ಇಂದು ಜಿ.ಪಂ.ಸಭಾಂಗಣದಲ್ಲಿ ಮಾನ್ಯ ರಾಜ್ಯ ಸ್ವೀಪ್ ನೊಡಲ್ ಅಧಿಕಾರಿಗಳಾದ ಶ್ರೀ. ಪಿ. ಎಸ್. ವಸ್ತ್ರದ ರವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮತದಾರರ ವಿಶೇಷ ಪರಿಷ್ಕರಣೆ ಕುರಿತು ವಿಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಈ ವೇಳೆ ಮಾನ್ಯ ಸಿಇಓ ರವರು ಹಾಗೂ ಮಾನ್ಯ ಯೋಜನಾ ನಿರ್ದೇಶಕರು ಉಪಸ್ಥಿತರಿದ್ದರು.
ವಿಜಯಪುರದಲ್ಲಿ ನಡೆದ DCC ಹಾಗೂ DLRC ಸಭೆಯಲ್ಲಿ ಜಿ.ಪಂ. ನ ಮಾನ್ಯ ಉಪ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ್ ವಡ್ಡರ ಅವರು, ಬ್ಯಾಂಕ್ ಗ್ರಾಹಕರಿಗೆ ಸೂಕ್ತ ಸ್ಪಂದನೆ ಹಾಗೂ ಮಾರ್ಗದರ್ಶನ ನೀಡುವಂತೆ ಸೂಚಿಸಿದರು. ವಿವಿಧ ಯೋಜನೆಗಳಡಿ ಬಾಕಿ ಇರುವ ಸಾಲ ಅರ್ಜಿಗಳನ್ನು ಒಂದು ವಾರದೊಳಗೆ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.
ಇಂದು ವಿಜಯಪುರ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸ��ೆ ಜರುಗಿತು.
ಈ ಸಂದರ್ಭದಲ್ಲಿ ಜಿ.ಪಂ.ನ ಮಾನ್ಯ ಮುಖ್ಯ ಯೋಜನಾಧಿಕಾರಿಗಳು, ಪಂಚಗ್ಯಾರಂಟಿ ಯೋಜನೆಗಳ ಸಮಿತಿಯ ಜಿಲ್ಲಾ & ತಾಲೂಕು ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ & ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
🌿 ಹಸಿರು ನೆಡುತೋಪಿನ ನಡುವೆ ಆಶಾಭಾವನೆಯ ಹೊಸ ಹೆಜ್ಜೆ...
ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಳಸಂಗಿ ಗ್ರಾಮದಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಕಂದಕ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.
🔹 105 ಕೂಲಿಕಾರರಿಗೆ ಉದ್ಯೋಗಾವಕಾಶ
🔹 605 ಮಾನವ ದಿನಗಳ ಸೃಜನೆ
🔹 ಉದ್ಯೋಗ ಸೃಜನೆಯಿಂದ ಕೂಲಿಕಾರರಲ್ಲಿ ಸಂತಸ
ವಿಬಿ-ಜಿ ರಾಮ್-ಜಿ ಯೋಜನೆಯಡಿ ಹಳ್ಳ ಪುನಶ್ಚೇತನ ಕಾಮಗಾರಿ ಪರಿಶೀಲನೆ
ವಿಜಯಪುರ ತಾಲೂಕಿನ ಜುಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಳ್ಳ ಪುನಶ್ಚೇತನ ಹಾಗೂ ಹೂಳೆತ್ತುವ ಕಾಮಗಾರಿಗೆ ಜಿಲ್ಲಾ ಪಂಚಾಯತಿಯ ಮಾನ್ಯ ಸಹಾಯಕ ಯೋಜನಾಧಿಕಾರಿಗಳಾದ ಶ್ರೀ ಅರುಣಕುಮಾರ ದಳವಾಯಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಇಂದು ವಿಜಯಪುರದಲ್ಲಿ ನಡೆಯಲಿರುವ ವೃಕ್ಷೋಥಾನ ಹೆರಿಟೇಜ್ ರನ್–2026 ಯಶಸ್ವಿ ಆಯೋಜನೆ ಸಂಬಂಧ ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.
ಅಗತ್ಯ ಸೌಲಭ್ಯಗಳು, ಸಾರ್ವಜನಿಕರ ಭಾಗವಹಿಸುವಿಕೆ, ಪ್ರಚಾರ ಕಾರ್ಯಕ್ರಮಗಳು ಹಾಗೂ ವಿವಿಧ ಇಲಾಖೆಗಳ ಸಮನ್ವಯ ಕುರಿತು ಚರ್ಚಿಸಿದರು.
ಇಂದು ವಿಜಯಪುರ ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಿಷಿ ಆನಂದ ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಇಂದು ಡಾ. ಎಂ ರಾಮಪ್ಪ(M.A, B.ed Hon. Doc. (D.Lit) ಸನ್ಮಾನ್ಯ ಅಧ್ಯಕ್ಷರು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಬೆಂಗಳೂರು ರವರು ಜಿಲ್ಲಾ ಪಂಚಾಯತಿಯ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿ.ಪಂ. ನ ಮಾನ್ಯ ಸಿಇಓ ರವರಾದ ಶ್ರೀ ರಿಷಿ ಆನಂದ ರವರು ಹಾಗೂ ಭೋವಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಕರ್ನಾಟಕ ರಾಜ��ಯ ಮಹಿಳಾ ಆಯೋಗದ ಮಾನ್ಯ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಜಿಲ್ಲಾ ಪಂಚಾಯತಿಯ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ ಕಲಿಕಾ ಚಟುವಟಿಕೆಗಳನ್ನು ಆಲಿಸಿದರು. ಮಕ್ಕಳ ಆಹಾರವನ್ನು ಸ್ವತಃ ಸೇವಿಸಿ ಗುಣಮಟ್ಟ ಪರಿಶೀಲಿಸಿ, ಸಂತಸ ವ್ಯಕ್ತಪಡಿಸಿದರು & ಮೂಲಸೌಕರ್ಯ ಪರಿಶೀಲಿಸಿದರು.
ಯುವಶಕ್ತಿಗೆ ಹೊಸ ವೇದಿಕೆ – ‘ಭಾರತ್ ಜೋಡೋ ಯುವ ಸಂಘ’
ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಭೇಟಿ ನೀಡಿದ ಜಿ.ಪಂ. ಮಾನ್ಯ ಸಿಇಒ ರವರಾದ ಶ್ರೀ ರಿಷಿ ಆನಂದ ಅವರು ಖುದ್ದಾಗಿ ಎರಡು ಯುವ ಸಂಘಗಳನ್ನು ನೋಂದಣಿ ಮಾಡಿ, ಯುವಕರಿಗೆ ಯೋಜನೆಯ ಕುರಿತು ಜಾಗೃತಿ ಮೂಡಿಸಿದರು.
ಯುವಶಕ್ತಿ ಒಂದಾದರೆ – ಸಮಾಜದ ಅಭಿವೃದ್ಧಿಗೆ ಹೊಸ ದಿಕ್ಕು!
ಇಂದು ದಿನಾಂಕ 20.08.2026 ರಂದು ಜಿಲ್ಲಾ ಪಂಚಾಯತಿ, ಸಭಾಂಗಣದಲ್ಲಿ ಸದ್ಭಾವನಾ ದಿನವನ್ನು ಆಚರಿಸಲಾಯಿತು.
ಈ ��ೇಳೆ ಜಿಲ್ಲಾ ಪಂಚಾಯತಿಯ ಮಾನ್ಯ ಉಪ ಕಾರ್ಯದರ್ಶಿಗಳಾದ ಶ್ರೀ. ಪ್ರಕಾಶ ವಡ್ಡರ, ಮಾನ್ಯ ಯೋಜನಾ ನಿರ್ದೇಶಕರಾದ ಶ್ರೀ. ಅಶೋಕ ಕಲಘಟಗಿ, ಜಿಲ್ಲಾ ಪಂಚಾಯಿತಿಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಯುವ ಶಕ್ತಿ – ರಾಷ್ಟ್ರ ಶಕ್ತಿ! 🇮🇳
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಭಾರತ್ ಜೋಡೋ ಯುವ ಸಂಘದ ಮೂಲಕ ಯುವಕರನ್ನು ಸಂಘಟಿಸಿ, ಅವರ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಿಕೊಳ್ಳಲು ಅವಕಾಶ.
#ಯುವಶಕ್ತಿ#ರಾಷ್ಟ್ರಶಕ್ತಿ#ಯುವಕರಸಬಲೀಕರಣ
ವಿಜಯಪುರ ತಾಲೂಕಿನ ಕವಲಗಿ ಗ್ರಾಮದಲ್ಲಿ ರಸ್ತೆ ಸಮಸ್ಯೆಯನ್ನು ಜಿ.ಪಂ.ನ ಮಾನ್ಯ ಉಪ ಕಾರ್ಯದರ್ಶಿಗಳಾದ ಶ್ರೀ. ಪ್ರಕಾಶ ವಡ್ಡರ ರವರು ಪರಿಶೀಲಿಸಿದರು. ರಸ್ತೆ ಜಾಗದ ಮೇಲಿನ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಲು ತಹಶೀಲ್ದಾರರಿಗೆ ತುರ್ತು ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ��ೂಚಿಸಿದರು.
ಇಂದು ವಿಜಯಪುರ ಜಿ.ಪಂ. ಸಭಾಂಗಣದಲ್ಲಿ ಶ್ರೀ. ರಾಮಚಂದ್ರ ಗಡದೆ(ಕೆ.ಎ.ಎಸ್), ಮಾನ್ಯ ಪ್ರಧಾನ ವ್ಯವಸ್ಥಾಪಕರು ರಾಜೀವ ಗಾಂಧಿ ವಸತಿ ನಿಗಮ ನಿಯಮಿತ ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ವಿವಿಧ ವಸತಿ ಯೋಜನೆಗಳ ಕುರಿ��ು ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಈ ��ಂದರ್ಭದಲ್ಲಿ ಮಾನ್ಯ ಮುಖ್ಯ ಯೋಜನಾಧಿಕಾರಿಗಳು, ಮಾನ್ಯ ಮುಖ್ಯ ಲೆಕ್ಕಾಧಿಕಾರಿಗಳು ಇದ್ದರು.
ವಿಕಸಿತ ಭಾರತ -ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆ
ಗ್ರಾಮೀಣ ಬಂಧುಗಳೇ. ವರ್ಷಕ್ಕೆ 125 ದಿನ��ಳ ಉದ್ಯೋಗ ಲಭ್ಯವಿದೆ. ಪ್ರತಿ ದಿನದ ಕೂಲಿ ರೂ. 382 ಕೂಲಿ ಸಿಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ.
ಹೆಚ್ಚಿನ ಮಾಹಿತಿಗಾಗಿ ಇಂದೇ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ.
🌾 ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)
ಗ್ರಾಮೀಣಾಭಿವೃದ್ಧಿಗೆ ಹೊಸ ಚೈತನ್ಯ! 💚
ಉದ್ಯೋಗ ಭದ್ರತೆ, ಶಾಶ್ವತ ಆಸ್ತಿ ನಿರ್ಮಾಣ, ಮಹಿಳಾ ಸಬಲೀ���ರಣ ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕ ಅನುಷ್ಠಾನದ ಮೂಲಕ ವಿಕಸಿತ ಗ್ರಾಮ – ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸೋಣ. 🇮🇳
#VBGRAMG #ViksitBharat
ಇಂದು ದಿನಾಂಕ 30.07.2026ರಂದು ವಿಜಯಪುರ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ. ರಿಷಿ ಆನಂದ ರವರ ಅಧ್ಯಕ್ಷತೆಯಲ್ಲಿ ತೋಟಗಾರಿಕೆ ಇಲಾಖೆಯ ವಿವಿ��� ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಈ ವೇಳೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಇಂದು ದಿನಾಂಕ 29.07.2026ರಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ. ರಿಷಿ ಆನಂದ ರವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯಪುರ ಜಿ.ಪಂ. ನ ಮಾನ್ಯ ಸಿಇಒ ಶ್ರೀ ರಿಷಿ ಆನಂದ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಜಿ.ಪಂ. ನ ಮಾನ್ಯ ಉಪ ಕಾರ್ಯದರ್ಶಿಗಳಾದ ಶ್ರೀ. ಪ್ರಕಾಶ ವಡ್ಡರ ರವರು ಸೇರಿದಂತೆ ಎಲ್ಲ ಅಧಿಕಾರಿಗಳು & ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯಪುರ ಜಿ.ಪಂ.ನ ಮಾನ್ಯ ಸಿಇಒ ಶ್ರೀ ರಿಷಿ ಆನಂದ ಅವರ ಅಧ್ಯ���್ಷತೆಯಲ್ಲಿ DCC & DLRC ಸಭೆ ನಡೆಯಿತು. ಬ್ಯಾಂಕ್ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಿ, ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಸಮರ್ಪಕ ಮಾರ್ಗದರ್ಶನ ನೀಡಬೇಕು. ಬಾಕಿ ಉಳಿದ ಸಾಲ ಅರ್ಜಿಗಳನ್ನು ಒಂದು ವಾರದೊಳಗೆ ವಿಲೇವಾರಿ ಮಾಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.