ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಮಾನ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರೊಂದಿಗೆ, ಕರ್ನಾಟಕದಾದ್ಯಂತ ನಡೆಯಲಿರುವ 70,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ಸಿದ್ಧತೆಗಳನ್ನು ಪರಿಶೀಲಿಸಲು ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು ಹಾಗೂ ತೆಗೆದುಕೊಂಡ ನಿರ್ಣಯಗಳು ಇಂತಿವೆ :
* ಮುಂಬರುವ ಕೆಪಿಎಸ್ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ಸುಮಾರು 35 ಲಕ್ಷ ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆಯಿದೆ. ಹೀಗಾಗಿ, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಬೇಕು ಮತ್ತು ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ತಡೆಯಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದೇನೆ.
* ಪರೀಕ್ಷೆಯ ಪ್ರತಿಯೊಂದು ಹಂತವನ್ನೂ ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ. ಖಾಸಗಿ ಕೋಚಿಂಗ್ ಸೆಂಟರ್ಗಳ ಮೇಲೆ ತೀವ್ರ ನಿಗಾ ಇಡಲು ಪೊಲೀಸರಿಗೆ ಸೂಚಿಸಲಾಗಿದ್ದು, ಪರೀಕ್ಷಾ ಕರ್ತವ್ಯನಿರತ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
* ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.
* ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಮಗ್ರ ಸುಧಾರಣೆಗಳನ್ನು ತರಲು ಶ್ರೀ ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತಿದೆ. ಶ್ರೀ ಟಿ. ಎಂ. ವಿಜಯಭಾಸ್ಕರ್, ಶ್ರೀಮತಿ ವಂದಿತಾ ಶರ್ಮಾ ಹಾಗೂ ಶ್ರೀ ಎಲ್. ಕೆ. ಅತೀಕ್ ಅವರು ಈ ಸಮಿತಿಯ ಸದಸ್ಯರಾಗಿರಲಿದ್ದಾರೆ.
* ಪಾರದರ್ಶಕ ಹಾಗೂ ನಂಬಿಕಾರ್ಹ ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕವು ಇಡೀ ದೇಶಕ್ಕೇ ಮಾದರಿಯಾಗಬೇಕು. ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗೂ ನಮ್ಮ ವ್ಯವಸ್ಥೆಯ ಮೇಲೆ ಸಂಪೂರ್ಣ ಭರವಸೆ ಇರಬೇಕು; ಆ ನಂಬಿಕೆಯನ್ನು ಉಳಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿರಲಿದೆ.
Hon’ble Chief Minister Shri @DKShivakumar chaired a high-level meeting at Vidhana Soudha to review preparations for the recruitment of over 70,000 government posts across Karnataka.
- With nearly 35 lakh candidates expected to appear for the upcoming KPSC and KEA examinations, the Hon’ble Chief Minister directed officials to ensure the entire recruitment process is conducted with complete transparency, professionalism, and zero tolerance for malpractice.
- The Hon’ble Chief Minister instructed that every stage of the examination process be video recorded, coaching centres remain under close police surveillance, and that no official or staff member involved in the examination process carry mobile phones. Deputy Commissioners, Superintendents of Police and Education Department officials will be held directly accountable for any lapses.
- To further strengthen transparency and efficiency, the Government has constituted a Competitive Examinations and Recruitment Reform Committee under the chairmanship of Shri S. V. Ranganath, with Shri T. M. Vijayabhaskar, Smt. Vandita Sharma, and Shri L. K. Atheeq as members, to recommend comprehensive reforms in competitive examinations and recruitment.
- The Hon’ble Chief Minister reiterated that Karnataka is committed to setting a national benchmark for fair, transparent, and credible recruitment, ensuring every deserving candidate has complete faith in the system.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ಸನ್ನದ್ಧತೆಯ ಮೇಲ್ವಿಚಾರಣೆ ಕುರಿತು ವಿಧಾನಸೌಧದಲ್ಲಿ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವಾರು ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು.
ಈ ವೇಳೆ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ
ವಿಧಾನಸೌಧದಲ್ಲಿ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ಸನ್ನದ್ಧತೆಯ ಮೇಲ್ವಿಚಾರಣೆ ಕುರಿತು ವಿಧಾನಸೌಧದಲ್ಲಿ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವಾರು ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು.
ಈ ವೇಳೆ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷರಾದ ಪ್ರೊ. ಗೋವಿಂದರಾವ್ ಅವರು ಇಂದು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರನ್ನು ಭೇಟಿಯಾಗಿ, ಸಮಾಲೋಚಿಸಿದರು.
ಈ ಸಂದರ್ಭದಲ್ಲಿ ಆರ್ಥಿಕ ಸಲಹೆಗಾರರಾದ ಶ್ರೀ ಎಲ್. ಕೆ. ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದ ಹಿತ ಕಾಯಲು ನಾವು ಬದ್ಧ
ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು. ನಿತ್ಯ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದೆ. ಈ ಹಿಂದೆ 2016, 2017, 2018, 2023ರ ಸಂಕಷ್ಟ ಕಾಲದಲ್ಲೂ ಇಂತಹ ಆದೇಶಗಳು ಬಂದಿದ್ದವು.
ಕರ್ನಾಟಕ ಹಾಗೂ ತಮಿಳುನಾಡು ಗಡಿ ಭಾಗದಲ್ಲಿರುವ ಬಿಳಿಗುಂಡ್ಲುವಿಗೆ 3,500 ಕ್ಯೂಸೆಕ್ ನೀರನ್ನು ಹರಿಸಲು ನೀಡಿರುವ ಆದೇಶದ ವಿರುದ್ಧ ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದೆವು. ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿದ್ದ ಸಲಹೆಗಾರರನ್ನೇ ನಾವು ಮುಂದುವರಿಸಿದ್ದು, ಅವರು ಸಭೆಯಲ್ಲಿ ಭಾಗವಹಿಸಿ ವಾದ ಮಂಡಿಸಿದ್ದಾರೆ. ನಮ್ಮ ಅಡ್ವೋಕೇಟ್ ಜನರಲ್ ಹಾಗೂ ಎಸಿಎಸ್ ಅವರು ನೀರು ಹರಿಸುವ ಪ್ರಮಾಣ ಕಡಿಮೆ ಮಾಡಿ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಆದರೆ ತಮಿಳುನಾಡು ತಮಗೆ ಹೆಚ್ಚಿನ ನೀರು ಬಿಡಬೇಕು ಎಂದು ವಾದಿಸಿತು.
ಕಳೆದ 3 ವರ್ಷಗಳಲ್ಲಿ ಉತ್ತಮ ಮಳೆಯಾಗಿರುವ ಕಾರಣಕ್ಕೆ, ಕಳೆದ ವರ್ಷ ಜೂನ್ ತಿಂಗಳಲ್ಲೇ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗಿತ್ತು ಮತ್ತು 177 ಟಿಎಂಸಿ ಬದಲಾಗಿ 400ಕ್ಕೂ ಹೆಚ್ಚು ಟಿಎಂಸಿ ನೀರು ಹರಿದು ಸಮುದ್ರ ಸೇರಿತ್ತು.
ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ; ಹಾರಂಗಿಯಲ್ಲಿ 95%, ಕಬಿನಿಯಲ್ಲಿ 83%, ಹೇಮಾವತಿಯಲ್ಲಿ 67% ಹಾಗೂ ಕೆಆರ್ಎಸ್ನಲ್ಲಿ 36% ನೀರಿದೆ. ನಮ್ಮ ಅಣೆಕಟ್ಟುಗಳ ಒಳಹರಿವು 25,000 ಕ್ಯೂಸೆಕ್ನಷ್ಟಿದ್ದು, ಅದರಲ್ಲಿ ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನಂತೆ 15 ದಿನಕ್ಕೆ 4.5 ಟಿಎಂಸಿ ನೀರು ಹರಿಸಲು ಸೂಚಿಸಲಾಗಿದೆ. ಒಳಹರಿವು ಚೇತರಿಸಿಕೊಂಡಿರುವುದು ಸಮಾಧಾನಕರ ವಿಚಾರ. ಆದರೂ ರೈತರ ಹಾಗೂ ಕುಡಿಯುವ ನೀರಿನ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ.
ಮೇಲ್ಮನವಿ ಸಲ್ಲಿಸುವ ಮುನ್ನವೇ 3 ಕೇಂದ್ರ ಸಚಿವರು ಸೇರಿದಂತೆ 36 ಸಂಸದರ ಸರ್ವಪಕ್ಷ ಸಭೆ ನಡೆಸಲಾಗಿತ್ತು. ಪ್ರಹ್ಲಾದ್ ಜೋಷಿ, ವಿ. ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ಮೇಲ್ಮನವಿ ಪ್ರತಿ ಕಳುಹಿಸಿಕೊಡಲಾಗಿದ್ದು, ಅವರು ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ತಮಿಳುನಾಡಿನವರು 9.94 ಟಿಎಂಸಿ ನೀರು ಕೇಳಿದ್ದರೂ ಸಮಿತಿ ಅದರ ಅರ್ಧದಷ್ಟು ಸೂಚಿಸಿದೆ. ಈ ಎಲ್ಲಾ ವಿಚಾರಗಳನ್ನು ಚರ್ಚಿಸಲು ಭಾನುವಾರ ಎಲ್ಲಾ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಭಾಗದ ಶಾಸಕರು ಮತ್ತು ಸಂಸದರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಅದಕ್ಕೂ ಮುನ್ನ ನಮ್ಮ ಕಾನೂನು ತಂಡ, ಡಾ. ಜಿ. ಪರಮೇಶ್ವರ್, ರಾಮಲಿಂಗಾ ರೆಡ್ಡಿ ಅವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ.
ಜುಲೈ ಅಂತ್ಯದವರೆಗೆ ನಾವು ತಮಿಳುನಾಡಿಗೆ ಹರಿಸಿರುವುದು ಕೇವಲ 0.6 ಟಿಎಂಸಿ ನೀರು ಮಾತ್ರ. ಇದು ಕಳೆದ 100 ವರ್ಷಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣದ ನೀರಾಗಿದೆ. ಇದು ಅಣೆಕಟ್ಟುಗಳಿಂದ ಬಿಟ್ಟ ನೀರಲ್ಲ, ಬೆಂಗಳೂರು ಸುತ್ತಮುತ್ತ ಬಿದ್ದ ಮಳೆಯ ನೀರು. ಆಗಸ್ಟ್ 13ರ ಬಂದ್ ಕರೆಗೆ ಸಂಬಂಧಿಸಿದಂತೆ, ಸರ್ಕಾರವೇ ನಿಮ್ಮ ಪರವಾಗಿರುವುದರಿಂದ ಬಂದ್ ಮಾಡುವ ಅಗತ್ಯವಿಲ್ಲ ಮತ್ತು ಬಂದ್ನಿಂದ ಪರಿಹಾರ ಸಿಗುವುದಿಲ್ಲ, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ನ್ಯಾಯಾಲಯದ ತೀರ್ಮಾನಗಳ ಹಿನ್ನೆಲೆಯಲ್ಲಿ ನಮ್ರತೆಯಿಂದ ಮನವಿ ಮಾಡುತ್ತೇನೆ.
ತಮಿಳುನಾಡು ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರ ಬಂದಿದ್ದು, ಅವರು ತಂಡದೊಂದಿಗೆ ಆಗಸ್ಟ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲು ತೀರ್ಮಾನಿಸಲಾಗಿತ್ತು. ಆದರೆ ಈಗಿನ ವಾತಾವರಣ ಸರಿ ಇಲ್ಲದಿರುವುದರಿಂದ ಈ ಸಭೆಯನ್ನು ಕೆಲ ದಿನಗಳ ಕಾಲ ಮುಂದೂಡಲು ಮನವಿ ಮಾಡುತ್ತೇನೆ. ಪರಿಸ್ಥಿತಿ ತಿಳಿಯಾದ ಬಳಿಕ ಸೌಹಾರ್ದತೆ ಮತ್ತು ಗೌರವಪೂರ್ವಕವಾಗಿ ಆತಿಥ್ಯ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಚರ್ಚಿಸಲಾಗುವುದು.
- ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಕಾವೇರಿ ನೀರಿನ ವಿಚಾರವಾಗಿ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
"ನಮ್ಮ ಸರ್ಕಾರ ಕರ್ನಾಟಕ ರಾಜ್ಯದ ರೈತರ ಹಿತ ಕಾಪಾಡುವುದಕ್ಕೆ ಬದ್ಧವಾಗಿದೆ. ಈ ವಿಚಾರವಾಗಿ ಭಾನುವಾರ (ಆಗಸ್ಟ್ 02ರಂದು) ಸರ್ವಪಕ್ಷ ಸಭೆ ಕರೆಯಲಾಗಿದೆ"
ಕಾವೇರಿ ನೀರಿನ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಜಲಸಂಪನ್ಮೂಲ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ಉಪಸ್ಥಿತರಿದ್ದರು.
Hon'ble Chief Minister Shri @DKShivakumar addressed the media at Vidhana Soudha today on the Cauvery water issue and reaffirmed the government's commitment to safeguarding the interests of Karnataka's farmers. He announced that an all party meeting has been convened on Sunday, August 2, to discuss the matter.
Deputy Chief Minister Dr. G. Parameshwara and Minister for Water Resources Shri Ramalinga Reddy were present.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕದ ಕಾವೇರಿ ನೀರಿನ ಪರಿಸ್ಥಿತಿಯ ಕುರಿತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ನೀರಾವರಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಮುಂದಿನ ಕ್ರಮಗಳ ಕುರಿತು ಚರ್ಚಿಸಿದರು.
Hon'ble Chief Minister Shri @DKShivakumar chaired a high-level meeting to review the Cauvery water situation in Karnataka in the backdrop of the Cauvery Water Management Authority (CWMA) order.
The meeting was attended by Deputy Chief Minister Dr. G. Parameshwara, Water Resources Minister Shri Ramalinga Reddy, Chief Secretary Dr. Shalini Rajneesh, DGP & IGP Dr. M.A. Saleem, and senior officials from the administration and police to assess the prevailing situation and discuss the way forward.
ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ
ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2ರಂದು) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ.
- ಸನ್ಮಾನ್ಯ ಮುಖ್ಯಮಂತ್ರಿಗಳು ಶ್ರೀ ಡಿ.ಕೆ. ಶಿವಕುಮಾರ್
An all party meeting has been convened on Sunday, August 2, at the Home Office Krishna to discuss the Cauvery water issue. Former Chief Ministers, Members of Parliament and MLAs representing the Cauvery basin have been invited to participate.
- Hon'ble Chief Minister Shri @DKShivakumar
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಾರಿ ವರುಣನ ಕೃಪೆ ಇಲ್ಲದಿರುವುದರಿಂದ, ಈ ಆದೇಶವನ್ನು ಪ್ರಶ್ನಿಸುವ ಕುರಿತು ಸಚಿವರಾದ ರಾಮಲಿಂಗಾರೆಡ್ಡಿ, ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ ಮೇಲ್ಮನವಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿಂದೆ ಸಮಿತಿಯು ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿತ್ತು ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ.
ಬೆಂಗಳೂರಿಗೆ ಮರಳಿದ ನಂತರ ವಿರೋಧ ಪಕ್ಷದ ನಾಯಕರ ಜೊತೆಯೂ ಈ ಬಗ್ಗೆ ಚರ್ಚಿಸಲಾಗುವುದು. ಈ ಮಧ್ಯೆ ತಮಿಳುನಾಡು ಸಿಎಂ ವಿಜಯ್ ಅವರು ನನ್ನ ಜೊತೆ ಚರ್ಚಿಸಲು ಇಂಗಿತ ವ್ಯಕ್ತಪಡಿಸಿ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ನನ್ನ ಜತೆ ದೂರವಾಣಿ ಮೂಲಕವೂ ಮಾತನಾಡಿದ್ದಾರೆ. ನಾವು ಅವರಿಗೆ ನೀಡಬೇಕಾದ ಗೌರವ ನೀಡಿ, ಸಭೆಗೆ ಬನ್ನಿ ಎಂದು ಹೇಳಿದ್ದೇನೆ. ನಮ್ಮ ರಾಜ್ಯಕ್ಕೆ ಬರುವ ಅತಿಥಿಗಳನ್ನು ಗೌರವದಿಂದ ಸ್ವೀಕರಿಸುವುದು ನಮ್ಮ ಕರ್ತವ್ಯ. ಹೀಗಾಗಿ ಆಹ್ವಾನಿಸಿದ್ದು, ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಮ್ಮ ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿಯನ್ನು ಬಂದು ನೋಡಿ ಎಂದು ತಮಿಳುನಾಡು ಸಿಎಂ ವಿಜಯ್ ಅವರಿಗೆ ನಾವು ಮನವಿ ಮಾಡಿದ್ದೇವೆ. ಅದಕ್ಕೆ ಅಗತ್ಯವಿರುವ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದೂ ಹೇಳಿದ್ದೇನೆ. ಅವರಿಗೂ ವಾಸ್ತವ ಪರಿಸ್ಥಿತಿಯ ಅನುಭವ ಆಗಬೇಕು.
- ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಇಂದು ದೆಹಲಿಯ ಕರ್ನಾಟಕ ಭವನದ ಬಳಿ ಕಾವೇರಿ ನೀರಿನ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ನೀಡಿದ ಪ್ರತಿಕ್ರಿಯೆ.
ಭಾರತೀಯ ಶಿಕ್ಷಣ ರಂಗ ಮತ್ತು ಸಾಮಾಜಿಕ ಸುಧಾರಣೆಯ ಚರಿತ್ರೆಯಲ್ಲಿ ಅಳಿಸಲಾಗದ ಹೆಸರು ಶ್ರೀ ಈಶ್ವರಚಂದ್ರ ವಿದ್ಯಾಸಾಗರ. ಸ್ತ್ರೀ ಶಿಕ್ಷಣಕ್ಕೆ ಬಲ ತುಂಬಿ, ವಿಧವಾ ಪುನರ್ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ದೊರಕಿಸಿಕೊಡುವಲ್ಲಿ ಅವರು ವಹಿಸಿದ ಪಾತ್ರ ಐತಿಹಾಸಿಕ. ಸಾಹಿತ್ಯ ಹಾಗೂ ಶಿಕ್ಷಣದ ಮೂಲಕ ಸಮಾಜದಲ್ಲಿದ್ದ ಅಂಧಕಾರವನ್ನು ಓಡಿಸಿದ ಈ ಮಹಾನ್ ಚೇತನದ ಪುಣ್ಯಸ್ಮರಣೆಯಂದು ಆದರಪೂರ್ವಕ ನಮನಗಳು
"ಇನ್ನು ಕೆಲವೇ ಕಾಲದಲ್ಲಿ ಚಿರತೆ, ಸಿಂಹ, ಹುಲಿಗಳು ಸಹ ಪ್ರಾಚೀನ ಮಹೋರಗಗಳಂತೆ ಪಳೆಯುಳಿಕೆಗಳಿಂದ ಪತ್ತೆ ಹಚ್ಚಬೇಕಾದ ಪ್ರಾಣಿಗಳಾಗಬಹುದು." - ಪೂಚಂತೇ
ತೇಜಸ್ವಿ ಅವರ ಈ ಮಾತುಗಳು ನಮ್ಮ ಪರಿಸರ ಕಾಳಜಿಯ ಜವಾಬ್ದಾರಿಯನ್ನು ನೆನಪಿಸುತ್ತವೆ. ಇಂದು ವಿಶ್ವ ಹುಲಿ ದಿನ. ದೇಶದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕ, ಅವುಗಳ ಸಂರಕ್ಷಣೆ ಮತ್ತು ನೈಸರ್ಗಿಕ ಆವಾಸಸ್ಥಾನಗಳ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿದೆ. ನಮ್ಮ ರಾಷ್ಟ್ರೀಯ ಪ್ರಾಣಿಯ ಸಂತತಿಯನ್ನು ಕಾಪಾಡಿ, ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಳ್ಳುವ ದೃಢ ಸಂಕಲ್ಪ ನಮ್ಮದಾಗಲಿ.
ಗುರುವಿನ ರೂಪವೇ ಧ್ಯಾನದ ಮೂಲ, ಗುರುವಿನ ಪಾದವೇ ಪೂಜೆಯ ಮೂಲ, ಗುರುವಿನ ವಾಕ್ಯವೇ ಮಂತ್ರದ ಮೂಲ ಮತ್ತು ಗುರುವಿನ ಕೃಪೆಯೇ ಮೋಕ್ಷದ ಮೂಲ ಎಂಬ ಮಾತಿನಂತೆ, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರವಾದ ಸ್ಥಾನವಿದೆ. ಅಜ್ಞಾನದಿಂದ ಜ್ಞಾನದೆಡೆಗೆ ಕೊಂಡೊಯ್ಯುವ ಗುರುವಿಗೆ ಶಿರಬಾಗಿ ನಮಿಸೋಣ. ಸರ್ವರಿಗೂ ಗುರು ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು.
Skyroot Aerospace founders Shri Pawan Chandana and Shri Naga Bharath Daka called on Hon'ble Chief Minister Shri D.K. Shivakumar in New Delhi today.
He congratulated them on the successful launch of Vikram-1, India's first privately developed orbital launch vehicle, and wished the entire @SkyrootA team continued success in advancing India's space ambitions through innovation and excellence.
ಮೂಲಸೌಕರ್ಯ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಕೃಷಿ ಹಾಗೂ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬಳಿ ಬಾಕಿ ಇರುವ ಪ್ರಮುಖ ಪ್ರಸ್ತಾವನೆಗಳ ಶೀಘ್ರ ಅನುಮೋದನೆಗೆ ರಾಜ್ಯ ಸರ್ಕಾರ ಸಕ್ರಿಯವಾಗಿ ಶ್ರಮಿಸುತ್ತಿದೆ.
ಈ ಯೋಜನೆಗಳಿಗೆ ಅಂಕಿತ ಸಿಕ್ಕರೆ ರಾಜ್ಯದ ಅಭಿವೃದ್ಧಿ ವೇಗಗೊಳ್ಳಲಿದ್ದು, ಜನಸಾಮಾನ್ಯರಿಗೆ ಮತ್ತಷ್ಟು ಉತ್ತಮ ಸೇವೆ ಹಾಗೂ ಹೊಸ ಅವಕಾಶಗಳು ದೊರೆಯಲಿವೆ. ಹೀಗಾಗಿ ರಾಜ್ಯದ ಹಿತಾಸಕ್ತಿಗಾಗಿ ಒಂದಾಗಿ ಶ್ರಮಿಸುವಂತೆ ಕರೆ ನೀಡಲಾಗಿದೆ.
The Government of Karnataka is actively pursuing the approval of several key proposals pending with the Union Government across infrastructure, rural development, healthcare, agriculture, public safety and governance.
Early approval of these proposals will help fast-track development, strengthen public services and unlock new opportunities for growth across the state. Karnataka continues to engage with the Union Government to ensure their expeditious approval.
Heartiest congratulations to Karnataka’s own Shilpa K. Shyla on winning the Bronze Medal in the Women’s F57 Shot Put at the 2026 Commonwealth Games.
Your remarkable achievement is a proud moment for Karnataka and the nation. Your determination, resilience and unwavering spirit will inspire countless young athletes to dream big and strive for excellence.
Wishing you continued success and many more laurels for India.
- Hon'ble Chief Minister Shri @DKShivakumar
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ನವದೆಹಲಿಯ ಕರ್ನಾಟಕ ಭವನದಲ್ಲಿ ಇಂದು ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿ, ಕೇಂದ್ರ ಸರ್ಕಾರದ ಬಳಿ ಬಾಕಿ ಇರುವ ರಾಜ್ಯದ ಹಿತದೃಷ್ಟಿಯ 13 ಪ್ರಮುಖ ಯೋಜನೆಗಳು ಹಾಗೂ ಅನುದಾನಗಳ ಶೀಘ್ರ ಬಿಡುಗಡೆಗಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಚರ್ಚಿಸಿದರು. ಅನುಮೋದನೆ ನಿರೀಕ್ಷಿಸುತ್ತಿರುವ 13 ಪ್ರಮುಖ ವಿಷಯಗಳ ವಿವರಗಳು ಹೀಗಿವೆ:
• 15ನೇ ಹಣಕಾಸು ಆಯೋಗದ ಗ್ರಾಮ ಪಂಚಾಯಿತಿ ಅನುದಾನ ಬಿಡುಗಡೆ: 2025–26ನೇ ಸಾಲಿಗೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ್ದ ₹2,186.20 ಕೋಟಿ ನೆರವು ಇನ್ನೂ ಬಿಡುಗಡೆಯಾಗಿಲ್ಲ. ಈ ಸಂಬಂಧ ಸರಣಿ ಪತ್ರಗಳನ್ನು ಬರೆದು, ಪ್ರಶ್ನೆಗಳಿಗೆ ವಿವರವಾದ ಸ್ಪಷ್ಟನೆ ನೀಡಿದ್ದರೂ ಅನುದಾನ ಬಾಕಿ ಇದೆ.
• ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ (STRR) ಯೋಜನೆ: ಬೆಂಗಳೂರು ಸುತ್ತಲೂ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ದಾಬಸ್ಪೇಟೆ, ಮಾಗಡಿ, ರಾಮನಗರ, ಕನಕಪುರ, ಆನೇಕಲ್ ಹಾಗೂ ಹೊಸೂರು ಸಂಪರ್ಕಿಸುವ 288 ಕಿ.ಮೀ. ರಿಂಗ್ ರಸ್ತೆ ಯೋಜನೆಗೆ ಭೂಸ್ವಾಧೀನದ 30% ವೆಚ್ಚವನ್ನು ರಾಜ್ಯವೇ ಭರಿಸುತ್ತಿದ್ದು, ಖನಿಜ ರಾಯಲ್ಟಿ ಹಾಗೂ GST ವಿನಾಯಿತಿಗೂ ಒಪ್ಪಿಗೆ ನೀಡಲಾಗಿದೆ. ಬಾಕಿ ₹9,613 ಕೋಟಿ ಮೌಲ್ಯದ ಕಾಮಗಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ ದೊರೆಯಬೇಕಿದೆ.
• ಬೆಂಗಳೂರು ಉಪನಗರ ರೈಲು ಯೋಜನೆ: 148 ಕಿ.ಮೀ. ಉದ್ದದ ಈ ಯೋಜನೆಯ ಪರಿಷ್ಕೃತ ವೆಚ್ಚ ₹23,343 ಕೋಟಿ ಆಗಿದ್ದು, ಈವರೆಗೆ ₹3,342.77 ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆಗೆ ಅಗತ್ಯವಿರುವ 153 ರೈಲ್ವೆ ಕೋಚ್ಗಳ ಖರೀದಿಗೆ ಕೇಂದ್ರ ಸಚಿವ ಸಂಪುಟ ಹಾಗೂ ರೈಲ್ವೇ ಇಲಾಖೆಯ ಅಂತಿಮ ಅನುಮೋದನೆ ಬೇಕಾಗಿದೆ.
• ಕೋಲಾರ ರೈಲ್ವೇ ಕೋಚ್ ಕಾರ್ಖಾನೆ: 2014ರಲ್ಲೇ ರಾಜ್ಯ ಹಾಗೂ ರೈಲ್ವೇ ಇಲಾಖೆ 50:50 ವೆಚ್ಚ ಹಂಚಿಕೆಯಲ್ಲಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಭೂಮಿ ಹಸ್ತಾಂತರಿಸಿದ್ದರೂ ಯೋಜನೆ ಇಂದಿಗೂ ಅನುಷ್ಠಾನಗೊಂಡಿಲ್ಲ.
• ಹೆಚ್ಎಎಲ್ ವಿಮಾನ ನಿಲ್ದಾಣ ಪುನರಾರಂಭ: ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣವನ್ನು ವಾಣಿಜ್ಯ ಬಳಕೆಗೆ ಪುನರಾರಂಭಿಸುವ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯದಿಂದ ಅಂತಿಮ ತೀರ್ಮಾನ ನಿರೀಕ್ಷಿಸಲಾಗುತ್ತಿದೆ.
• ಸಾಗರಮಾಲಾ 2.0 ಕಾರ್ಯಯೋಜನೆ ಅನುಮೋದನೆ: ಕರಾವಳಿ ಮೂಲಸೌಕರ್ಯ, ಬಂದರು ಸಂಪರ್ಕ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ಪ್ರಗತಿಗೆ ಕರ್ನಾಟಕ ಜಲಸಾರಿಗೆ ಮಂಡಳಿಯು ಸಲ್ಲಿಸಿರುವ ₹16,561 ಕೋಟಿ ಮೌಲ್ಯದ 176 ಯೋಜನೆಗಳ ಪ್ರಸ್ತಾವನೆಗೆ ಕೇಂದ್ರದ ಅಂಕಿತ ಅಗತ್ಯವಿದೆ.
• ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ: ಕಲ್ಯಾಣ ಕರ್ನಾಟಕದ ಆರೋಗ್ಯ ಸೇವೆ ಬಲವರ್ಧನೆಗೊಳಿಸಲು ರಾಯಚೂರಿನಲ್ಲಿ AIIMS ಸ್ಥಾಪನೆಗೆ 21.08.2023ರಂದೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, 11.06.2026ರಂದು ಪ್ರಧಾನಮಂತ್ರಿಗೆ ಮತ್ತೊಮ್ಮೆ ಪತ್ರ ಬರೆದಿದ್ದರೂ ಆರೋಗ್ಯ ಸಚಿವಾಲಯದಿಂದ ಒಪ್ಪಿಗೆ ಬರುವುದು ಬಾಕಿ ಇದೆ.
• ತೆಂಗು ಹಾಗೂ ಅಡಿಕೆ ಬೆಳೆಗಳ ಕೀಟ ನಿಯಂತ್ರಣಕ್ಕೆ ನೆರವು: ಕೀಟ ಬಾಧೆಯಿಂದ ಸಂಕಷ್ಟದಲ್ಲಿರುವ ತೆಂಗು ಮತ್ತು ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಿಂದ ₹1,438.59 ಕೋಟಿಗೂ ಅಧಿಕ ನೆರವು ಕೋರಲಾಗಿದೆ.
• ಕುದುರೆಮುಖ ರಾಷ್ಟ್ರೀಯ ಉದ್ಯಾನದಿಂದ ಕುಟುಂಬಗಳ ಸ್ಥಳಾಂತರ: CAMPA ಯೋಜನೆಯಡಿ ₹300 ಕೋಟಿ ಅನುದಾನಕ್ಕಾಗಿ 02.04.2025ರಂದು ಸಲ್ಲಿಸಲಾದ ಮನವಿಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಒಪ್ಪಿಗೆ ಸಿಗಬೇಕಿದೆ.
• ರಕ್ಷಣಾ ಇಲಾಖೆಯ ಭೂಮಿ ರಾಜ್ಯ ಸರ್ಕಾರಕ್ಕೆ ವರ್ಗಾವಣೆ: ಬೆಂಗಳೂರಿನಲ್ಲಿ 40 ಎಕರೆ ಹಾಗೂ ಬೆಳಗಾವಿಯಲ್ಲಿ 668 ಎಕರೆ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ವರ್ಗಾಯಿಸುವ 15.12.2025ರ ಪ್ರಸ್ತಾವನೆಗೆ ರಕ್ಷಣಾ ಸಚಿವಾಲಯದ ಅನುಮೋದನೆ ಬೇಕಾಗಿದೆ.
• ಅತಿ ವೇಗದ ರೈಲು ಮಾರ್ಗ: ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕಾ ಬೆಳವಣಿಗೆಗೆ ಬೆಂಗಳೂರು–ಮೈಸೂರು ಹಾಗೂ ಬೆಂಗಳೂರು–ಮುಂಬೈ ಮಾರ್ಗಗಳನ್ನು ಹೈಸ್ಪೀಡ್ ರೈಲು ಜಾಲಕ್ಕೆ ಸೇರಿಸಲು ಸಂಬಂಧಿತ ಕೇಂದ್ರ ಸಚಿವಾಲಯದಿಂದ ಅನುಮೋದನೆ ಬೇಕಿದೆ.
• ಪೊಲೀಸ್ ವ್ಯವಸ್ಥೆ ಆಧುನೀಕರಣ: ICJS 2.0 ಯೋಜನೆಗೆ ₹270.71 ಕೋಟಿ ಹಾಗೂ ASUMP ಯೋಜನೆಯಡಿ ₹280 ಕೋಟಿ ಅನುದಾನ ಬಿಡುಗಡೆಗಾಗಿ ಗೃಹ ಸಚಿವಾಲಯದಿಂದ ಅನುಮೋದನೆ ಪಡೆಯಬೇಕಿದೆ.
ಕೇಂದ್ರ ಗೃಹ ಸಚಿವಾಲಯದಲ್ಲಿ ಬಾಕಿ ಇರುವ ರಾಜ್ಯದ ಪ್ರಮುಖ ವಿಧೇಯಕಗಳು:
• ಉಚಿತ ಮತ್ತು ಕಡ್ಡಾಯ ಶಿಕ್ಷಣ (ಕರ್ನಾಟಕ ತಿದ್ದುಪಡಿ) ವಿಧೇಯಕ, 2015
• ಕರ್ನಾಟಕ ಖನಿಜ ಹಕ್ಕುಗಳು ಮತ್ತು ಖನಿಜಭರಿತ ಭೂಮಿ ತೆರಿಗೆ ವಿಧೇಯಕ, 2024
• ಔಷಧ ಮತ್ತು ಸೌಂದರ್ಯವರ್ಧಕ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025
• ನೋಟರೀಸ್ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025
ಕರ್ನಾಟಕದ ಹಕ್ಕುಗಳು, ಕನ್ನಡಿಗರ ಹಿತಾಸಕ್ತಿ ಹಾಗೂ ರಾಜ್ಯದ ಸಮಗ್ರ ಪ್ರಗತಿಗಾಗಿ ಪಕ್ಷಾತೀತವಾಗಿ ಎಲ್ಲರೂ ಒಂದಾಗಿ ಶ್ರಮಿಸಲು ಈ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಆಗ್ರಹಿಸಿದರು.
Let us unite beyond politics for Karnataka’s interests.
When it comes to Karnataka’s interests, let us stand united, irrespective of political affiliations. Let us rise above partisan politics and work together for the welfare of our people. I seek the support of all Members of Parliament in securing the Union Government’s approval for several important projects pending before it.
During my recent meeting with Prime Minister Shri Narendra Modi in New Delhi, he cautioned that Karnataka could face a severe drought this year. Barring the Almatti and Harangi reservoirs, most of the State’s dams are nearly depleted. If this situation persists, it could lead to a serious shortage of drinking water for both people and livestock. I have written to the Prime Minister seeking urgent assistance, and I appeal to all our elected representatives to support the State in securing the necessary relief.
In view of the worsening drought conditions, I have appealed to farmers to take up cultivation only after assessing the water available in reservoirs. Officials have also been directed to create awareness among farmers on the need for prudent water use.
During the installation of the Tungabhadra crest gates, I joined Andhra Pradesh Chief Minister Shri N. Chandrababu Naidu and Telangana Chief Minister Shri A. Revanth Reddy in the presence of Union Jal Shakti Minister Shri C. R. Patil. Responding to our joint request, the Union Minister attended the programme. In his presence, all three Chief Ministers agreed to construct the Navali Balancing Reservoir at Tungabhadra to conserve 30 TMC of water. We also reached a consensus on the proposed interlinking of the Godavari, Krishna, Pennar and Cauvery rivers, marking a significant milestone. Tamil Nadu Chief Minister Shri Vijay has also expressed his desire to meet me.
On the Mekedatu project, the Supreme Court has delivered a judgment that benefits both States. The Court has clearly held that Karnataka does not require the consent of any other State to construct a balancing reservoir within its own territory and that no other State has the right to object. The Union Jal Shakti Minister reiterated this position in the Rajya Sabha today while responding to a question from Tamil Nadu MP Dr. Anbumani Ramadoss. I express my gratitude for this clear affirmation of Karnataka’s rightful position.
The Gazette notification of the Krishna Water Disputes Tribunal’s water-sharing award has been delayed due to proceedings before the Supreme Court. Today, the Supreme Court decided to constitute a special Bench to facilitate the resolution of the matter.
Further consultations with senior advocates will be held to remove the remaining legal hurdles in the Mahadayi project, following which appropriate action will be be taken.
A new institutional mechanism will be established at Karnataka Bhavan in New Delhi to monitor and expedite the State’s pending projects. A dedicated team, headed by a separate Resident Commissioner, will be constituted to closely oversee their progress.
- Hon’ble Chief Minister Shri @DKShivakumar’s address at the meeting of Union Ministers and Members of Parliament from Karnataka.
📍Karnataka Bhavan, New Delhi
ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ
ರಾಜ್ಯದ ವಿಚಾರ ಬಂದಾಗ, ರಾಜ್ಯದ ಹಿತಕ್ಕಾಗಿ ನಾವೆಲ್ಲ ಒಟ್ಟಿಗೇ ಕೆಲಸ ಮಾಡೋಣ. ರಾಜ್ಯದ ಜನರ ಕಲ್ಯಾಣಕ್ಕಾಗಿ ಪಕ್ಷ ರಾಜಕಾರಣವನ್ನು ಪಕ್ಕಕ್ಕಿಡೋಣ. ಕೇಂದ್ರ ಸರ್ಕಾರದ ಮುಂದೆ ಬಾಕಿ ಉಳಿದಿರುವ ರಾಜ್ಯದ ನಾನಾ ಯೋಜನೆಗಳಿಗೆ ಅನುಮತಿ ದೊರಕಿಸಿಕೊಡಲು ನಿಮ್ಮ ಸಹಕಾರವನ್ನು ಬಯಸುತ್ತೇನೆ.
ನಾನು ಇತ್ತೀಚೆಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ, ಈ ವರ್ಷ ತೀವ್ರ ಬರ ಪರಿಸ್ಥಿತಿ ಎದುರಾಗುವ ಬಗ್ಗೆ ಮುನ್ಸೂಚನೆ ಕೊಟ್ಟಿದ್ದರು. ಕರ್ನಾಟಕದಲ್ಲಿ ಆಲಮಟ್ಟಿ ಮತ್ತು ಹಾರಂಗಿ ಜಲಾಶಯ ಹೊರತುಪಡಿಸಿ ಉಳಿದ ಅಣೆಕಟ್ಟುಗಳು ಬಹುತೇಕ ಖಾಲಿಯಾಗಿವೆ. ಇದೇ ಪರಿಸ್ಥಿತಿ ಮುಂದುವರೆದರೆ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗುವ ಲಕ್ಷಣಗಳಿವೆ. ರಾಜ್ಯದ ಈ ಪರಿಸ್ಥಿತಿಯ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆದು ಅಗತ್ಯ ನೆರವು ಕೋರಿದ್ದೇನೆ. ಅದು ಸಿಗಲು ಜನಪ್ರತಿನಿಧಿಗಳ ಸಹಕಾರ ಬೇಕು.
ರಾಜ್ಯದಲ್ಲಿ ಗಂಭೀರ ಬರ ಪರಿಸ್ಥಿತಿ ಇರುವುದರಿಂದ, ಅಣೆಕಟ್ಟುಗಳಲ್ಲಿರುವ ನೀರಿನ ಪ್ರಮಾಣ ನೋಡಿ ಬೆಳೆ ಹಾಕಿ ಎಂದು ರೈತರಿಗೆ ಮನವಿ ಮಾಡಿದ್ದೇನೆ. ಈ ಬಗ್ಗೆ ರೈತರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ.
ತುಂಗಭದ್ರಾ ಕ್ರಸ್ಟ್ ಗೇಟ್ ಅಳವಡಿಕೆಯ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಸಿ. ಆರ್. ಪಾಟೀಲ್ ಅವರ ಸಮ್ಮುಖದಲ್ಲಿ ನಾನು, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ, ಮೂವರೂ ಒಂದೆಡೆ ಸೇರಿದ್ದೆವು. ನಮ್ಮ ಮನವಿಗೆ ಓಗೊಟ್ಟು ಕೇಂದ್ರ ಸಚಿವರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. 30 ಟಿಎಂಸಿ ನೀರು ಉಳಿಸಲು ತುಂಗಭದ್ರಾಗೆ ನವಿಲೆ ಸಮತೋಲನ ಜಲಾಶಯ ಕಟ್ಟಲು ಕೇಂದ್ರ ಸಚಿವರ ಸಮ್ಮುಖದಲ್ಲಿ ಮೂವರೂ ಸಿಎಂಗಳು ಒಪ್ಪಿದ್ದೇವೆ. ಜತೆಗೆ ಗೋದಾವರಿ, ಕೃಷ್ಣಾ, ಪೆನ್ನಾರ್, ಕಾವೇರಿ ನದಿಗಳ ಜೋಡಣೆ ಯೋಜನೆಗೂ ನಾವು ಸಮ್ಮತಿಸಿದ್ದು, ಇದೊಂದು ಐತಿಹಾಸಿಕ ತೀರ್ಮಾನವಾಗಿದೆ. ತಮಿಳುನಾಡು ಮುಖ್ಯಮಂತ್ರಿ ಶ್ರೀ ವಿಜಯ್ ಅವರು ನನ್ನನ್ನು ಭೇಟಿ ಮಾಡಲು ಬಯಸಿದ್ದಾರೆ.
ಮೇಕೆದಾಟು ಯೋಜನೆ ಕುರಿತು ಸುಪ್ರೀಂ ಕೋರ್ಟ್ ಎರಡೂ ರಾಜ್ಯಗಳಿಗೆ ಅನುಕೂಲವಾಗುವ ತೀರ್ಪು ಕೊಟ್ಟಿದೆ. ಕರ್ನಾಟಕದ ಜಾಗದಲ್ಲಿ ಸಮತೋಲನ ಅಣೆಕಟ್ಟು ಕಟ್ಟಲು ಬೇರೆ ರಾಜ್ಯಗಳ ಅನುಮತಿ ಅನಗತ್ಯ ಹಾಗೂ ಆಕ್ಷೇಪ ವ್ಯಕ್ತಪಡಿಸಲು ಹಕ್ಕಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇಂದು ರಾಜ್ಯಸಭೆಯಲ್ಲೂ ಜಲಶಕ್ತಿ ಸಚಿವರು ತಮಿಳುನಾಡಿನ ಅನ್ಬುಮಣಿ ರಾಮದಾಸ್ ಅವರ ಪ್ರಶ್ನೆಗೆ ಉತ್ತರಿಸುವಾಗ ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ಇದಕ್ಕೆ ಕರ್ನಾಟಕದ ಪರವಾಗಿ ಧನ್ಯವಾದಗಳನ್ನು ಹೇಳುತ್ತೇನೆ.
ಕೃಷ್ಣಾ ನ್ಯಾಯಮಂಡಳಿಯ ನೀರು ಹಂಚಿಕೆ ತೀರ್ಮಾನ ಗೆಜೆಟ್ ನೋಟಿಫಿಕೇಶನ್ ಆಗಬೇಕಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿತ್ತು. ಅದನ್ನು ಇತ್ಯರ್ಥಪಡಿಸಲು ವಿಶೇಷ ಪೀಠ ಸ್ಥಾಪನೆಯ ಕುರಿತು ಇಂದು ಸುಪ್ರೀಂ ಕೋರ್ಟ್ನಲ್ಲಿ ತೀರ್ಮಾನವಾಗಿದೆ.
ಮಹದಾಯಿ ಯೋಜನೆಯ ಅಡೆತಡೆ ನಿವಾರಣೆಗೆ ನ್ಯಾಯವಾದಿಗಳ ಜತೆ ಸಮಾಲೋಚನೆ ನಡೆಸಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು.
ನಮ್ಮ ರಾಜ್ಯದ ಬಾಕಿ ಯೋಜನೆಗಳ ನಿರ್ವಹಣೆಗೆ ಕರ್ನಾಟಕ ಭವನದಲ್ಲಿ ಹೊಸ ವ್ಯವಸ್ಥೆ ಜಾರಿಗೆ ತರಲಾಗುವುದು. ನಮ್ಮ ಯೋಜನೆಗಳ ಬೆಳವಣಿಗೆಗಳನ್ನು ಗಮನಿಸಲು ಪ್ರತ್ಯೇಕ ರೆಸಿಡೆಂಟ್ ಕಮಿಷನರ್ ಸೇರಿದಂತೆ ಹೊಸ ತಂಡ ರಚಿಸಲಾಗುವುದು.
- ನವದೆಹಲಿಯಲ್ಲಿ ಇಂದು ನಡೆದ ಸಂಸದರ ಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ಪ್ರಾಸ್ತಾವಿಕ ನುಡಿಯ ಮುಖ್ಯಾಂಶಗಳು.