ಮೈಸೂರಿನ ಕಡೆಯ "ಪೇಟೆ ರೌಡಿ"ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ.
ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ..
"ಪೊಲೀಸ್ ಠಾಣೆಗೆ ನುಗ್ಗುತ್ತೇನೆ" ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು!
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಸನ್ನದ್ದವಾಗಿದೆ ಗೃಹ ಇಲಾಖೆ, ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ.
ನಮ್ಮ ರಾಯಚೂರು ಮತ್ತು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀ @IamGKumarNaik ಸರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯವನ್ನು ಕರುಣಿಸಿ, ಇನ್ನಷ್ಟು ಜನಸೇವೆಯನ್ನು ನಡೆಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಹೌದು ಅಣ್ತಾಮ್ಮಾ ಜನಾರ್ದನ ರೆಡ್ಡಿ, ನಾನು ಹೇಳಿದ್ದೂ ಅದನ್ನೇ ಅಲ್ಲವೇ!
ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನೀನು ಎಷ್ಟು ಬಾರಿ ನನ್ನನ್ನು ಸಂಪರ್ಕಿಸಿದ್ದೆ? ನಮ್ಮ ಅಭ್ಯರ್ಥಿಗೆ ಬೆಂಬಲ ನೀಡುತ್ತೇನೆ ಎಂದು ಎಷ್ಟು ಬಾರಿ ಗೋಗರೆದಿದ್ದೆ? ಎಲ್ಲಿ, ಯಾವ ರೀತಿಯಲ್ಲಿ ಸಹಾಯ ಪಡೆದೆ ಎಂಬುದನ್ನೂ ನಾನೇ ಹೇಳಿದ್ದೇನೆ.
ಇದಕ್ಕೆ ಉತ್ತರಿಸಲಾಗದೆ 'ಇಂಗು ತಿಂದ ಮಂಗ' ರೀತಿ ಆಡುತ್ತಿದ್ದೀಯ. ಹೀಗಾಗಿ ‘ಇದ್ದದ್ದು ಇದ್ದಂಗೆ ಹೇಳಿದರೆ ಎದ್ದು ಬದ್ದು ಎದೆಗೆ ಒದ್ದಂತೆ’ ಎಂಬ ಗಾದೆ ನಿನಗೆ ಸರಿ ಹೊಂದುವಂತೆ ಬೇರೆ ಯಾರಿಗೂ ಹೊಂದಾಣಿಕೆ ಆಗುವುದಿಲ್ಲ.
ಉಂಡ ಮನೆಗೆ ಎರಡು ಬಗೆಯುವ ದ್ರೋಹಿ ನೀನು. 'ಕಳ್ಳನಿಗೆ ತನ್ನ ನೆರಳೇ ಭಯ’ ಎಂಬಂತೆ ನಿನ್ನ ಕರಾಳ ಕೆಲಸಗಳೇ ಇಂದು ನಿನ್ನ ಕಾಡುತ್ತಿವೆ.
ಸತ್ಯ ಎದುರಿಸಲಾಗದೆ ಸತ್ಯ ನುಡಿದವರ ಮೇಲೆ ಹಗೆ ಸಾಧನೆಗೆಹೊರಟಿದ್ದೀಯ.
'ತಾನು ಮಾಡಿದ ಕರ್ಮದ ಫಲವನ್ನು ತಾನು ಅನುಭವಿಸಲೇ ಬೇಕು' ಇದು ಕರ್ಮ ಸಿದ್ಧಾಂತದ ಸಾರ್ವಕಾಲೀಕ ಸತ್ಯ.
‘ಬಿತ್ತಿದಂತೆ ಬೆಳೆ’ ಎಂಬಂತೆ ನೀನು ಬಿತ್ತಿದ್ದರ ಫಲವೇ ಇಷ್ಟೂ ವರ್ಷ ಜೈಲಲ್ಲಿ ಉಂಡಿದ್ದು.
ಇನ್ನಾದರೂ ಸತ್ಯವ ನುಡಿಯಲು ಕಲಿ. ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ನೆಲೆಯಿಲ್ಲ ಎಂಬುದ ಅರಿ.
ಬೇರೆಯವರ ಮುಖದಲ್ಲಿ ಏನಿದೆ ಅಣ್ತಮ್ಮಾ, ನಮ್ಮ ಮುಖದ ಮೇಲಿನ ಗಣಿ ಅಕ್ರಮದ ಧೂಳು ಒರೆಸಿಕೊಂಡರೆ ಸಾಕಾಗಿದೆ ಅಲ್ವಾ?
* ಅಣ್ತಮ್ಮಾ ಜನಾರ್ದನರೆಡ್ಡಿ, ಮತ್ತದೇ ಪೊಳ್ಳು ನುಡಿಗಳ ಮೊರೆ ಹೋಗಿದ್ದೀಯ. ನಾನು ನನ್ನ ಸ್ವಂತ ಆಸ್ತಿ ಮಾರಿಕೊಂಡು ಚುನಾವಣೆ ಎದುರಿಸಿದವನು. ಚುನಾವಣೆಗಾಗಿ ಯಾರ ಮುಂದೆಯೂ ಕೈ ಚಾಚಿದವನಲ್ಲ. ಅದು ನಿನಗೂ ಚೆನ್ನಾಗಿ ಗೊತ್ತಿದೆ.
• ಎರಡು ದಿನ ಹುಡುಕಾಡಿ ತಡಕಾಡಿ ಒಂದು ವಿಡಿಯೋ ಹಾಕಿದ್ದೀಯ. ಸರಿ ಇದೆ. ಆದರೆ, ನಾನು ಮಾತನಾಡಿರುವ ಮಾತಿಗೂ ನೀನು ಹೇಳಿರುವುದಕ್ಕೂ ಸಾಸಿವೆ ಕಾಳಿನಷ್ಟಾದರೂ ಸಂಬಂಧವಿದೆಯೇ?
• ನನ್ನ ಯಾವ ಮಾತನ್ನು ಎಲ್ಲಿಗೆ ಜೋಡಿಸಿ ಮೈಲೇಜ್ ಪಡೆಯಲು ಯತ್ನಿಸುತ್ತಿದ್ದೀಯಾ?
* ನಾನು ನಿನ್ನ ಗಣಿ ಹಣದಿಂದ ಗೆದ್ದಿದ್ದೇನೆ. ನಿನ್ನ ಆಶೀರ್ವಾದ ಗೆದ್ದಿದ್ದೇನೆ ಎಂದೆಲ್ಲಾ ಬೊಗಳೆ ಬಿಟ್ಟಿರುವೆ.
ಚುನಾವಣೆ ಸಂದರ್ಭದಲ್ಲಿ ನಾನು ಎಷ್ಟು ಆಸ್ತಿ ಮಾರಾಟ ಮಾಡಿ ಚುನಾವಣೆಯನ್ನು ಎದುರಿಸಿದ್ದೇನೆ ಎಂಬುದು ನಿನಗೆ ಗೊತ್ತಿಲ್ಲವೇ?
*ನಿನ್ನ ಆಪ್ತ ಸಹಾಯಕನ ಮೂಲಕ ನನ್ನ ಆಸ್ತಿ ನಗದೀಕರಣ ಮಾಡಿಸಿದೆ. ನನ್ನ ಆಸ್ತಿ ನಗದೀಕರಣಕ್ಕೆ ಮಧ್ಯವರ್ತಿಯಾಗಿ ನೆರವಾಗಿದ್ದೆ ಅನ್ನೋದು ಬಿಟ್ಟರೆ ಬೇರೇನಿದೆ?
* ಸಾಸಿವೆ ಕಾಳಿನಷ್ಟು ಸಹಾಯವನ್ನೂ ಬೆಟ್ಟದಂತೆ ನೆನೆಸುವವನು ನಾನು. ಹೀಗಾಗಿಯೇ ತುರ್ತು ಸಮಯದಲ್ಲಿ ನನ್ನ ಆಸ್ತಿ ನಗದೀಕರಣಕ್ಕೆ ನೆರವಾದ ನಿನಗೆ ತುಂಬು ಸಭೆಯಲ್ಲಿ ಮನ ಬಿಚ್ಚಿ ಧನ್ಯವಾದ ತಿಳಿಸಿದ್ದೇನೆ. ಆದರೆ ಅದನ್ನೇ
ಬೇರೆ ರೀತಿ ಬಿಂಬಿಸಿ ಪೋಸು ಕೊಡುತ್ತಿದ್ದೀಯ.
* ಪಕ್ಷೇತರ ಶಾಸಕನಾಗಿದ್ದ ನಾನು ನೀನು ಹೇಳಿದ ಪಕ್ಷಕ್ಕೆ ಬೇಷರತ್ ಬೆಂಬಲ ಕೊಟ್ಟೆ. ನನ್ನ ಅಡ್ಡ ಇಟ್ಟುಕೊಂಡು ನೀನು ಮಂತ್ರಿಯಾದೆ. ನಿನ್ನ ಸಹೋದರ, ಸ್ನೇಹಿತ ಎಲ್ಲರೂ ಅಧಿಕಾರದ ಪಡಸಾಲೆಗೆ ಬಂದಿರಿ.
* ಹಳೆಯ ವಿಚಾರ ಕೆದಕ್ಕಿದ್ದೀಯಲ್ಲಪ್ಪ. ನೀನೇ ನಿನ್ನ ಬಾಯಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನು ಕಾರಣವಲ್ಲ. ಭೋವಿ ಸಮಾಜದ ಶಿವರಾಜ ತಂಗಡಗಿ, ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ ಕಾರಣ ಎಂದಿದ್ದೀಯಲ್ಲ. ಅದು ಮರೆತು ಹೋಯಿತೇ ಅಥವಾ ಮರೆತಂತೆ ನಾಟಕವೇ?
* ಹಾಗಾದರೆ ನಮ್ಮ ಬೆಂಬಲ ಹಾಗೂ ಕನಕಗಿರಿ ಕ್ಷೇತ್ರದ ಜನತೆಯ ಭಿಕ್ಷೆಯಿಂದಲೇ ನೀನು, ನಿನ್ನ ಸಹೋದರ ಸಚಿವರಾಗಿದ್ದಲ್ಲವೇ? ಅದನ್ನೂ ಹೇಳಿಬಿಡು.
* ಆ ದಿನ ನಿನ್ನ ಕ್ಷೇತ್ರಕ್ಕೆ ನನ್ನನ್ನು ಬಲವಂತವಾಗಿ ಆಹ್ವಾನಿಸಿದ್ದೇ ನೀನು. ಸಾಸಿವೆ ಕಾಳಷ್ಟು ಸಹಾಯವನ್ನೂ ನೆನೆಯಬೇಕಿರುವುದು ಧರ್ಮ ನೆನೆದಿದ್ದೇನೆ. ಅದನ್ನೂ ತಿರುಚಿ ದುರ್ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದೀಯಲ್ಲಾ ನಿನ್ನ ಏನನ್ನಬೇಕು?
* ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನೀನು ಎಷ್ಟು ಬಾರಿ ನನ್ನ ಸಂಪರ್ಕಿಸಿದ್ದೆ? ನಮ್ಮ ಅಭ್ಯರ್ಥಿಗೆ ಬೆಂಬಲ ನೀಡುತ್ತೇನೆ ಎಂದು ಎಷ್ಟು ಬಾರಿ ಗೋಗರೆದೆ. ಎಲ್ಲಿ ಯಾವ ರೀತಿ ಸಹಾಯ ಪಡೆದೆ ಎಂಬುದನ್ನು ಹೇಳಿಬಿಡು. ನಿನಗೆ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ನೆನಪಾಗಲಿಲ್ಲವೇ?
* ನಿಮ್ಮ ಕ್ಷೇತ್ರಕ್ಕೆ ಹರಿದು ಬಂದ ಅನುದಾನ ಸುಮ್ಮನೆ ಬಂತೇ? ಅನುದಾನಕ್ಕೆ ಅಂಗಾಲಾಚಿದೆಯಲ್ಲ. ನಿನ್ನ ಕ್ಷೇತ್ರಕ್ಕೆ ಬಂದ ಅನುದಾನದಲ್ಲಿ ನನ್ನ ಕೊಡುಗೆ ಇಲ್ಲವೇ? ನೀನು ನನ್ನ ಋಣದಲ್ಲಿದ್ದೀಯೇ ಹೊರತು ನಾನು ಅಲ್ಲ. ಉಪಕಾರ ಸ್ಮರಣೆ ಇಲ್ಲದ ಕೃತಘ್ನ ನೀನು. ರಾಜಕೀಯದಲ್ಲಿ ಕಾಲಕ್ಕೆ ತಕ್ಕಂತೆ ಮಾತು ಬದಲಾಯಿಸುವ ಊಸರವಳ್ಳಿ. ನೀನು ಎಷ್ಟೇ ಸುಳ್ಳು ಹೇಳಿದರು ಜನರಿಗೆ ಸತ್ಯ ತಿಳಿದಿದೆ.
* ಮೊದಲು ಸಹಾಯ ಮಾಡಿದವರನ್ನು ನೆನೆಯುವುದು ಕಲಿ. ನಿನ್ನ ಸಚಿವನಾಗಿ ಮೆರೆಸಿದ ಯಡಿಯೂರಪ್ಪ ಅವರಿಗೆ ಬೆನ್ನಿಗೆ ಚೂರಿ ಹಾಕಿದವನು ನೀನು. ಬಿಜೆಪಿಯನ್ನೇ ಮುಗಿಸಲು ಹೊರಟವನು.
* ಕನಕಗಿರಿಯಲ್ಲಿ ನನ್ನ ವಿರುದ್ಧ ನಿಂತಿದ್ದ ಬಿಜೆಪಿ ಅಭ್ಯರ್ಥಿಗೆ ಬಿಟ್ಟು ನನಗೆ ಆರ್ಥಿಕ ನೆರವಾದೆ ಎಂದು ಬುರುಡೆ ಬಿಡುತ್ತಿದ್ದೀಯ. ಹಾಗಾದರೆ ಸ್ವಂತ ಪಕ್ಷ ಮುಗಿಸುವ ಖಯಾಲಿ ಅಂದಿನಿಂದಲೇ ಇತ್ತು ಎಂಬುದನ್ನು ಒಪ್ಪಿಕೊಳ್ಳುತ್ತಿದ್ದೀಯಾ?
* ಒಂದು ಸುಳ್ಳು ಹೇಳಿದರೆ ಅದನ್ನು ಮುಚ್ಚಿಕೊಳ್ಳಲು ನೂರು ಹೇಳಬೇಕಾಗುತ್ತದೆ. ನಿನಗೆ ಮಾನ ಮರ್ಯಾದೆ ಇದ್ದರೆ ಜೈಲಿಗೆ ಯಾಕೆ ಹೋದೆ? ಬಿಜೆಪಿ ವಿರುದ್ಧ ಪಕ್ಷ ಯಾಕೆ ಕಟ್ಟಿದೆ? ಶ್ರೀರಾಮುಲು ಮುಗಿಸಲು ಷಡ್ಯಂತ್ರ ಯಾಕೆ ಮಾಡಿದೆ? ಸ್ವಂತ ತಮ್ಮನನ್ನೇ ಯಾಕೆ ಸೋಲಿಸಿದೆ ಹೇಳು.
* ಇದೆಲ್ಲಾ ಪ್ರಶ್ನೆಗೆ ಉತ್ತರಿಸಿ ನಿನ್ನ ಮೊದಲ ಸವಾಲಿನಂತೆ ನಾಳೆಯೇ ರಾಜೀನಾಮೆ ನೀಡು. ಬೆನ್ನಲ್ಲೇ ನಾನೂ ರಾಜೀನಾಮೆ ನೀಡುತ್ತೇನೆ. ಮುಂದಿನದ್ದು ಉಪ ಚುನಾವಣಾ ಕಣದಲ್ಲೇ ಚರ್ಚೆಯಾಗಲಿ.
ಲೇ... ! ಜನಾರ್ದನರೆಡ್ಡಿ
ಲೇ ...! ಚಂಚಲಗುಡ ಕೈದಿ ನಂ. 697
ಅಲೆ ಲೇ... ಜೈಲಿನಲ್ಲಿ ಮುದ್ದೆ ಮುರಿದ ಗಣಿ ಲೂಟಿಕೋರ.
- ಹೀಗೆಲ್ಲಾ ನಾನೂ ಕೂಡ 'ಲೇ' ಎನ್ನಬಲ್ಲೆ. ಘನತೆ, ನಡತೆಯಲ್ಲಿ ಅಲ್ಲದಿದ್ದರೂ ವಯಸ್ಸಿನಲ್ಲಿ ನೀವು ಹಿರಿಯ. ಜೊತೆಗೆ ನನ್ನ ಹಿರಿಯರು ಸಂಸ್ಕಾರ ಕಲಿಸಿರುವುದರಿಂದ 'ಲೇ' ಎನ್ನುವ ಮಟ್ಟಕ್ಕೆ ನಾ ಇಳಿಯಲಾರೆ.
ನಾನು ಮೊದಲ ಬಾರಿಗೆ ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದಾಗ ತಮ್ಮುಡು, ತಮ್ಮುಡು ಎಂದು ಗೋಗರೆದು ಬೆಂಬಲ ಕೇಳಿದವನು ನೀನು. ಈಗ ಸುಳ್ಳುಗಳ ಸರಮಾಲೆಯನ್ನೇ ಹೆಣೆದು ಬೊಗಳೆ ಬಿಡುತ್ತಿದ್ದೀಯಾ?
ಯಪ್ಪಾ ಬೊಗಳೆ ವೀರ, 'ನಿನಗೆ ತಾಕತ್ತು ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾ. ನೀನು ರಾಜೀನಾಮೆ ಕೊಟ್ಟ 24 ಗಂಟೆಯಲ್ಲಿ ನಾನೂ ರಾಜೀನಾಮೆ ಕೊಡುತ್ತೇನೆ. ಗಂಗಾವತಿಯಲ್ಲಿ ನನ್ನ ವಿರುದ್ಧ ಉಪ ಚುನಾವಣೆ ಎದುರಿಸಿ ನಿನ್ನ ಬಲಾಬಲ ತೋರಿಸು. ಪ್ರಚಾರ ಶೋಕಿಗೆ ವ್ಯರ್ಥ ಪ್ರಲಾಪ ಮಾಡಬೇಡ'.
ನಿನಗೆ ನೇರ ಸವಾಲು ಹಾಕಿ ಪಂಥಾಹ್ವಾನ ನೀಡುತ್ತಿದ್ದೇನೆ. ನೀನು 'ಎಸ್' ಎಂದರೆ ನಾಳೆಯೇ ರಾಜೀನಾಮೆ ನೀಡುತ್ತೇನೆ. ಜನಾದೇಶ ಲೂಟಿಕೋರನಿಗೋ? ಜನ ಸೇವಕನಿಗೋ? ನೋಡೇ ಬಿಡೋಣ.
ಗಣಿ ಲೂಟಿಯ ಅಕ್ರಮ ಸಂಪತ್ತು. ಅದರಿಂದ ಬಂದಿರುವ ಅಹಂಕಾರ ನಿನ್ನ ನೆತ್ತಿಗೇರಿದೆ. ಹೀಗಾಗಿ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದೀಯ.
ಹೋ..ಹೋ... 'ಗಣಿಲೂಟಿ ಕಳ್ಳ ಎಂದ ಕೂಡಲೇ ನೀನು ಉರಿದು ಬೀಳುತ್ತಿದ್ದೀಯ. ನೀನೇನು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲು ಸೇರಿದ ಮಹನೀಯನಾ? ಜೈಲಿನಿಂದ ಹೊರ ಬರಲೂ ಕಳ್ಳಾಟ ಮಾಡಿದ ಭೂಪ ತಾನೇ?'
ಗಣಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ ಎಂದರೆ 'ಫೀಲ್ ದಿ ಜೈಲ್' ಪ್ಯಾಕೇಜ್ ಮೇಲೆ ಹೋಗಿದ್ಯಾ?
ಅಥವಾ "ಜಯ ಜನಾರ್ಧನ ಕೃಷ್ಣ ರಾಧಿಕಾಪತೇ" ಅಂಥ ಕೃಷ್ಣಜನ್ಮಾಷ್ಟಮಿ ದಿನ ಕೃಷ್ಣನ ಭಜನೆ ಮಾಡಿದ್ದಕ್ಕೆ ನಿನ್ನನ್ನು ಕೃಷ್ಣ ಜನ್ಮಸ್ಥಾನಕ್ಕೆ ಕಳಿಸಿದರಾ? ಹೇಳಪ್ಪಾ ಕೋಳ ತೊಟ್ಟ ಗಣಿ ಕಳಂಕಿತ.
ಗಣಿ ಲೂಟಿ ಕಳ್ಳ ನೀನು. ಸುಂಕಲಮ್ಮ ದೇವಸ್ಥಾನ ಒಡೆದ ಅವಿವೇಕಿ ನೀನು. ಗಂಗಾವತಿಯಲ್ಲಿ ಗೆದ್ದರೆ ಮತದಾರರಿಗೆ ಡಬಲ್ ಬೆಡ್ ರೂಮ್ ಮನೆ ನೀಡ್ತೀನಿ. ಕ್ರಿಕೆಟ್ ಸ್ಟೇಡಿಯಂ ಮಾಡ್ತೀನಿ ಅಂದಿದ್ದೆ ಈಡೇರಿಸಿದ್ದೀಯಾ? ಸುಳ್ಳು ಹೇಳಿಕೊಂಡು ಜೀವನ ಮಾಡೋ ನಿನಗೆ ಇಷ್ಟಿರುವಾಗ ಸ್ವಾಭಿಮಾನದಿಂದ ಬೆಳೆದವನು ನನಗೆ ಎಷ್ಟಿರಬೇಡ?
ನಿನ್ನಕಾಲಿಗೆ ಬಿದ್ದೆ ಎಂದು ಹೇಳಿಕೊಳ್ಳುತ್ತಾ ಇದ್ಯಾ. ನಾಚಿಕೆ ಆಗಲ್ವಾ? ನಾನು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡಿದ್ರೆ ನಿನ್ನ ಬಂಡವಾಳ ಬಟಾ ಬಯಲು ಆಗುತ್ತದೆ. ಕತ್ತಲೆ ಲೋಕದ ಕರಾಳ ಮುಖ ಕಳಚಿ ಬೀಳುತ್ತದೆ ಹುಷಾರು.
ನಾನು ಸೇರಿ ಪಕ್ಷೇತರ ಶಾಸಕರ ಬೆಂಬಲದ ಭಿಕ್ಷೆಯಿಂದ ಒಬ್ಬ ಶಾಸಕನಾಗಲೂ ಅರ್ಹತೆ ಇಲ್ಲದವನು ಅಂದು ಸಚಿವನಾದವನು ನೀನು. ನನಗೆ ಹಣ ಕೊಟ್ಟಿದ್ದೆ ಎಂದಿದ್ದೀಯ. ನಿನ್ನಂತಹ ಅಡ್ಡಾದಿಡ್ಡಿ ದಾರಿಯಲ್ಲಿ ಹಣ ಸಂಪಾದಿಸಿದ ಅಡ್ನಾಡಿ ಬಳಿ ಹಣ ಪಡೆಯುವ ದುರ್ದೈವ ನನಗೆ ಬಂದಿಲ್ಲ. ಹೇ.. ಜನಾರ್ದನರೆಡ್ಡಿ ನಾನು ಪಕ್ಷೇತರನಾಗಿ ಗೆದ್ದಾಗ ನನ್ನ ಮನೆ ಮುಂದೆ ಕಾದು ಕುಳಿತವರು ನಿನ್ನ ಪಟಾಲಂ. ಅದನ್ನು ಮರೆಯಬೇಡ.
ತಮ್ಮುಡು- ತಮ್ಮುಡು ಎಂದು ಗೊಗರೆದು, ಗೆಲುವಿನ ಸಂಭ್ರಮದಲ್ಲಿದ್ದ ನನ್ನನ್ನು ಕಾಲಿಗೆ ಚಪ್ಪಲಿ ಹಾಕಲೂ ಬಿಡದೇ ನಿಮ್ಮವರು ನನ್ನನ್ನು ಕರೆದುಕೊಂಡು ಬಂದರು.
ನನ್ನ ಬೆಂಬಲ ತೋರಿಸಿ ನೀವು ಅಣ್ಣ ತಮ್ಮ ಇಬ್ಬರೂ ಮಂತ್ರಿ ಆಗುದ್ದೀರಿ.
ನೀನು ಯಾವ ಪುಟ್ಗೋಸಿ ಪಕ್ಷ ಸಂಘಟನೆ ಮಾಡಿದ್ದೀಯ ಅಂಥ ನಿನ್ನ ಮನೆಗೆ ಎರಡು ಸಚಿವ ಸ್ಥಾನ ನೀಡಿದರು. ಅದೆಲ್ಲವೂ ನಾನು ಕೊಟ್ಟ ಬೆಂಬಲ ಹಾಗೂ ನನ್ನ ಕನಕಗಿರಿ ಕ್ಷೇತ್ರದ ಜನತೆ ನಿನಗೆ ನೀಡಿದ ಭಿಕ್ಷೆ.
ನಮ್ಮ ಹೆಸರಿನಲ್ಲಿ ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲ್ ಮಾಡಿದ ಎಡಬಿಡಂಗಿ ಗಿರಾಕಿ ನೀನು. ನನಗೆ ಕರೆ ಮಾಡಿ ದಮ್ಮಯ್ಯ ಎಂದು ಬೇಡಿಕೊಂಡವನು ಈಗ ನಾನು ನಿನ್ನ ಕಾಲಿಗೆ ಬಿದ್ದೆ ಎಂದು ಬಾಲ ಬಿಚ್ಚುತ್ತಿದ್ದೀಯಾ?
ನಿನಗೆ ತಾಕತ್ತಿದ್ದರೆ ಕಳೆದ ಬಾರಿ ರಾಜ್ಯಸಭಾ ಚುನಾವಣೆಯಲ್ಲಿ ನನಗೆ ಎಷ್ಟು ಕರೆ ಮಾಡಿದ್ದೀಯ?. ಯಾರಿಗೆ ವೋಟ್ ಹಾಕಿದ್ಯಾ? ಕಾಲ್ ಲಿಸ್ಟ್ ತೆಗೆದು ಬಹಿರಂಗ ಪಡಿಸು. ನಿನ್ನ ಯೋಗ್ಯತೆ, ಪಕ್ಷವಿರೋಧಿ ಬೂಟಾಟಿಕೆ ರಾಜ್ಯದ ಜನತೆಗೆ ಹಾಗೂ ನಿನ್ನ ಬಿಜೆಪಿ ಪಕ್ಷದವರಿಗೆ ತಿಳಿಯಲಿ.
ಪುಂಗು ಅಂದ್ರೆ ಹೆಂಗ್ ಪುಂಗ್ಲಿನೇ ಮೀರಿಸೋ ಥರ ನನಗೆ ಹಣ ನೀಡಿದ್ದೇನೆ ಅಂದಿದ್ದೀಯ. ನಿನ್ನ ಮಿಥ್ಯ ಸಾಧನೆ ಜನರಿಗೆ ತಿಳಿದಿದೆ. ನಿನಗೆ ಕಿಂಚಿತ್ ಮಾನ ಮರ್ಯಾದೆ ಇದ್ದರೂ ನನ್ನ ಸವಾಲು ಸ್ವೀಕರಿಸು.
ಪೋಕ್ಸೋ ಪರಾಕ್ರಮಿಯ ಪುತ್ರ ವಿಜಯೇಂದ್ರ ಅವರೇ..!
ನನ್ನ ದುರಹಂಕಾರಿ ಎಂದಿದ್ದೀರಿ, ಏಕ ವಚನದಲ್ಲಿ ಸಂಬೋಧಿಸಿ ಅಹಂಕಾರ ಮೆರೆದಿದ್ದೀರಿ, ನಮ್ಮಪ್ಪನ ಬಗ್ಗೆ ಮಾತನಾಡಿದ್ದೀರಿ, ನಮ್ಮ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿ ರಾಜಕೀಯ ಬೂಟಾಟಿಕೆ ಪ್ರದರ್ಶಿಸಿದ್ದೀರಿ.
ಅವಿವೇಕಕ್ಕೆ ಅಂಗಿ ಹಾಕಿದರೆ ಹಾದಿಯಲ್ಲಿ ಬೆತ್ತಲಾದಂತಿತ್ತು ನಿಮ್ಮ ಕೀಳು ಹಾಗೂ ಆಧಾರರಹಿತ ಭಾಷಣ. ಹಾಗೂ ವ್ಯರ್ಥ ಪ್ರಲಾಪ.
ಭ್ರಷ್ಟಾಚಾರದ ಪಿತಾಮಹರು, ಹಗರಣಗಳ ಧುರೀಣರು, ಅವ್ಯವಹಾರಗಳ ಆದಿಪುರುಷರನ್ನ ಕಂಕುಳಲ್ಲೇ ಇಟ್ಟುಕೊಂಡು ಭ್ರಷ್ಟಾಚಾರದ ವಿರುದ್ಧ ಹೋರಾಟ ಎಂದು ಚೀರಾಡುತ್ತಿದ್ದೀರಿ. ಇದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತಿಲ್ಲವೇ?
ಅಲುಗಾಡುತ್ತಿರುವ ನಿಮ್ಮ ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಹೊರಬಂದ ನಿಮ್ಮ ಆರ್ಥನಾದ, ಸ್ಮಶಾನ ರೋದನೆ ನನಗೆ ಅರ್ಥವಾಗಿದೆ.
ವಯಸ್ಸು, ರಾಜಕೀಯ ಅನುಭವ, ಜನಸೇವೆಯಲ್ಲಿ ನಾನು ನಿಮಗಿಂತ ಹಿರಿಯ. ನನ್ನ ಬಗ್ಗೆ ಮಾತನಾಡುವ ನೈತಿಕತೆ ನಿಮಗೆ ಇಲ್ಲ. ವಯಸ್ಸಿನಲ್ಲಿ ದೊಡ್ಡವರಿಗೆ ಏಕವಚನದಲ್ಲಿ ಮಾತನಾಡಿದರೆ, ತಾವು ರಾಜಕೀಯವಾಗಿ ದೊಡ್ಡವರಾಗಬಹುದು ಎಂದುಕೊಂಡಿದ್ದೀರಿ. ಇದು ನಿಮ್ಮ ದಡ್ಡತನದ ಪ್ರದರ್ಶನ.
ವಿಷಯಾಧಾರಿತವಾಗಿ ಮಾತನಾಡಲು ಧೈರ್ಯವಿಲ್ಲದವರು ವೈಯಕ್ತಿಕ ಟೀಕೆಯ ಮೊರೆ ಹೋಗುತ್ತಾರೆ. ನಿಮ್ಮದೂ ಅದೇ ಅಸಹಾಯಕ ಸ್ಥಿತಿ. ನಿಮ್ಮ ಮಾನಸಿಕ ಸ್ಥಿತಿ ಬಗ್ಗೆ ಮರುಕ ಇದೆ.
ನಾನು ನಿಮಗಿಂತ ಕೀಳು ಭಾಷೆಯಲ್ಲಿ ಮಾತನಾಡಬಲ್ಲೆ. ಆದರೆ ನನಗೆ ಸಂಸ್ಕಾರ ಇದೆ. ಹೀಗಾಗಿ ನಿಮ್ಮ ಮಟ್ಟಕ್ಕೆ ಇಳಿದು ಮಾತನಾಡಲಾರೆ. ಮುಖ್ಯವಾಗಿ ನನ್ನ ಕ್ಷೇತ್ರದ ಜನ ನನಗೆ ಆಶೀರ್ವಾದ ಮಾಡಿರುವುದು ಜನಸೇವೆಗೆ ಹೊರತು ಹೊಲಸು ಮಾತಿಂದ ಬಾಯಿ ನಂಜು ಮಾಡಿಕೊಳ್ಳಲು ಅಲ್ಲ ಎಂಬ ಕನಿಷ್ಠ ಪ್ರಜ್ಞೆ ನನಗೆ ಇದೆ.
ನಿಮ್ಮ ಪಶ್ಚಾತ್ತಾಪ ಯಾತ್ರೆ ಟೇಕಾಫ್ ಆಗಿಲ್ಲ. ನಮ್ಮ ಭಾಗದಲ್ಲಿ ನಿಮಗೆ ಇಮೇಜ್ ಇಲ್ಲ. ನನ್ನ ಬಗ್ಗೆ ಮಾತನಾಡಿದರೆ ನಿಮ್ಮ ರಾಜಕೀಯ ಯಾತ್ರೆಗೆ ಸ್ವಲ್ಪ ಮೈಲೇಜ್ ಬರಬಹುದು ಎಂಬ ನಿಮ್ಮ ಪ್ರಯತ್ನ ಸರಿ ಇದೆ.
ರಾಜಕೀಯ ಕೆಸರೆರಚಾಟದ ಮೇಲೆ ನನಗೆ ಆಸಕ್ತಿ ಇಲ್ಲ. ಆದರೂ ನಿಮ್ಮ ಆರೋಪಗಳಿಗೆ ಉತ್ತರ ನೀಡುವ ಜವಾಬ್ದಾರಿ ನನ್ನ ಮೇಲಿದೆ.
• ಮೊದಲನೇಯದಾಗಿ, ರೈತರಿಗೆ ನೀರು ಕೊಟ್ಟ ವಿಚಾರದಲ್ಲಿ ನನ್ನ ವಿರುದ್ಧ ಮಾತನಾಡಿದ್ದೀರಿ. ನೀರು ನಿಮ್ಮಪ್ಪನದ್ದೂ ಅಲ್ಲ, ನಮ್ಮಪ್ಪನದ್ದೂ ಅಲ್ಲ ಎಂದಿದ್ದೀರಿ. ಸಂಕಷ್ಟದ ಸಂದರ್ಭ ಹಾಗೂ ಅಳೆದು ತೂಗಿ ನೀರು ಬಿಡುವ ಪರಿಸ್ಥಿತಿಯಲ್ಲೂ ರೈತರಿಗಾಗಿ ನೀರು ಒದಗಿಸಿದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾನು. ನೀವು ರೈತರಿಗಾಗಿ ಏನು ಮಾಡಿದ್ದೀರಿ ಎಂಬುದನ್ನು ಮೊದಲು ಹೇಳಿ.
• ಕೇಂದ್ರ ಸರ್ಕಾರವು 2023ರ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹5,300 ಕೋಟಿ ಅನುದಾನ ಇದುವರೆಗೆ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿ ಮೊದಲು ಅನುದಾನ ತನ್ನಿ. ಅಧಿಕಾರ ಕೊಟ್ಟರೆ 24 ಗಂಟೆಯಲ್ಲಿ ಮಹದಾಯಿ ಯೋಜನೆಗೆ ಅಂಗೀಕಾರ ಕೊಡಿಸುತ್ತೇನೆ ಎಂದವರ ಪುತ್ರ ತಾವು. ಮೊದಲು ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅಂಗೀಕಾರ ಕೊಡಿಸಿ.
ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದವರು ನಿಮ್ಮ ತಂದೆ ಬಿ.ಎಸ್. ಯಡಿಯೂರಪ್ಪ. ಡಿನೋಟಿಫಿಕೇಷನ್, ಪ್ರೇರಣಾ ಟ್ರಸ್ಟ್ ಗಳು ನಿಮಗೆ ನೀಡಿದ ಪ್ರೇರಣೆ ಇಡೀ ರಾಜ್ಯಕ್ಕೆ ಗೊತ್ತಿದೆ. ಗಣಿ ಲೂಟಿ ಮಾಡಿ ಜೈಲಿಗೆ ಹೋದ ಗಾಲಿ ಜನಾರ್ದನರೆಡ್ಡಿ, ಶ್ರೀರಾಮುಲು ಅಕ್ರಮ, ಅಶೋಕ್ ಭೂ ಹಗರಣ,ಅಶ್ವತ್ಥನಾರಾಯಣ ಮತಗಳ ಚಿಲುಮೆ ಎಲ್ಲವೂ ಒಂದಕ್ಕಿಂತ ಒಂದು ಅದ್ಭುತ. ನೀವು ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಜನರಿಗೆ ವಾಕರಿಕೆ ಬಂದಂತಾಗುತ್ತದೆ.
ವಿಧಾನಸಭೆಯಲ್ಲಿ ರಾಜ್ಯದ ಬರಗಾಲ, ರೈತರ ಸಂಕಷ್ಟದ ಬಗ್ಗೆ ಚರ್ಚೆ ಮಾಡಿಲ್ಲ. ಈಗ ಪಾದಯಾತ್ರೆ ಮಾಡಿ ಜನರನ್ನು ಮರುಳು ಮಾಡಬಹುದು ಎಂದುಕೊಳ್ಳಬೇಡಿ.
ಜನರಿಗಾಗಿ ಕೆಲಸಮಾಡುವವರಿಗೂ, ರಾಜಕೀಯಕ್ಕಾಗಿ ನಾಟಕ ಮಾಡುವವರಿಗೂ ಇರುವ ವ್ಯತ್ಯಾಸ ಜನರಿಗೆ ಗೊತ್ತಿದೆ.
ಇನ್ನಾದರೂ ರಾಜ್ಯ ಸರ್ಕಾರದ ಬಗ್ಗೆ ಸುಳ್ಳು ಆರೋಪ ಬಿಡಿ. ರಾಜ್ಯದ ರೈತರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ. ಅದು ಬಿಟ್ಟು ಬರೀ ಕಾಮಿಡಿ ಭಾಷಣ ಮಾಡುತ್ತಿದ್ದರೆ ಇದು ಹೋರಾಟ ಆಗಲ್ಲ, ಬದಲಿಗೆ ಮಜಾಭಾರತದ ಎಪಿಸೋಡ್ ಅಥವಾ ಮತ್ತೊಂದು ಕಾಮಿಡಿ ಕಿಲಾಡಿಗಳ ಶೋ ಆಗುತ್ತದೆ ಅಷ್ಟೇ.
ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಲು ಒಂದು ಸುಳ್ಳಿಗೆ ಮತ್ತೊಂದು ಸುಳ್ಳನ್ನು ಪೋಣಿಸುತ್ತಾ ಸುಳ್ಳಿನ ಹಾರವನ್ನೇ ಹಾಕಿಕೊಳ್ಳುವ ಸಿ.ಟಿ ರವಿಯಂತಹವರು ರಾಜಕೀಯ ವ್ಯವಸ್ಥೆಗೆ ಅಂಟಿರುವ ಕಳಂಕ.
ಸಿ.ಟಿ ರವಿ ಸೇರಿದಂತೆ ಬಿಜೆಪಿಗರ ಎದೆ ಸೀಳಿದರೆ ನಾಲ್ಕಕ್ಷರಗಳೂ ಸಿಗುವುದಿಲ್ಲ, ಜೊತೆಗೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ, ಆತ್ಮಸಾಕ್ಷಿಗಳೂ ಕಾಣುವುದಿಲ್ಲ.
ಕಳೆದ 3 ವರ್ಷಗಳಲ್ಲಿ ಯಾವುದೇ ಒಂದು ದೊಡ್ಡ ಮಟ್ಟದ ಕೋಮು ಕಲಹ ಸೃಷ್ಟಿಸಲು ಸಾಧ್ಯವಾಗದ ಕಾರಣ ಬಿಜೆಪಿಯವರು ಅಸಹನೀಯರಾಗಿ ವರ್ತಿಸುತ್ತಿದ್ದಾರೆ.
ಯಾವುದೇ ವಿಷಯವಿರಲಿ, ಅದಕ್ಕೆ ಪಾಕಿಸ್ತಾನ ಮತ್ತು ಹಿಂದೂ - ಮುಸ್ಲಿಂ ವಿಷಯವನ್ನು ಜೋಡಿಸುವುದು ದ್ವೇಷಸಂಜಾತ ಬಿಜೆಪಿಯ ಹುಟ್ಟುಗುಣ, ಬಿಜೆಪಿಯವರ ಅಸ್ತಿತ್ವ ಇರುವುದೇ ಸಮಾಜ ವಿಭಜನೆಯಲ್ಲಿ ಎನ್ನುವುದನ್ನು ಪದೇ ಪದೇ ಹೇಳಬೇಕಿಲ್ಲ.
NEET ವಿದ್ಯಾರ್ಥಿಗಳ ಹೋರಾಟದ ವಿಷಯದಲ್ಲೂ ಧರ್ಮಗಳನ್ನು ಎಳೆದುತಂದ ಸಿ.ಟಿ ರವಿಯವರು ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಲು NEET ಹೋರಾಟಕ್ಕೆ ಸಂಬಂಧವೇ ಇಲ್ಲದ ವಿಡಿಯೋ ಒಂದನ್ನ ತೋರಿಸಿ ದಿಕ್ಕು ತಪ್ಪಿಸುವ ವಿಫಲ ಯತ್ನ ಮಾಡಿದ್ದಾರೆ.
@CTRavi_BJP ಅವರೇ, ಸತ್ಯ ಹೇಳಲು ಹಿಂಜರಿಕೆ ಬೇಕಿಲ್ಲ, ಆದರೆ ಸುಳ್ಳು ಹೇಳಲು ಹಿಂಜರಿಕೆ, ನೈತಿಕ ಭಯ, ಸಾಮಾಜಿಕ ಭಯ ಇರಬೇಕಾಗುತ್ತದೆ, ಅಂತಹದ್ದು ಯಾವುದೂ ತಮಗೆ ಇಲ್ಲ ಎನ್ನುವುದನ್ನು ನಿರೂಪಿಸುತ್ತಲೇ ಇದ್ದೀರಿ..
ಈ ಹಿಂದೆ ಸದನದಲ್ಲಿ ತಾವು ಆಡಿದ ಮಾತಿನಿಂದಲೇ ನಿಮ್ಮ ಗುಣ ಏನೆಂದು ರಾಜ್ಯಕ್ಕೆ ತಿಳಿದಿದೆ, ಅಂದು ತಾವು ಆಡಿದ್ದ ಮಾತಿನ ತನಿಖೆಗೆ ಇಂದಿಗೂ ಧ್ವನಿ ಸ್ಯಾಂಪಲ್ ಕೊಡದಿರುವುದು ತಮ್ಮ ಪಲಾಯನವಾದ ಮತ್ತು ಅನೈತಿಕತೆಯನ್ನು ತೋರಿಸುತ್ತದೆ.
"ಕಾನೂನಿಗೆ ಸವಾಲು ಹಾಕುತ್ತೇನೆ" ಎಂಬ ನಿಮ್ಮ ದ್ರಾಷ್ಟ್ಯ ನಡೆಯುವುದಿಲ್ಲ, ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ತಯಾರಾಗಿರಿ.
ಗೃಹ ಸಚಿವನಾಗಿ ಅಧಿಕಾರ ಸ್ವೀಕರಿಸಿ ಕೆಲವೇ ವಾರಗಳಾಗಿವೆ. ಅಷ್ಟರಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಭಯ ಹಾಗೂ ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಎಂಬದನ್ನ ನಾನು ಪ್ರಶ್ನಿಸಲು ಹೋಗುವುದಿಲ್ಲ.
ಪಾಪ ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದ ನೋವು ಅವರಲ್ಲಿ ಇನ್ನೂ ಮಾಸಿದಂತೆ ಕಾಣುತ್ತಿಲ್ಲ.
ವಿಜಯೇಂದ್ರ ನನಗಿಂತ ಮೂರ್ನಾಲ್ಕು ವರ್ಷ ಹಿರಿಯರಾಗಿರಬಹುದು. ಆದರೆ ವಯಸ್ಸಿನಲ್ಲಿ ಹಿರಿಯನಾದ ತಕ್ಷಣ ಬಾಯಿಗೆ ಬಂದಂತೆ
ಮಾತನಾಡುವ ಪರವಾನಗಿ ಸಿಕ್ಕಂತಲ್ಲ.
ನಿಷ್ಪ್ರಯೋಜಕ ಅಥವಾ ಅಸಮರ್ಥ ಎಂದು ಕೈಲಾಗದ ವಿರೋಧ ಪಕ್ಷದಿಂದ ಟೀಕೆ ಕೇಳುವುದು POCSO ಪ್ರಕರಣದ ಆರೋಪಿ ಆಗಿರುವುದಕ್ಕಿಂತ ಸಾವಿರ ಪಟ್ಟು ಮೇಲು ಎಂದು ನಾನು ಭಾವಿಸುತ್ತೇನೆ.
ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂಬ ವಾಸ್ತವಕ್ಕೆ ತಾವೂ ಸಾಕ್ಷಿಯಾಗುತ್ತಿರುವಂತಿದೆ. ಮಾತುಗಳಿಗೆ ಸ್ವಯಂ ಮಿತಿ ಇರಬೇಕು. ಇಲ್ಲವಾದರೆ ಹೇಗೆ ಮಾತನಾಡಬೇಕೆಂಬುದನ್ನ ಕಲಿಸಬೇಕಾದ ಪರಿಸ್ಥಿತಿ ಬರುತ್ತದೆ.
@BYVijayendra