For the first time, 100% pass in Mashal govt pre-university college in Kalburgi.
A key strategy: the rural public library remained open till 11 pm every night to let students study in a quiet, conducive space. Gram panchayat paid for this extra time from its own funds. 📚🌷🌿
ಕಿರುಚಿತ್ರ ಸ್ಪರ್ಧೆ – 2025
ಕಲಬುರ್ಗಿಯ ಚಿತ್ತಾಕರ್ಷಕ ಹಾಗೂ ಸುಂದರ ವಿಡಿಯೋ ದೃಶ್ಯಗಳು ನಿಮ್ಮಲ್ಲಿದ್ದರೆ,
ಅವುಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಮತ್ತು ಆಕರ್ಷಕ ಬಹುಮಾನಗಳನ್ನು ಗೆಲ್ಲಿರಿ.
📅 ಕಿರುಚಿತ್ರಗಳನ್ನು ಕಳುಹಿಸುವ ಕೊನೆಯ ದಿನಾಂಕ: 25.12.2025 @DCKalaburagi@PriyankKharge@HKPatilINC
ಯಲಹಂಕ ತಾ. ರಾಜಾನುಕುಂಟೆ ಗ್ರಾಮ ಪಂಚಾಯತಿ ಅರಿವು ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ 24×7 ತೆರೆದಿದ್ದು, ಅಧ್ಯಯನಕ್ಕೆ ಪೂರಕವಾದ ಸೌಲಭ್ಯಗಳು& ವಾತಾವರಣವನ್ನು ಕಲ್ಪಿಸಿರುವುದು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿದೆ.
https://t.co/pgT5FaG9P5
@PriyankKharge
ಗ್ರಾಮೀಣ ಮಕ್ಕಳ ಸಮಸ್ಯೆಗಳು, ಬೇಡಿಕೆಗಳನ್ನು ಆಲಿಸುವ ಮೂಲಕ ಪರಿಹಾರ ಕಂಡುಕೊಳ್ಳಲು ರಾಜ್ಯದ್ಯಾದ್ಯಂತ 10 ವಾರಗಳ ಕಾಲ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಹಾಗೂ ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಗುತ್ತಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ಹೈಟೆಕ್ ಅರಿವು ಕೇಂದ್ರವು ಎಲ್ಲ ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿದ್ದು, ಎಲ್ಲ ವಯೋಮಾನದ ಓದುಗರನ್ನು ಆಕರ್ಷಿಸುತ್ತಿದೆ.
ಈ ಅರಿವು ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯಗಳು ಸೇರಿದಂತೆ 4,500 ಕ್ಕೂ ಅಧಿಕ ಪುಸ್ತಕಗಳನ್ನು ಒಳಗೊಂಡಿದೆ.
@PriyankKharge@CommrPR
ಜನಾಕರ್ಷಣೆಯ ತಾಣವಾದ ಸೊನ್ನ ಗ್ರಾಮ ಪಂಚಾಯತಿ ಹೈಟೆಕ್ ಅರಿವು ಕೇಂದ್ರ
ಕಲಬುರಗಿ ಜಿಲ್ಲೆಯ ಸೊನ್ನ ಗ್ರಾಮ ಪಂಚಾಯತಿಯಲ್ಲಿ ಸುಸಜ್ಜಿತ ಅರಿವು ಕೇಂದ್ರವಿದ್ದು, ಎಲ್ಲ ವಯೋಮಾನದವರ ಜ್ಞಾನಾರ್ಜನೆ ಆಸಕ್ತಿಯನ್ನು ಹೆಚ್ಚಿಸುತ್ತಿದೆ. ಇಲ್ಲಿ ನಿರಂತರವಾಗಿ ನಡೆಯುವ ವಿವಿಧ ಕಾರ್ಯಕ್ರಮಗಳು ಓದುಗರ ಸೃಜನಶೀಲತೆಯನ್ನು ವೃದ್ಧಿಸುತ್ತಿದೆ.
@PriyankKharge
ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳ ನಿಯಮಗಳು 2025 ಮತ್ತು ಇ-ಸ್ವತ್ತು ಕುರಿತು ಗ್ರಾಮ ಪಂಚಾಯತಿ ಅಧ್ಯಕ್ಷರುಗಳಿಗೆ ಒಂದು ದಿನದ ಮುಖಾಮುಖಿ ಯೂಟ್ಯೂಬ್ ತರಬೇತಿ.ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಭಾಗವಹಿಸಿ.
📅 ದಿನಾಂಕ : 24–11–2025
⏰ ಸಮಯ : ಬೆಳಿಗ್ಗೆ 10.00 ಗಂಟೆಗೆ
https://t.co/SCyByGUK4o
ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗಾಗಿ 'ಕಾಯಕ ಗ್ರಾಮ' ಕಾರ್ಯಕ್ರಮ ಜಾರಿ.
ಈ ಕಾರ್ಯಕ್ರಮದಡಿ ಅಧಿಕಾರಿಗಳು ಪಂಚಾಯತಿಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲಿದ್ದಾರೆ. ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಿದ ಅಧಿಕಾರಿಗಳಿಗೆ ಪುರಸ್ಕಾರ ಲಭಿಸಲಿದೆ.
ಗ್ರಾಮಗಳ ಸಬಲೀಕರಣಕ್ಕೆ ಒಗ್ಗಟ್ಟಿನ ಬಲ
#RDPR#kayakagrama@PriyankKharge@CommrPR
ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗಾಗಿ 'ಕಾಯಕ ಗ್ರಾಮ' ಕಾರ್ಯಕ್ರಮ ಜಾರಿ.
ಈ ಕಾರ್ಯಕ್ರಮದಡಿ ಅಧಿಕಾರಿಗಳು ಪಂಚಾಯತಿಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲಿದ್ದಾರೆ. ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಿದ ಅಧಿಕಾರಿಗಳಿಗೆ ಪುರಸ್ಕಾರ ಲಭಿಸಲಿದೆ.
ಗ್ರಾಮಗಳ ಸಬಲೀಕರಣಕ್ಕೆ ಒಗ್ಗಟ್ಟಿನ ಬಲ
#RDPR#ruraldevelopment#kayakagrama
ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ಗ್ರಂಥಾಲಯವನ್ನು ನಿರ್ಮಿಸಲಾಗಿದೆ. ವ್ಯಕ್ತಿಯ ಜ್ಞಾನವನ್ನು ವಿಸ್ತರಿಸಲು ಗ್ರಂಥಾಲಯ ಬಹಳ ಉಪಯುಕ್ತ ಮಾಧ್ಯಮವಾಗಿದೆ. ಜಿಲ್ಲಾಧಿಕಾರಿ ಕಚೇರಿಗೆ ಬರುವ ಸಾರ್ವಜನಿಕರು ಗ್ರಂಥಾಲಯದ ಜ್ಞಾನ ಸಂಪತ್ತಿನ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
@CMofKarnataka@PriyankKharge@Kalaburgivarthe
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಗ್ರಾಮ ಪಂಚಾಯತಿಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರೂಪಿಸಲಾಗಿರುವ ‘ಕಾಯಕ ಗ್ರಾಮʼಕಾರ್ಯಕ್ರಮಕ್ಕೆ ಪ್ರಿಯಾಂಕ್ ಖರ್ಗೆ, ಮಾನ್ಯ ಇಲಾಖಾ ಸಚಿವರು ಚಾಲನೆ ನೀಡಿ ಮಾತನಾಡಿದರು.ಈ ಕಾರ್ಯಕ್ರಮದ ಯಶಸ್ಸಿಗಾಗಿ ಎಲ್ಲಾ ಅಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ(1/4)
ಜ್ಞಾನಾರ್ಜನೆಗೆ ಪುಸ್ತಕ ಓದುವ ಅಭ್ಯಾಸವನ್ನು ಪ್ರೋತ್ಸಾಹಿಸಲು ಕಲ್ಯಾಣ ಕರ್ನಾಟಕ ಭಾಗದ ಗ್ರಾಮ ಪಂಚಾಯತಿಗಳಲ್ಲಿ 'ಪುಸ್ತಕ ಗೂಡು'ಗಳನ್ನು ತೆರೆಯಲಾಗುತ್ತಿದೆ.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಲು ಕಲಬುರಗಿ ಜಿಲ್ಲೆ, ಚಿತ್ತಾಪೂರ ತಾಲ್ಲೂಕಿನ ದಿಗ್ಗಾಂವ ಗ್ರಾಮ ಪಂಚಾಯತಿಯ ಬಸ್ ನಿಲ್ದಾಣದಲ್ಲಿ (1/2)
ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ತಲಾ ₹30,000 ವಿದ್ಯಾರ್ಥಿವೇತನವನ್ನು ಕೊಡಲಾಗುವುದು.
- ಮುಖ್ಯಮಂತ್ರಿ @siddaramaiah
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ. ದಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ ನೀಡುವ ಈ ಯೋಜನೆಯಿಂದ ಬಡಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ.
ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಶ್ರೀ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ.
ನಮ್ಮ ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಸಹ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸರಾಸರಿ, ರಾಷ್ಟ್ರೀಯ ಶಿಕ್ಷಿತರ ಸರಾಸರಿಗಿಂತ ಕಡಿಮೆಯಿದೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕೆಂಬ ಸರ್ಕಾರದ ಉದ್ದೇಶದಲ್ಲಿ ಕೈಜೋಡಿಸಿರುವ ಅಜೀಂ ಪ್ರೇಮ್ ಜೀ ಅವರಿಗೆ ಅಭಿನಂದನೆಗಳು.
ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಮಸ್ಯೆ, ಪೋಕ್ಸೋ ಸಮಸ್ಯೆಗಳು, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಮಹಿಳೆಯರು ಸ್ವಾವಲಂಬಿಗಳಾಗಲು ವಿದ್ಯೆ ಅತ್ಯವಶ್ಯ. ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತದೆ. ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ.
ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸದ ಹೊರತು ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳ ನಿವಾರಣೆಯಾಗಲು ವೈಚಾರಿಕತೆ ಹಾಗೂ ವೈಜ್ಞಾನಿಕ ಶಿಕ್ಷಣ ಅಗತ್ಯ. ಇಂತಹ ಅಜ್ಞಾನದ ಲಾಭವನ್ನು ಪಟ್ಟಭದ್ರಹಿತಾಸಕ್ತಿಗಳು ಪಡೆಯುತ್ತಿದ್ದು, ಇದರಿಂದ ಪಾರಾಗಲು ಶಿಕ್ಷಣವಿರಬೇಕು.
ಮಹಾತ್ಮಾ ಗಾಂಧೀಜಿಯವರು ‘ನೀವು ಗಳಿಸಿದ ಸಂಪತ್ತು ಸಮಾಜದ ಒಳಿತಿಗೆ ಬಳಕೆಯಾಗಬೇಕು’ ಎಂದಂತೆ ಅಜೀಂಪ್ರೇಂ ಜೀ ಅವರು ತಾವು ಗಳಿಸಿದ ಸಂಪತ್ತನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1,500 ಕೋಟಿ ರೂಪಾಯಿಗಳ ಯೋಜನೆಗೆ ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದಾರೆ. ಇದು ಸಂತೋಷದ ವಿಷಯ.
- ಮುಖ್ಯಮಂತ್ರಿ @siddaramaiah ಅವರು ಇಂದು ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು
#DeepikaScheme #ScholorshipForGirls
2023ರ ಸೆಪ್ಟೆಂಬರ್ 17ರಂದು ರಾಜ್ಯಾದ್ಯಂತ ಜಾರಿಗೊಂಡ ಕೂಸಿನ ಮನೆ ಯೋಜನೆಗೆ ಈಗ 2 ವರ್ಷ. ಗ್ರಾಮೀಣ ಭಾಗದ ದುಡಿಯುವ ಮಹಿಳೆಯರಿಗೆ, ಮುಖ್ಯವಾಗಿ ನರೇಗಾ ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ, ಅವರ ಪುಟ್ಟ ಮಕ್ಕಳ ಆರೈಕೆಗಾಗಿ ಜಾರಿಗೊಳಿಸಿದ ಈ ಯೋಜನೆ, ಸ್ತ್ರೀ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡುತ್ತಿದೆ.
https://t.co/q4pa3B3NzU
ಕಲ್ಯಾಣ ಕರ್ನಾಟಕ ಉತ್ಸವ -2025, ಕಲ್ಯಾಣ ಕರ್ನಾಟಕ ಬಾಗದ ಕಲೆ,ವಾಸ್ತುಶಿಲ್ಪ,ಪರಂಪರೆ ಅನಾವರಣ ದಿನಾಂಕ: 16.09.2025 ರಿಂದ 17.09.2025 ರ ವರೆಗೆ ಸ್ಥಳ ಪಿ.ಡಿ.ಎ. ಎಂಜಿನಿಯರಿಂಗ್ ಕಾಲೇಜು ಆವರಣ ಕಲಬುರಗಿ.
ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯತಿಯ ನೂತನ ಕಾರ್ಯಾಲಯವನ್ನು ಸಚಿವರಾದ ಶ್ರೀ ಕೆ.ಎಚ್. ಮುನಿಯಪ್ಪ ಅವರು ಶನಿವಾರ ಉದ್ಘಾಟಿಸಿದರು. ₹4.19 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸುಸಜ್ಜಿತ ಗ್ರಾಮ ಸೌಧ ಕಟ್ಟಡವು, ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ.
#RDPR#RuralDevelopment@PriyankKharge@readingkafka