ರಿಯಿಂದ ಮದ್ರಾಸ್ ಐ ಬಂದ ಹಾಗೆ ಪತರಗುಟ್ಟುತ್ತಿದೆ.
#ಕಾಲಕ್ಕೆ_ಕಾಂಗ್ರೆಸ್
#Scamgress
ರಾಷ್ಟ್ರದ ಮಾಜಿ ಪ್ರಧಾನಮಂತ್ರಿಗಳು, @JanataDal_S ರಾಷ್ಟ್ರೀಯ ಅಧ್ಯಕ್ಷರು, ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿರುವುದು ನನಗೆ ಬಹಳ ಸಂತೋಷವಾಗಿದೆ.
ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ರಾಜ್ಯಕ್ಕೆ, ದೇಶಕ್ಕೆ ಎಣೆ ಇಲ್ಲದ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಿ ಗೌರವಿಸಿದ ಗೌರವಾನ್ವಿತ ರಾಜ್ಯಪಾಲರು ಹಾಗೂ ಕುಲಾಧಿಪತಿಗಳೂ ಆಗಿರುವ ಶ್ರೀ ಥಾವರಚಂದ್ ಗೆಹಲೋತ್ ಇತರೆ ಎಲ್ಲಾ ಗಣ್ಯರಿಗೂ ಧನ್ಯವಾದಗಳು.
ಚಿಂತಾಮಣಿ ವಿಧಾನಸಭೆ ಕ್ಷೇತ್ರದ @JanataDal_S ಮುಖಂಡರು, ನಗರಸಭೆ ಸದಸ್ಯರಾದ ಶ್ರೀ ಅಗ್ರಹಾರ ಮುರಳಿ ಅವರ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗ್ ಗಳಿಂದ ಪೈಶಾಚಿಕ ದಾಳಿ ನಡೆಸಿರುವ ಘಟನೆ ಖಂಡನೀಯ. ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.1/4
@INCKarnataka ಸರಕಾರ ಅಧಿಕಾರಕ್ಕೆ ಬಂದ ಮೇಲೆ ವಿಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ದೌರ್ಜನ್ಯ ಮೇರೆ ಮೀರಿದೆ. ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆ ಆಡಳಿತ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಅಧಿಕಾರಿಗಳು ಆಡಳಿತ ಪಕ್ಷ ನಾಯಕರ ಕೈಗೊಂಬೆಗಳು ಆಗಿರುವ ಪರಿಣಾಮವೇ ಇಂಥ ಘಟನೆಗಳಿಗೆ ದಾರಿ ಆಗುತ್ತಿದೆ. ರಾಜ್ಯದಲ್ಲಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದು ಬಿದ್ದಿದೆ. ಮೊದಲು ಇಂಥ ಪ್ರಕರಣಗಳು ನಡೆಯುತ್ತಿರಲಿಲ್ಲ.2/4
ಕೆಲ ದಿನಗಳ ಹಿಂದೆ ಹಾಸನದಲ್ಲಿ @JanataDal_S ಮುಖಂಡರಾದ ಶ್ರೀ ಕೃಷ್ಣೇಗೌಡರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಹೊಳೆನರಸೀಪುರದಲ್ಲಿ ನಮ್ಮ ಪಕ್ಷದ ಮುಖಂಡರಾದ ಶ್ರೀ ಅಶ್ವತ್ಥ್ ಅವರ ಮೇಲೆ ದಾಳಿ ನಡೆಡಿತ್ತು. ಈಗ ಚಿಂತಾಮಣಿಯಲ್ಲಿ ಅಂಥದ್ದೇ ಘಟನೆ ನಡೆದಿರುವುದು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ದುಷ್ಟ ಹುನ್ನಾರವಲ್ಲದೆ ಮತ್ತೇನಲ್ಲ.3/4
ಅದರಲ್ಲೂ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ಇದು ಸರಿ ಅಲ್ಲ, ಸಹಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಸದಾ ಶಾಂತಿ ನೆಲೆಸಿರಬೇಕು ಎನ್ನುವುದು ನಮ್ಮ ಪಕ್ಷದ ಆಶಯ. ಸರಕಾರ ಮತ್ತು ಗೃಹ ಸಚಿವರು ಕೂಡಲೇ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಪಕ್ಷದ ವತಿಯಿಂದ ಉಗ್ರವಾದ ಹೋರಾಟಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ.4/4
ಕೋಲಾರಕ್ಕೆ ಇಂಥ ವಿಷನೀರು ಹರಿಯಲು ಕಾರಣರಾದವರು #ಹಮಾಸ್ ಉಗ್ರರಿಗಿಂತ ಅಪಾಯಕಾರಿ. ಇವರನ್ನು ಜನರು ಹುಡುಕುವ ಕೆಲಸ ಮಾಡಬೇಕು. ಹಣಕ್ಕಾಗಿ ಇಂಥ ಯೋಜನೆಗಳನ್ನು ರೂಪಿಸುವ ಕಿರಾತಕರು ಭಯೋತ್ಪಾದಕರಿಗಿಂತ ನೀಚರು.
ಕೋಲಾರದಲ್ಲೂ ಒಂದು ಬೆಳ್ಳಂದೂರು ಕೆರೆ ಸೃಷ್ಟಿ ಆಗಿದೆ.
#ಕೋಲಾರ#ಕೆಸಿವ್ಯಾಲಿ@prajavani @niravari
ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ಕೊಡ್ತೀವಿ ಅಂದ್ರು, ನಂತರ ಅಕ್ಕಿ ಆಗಲ್ಲ ಒಬ್ಬರಿಗೆ 170 ರೂ ಹಾಕುವುದಾಗಿ ಹೇಳಿದರು, ಈಗ ಅಕ್ಕಿಯೂ ಕೊಡದೆ, ದುಡ್ಡು ಕೊಡದೆ @INCKarnataka ಸರ್ಕಾರ ಕೈ ಎತ್ತಿದೆ.
ಚುನಾವಣೆ ಗೆಲ್ಲಲು ಜನರ ಕಣ್ಣಿಗೆ ಮಣ್ಣೆರಚುವ ಸಾಲು ಸಾಲು ಸುಳ್ಳು ಗ್ಯಾರಂಟಿಗಳನ್ನ ಕೊಟ್ಟಿದ್ದ ಕಾಂಗ್ರೆಸ್, ಈಗ ಒಂದನ್ನೂ ಸರಿಯಾಗಿ ಜಾರಿಗೆ ತರಲಾಗದೆ ಹೆಣಗಾಡುತ್ತಿದೆ.
ಇನ್ನೂ ಎಷ್ಟು ದಿನ ಅಂತ ಬ್ಯಾಂಕ್ ಪ್ರಾಬ್ಲಂ, ಸರ್ವರ್ ಇಶ್ಯೂ ಅಂತ ಜನರ ಕಿವಿಗೆ ಹೂ ಮುಡಿಸಲು ಸಾಧ್ಯ? ನಿಮ್ಮ ಗ್ಯಾರಂಟಿಗಳು ಹಳ್ಳ ಹಿಡಿದಿರುವುದು ಸ್ವತಃ ಮುಖ್ಯಮಂತ್ರಿ @siddaramaiah ನವರ ಮುಂದೆಯೇ ಬಟಾಬಯಲಾಗಿದೆ.
ಕೆಲವರಿದ್ದಾರೆ!!
ಮಾಜಿ ಮುಖ್ಯಮಂತ್ರಿ @hd_kumaraswamy ಅವರು ಜಾತ್ಯತೀತವಾಗಿಯೇ ಇರಬೇಕು.
ಅವರು ತಮ್ಮ ವೋಟನ್ನು ಮಾತ್ರ ಕಾಂಗ್ರೆಸ್ಸಿಗೇ ಹಾಕುತ್ತಾರೆ!!
ಕುಮಾರಸ್ವಾಮಿ ಅವರು ಸದಾ ಬಿಜೆಪಿಯನ್ನು ಬೈಯ್ಯುತ್ತಿರಬೇಕು.
ಇವರ ಬೇಳೆ ಬೇಯುತ್ತಿರಬೇಕು.
ಈಗ ಕುಮಾರಸ್ವಾಮಿ ಅವರು ಎಚ್ಚೆತ್ತುಕೊಂಡಿದ್ದಾರೆ.
#hdkuamaraswamy#secularism
ಈ ವರ್ಷ ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಪ್ರತಿಭಟನೆಯಿಂದ ಇದು ಸ್ಪಷ್ಟವಾಗಿ ಗೋಚರಿಸುತ್ತಿದೆ
ಕಳೆದ ಬಾರಿ 2016ರಲ್ಲಿ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದ್ದಾಗ ಪರಿಸ್ಥಿತಿ ಹದಗೆಡುವ ಮುನ್ನವೇ ಪ್ರತಿಭಟನೆ ತೀವ್ರಗೊಂಡಿತ್ತು.
ಈ ವರ್ಷ ಈಗಾಗಲೇ #KRS ಅಣೆಕಟ್ಟು ಖಾಲಿಯಾಗಿದೆ ಆದರೆ ಇನ್ನೂ ನಿರ್ದಾಕ್ಷಿಣ್ಯ ಪ್ರತಿಭಟನೆಗಳಿಲ್ಲ
#Kaveri#JDS
ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ.
' ಜಾತ್ಯತೀತ ' ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ @siddaramaiah ನವರೇ?
ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್'ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ @INCIndia ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?
ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?
2006ರಲ್ಲಿ @BJP4Karnataka ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು @JanataDal_S ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ??
ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು.
ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?
#ಛದ್ಮವೇಷಧಾರಿ
@CMofKarnataka
ಮಾಜಿ ಪ್ರಧಾನಿಗಳು, @JanataDal_S ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ಅವರು ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, @BJP4Karnataka ಜತೆಗಿನ ಮೈತ್ರಿಯ ಬಗ್ಗೆ ಮಹತ್ವದ ವಿಚಾರಗಳನ್ನು ಹಂಚಿಕೊಂಡರು.
ಮಾಜಿ ಸಂಸದ ಶ್ರೀ ಕುಪೆಂದ್ರ ರೆಡ್ಡಿ, ಶಾಸಕ ಶ್ರೀ ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಟಿ.ಎ.ಶರವಣ, ಶ್ರೀ ಬಿ.ಎಂ.ಫಾರೂಕ್, ಶ್ರೀ ಮಂಜೇಗೌಡ, ಪಕ್ಷದ ನಗರ ಘಟಕದ ಅಧ್ಯಕ್ಷ ಶ್ರೀ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ಕೆ.ಟಿ.ಶ್ರೀಕಂಠೇಗೌಡ, ಶ್ರೀ ಚೌಡರೆಡ್ಡಿ ತೂಪಲ್ಲಿ ಮುಂತಾದವರು ಉಪಸ್ಥಿತರಿದ್ದರು.
ಕಾವೇರಿ ಹೋರಾಟದ ಮೊದಲ ಹೆಜ್ಜೆ ಇಂದಿನಿಂದ ಶುರುವಾಗಿದೆ.. 'ಬೆಂಗಳೂರು ಬಂದ್'ಗೆ ನನ್ನ ಸಂಪೂರ್ಣ ಬೆಂಬಲವಿದೆ.. ಕನ್ನಡ ಮಕ್ಕಳ ತಾಳ್ಮೆಯ ಜೊತೆ ಆಟ ಆಟಬೇಡಿ.. ರಾಜ್ಯ ಸರ್ಕಾರ ಇನ್ನಾದರೂ ಪರಿಸ್ಥಿತಿಯ ಗಂಭೀರತೆ ಅರಿತು ನ್ಯಾಯದ ಪರ ನಿಲ್ಲಿ.. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ.. 1/2
ತಮಿಳುನಾಡಿನ ಮಂತ್ರಿ #ಕಾವೇರಿನಮ್ಮದು ಅಂದ್ರೆ, ನಮ್ಮಲ್ಲಿರುವವರು ಸರಿಯಾದ ಪ್ರತ್ಯುತ್ತರ ಕೊಡೋದ್ ಬಿಟ್ಟು, ಕಾವೇರಿ ದಕ್ಶಿಣ ಭಾರತದದ್ದು ಅಂತವೆ
ಆಂದ್ರ ತೆಲಂಗಾಣಕ್ಕು ಕೊಡ್ರಪ್ಪ ಅತ್ಲಾಗೆ
ನಾಚಿಕೆಗೇಡಿನ ಸರಕಾರ
ಮುಂಚಿತವಾಗಿಯೇ ನೀರು ಉಳಿಸಿಕೊಳ್ಳುವ ಮೊಗಸು ಮಾಡದೆ, ದಿಮಾಕಿನಲ್ಲಿ ಮೆರಿತ್ತಿದ್ದ ಸರಕಾರ ಇದು
#ಕಾವೇರಿನಮ್ಮದು
ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ.
ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್ ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ, ಬಂದ್ ಯಶಸ್ವಿ ಆಗಲಿ. @JanataDal_S ಪಕ್ಷದ ಕಾರ್ಯಕರ್ತರು ಕೂಡ ಬಂದ್ ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ.
#ಬೆಂಗಳೂರು_ಬಂದ್#ಕಾವೇರಿ_ನಮ್ಮದು
ರಾಜ್ಯಸಭೆಯಲ್ಲಿ ದೇವೇಗೌಡರು ತಮ್ಮ ಕೈಯ್ಯಲ್ಲಿ ಆಗದೇ ಇದ್ದರೂ ಕಾವೇರಿ ನೀರಿಗಾಗಿ ಸ್ಪೀಕರ್ ಬಳಿ ಕೈ ಮುಗಿದು ನಿವೇದನೆ ಮಾಡಿಕೊಳ್ಳುವಾಗ ತಮಿಳುನಾಡಿನ ರಾಜ್ಯಸಭಾ ಸದಸ್ಯರು ಅಡ್ಡಿ ಮಾಡಿದಾಗ ಈ ಮಲ್ಲಿಕಾರ್ಜುನ ಖರ್ಗೆ ಅವರು ಯಾಕೆ ದೇವೇಗೌಡರಿಗೆ ಬೆಂಬಲಿಸಲಿಲ್ಲ??
@kharge@PriyankKharge@hd_kumaraswamy@H_D_Devegowda#ಕಾವೇರಿನಮ್ಮದು
ಸ್ವಾತಂತ್ರ್ಯ ನಂತರವೂ ಮುಂದುವರಿದಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾವೇರಿ ಎನ್ನುವುದು ರಾಜಕೀಯ ಲಾಭದ ವಸ್ತುವಂತೆ ಆಗಿರುವುದು ನೋವಿನ ಸಂಗತಿ. ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು. ಆರೂವರೆ ಕೋಟಿ ಕನ್ನಡಿಗರ ದನಿಯೇ ನನ್ನ ದನಿ. ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ.
#ಕಾವೇರಿ_ಕನ್ನಡಿಗರ_ಹಕ್ಕು 3/3
ರಾಜ್ಯದಲ್ಲಿ ನೀರಿನ ಕೊರತೆ ಇದೆ ಮಳೆ ಕೈಕೊಟ್ಟಿದೆ. ಜಲಾಶಯಗಳು ಬರಿದಾಗಿವೆ. ಆದರೂ ತಮಿಳುನಾಡಿಗೆ ರಾಜ್ಯ ಸರಕಾರ ಏಕಪಕ್ಷೀಯವಾಗಿ ನೀರು ಹರಿಸಿದ್ದು ಅಕ್ಷಮ್ಯ. ಬ್ರಿಟೀಷರ ಕಾಲದಲ್ಲಿಯೇ ಶುರುವಾದ ಅನ್ಯಾಯದ ಪರಂಪರೆಯನ್ನು ನಮ್ಮ ರಾಜ್ಯ ಸರಕಾರವೇ ಮುಂದುವರಿಸಿದೆ.2/3
ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.1/3