ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಕೋಟ್ಯಂತರ ಜನರ ಮನೆ, ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ಈ ಸಾಕ್ಷ್ಯಚಿತ್ರ ದೊಡ್ಡ ಯಶಸ್ಸನ್ನು ಕಾಣಲಿ ಎಂದು ಹಾರೈಸುತ್ತೇನೆ.
ಕಡಲತಡಿಯ ಭಾರ್ಗವ, ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದ ಸಾಹಿತಿ , ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಕೆ. ಶಿವರಾಮ ಕಾರಂತ ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು.
ರಾಮನಗರ ಜಿಲ್ಲಾ ಪಂಚಾಯತ್, ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಚನ್ನಪಟ್ಟಣದ ಶ್ರೀ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭ ಕೋರಲಾಯಿತು. ಈ ವೇಳೆ ಶಿಕ್ಷಕರು ತೋರಿದ ಪ್ರಿತ್ಯಾದರಗಳು ನಾನೊಬ್ಬ ಶಿಕ್ಷಕನ ಮಗನಾಗಿದ್ದಕ್ಕೂ ಹೆಮ್ಮೆ ಎನಿಸಿತು.
ಪ್ರವಾಹ ಪೀಡಿತ ತಿಟ್ಟಮಾರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ನಿರಾಶ್ರಿತ ಕುಟುಂಬಗಳಿಗೆ ದಿನಸಿ ಪದಾರ್ಥಗಳನ್ನು ನೀಡಿ ಅವರಿಗೆ ಧೈರ್ಯ ತುಂಬಲಾಯಿತು.ಶಾಶ್ವತ ಪರಿಹಾರದ ದೃಷ್ಟಿಯಿಂದ ಎರಡು ಎಕರೆ ಜಮೀನು ಖರೀದಿಸಿ ನಿರಾಶ್ರಿತ ಕುಟುಂಬಗಳನ್ನು ಸ್ಥಳಾಂತರ ಮಾಡುವುದಕ್ಕಾಗಿ ಸರ್ಕಾರದ ಜೊತೆ ಮಾತುಕತೆ ನಡೆಸಿ ಪರಿಹಾರ ಮಾಡುವುದಾಗಿ ಭರವಸೆ ನೀಡಲಾಯಿತು.
ತಾಲ್ಲೂಕಿನ ಕೊಂಡಾಪುರ, ಕೋಡಂಬಳ್ಳಿ, ಹುಣಸನಹಳ್ಳಿ, ಮೊಗಳ್ಳಿ ಗ್ರಾಮಗಳಲ್ಲಿ ಅಕಾಲಿಕ ಮಳೆಯಿಂದಾಗಿ ತೊಂದರೆಗೀಡಾದ ಮನೆಗಳು ,ರಸ್ತೆ ಜಮೀನುಗಳನ್ನು ಪರಿಶೀಲಿಸಿ ಸರ್ಕಾರದ ವತಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಲಾಯಿತು.
ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸುತ್ತಿರುವ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರಿಗೆ ಹಾರ್ದಿಕ ಸ್ವಾಗತ.
@narendramodi#KarnatakaWelcomesModi
ಬೊಂಬೆನಾಡಿನ ಎಲ್ಲಾ ಕೆರೆ ಕಟ್ಟೆಗಳು ತುಂಬಿದ್ದು ,ಈ ಬಾರಿ ವಿಶೇಷವಾಗಿ ಗೌರಿ ಗಣೇಶ ಹಬ್ಬ ಆಚರಿಸುವ ಸಲುವಾಗಿ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಗಣೇಶ ಗೌರಿ ಮೂರ್ತಿಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮಕ್ಕೆ ಟೋಕನ್ ನೀಡುವ ಮುಖಾಂತರ ಚಾಲನೆ ನೀಡಲಾಯಿತು. ಹಬ್ಬವನ್ನು ವಿಜೃಂಭಣೆಯಿಂದ ಹಾಗೂ ಜಾಗರೂಕತೆಯಿಂದ ಆಚರಿಸುವ ಸಲಹೆ ನೀಡಲಾಯಿತು...
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಚನ್ನಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ತಿರಂಗಾ ರ್ಯಾಲಿಗೆ ಚಾಲನೆ ನೀಡಲಾಯಿತು.
ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
#HarGharTringa#AzadiKaAmritMahotsav
ನಮ್ಮ ರಾಮನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ವಿದೇಶಾಂಗ ಸಚಿವರಾದ @DrSJaishankar ಅವರ ಜತೆ ಪಾಲ್ಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಚಿವರಾದ@drashwathcn , ವಿಧಾನಪರಿಷತ್ ಸದಸ್ಯರಾದ ಶ್ರೀ ಕೇಶವ್ ಪ್ರಸಾದ್ ಅವರು, ಆ. ದೇವೇಗೌಡ ಅವರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಚನ್ನಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ತಿರಂಗಾ ರ್ಯಾಲಿಗೆ ಚಾಲನೆ ನೀಡಲಾಯಿತು.
ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
#HarGharTringa#AzadiKaAmritMahotsav
ಅನೇಕ ಸಂಶೋಧನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾಟನ್ ವೆಂಕಯ್ಯ, ಡೈಮಂಡ್ ವೆಂಕಯ್ಯ ಎಂದೇ ಖ್ಯಾತರಾದ ರೈತ, ಸ್ವಾತಂತ್ರ್ಯ ಹೋರಾಟಗಾರ, ತ್ರಿವರ್ಣ ಧ್ವಜದ ವಿನ್ಯಾಸಕಾರ ಪಿಂಗಳಿ ವೆಂಕಯ್ಯ ಅವರ ಜನ್ಮದಿನದ ಸ್ಮರಣೆಗಳು.
#PingaliVenkaiah