Hon’ble Chief Minister Shri @DKShivakumar will inaugurate the 33 newly installed crest gates at Tungabhadra Dam today.
Completed in record time before the onset of monsoon, the new gates will help the reservoir store rainwater efficiently and bring timely relief to farmers.
Replacing gates that served for nearly seven decades, this milestone reflects the State Government’s commitment to farmers and irrigation infrastructure.
“ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೇ ನಿಂತಿದೆ ಧರ್ಮ”
ರೈತರ ಹಿತರಕ್ಷಣೆಯೇ ಪರಮೋಚ್ಚ ಧ್ಯೇಯ ಎಂದು ನಂಬಿರುವ ನಮ್ಮ ಸರ್ಕಾರ, ತುಂಗಭದ್ರಾ ಅಣೆಕಟ್ಟಿನ ಗೇಟ್ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿತ್ತು. ಯಾವುದೇ ವಿಳಂಬವಿಲ್ಲದೆ ಜಲಾಶಯಕ್ಕೆ ನೂತನ ಗೇಟ್ಗಳನ್ನು ಅಳವಡಿಸುವ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಲಾಗಿದ್ದು, ಇಂದು ಅದು ಲೋಕಾರ್ಪಣೆಗೊಂಡಿದೆ.
ಹೊಸಪೇಟೆಯ ಟಿ.ಬಿ. ಡ್ಯಾಂನ ಗೇಟ್ ನಂ. 18ರ ಬಳಿ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಜಂಟಿ ಸಹಯೋಗದೊಂದಿಗೆ ನಡೆದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ, ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಸಿ. ಆರ್. ಪಾಟೀಲ್, ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಶ್ರೀ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಮುಖ್ಯಮಂತ್ರಿಗಳಾದ ಎ. ರೇವಂತ್ ರೆಡ್ಡಿಯವರ ಘನ ಉಪಸ್ಥಿತಿಯಲ್ಲಿ ನೂತನವಾಗಿ ಅಳವಡಿಸಿದ 33 ಸ್ಪಿಲ್ವೇ ಗೇಟ್ಗಳನ್ನು ಲೋಕಾರ್ಪಣೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಹೆಚ್. ಕೆ. ಪಾಟೀಲ್, ಶ್ರೀ ಎನ್. ಎಸ್. ಬೋಸರಾಜು ಹಾಗೂ ಶ್ರೀ ಶಿವರಾಜ್ ತಂಗಡಗಿ ಅವರು ಸೇರಿದಂತೆ ಶಾಸಕರು, ಮುಖಂಡರು ಉಪಸ್ಥಿತರಿದ್ದರು.
ನಾಡಿನ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಧ್ಯೇಯ!
ರಾಜ್ಯದ ಅಭಿವೃದ್ಧಿಗೆ ಹೊಸ ವೇಗ ನೀಡುವ ಸಂಕಲ್ಪದೊಂದಿಗೆ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
- ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ.
- 56,000 ಹುದ್ದೆಗಳ ಭರ್ತಿಗೆ ಕ್ರಮ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಆದ್ಯತೆ ಹಾಗೂ ಯುವಕರನ್ನು ಜಾಗತಿಕ ಮಟ್ಟಕ್ಕೆ ಸಜ್ಜುಗೊಳಿಸಲು 'ಯುವ ಉದ್ಯೋಗ ಸೇತು' ವ್ಯವಸ್ಥೆ.
- ಗ್ರಾ.ಪಂ ಹಾಗೂ ನಗರ ವಾರ್ಡ್ಗಳಲ್ಲಿ 10 ಸಾವಿರ 'ಭಾರತ ಜೋಡೋ ಯುವಕ ಸಂಘ'ಗಳ ರಚನೆ, ತಲಾ 10 ಲಕ್ಷ ರೂ. ಅನುದಾನ.
#CabinetDecisions
ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು.
ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಿ. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ. ಜನ ಮೆಚ್ಚುವ ಹಾಗೇ ಕೆಲಸ ಮಾಡಿ. ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್, ಸಚಿವರಾದ ರಾಮಲಿಂಗಾ ರೆಡ್ಡಿ, ಈಶ್ವರ್ ಖಂಡ್ರೆ, ಯು.ಟಿ. ಖಾದರ್, ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅಧಿಕಾರಿಗಳು ಪಾರದರ್ಶಕ, ಮುಕ್ತ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕು
ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ಸಭೆ ನಡೆಸಿ, ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ.
ರಾಜ್ಯದ ಅಧಿಕಾರಿಗಳನ್ನು ಕರೆಸಿ ಹೊಸ ಸರ್ಕಾರ ಯಾವ ದಿಕ್ಕಿನಲ್ಲಿ ಆಲೋಚನೆ ಮಾಡುತ್ತಿದೆ ಎಂದು ಸಂದೇಶ ನೀಡಿದ್ದೇವೆ. ನಾವು ಅವರಿಂದ ಏನು ನಿರೀಕ್ಷೆ ಮಾಡಿದ್ದೇವೆ, ನಮ್ಮಿಂದ ಅವರ ನಿರೀಕ್ಷೆಗಳೇನು ಎಂದು ಚರ್ಚೆ ಮಾಡಲಾಗಿದೆ. ಪಾರದರ್ಶಕ, ಮುಕ್ತ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕು. ಇದಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದೇವೆ.
15 ದಿನಗಳಲ್ಲಿ ಎಲ್ಲಾ ಇಲಾಖೆಗಳಲ್ಲಿನ ಕಾರ್ಯಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದ್ದೇನೆ. ಎಲ್ಲರೂ ಹೊಣೆಗಾರಿಕೆಯಾಗಿರಬೇಕು. ಎಲ್ಲಾ ಸಮಸ್ಯೆಗಳಿಗೆ ಒಂದು ಪರಿಹಾರ ಇರುತ್ತದೆ, ಸಕಾರಾತ್ಮಕ ಮನೋಭಾವ ಇರಬೇಕು.
ಕಾನೂನು ಹೊರತಾಗಿ ಬೇರೆ ಯಾವ ಒತ್ತಡಕ್ಕೂ ಮಣಿಯಬಾರದು. ಮಂತ್ರಿಗಳು, ಶಾಸಕರು, ನನ್ನ ಕಚೇರಿಯವರ ಮಾತು ಕೇಳದೇ, ಕಾನೂನು ವ್ಯಾಪ್ತಿಯಲ್ಲಿ ಸಕಾರಾತ್ಮಕ ಮನೋಭಾವದಲ್ಲಿ ಕೆಲಸ ಮಾಡಿ. ಸಮಸ್ಯೆಗಳಿಗೆ ವ್ಯವಸ್ಥೆ ಚೌಕಟ್ಟಿನಲ್ಲೇ ಪರಿಹಾರ ಹುಡುಕಿ ಎಂದು ಸೂಚಿಸಿದ್ದೇವೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕಡ್ಡಾಯವಾಗಿ ಆಯಾ ಜಿಲ್ಲೆಗಳಲ್ಲಿರುವ ತಾಲ್ಲೂಕುಗಳಿಗೂ ಹೋಗಿ ಪರಿಶೀಲನೆ ಮಾಡಬೇಕು. ಎಲ್ಲಾ ಜಿಲ್ಲಾ ಕಾರ್ಯದರ್ಶಿಗಳು ತಮ್ಮ ಇಲಾಖೆ ಸಂಬಂಧಿಸಿದಂತೆ ಬಾಕಿ ಇರುವ ಕೆಲಸಗಳ ಪಟ್ಟಿ ನೀಡಬೇಕು. 25 ದಿನಗಳಲ್ಲಿ ಆಯಾ ಜಿಲ್ಲೆಯಲ್ಲಿ ಯಾವ ಹೊಸ ಕೆಲಸ ಮಾಡಬಹುದು ಎಂದು ಗುರುತಿಸಬೇಕು. ಆರ್ಥಿಕ ಚೌಕಟ್ಟಿನಲ್ಲಿ ನಾವು ಏನು ಮಾಡಬಹುದು ಎಂದು ಪಟ್ಟಿ ಮಾಡಲು ಸೂಚಿಸಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಆಯಾ ಜಿಲ್ಲೆಯ ಸಂಪೂರ್ಣ ಮಾಹಿತಿ ನೀಡಬೇಕು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್, ಸಚಿವರಾದ ರಾಮಲಿಂಗಾ ರೆಡ್ಡಿ, ಈಶ್ವರ್ ಖಂಡ್ರೆ, ಯು.ಟಿ. ಖಾದರ್, ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
My heartfelt thanks to Shri @RahulGandhi avare for your warm wishes and encouragement.
The faith reposed in us by the people of Karnataka is both an honour and a responsibility. I remain committed to the values of the Congress Party - social justice, inclusive growth, and equal opportunity for all.
With the blessings of our people and the guidance of our leadership, I will work tirelessly to ensure that every citizen of Karnataka benefits from progress, prosperity, and development.
I am deeply grateful to everyone who has conveyed their wishes, blessings, and good wishes on this special occasion.
This affection from people across Karnataka and the country strengthens my resolve to serve with humility, dedication, and honesty. The trust placed in me is not merely an honour, it is a responsibility that I will carry with utmost sincerity.
I seek the continued blessings and support of our people as we work together to build a stronger, more prosperous, and more compassionate Karnataka.
Karnataka First. People First. Always.
ಮುಜರಾಯಿ ದೇವಾಲಯಗಳ ಆದಾಯಕ್ಕೆ ಕಾಂಗ್ರೆಸ್ 'ಶಕ್ತಿ'.
ಕಾಂಗ್ರೆಸ್ ಸರ್ಕಾರದ ಶಕ್ತಿ ಗ್ಯಾರಂಟಿ ಯೋಜನೆಯಿಂದಾಗಿ ಮುಜರಾಯಿ ದೇವಾಲಯಗಳ ಆದಾಯ ಗಣನೀಯ ಏರಿಕೆ ಕಂಡಿದೆ. ಉಚಿತ ಬಸ್ ಪ್ರಯಾಣದಿಂದ ದೇವಾಲಯಗಳಲ್ಲಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ₹613.50 ಕೋಟಿಯಿಂದ ₹666.20 ಕೋಟಿಗೆ ಆದಾಯ ಏರಿಕೆಯಾಗಿದೆ.
ಕರ್ನಾಟಕ ರಾಜ್ಯದ ನೂತನ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ @DrParameshwara ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅನುಭವ ಮತ್ತು ಜನಪರ ಆಡಳಿತ ರಾಜ್ಯದ ಪ್ರಗತಿಗೆ ಬಲವಾಗಲಿ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಲು ಪ್ರಮಾಣವಚನ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷರಾದ ಸಿಎಂ @DKShivakumar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರಕ್ಕೆ ಜನಾಶೀರ್ವಾದ
ಪಂಚ ಗ್ಯಾರಂಟಿ ಯೋಜನೆ ಮೂಲಕ ಜನರ ಬದುಕಿನಲ್ಲಿ ಬದಲಾವಣೆ ತಂದು ಅಭಿವೃದ್ಧಿಯ ಪಥದಲ್ಲಿ ರಾಜ್ಯವನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಜನ ಆಶೀರ್ವಾದ ಮಾಡಿದ್ದಾರೆ.
ಜನಮನ ಗೆದ್ದು, ಜಯದ ಹಾದಿಯಲ್ಲಿ ಸಾಗಿರುವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಅಭಿನಂದನೆಗಳು.
ಈ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಿಗೆ ಹಾಗೂ ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಆಶೀರ್ವದಿಸಿದ ಎಲ್ಲಾ ಮತದಾರರಿಗೆ ಧನ್ಯವಾದಗಳು.
अखिल भारतीय महिला कांग्रेस की राष्ट्रीय अध्यक्ष @LambaAlka जी के निर्देशानुसार नव-नियुक्त महासचिव एवं सचिवों को निम्न प्रदेशों का कार्यभार सौंपा गया है।
हमें विश्वास है कि आप पूर्ण निष्ठा और समर्पण के साथ संगठन को मजबूती प्रदान करेंगे।
They tried to silence us.
They tried to break us.
For 10 years, Congress UDF workers stood on the streets, fighting the Left’s arrogance and BJP’s divisive politics.
Led by Rahul ji, this fight never stopped.
Today, Kerala has answered.
This victory belongs to every karyakarta who never bowed. ✊🏻🇮🇳
23 ಲಕ್ಷ ಇ-ಖಾತಾ ವಿತರಣೆ ಕಾಂಗ್ರೆಸ್ ಪಾರದರ್ಶಕ ಆಡಳಿತಕ್ಕೆ ಹಿಡಿದ ಕೈಗನ್ನಡಿ
ಬೆಂಗಳೂರಿನಲ್ಲಿ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಪಾರದರ್ಶಕತೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಹೊಸ ಇತಿಹಾಸ ಬರೆದಿದೆ.
23 ಲಕ್ಷ ಇ ಖಾತಾ ವಿತರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇ ಖಾತಾ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಅತ್ಯುತ್ತಮ ಇ ಆಡಳಿತ ಪ್ರಶಸ್ತಿ ನೀಡಿದೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಹೊರತಾಗಿ ಜನರಿಗೆ ಕೊಟ್ಟಿರುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.
ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಾಂಗ್ರೆಸ್ ಸರ್ಕಾರದಿಂದ ಅಕ್ಷರ ದೀಪ
ಕಾರ್ಮಿಕರ ಕುಟುಂಬಗಳ ಹಿತ ಕಾಯುವುದು ಕಾಂಗ್ರೆಸ್ ಸರ್ಕಾರದ ಸಂಕಲ್ಪ. ಅದರ ಭಾಗವಾಗಿ ಸರ್ಕಾರವು 1ರಿಂದ 12ನೇ ತರಗತಿವರೆಗೂ 1.30 ಲಕ್ಷ ವಿದ್ಯಾರ್ಥಿಗಳಿಗೆ ಅಗತ್ಯವಾದ ಶಾಲಾ ಕಿಟ್ ಅನ್ನು ಉಚಿತವಾಗಿ ವಿತರಿಸಲಾಗಿದೆ.
ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ, ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ.
ತನ್ನ ಬಣ್ಣಿಸಬೇಡ ಇದಿರ ಹಳಿಯಲುಬೇಡ,
ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ
ಇದೇ ನಮ್ಮ ಕೂಡಲಸಂಗಮದೇವನೊಲಿಸುವ ಪರಿ.
ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.
#ಬಸವ_ಜಯಂತಿ#BasavaJayanti#Basavanna
'ಅನುಭವ ಮಂಟಪ'ದ ಮೂಲಕ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ಕೊಟ್ಟ,
ಜಾತಿ ವ್ಯವಸ್ಥೆ, ಸಾಮಾಜಿಕ ತಾರತಮ್ಯ, ಶೋಷಣೆ, ಮೂಢನಂಬಿಕೆಯ ವಿರುದ್ಧ ಸಮರ ಸಾರಿದ,
ಮಹಾನ್ ಮಾನವತಾ ವಾದಿ, ಜಗಜ್ಯೋತಿ, ಕ್ರಾಂತಿಯೋಗಿ 'ಬಸವ ಜಯಂತಿ'ಯ ಶುಭಾಶಯಗಳು.
#BasavaJayanti