ನನ್ನ ರಾಜಕೀಯ ಜೀವನದ ಆಪ್ತ ಒಡನಾಡಿಗಳಲ್ಲಿ ಒಬ್ಬರಾದ ಪಕ್ಷದ ಹಿರಿಯ ನಾಯಕ ಶ್ರೀ ರಾಮಚಂದ್ರ ಗೌಡರ ಅಗಲಿಕೆ ವೈಯಕ್ತಿಕವಾಗಿಯೂ ನನಗೆ ತೀವ್ರ ಆಘಾತವನ್ನು ಉಂಟುಮಾಡಿದೆ. ಇಂದು ಅವರ ನಿವಾಸಕ್ಕೆ ತೆರಳಿ, ಶ್ರದ್ಧಾಂಜಲಿ ಸಲ್ಲಿಸಿ, ಅವರ ಕುಟುಂಬ ಸದಸ್ಯರಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸಲಾಯಿತು.
ಮತ್ತೋರ್ವ ಸೋದರನನ್ನು ನಾನು ಕಳೆದುಕೊಂಡಿದ್ದೇನೆ. ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶ್ರೀ ರಾಮಚಂದ್ರ ಗೌಡರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಜನಸಂಘದ ದಿನಗಳಿಂದಲೂ ಹೆಗಲಿಗೆ ಹೆಗಲು ಕೊಟ್ಟು, ಹಗಲಿರುಳು ಶ್ರಮಿಸಿ, ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಜೊತೆಯಾಗಿ ಕಟ್ಟಿದ ಹೋರಾಟದ ದಿನಗಳು ಕಣ್ಣಮುಂದೆ ಸುಳಿಯುತ್ತಿವೆ. ನನ್ನ ಸಚಿವ ಸಂಪುಟದ ಸಹೋದ್ಯೋಗಿಯಾಗಿ ಅವರ ಆಡಳಿತಾತ್ಮಕ ದಕ್ಷತೆ ಹಾಗೂ ಬದ್ಧತೆಯನ್ನು ನಾನು ಅತ್ಯಂತ ಹತ್ತಿರದಿಂದ ಕಂಡಿದ್ದೇನೆ.
ಅವರ ಅಗಲಿಕೆ ಪಕ್ಷಕ್ಕೆ, ಸಾರ್ವಜನಿಕ ಕ್ಷೇತ್ರಕ್ಕೆ ಮಾತ್ರವಲ್ಲ, ವೈಯಕ್ತಿಕವಾಗಿ ನನ್ನಲ್ಲಿಯೂ ದೊಡ್ಡ ನಿರ್ವಾತವನ್ನು ಸೃಷ್ಟಿಸಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ🙏
ಭಾರತೀಯ ಚಿತ್ರಸಂಗೀತ ಲೋಕದ ಧ್ರುವತಾರೆ, ಅನ್ವರ್ಥ ‘ಗಾನ ಕೋಗಿಲೆ’ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ.
ತಮ್ಮ ಸುಮಧುರ ಕಂಠದ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದ ಅವರು ಭಾರತೀಯ ಸಂಗೀತ ಲೋಕಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಅವರ ಅಗಲಿಕೆಯಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಸ್ಥರು ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ. ಓಂ ಶಾಂತಿ. 🙏🏼
ನಮ್ಮ ಪ್ರಜಾಪ್ರಭುತ್ವದ ಯಶಸ್ಸು ಮತ್ತು ಬಲವರ್ಧನೆ ಪ್ರತಿಯೊಬ್ಬ ಮತದಾರರ ಸಕ್ರಿಯ ಪಾಲ್ಗೊಳ್ಳುವಿಕೆಯ ಮೇಲೆ ನಿಂತಿದೆ. ಮತದಾನ ನಮ್ಮ ಹಕ್ಕು ಮತ್ತು ಕರ್ತವ್ಯ. ದೋಷಮುಕ್ತ ಹಾಗೂ ಪಾರದರ್ಶಕ ಮತದಾರರ ಪಟ್ಟಿ ನಮ್ಮ ಪ್ರಜಾಪ್ರಭುತ್ವದ ಮೂಲಭೂತ ಅಗತ್ಯ.
ಇಂದು ಸ್ವಗೃಹಕ್ಕೆ ಆಗಮಿಸಿದ ಬಿ.ಎಲ್.ಓ ರವರಿಗೆ ಎಲ್ಲಾ ವಿವರಗಳನ್ನು ಒದಗಿಸಿ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲಾಯಿತು. ಪ್ರತಿಯೊಬ್ಬ ಅರ್ಹ ಮತದಾರರೂ ಕೂಡ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ಸರಿಯಾದ ವಿವರ ನೀಡುವ ಮೂಲಕ ಸಹಕರಿಸಿ ಎಂದು ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ.
ನಾಡಿನ ಖ್ಯಾತ ಮಠಗಳಲ್ಲಿ ಒಂದಾಗಿರುವ ಕನಕಪುರದ ಶ್ರೀ ದೇಗುಲ ಮಠದ ಪೀಠಾಧ್ಯಕ್ಷರಾಗಿದ್ದ ಪರಮಪೂಜ್ಯ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಶಿವೈಕ್ಯರಾದ ಸುದ್ದಿ ಅತ್ಯಂತ ನೋವನ್ನು ತಂದಿದೆ. ಪೂಜ್ಯರ ಧಾರ್ಮಿಕ ಸಾಧನೆ, ತಪೋನಿಷ್ಠೆ, ಸೇವಾಕಾರ್ಯಗಳು, ಸಮಾಜಮುಖಿ ಚಿಂತನೆಗಳು ಸದಾ ಸ್ಮರಣೀಯ. ಪೂಜ್ಯ ಸ್ವಾಮೀಜಿಗಳ ಅಗಲಿಕೆಯಿಂದ ನಾಡು ಒಬ್ಬ ಶ್ರೇಷ್ಠ ಸಾಧಕ ಮಾರ್ಗದರ್ಶಕರನ್ನು ಕಳೆದುಕೊಂಡಿದೆ. ಪೂಜ್ಯರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಪಾರ ಭಕ್ತರಿಗೆ ಗುರುಗಳ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ🙏🏻
ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು.
ಯೋಗವು ಆರೋಗ್ಯಕರ ದೇಹ, ನೆಮ್ಮದಿಯ ಮನಸ್ಸು ಮತ್ತು ಸದೃಢ ಜೀವನದ ಆಧಾರ. ಯೋಗವನ್ನು ಅಳವಡಿಸೋಣ, ಆರೋಗ್ಯವನ್ನು ಕಾಪಾಡೋಣ.
#InternationalYogaDay2026
Heartiest birthday wishes to Hon’ble President of India, Smt. Droupadi Murmu Ji. Wishing you good health, happiness, and continued success in serving the nation.
@rashtrapatibhvn
ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿಗಳಾದ ಶ್ರೀ ಲಿಂಗರಾಜ್ ಪಾಟೀಲ್ ಹಾಗೂ ಶ್ರೀ ಆರ್. ರಘು ಕೌಟಿಲ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
@BJP4Karnataka
ವಿಶ್ವಪ್ರಸಿದ್ಧ ಸಂಸ್ಕೃತ ಗ್ರಾಮ ಮತ್ತೂರಿನಲ್ಲಿ ನಡೆದ ಬಿಜೆಪಿ ಹಿರಿಯ ಮುಖಂಡರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಲಿಂ. ಭಾನುಪ್ರಕಾಶ್ ಅವರ ದ್ವಿತೀಯ ವರ್ಷದ ಭಕ್ತಿಪೂರ್ವಕ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜ್ಞಾನ, ಸೇವೆ ಮತ್ತು ಸಂಸ್ಕಾರದ ಸಂಗಮವಾಗಿರುವ ಸಿರಿಗೆರೆ ಬೃಹನ್ಮಠದ ತರಳುಬಾಳು ಜಗದ್ಗುರು ಪರಮಪೂಜ್ಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ ಜನ್ಮದಿನದಂದು ಅವರಿಗೆ ನನ್ನ ಭಕ್ತಿಪೂರ್ವಕ ಪ್ರಣಾಮಗಳು.🙏
ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ದೇಶವನ್ನು ಮುನ್ನಡೆಸಿದ ಚುನಾಯಿತ ಪ್ರಧಾನಮಂತ್ರಿಯಾಗಿ ಅಪೂರ್ವ ಮೈಲಿಗಲ್ಲು ಸಾಧಿಸಿದ ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ @narendramodi ಜೀ ಅವರ ಗೌರವಾರ್ಥ ಇಂದು ಬೆಂಗಳೂರಿನ ಸಂಜಯನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅವರಿಗೆ ಆಯುರಾರೋಗ್ಯ, ಯಶಸ್ಸು ಹಾಗೂ ದೇವರ ಪೂರ್ಣ ಅನುಗ್ರಹ ನಿರಂತರವಾಗಿರಲೆಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಶ್ರೀ ಲಹರ್ ಸಿಂಗ್ ಸಿರೋಯಾ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
#12YearsOfSeva
Today marks a historic milestone in Bharat’s democratic journey as Hon’ble Prime Minister Shri @narendramodi ji becomes the longest-serving elected Prime Minister in independent India’s history.
My heartfelt congratulations and best wishes to Modi ji. May he continue to lead Bharat to even greater heights in the years ahead.
#12YearsOfSeva
ಸಂಡೂರು ರಾಜವಂಶದ ಯುವ ನಾಯಕ ಶ್ರೀ ಕಾರ್ತಿಕ್ ಘೋರ್ಪಡೆ ಅವರ ಅಕಾಲಿಕ ನಿಧನದ ಸುದ್ದಿ ತೀವ್ರ ದುಃಖವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಮತ್ತು ಆಪ್ತರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. 🙏🏼
ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ದೇವರಾಜ ಅರಸು ಅವರ ಮೊಮ್ಮಗ ಹಾಗೂ ಕಾಂಗ್ರೆಸ್ ಯುವ ಮುಖಂಡ ಶ್ರೀ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ 🙏🏼
ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಪ್ರೊ. ಎಂ. ನಾಗರಾಜ್ ಅವರು ಹಾಗೂ ವಿಧಾನ ಪರಿಷತ್ತಿಗೆ ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಶ್ರೀ ಲಿಂಗರಾಜ ಪಾಟೀಲ ಮತ್ತು ಶ್ರೀ ಆರ್. ರಘು ಕೌಟಿಲ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
Warm birthday wishes to the Hon’ble Chief Minister of Uttar Pradesh, Shri Yogi Adityanath ji. Wishing him good health, a long life, and continued service to the nation.
@myogiadityanath@CMOfficeUP
ಎಲ್ಲರಿಗೂ ವಿಶ್ವ ಪರಿಸರ ದಿನದ ಶುಭಾಶಯಗಳು.
ಸ್ವಗೃಹದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು. ನಮ್ಮ ಭೂಮಿಯನ್ನು ಹಸಿರಾಗಿಸುವ ಸಂಕಲ್ಪದೊಂದಿಗೆ, ‘ತಾಯಿಯ ಹೆಸರಿನಲ್ಲೊಂದು ಸಸಿ’ ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿ ಹೊತ್ತು ಪರಿಸರ ಸಂರಕ್ಷಣೆಗೆ ಕೈಜೋಡಿಸೋಣ.
#WorldEnvironmentDay#EnPedMaaKeNaam