ಹಿಂದುಳಿದ ವರ್ಗಗಳ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ಭಾರತ ಸಂವಿಧಾನದ ಅನುಚ್ಛೇದ ಕಲಂ 15(4) ಮತ್ತು 16(4)ರ ಪ್ರಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ
2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ(ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಗೆ) ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2��ಿ, 3ಎ, 3ಬಿ ಹಾಗೂ ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಆಹ್ವಾನಿಸಲಾಗಿರುತ್ತದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21.10.2022ರ ಸಂಜೆ ೫.೦೦ ಗಂಟೆ ಆಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://t.co/BoLUL5DpPF ಗೆ ಸಂಪರ್ಕಿಸುವುದು.
ಸಹಾಯವಾಣಿ ಸಂಖ್ಯೆ:8050770004 / 08172295108
(ಸಮಯ ಬೆಳಗ್ಗೆ ೧೦.೦೦ ರಿಂದ ಸಂಜೆ ೫.೩೦ ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ)
ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರು ಈ ದಿನ ಹಾಸನ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಛೇರಿಗೆ ಭೇಟಿ ನೀಡಿ ಇಲಾಖಾ ಕಾರ್ಯಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಮಾನ್ಯ ಜಿಲ್ಲಾ ಅಧಿಕಾರಿಗಳು ಜೂಮ್ ಮೀಟಿಂಗ್ ಮೂಲಕ ಇಲಾಖಾ ವ್ಯಾಪ್ತಿಯ ವಸತಿ ಶಾಲೆಗಳು, ವಸತಿ ನಿಲಯಗಳ SSLC ನಿಲಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಪರೀಕ್ಷೆಗಳಿಗೆ ಹೆದರದೇ ವಿಶ್ವಾಸದಿಂದ ಪರೀಕ್ಷೆ ಎದುರಿಸಲು ತಿಳಿಸಿ ಶುಭಾಶಯ ಕೋರಿದರು
ಮಾನ್ಯ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಸನ ಜಿಲ್ಲೆ ಇವರು ಈ ದಿನ ಸಕಲೇಶಪುರ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ನಿಲಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಚಹಾ ಸೇವಿಸಿ, ಪರೀಕ್ಷಾ ಸಮಯದಲ್ಲಿ ಚೆನ್ನಾಗಿ ಅಭ್ಯಾಸ ಮಾಡಲು ಸಲಹೆ ನೀಡಿದರು.
ಹಾಸನ ಜಿಲ್ಲೆಯ ಜಿಲ್ಲಾಡಳಿತ, ಜಿ ಪಂ, ಹಿಂ ವ ಕ ಇ, ಸ ಕ ಇ ಹಾಗೂ ಕ ವ ಶಿ ಸಂ ಸಂಘದ ಸಂಯುಕ್ತಾಶ್ರಯದಲ್ಲಿ ಈ ದಿನ ಬೆಳಗ್ಗೆ 10.00 ಗಂಟೆಗೆ ಹಾಸನ ಜಿಲ್ಲೆಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಓಬವ್ವ ಆತ್ಮ ರಕ್ಷಣಾ ಕಲೆ ಕೌಶಲ್ಯಗಳ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.