ಚಿತ್ರದುರ್ಗ ನಗರದ ಶ್ರೀ ಮುರುಘಾ ಮಠದ ಅನುಭವ ಮಂಟಪದಲ್ಲಿ,ಜುಲೈ 25, 2026 ರಂದು ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬೆಂಗಳೂರು ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಪರಿಶೀಲನಾ ಸಭೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದೆನು
ಕರುನಾಡಿನ ಯುವ ಪೀಳಿಗೆಯ ಸಭಲೀಕರಣ, ಸಮಾಜದ ಸಾಮರಸ್ಯವೇ ನಮ್ಮ ಗುರಿ. ಈ ಧ್ಯೇಯದ ಸಾಕಾರಕ್ಕಾಗಿಯೇ ರಾಜ್ಯದ ಪ್ರತೀ ಗ್ರಾಮ ಪಂಚಾಯತಿಗಳು ಹಾಗೂ ವಾರ್ಡ್ ಗಳಲ್ಲಿ 10 ಸಾವಿರ ಭಾರತ್ ಜೋಡೋ ಸಂಘಗಳು ಸ್ಥಾಪನೆಯಾಗಲಿವೆ.
ನಾಡಿನ ಯುವ ಪ್ರತಿಭೆಗೆ ಇದು ಹೊಸ ದಿಕ್ಸೂಚಿ.
#BharathJodo#BharatJodoYatra#JaiHind#UnityInDiversity
ಮೌನವಾದ ಅಮರ ಕಂಠ : 48 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದ ಎಸ್ ಜಾನಕಿ!
ಪ್ರಖ್ಯಾತ ಗಾಯಕಿ "ಗಾನಕೋಗಿಲೆ" ಎಸ್. ಜಾನಕಿ ಅಮ್ಮ ಅವರ ನಿಧನ ವಾರ್ತೆ ತಿಳಿದು, ಅತೀವ ದುಃಖವಾಯಿತು.
ಓಂ ಶಾಂತಿ🙏
#sjanaki#sjanakisongs#sjanakihits#sjanakiamma#hosadurga
ನಮ್ಮ ಹೊಸದುರ್ಗ ಕ್ಷೇತ್ರದ ಡಿಟಿ ವಟ್ಟಿ ಗ್ರಾಮದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸುಂದರವಾದ ಪೋಸ್ಟರ್ ಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ನನ್ನ ಪ್ರೀತಿಯ ಗ್ರಾಮಸ್ಥರಿಗೆ,ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು,
ನಿಮ್ಮ ಪ್ರೀತಿ ಮತ್ತು ಬೆಂಬಲವೇ ನಮಗೆ ಮತ್ತಷ್ಟು ಕೆಲಸ ಮಾಡಲು ಶಕ್ತಿ.
ಕಾಂಗ್ರೆಸ್ ಕಾರ್ಯಕರ್ತರು ಎಸ್ಐಆರ್ ಪ್ರಕ್ರಿಯೆಯನ್ನು ಎರಡನೇ ಸ್ವಾತಂತ್ರ್ಯ ಹೋರಾಟ ಎಂದು ಭಾವಿಸಬೇಕಾಗಿದೆ, ಯಾವ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸಬೇಕು, ಮತದಾನದ ಹಕ್ಕು ನಮಗೆ AK-47 ಇದ್ದಹಾಗೆ, ಈ ಅಸ್ತ್ರವನ್ನು ಉಳಿಸಿಕೊಳ್ಳಲು ನಾವೆಲ್ಲ ಹೋರಾಟ ಮಾಡಬೇಕು.
ವಿಶೇಷ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಾರಂಭವಾಗಿದೆ. ಜಾಗರೂಕರಾಗಿರಿ
ಮತದಾರರೇ ಜಾಗರೂಕರಾಗಿ, ಮತದಾನದ ಹಕ್ಕನ್ನು ರಕ್ಷಣೆ ಮಾಡಿಕೊಳ್ಳಿ..
ನಿಮ್ಮ ಮತದಾನದ ಹಕ್ಕು ಉಳಿಯಬೇಕಾದರೆ, ನಿಮ್ಮ ಬಿ ಎಲ್ ಓ ಗಳು ನೀಡುವ ಅನ್ಯೂಮರೇಶನ್ ಅರ್ಜಿಯನ್ನು ಸರಿಯಾದ ದಾಖಲೆಗಳೊಂದಿಗೆ ತುಂಬಿ, ಅದನ್ನು ಸಲ್ಲಿಕೆ ಮಾಡಿ ನಂತರ ಪ್ರಕಟವಾಗುವ ಕರಡು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಪರೀಕ್ಷೆ ಮಾಡಿಕೊಳ್ಳಿ.
ಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಪ್ರಾಚೀನ ಕೊಡುಗೆಯಾಗಿದ್ದು, ದೇಹ, ಮನಸ್ಸು ಮತ್ತು ಆತ್ಮದ ನಡುವಿನ ಸಮತೋಲನವನ್ನು ಕಾಯ್ದುಕೊಳ್ಳಲು ಯೋಗದ ಮಹತ್ವವನ್ನು ಸಾರುತ್ತದೆ.
ಈ ದಿನದ ಆಚರಣೆಯು ಜಾಗತಿಕ ಮಟ್ಟದಲ್ಲಿ ಆರೋಗ್ಯ ಮತ್ತು ಶಾಂತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಸರ್ವರಿಗೂ ಅಂತರಾಷ್ಟ್ರೀಯ ದಿನಾಚರಣೆಯ ಶುಭಾಶಯಗಳು
ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಇಂದು ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ, ಶ್ರೀ ಬಿ.ಕೆ. ಹರಿಪ್ರಸಾದ್, ಶ್ರೀ ತಿಪ್ಪಣ್ಣಪ್ಪ ಕಮಕನೂರು, ಶ್ರೀ ಪಿ.ವಿ.ಮೋಹನ್, ಶ್ರೀ ಶಿವಣ್ಣ ಮಳವಳ್ಳಿ ಹಾಗೂ ಶ್ರೀ ವಿನಯ್ ಕಾರ್ತಿಕ್ ಅವರಿಗೆ ಪೂರ್ವಕ ಅಭಿನಂದನೆಗಳು.
ವಿಧಾನಸಭೆಯಿಂದ - ವಿಧಾನಪರಿಷತ್ತಿಗೆ ಇಂದು ನಡೆಯುತ್ತಿರುವ ಚುನಾವಣೆ ಸಂಬಂಧ ಮಾನ್ಯ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರೆಲ್ಲರೂ ಸಭೆ ಸೇರಿ ನಮ್ಮ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದವು.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ, ಶ್ರೀ ಮಹರ್ಷಿ ವಾಲ್ಮೀಕಿ ಜಗದ್ಗುರು ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಜಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ,ಅವಿರೋಧವಾಗಿ ಆಯ್ಕೆಯಾದ, ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸನ್ಮಾನ್ಯ ಶ್ರೀ #MallikarjunKharge , ಶ್ರೀ #PavanKhera , ಶ್ರೀ #Mansuralikhan ರವರಿಗೆ, ಹೃತ್ಪೂರ್ವಕ ಅಭಿನಂದನೆಗಳು.
ಇಂದು ನನ್ನ ಸ್ವಗ್ರಾಮ ಬೆಲಗೂರಿನಲ್ಲಿ ಊರಿನ ಒಳಚರಂಡಿಗಳ ಮೂಲಕ ಕೊಳಚೆ ನೀರು ಕೆರೆಯನ್ನು ಸೇರುತ್ತಿದ್ದು, ಅಧಿಕಾರಿಗಳ ಜೊತೆ ಖುದ್ದು ಸ್ಥಳ ಪರಿಶೀಲನೆ ನಡೆಸಿ,
ಈ ಸಮಸ್ಯೆಯನ್ನು ಬಗೆಹರಿಸಲು ಸಂಬಂಧಿಸಿದ ಇಂಜಿನಿಯರ್ ಗಳಿಗೆ, ನೂತನ ಒಳಚರಂಡಿ ನಿರ್ಮಾಣಕ್ಕೆ ಬೇಕಾದ ಅಂದಾಜು ಪಟ್ಟಿಯನ್ನು ಅತೀ ಶೀಘ್ರವಾಗಿ ತಯಾರಿಸುವಂತೆ ಸೂಚನೆ ನೀಡಿದೆನು.
ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಗಳಾದ ಶ್ರೀ ಸೂರಜ್ ಹೆಗಡೆ ಅವರ ಹಠಾತ್ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಅವರ ಅಗಲಿಕೆಗೆ ಕಂಬನಿ ಮಿಡಿಯುತ್ತೇನೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಓಂ ಶಾಂತಿ
ಆಶೀರ್ವಾದ ಹಾಗೂ ಪಕ್ಷದ ನಾಯಕರ ವಿಶ್ವಾಸದೊಂದಿಗೆ, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಅಧಿಕಾರ ಜನರವಹಿಸಿಕೊಂಡಿರುವ ಶ್ರೀ ಡಿ.ಕೆ. ಶಿವಕುಮಾರ್ ರವರನ್ನು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.
ದಿ. 04.06.2026 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನವಾಗಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಪಕ್ಷದ ನಿಷ್ಠಾವಂತ ಕಟ್ಟಾಳುಗಳಾದ ಶ್ರೀ ಬಿ.ಕೆ. ಹರಿಪ್ರಸಾದ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದೆನು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಕಾಂಗ್ರೆಸ್ ನಾಯಕರಾದ, ಸನ್ಮಾನ್ಯ ಶ್ರೀ ಬಿ.ಕೆ.ಹರಿಪ್ರಸಾದ್ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು.