ಕರ್ನಾಟಕದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಶ್ರೀ ಪವನ್ ಖೇರಾ ಹಾಗೂ ಶ್ರೀ ಮನ್ಸೂರ್ ಅಲಿಖಾನ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.
@kharge@Pawankhera@MansoorKhanINC
ಇತ್ತೀಚೆಗೆ ತಾಳಿಕೋಟಿ ಪಟ್ಟಣದಲ್ಲಿ ಸಂಭವಿಸಲಿದ್ದ ಗ್ಯಾಸ್ ಸಿಲಿಂಡರ್ ಅನಾಹುತವನ್ನು ತಮ್ಮ ಸಮಯ ಪ್ರಜ್ಞೆ ಹಾಗೂ ಧೈರ್ಯದಿಂದ ತಪ್ಪಿಸಿದ ಶ್ರೀ ಕಿರಣ್ ಕೋಟಿಮನಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದೆ. ಕಿರಣ್ ಅವರಿಗೂ ತೀವ್ರ ರೀತಿಯ ಸುಟ್ಟ ಗಾಯಗಳಾಗಿದ್ದು, ಅವರಿಗೆ ಸರ್ಕಾರದಿಂದ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
#Talikoti
ತಾಳಿಕೋಟಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪಟ್ಟಿದ್ದ ಕಟ್ಟಡ ಕಾರ್ಮಿಕರಾದ ಶಕೀಲ್ ಅಹ್ಮದ್ ಕುಂಬಾರವಾಡಿ & ಬಷಿರ್ ಅಹ್ಮದ್ ಕಡದರಾಳ ಅವರ ಮನೆಗೆ ತೆರಳಿ ಸಾಂತ್ವನ ಹೇಳಲಾಯಿತು. ನೊಂದ ಕುಟುಂಬಗಳಿಗೆ ಕಾರ್ಮಿಕ ಇಲಾಖೆಯಿಂದ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಯುಕ್ತಿಕವಾಗಿಯೂ ಆ ಕುಟುಂಬಗಳಿಗೆ ಧನ ಸಹಾಯ ಮಾಡಿದ್ದೇನೆ.
RIDF31 ಯೋಜನೆಯಡಿಯಲ್ಲಿ ತಾಳಿಕೋಟಿ ಕೃಷಿ ಉತ್ಪನ್ನ ಮಾರುಕಟ್ಟೆಯ ಮುಖ್ಯ ಪ್ರಾಂಗಣದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಿಸುವ ಕಾಮಗಾರಿ & 2024-25-26 ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ ತಾಳಿಕೋಟಿ ಮುಖ್ಯ ಮಾರುಕಟ್ಟೆ, ಮುದ್ದೇಬಿಹಾಳ & ನಾಲತವಾಡ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಿದೆನು.
ತಾಳಿಕೋಟಿಯಲ್ಲಿ ಸ್ಥಾಪಿಸಲಾಗಿರುವ ಅಗ್ನಿಶಾಮಕ ಮತ್ತು ತುರ್ತು ಸೇವೆಯ ನೂತನ ಘಟಕವನ್ನು ಲೋಕಾರ್ಪಣೆ ಗೊಳಿಸಲಾಯಿತು. ಈ ಮೂಲಕ ನಮ್ಮ ತಾಳಿಕೋಟಿ ತಾಲೂಕಿನ ಜನತೆಯ ಮತ್ತೊಂದು ಬಹು ದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ.
#Talikoti
ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷರು & ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗಡೆ ಅವರ ಅಗಲಿಕೆಯ ಸುದ್ದಿಯಿಂದ ದುಃಖವಾಗಿದೆ.
ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತ, ದೇವರು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸೋಣ.
#RIP
ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆತ್ಮೀಯರಾದ ಶ್ರೀ ಬಿ ಕೆ ಹರಿಪ್ರಸಾದ್ ಅವರಿಗೆ ಅಭಿನಂದನೆಗಳು. ನಮ್ಮ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಬೆಳೆಸುವ ನಾಯಕತ್ವ ನಿಮ್ಮಿಂದ ಮೂಡಿಬರಲಿ.
@HariprasadBK2
ನಾಡಿನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @DKShivakumar ಅವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಆಡಳಿತವು ನಾಡಿನ ಕಲ್ಯಾಣದ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಲಿ, ಜನ ಮೆಚ್ಚಿದ, ಜಗ ಮೆಚ್ಚಿದ ಆಡಳಿತ ನಿಮ್ಮಿಂದ ಮೂಡಿ ಬರಲಿ ಎಂದು ಹಾರೈಸುತ್ತೇನೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳು.
ನಿಮ್ಮ ಆಡಳಿತ ಯಶಸ್ವಿಯಾಗಿ ಸಾಗಲಿ, ನೀವು ಕನಸು ಕಂಡಂತೆ ರಾಜ್ಯ ಅಭಿವೃದ್ಧಿಯ ಪಥದಲ್ಲಿ ಸಾಗಲಿ.
@DKShivakumar
ನವಭಾರತದ ನಿರ್ಮಾತೃ, ವಿಜ್ಞಾನ ತಂತ್ರಜ್ಞಾನ ಕ್ಷೇತ್ರಕ್ಕೆ ಪ್ರೋತ್ಸಾಹ ಕೊಟ್ಟ ಮುತ್ಸದ್ಧಿ, ಮಾಜಿ ಪ್ರಧಾನಿ, ಭಾರತರತ್ನ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯಂದು ಶತಕೋಟಿ ಪ್ರಣಾಮಗಳು.
#RajivGandhi#DeathAnniversary