ವಿಶ್ವದ ಅತ್ಯಂತ ಕುಟುಂಬ ಸ್ನೇಹಿ ವಿಮಾನ ನಿಲ್ದಾಣಗಳ ಪೈಕಿ ನಮ್ಮ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 3ನೇ ಸ್ಥಾನ ಪಡೆದಿರುವುದು ನಾಡಿನ ಹೆಮ್ಮೆಯ ಸಂಗತಿಯಾಗಿದೆ.
ಬೆಂಗಳೂರು ಏರ್ಪೋರ್ಟ್ ಕುಟುಂಬ ಸಹಿತ ಪ್ರಯಾಣಿಸುವವರಿಗೆ ಹೇಳಿ ಮಾಡಿಸಿದಂತಹ ವಿಮಾನ ನಿಲ್ದಾಣ ಎಂದು ಗುರುತಿಸಲ್ಪಟ್ಟಿದ್ದು, ಇಲ್ಲಿನ ಶಿಶುಪಾಲನಾ ಸೌಲಭ್ಯಗಳು, ಮಕ್ಕಳಿಗಾಗಿ ವಿಶೇಷ ಪ್ಲೇಜೋನ್ಗಳು, ವಿಶಾಲ ಟರ್ಮಿನಲ್ಗಳು ಸೇರಿದಂತೆ ವಿಶ್ವ ದರ್ಜೆಯ ಮೂಲಭೂತ ಸೌಕರ್ಯಗಳು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿವೆ.
ವಿಮಾನ ಪ್ರಯಾಣಿಕರಿಗೆ ಸುಸಜ್ಜಿತ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಾಗೂ ಉಲ್ಲಾಸಭರಿತ ಪ್ರಯಾಣದ ಅನುಭವ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ.
#FamilyFriendlyAirport
#KempegowdaInternationalAirport
ಹಾಲಿನ ಪ್ರೋತ್ಸಾಹ ಧನ ಹಾಗೂ ಸಬ್ಸಿಡಿ ಹಣ ಬಿಡುಗಡೆಯಾದ ತಕ್ಷಣವೇ ರೈತರ ಮೊಬೈಲ್ಗೆ ನೇರವಾಗಿ SMS ಮೂಲಕ ಮಾಹಿತಿ ತಲುಪಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇದರೊಂದಿಗೆ ಬರಗಾಲ, ಮೇವಿನ ಕೊರತೆ ಎದುರಿಸಲು ಮತ್ತು ಜಾನುವಾರು ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
Every welfare measure is meaningful only when it reaches the beneficiary on time and with complete transparency.
Dairy farmers play a vital role in strengthening Karnataka’s rural economy and livelihoods. With this objective, directions have been issued to ensure immediate SMS alerts on milk incentives and subsidy payments, alongside efforts to strengthen livestock development programmes and prepare proactively for drought and fodder challenges. Our government will continue to work closely with farmers to build a stronger and more resilient rural economy.
#kpccsocialmedia
ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯದಾದ್ಯಂತ ಆಚರಿಸಲು ನಿರ್ಧರಿಸಲಾಗಿದೆ. 224 ಕ್ಷೇತ್ರಗಳಲ್ಲಿ ಹಾಗೂ 369 ವಾರ್ಡ್ಗಳಲ್ಲಿ ಜಯಂತಿ ಆಚರಣೆಗೆ ತಲಾ ₹ 1 ಲಕ್ಷ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಇದರ ಜೊತೆಗೆ ಪೂರ್ವಭಾವಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು,
ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭವನ್ನು ಯಶಸ್ವಿಗೊಳಿಸಿದ ಪಕ್ಷದ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕುಟುಂಬದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು.
ನಿಮ್ಮ ಉತ್ಸಾಹ ಮತ್ತು ಭಾಗವಹಿಸುವಿಕೆ ಪಕ್ಷದ ಶಕ್ತಿ ಹಾಗೂ ಏಕತೆಯ ಪ್ರತೀಕವಾಗಿದೆ.
#KPCC#BKHariprasad#Congress
ಕಾಂಗ್ರೆಸ್ ಶಕ್ತಿ - ದೇಶದ ಶಕ್ತಿ,
ಕಾಂಗ್ರೆಸ್ ಇತಿಹಾಸ - ಈ ದೇಶದ ಇತಿಹಾಸ
ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ನಡೆದ ಕೆಪಿಸಿಸಿಯ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿ, ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದೆನು.
ಈ ಭವ್ಯ ಸಂಕಲ್ಪ ಸಮಾವೇಶದಲ್ಲಿ ಪಕ್ಷದ ಇನ್ನಿತರ ಹಿರಿಯ ನಾಯಕರು, ಸಚಿವ ಸಂಪುಟದ ಸಹೋದ್ಯೋಗಿಗಳು ಸೇರಿದಂತೆ ಹಲವಾರು ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಈ ವೇಳೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ.
ನಾನು ಕೆಪಿಸಿಸಿ ಅಧ್ಯಕ್ಷನಾದ ದಿನದಿಂದ ಇಲ್ಲಿಯವರೆಗೆ ನನ್ನ ಶಕ್ತಿ ಮೀರಿ, ನನ್ನ ಕಾರ್ಯಕರ್ತರಿಗೋಸ್ಕರ ಕೆಲಸ ಮಾಡಿದ್ದೇನೆ ಎನ್ನುವ ವಿಶ್ವಾಸ ನನಗಿದೆ. ನನ್ನ ಕೈಲಾದ ಮಟ್ಟಿಗೆ ಪಕ್ಷವನ್ನು ಸಂಘಟಿಸಿ, ಸಮಾಜದ ಎಲ್ಲಾ ವರ್ಗದ ಹಾಗೂ ನಮ್ಮ ಕಾರ್ಯಕರ್ತರ ಮನೆಯ ಮಗನಾಗಿ ಸೇವೆ ಸಲ್ಲಿಸಿದ್ದೇನೆ. ಇಂದು ಕಾಂಗ್ರೆಸ್ನ ಹಿರಿಯ ಕಾರ್ಯಕರ್ತರಾದ ಶ್ರೀ ಬಿ. ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದ್ದೇನೆ.
ನಾನು ಆಗಾಗ ಒಂದು ಮಾತು ಹೇಳುತ್ತಿರುತ್ತೇನೆ; ಕಾಂಗ್ರೆಸ್ ಶಕ್ತಿಯೇ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲಾ ವರ್ಗದ ಜನರು ಅಧಿಕಾರಕ್ಕೆ ಬಂದಂತೆ ಎಂಬುದು ನನ್ನ ದೃಢ ನಂಬಿಕೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿ, ನೂತನ ಅಧ್ಯಕ್ಷರಾದ ಶ್ರೀ @HariprasadBK2 ಅವರಿಗೆ ಶುಭಹಾರೈಸಲಾಯಿತು.
ಸುದೀರ್ಘ ರಾಜಕೀಯ ಅನುಭವ ಹಾಗೂ ಪಕ್ಷದ ಸಿದ್ಧಾಂತಗಳ ಮೇಲಿನ ಅಚಲ ನಿಷ್ಠೆಯಿಂದ ಗುರುತಿಸಿಕೊಂಡಿರುವ ಶ್ರೀ ಬಿ.ಕೆ ಹರಿಪ್ರಸಾದ್ ಅವರ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಮತ್ತಷ್ಟು ಸದೃಢವಾಗಿ ಬೆಳೆಯಲಿ.
ಬೂತ್ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ನಿಮ್ಮ ದೂರದೃಷ್ಟಿ ಮತ್ತು ಮಾರ್ಗದರ್ಶನವು ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಹಾಗೂ ಆತ್ಮವಿಶ್ವಾಸ ಮೂಡಿಸಲಿ. ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಕಾಂಗ್ರೆಸ್ ಪಕ್ಷವು ಹೊಸ ಮೈಲಿಗಲ್ಲನ್ನು ನಿರ್ಮಿಸಲಿ ಎಂದು ಆಶಿಸುತ್ತೇನೆ.
ಈ ಪದಗ್ರಹಣ ಸಮಾರಂಭದಲ್ಲಿ ಸಚಿವರು, ಶಾಸಕರು, ಸಂಸದರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Blessed to have the divine darshan of Lord Venkateshwara at Tirumala after assuming office as the Chief Minister of Karnataka.
I offered prayers for the peace, prosperity, progress and well-being of all.
ಜನಪರ ಕಾಳಜಿ, ಸೈದ್ಧಾಂತಿಕ ಬದ್ಧತೆ, ನಿರ್ಭೀತ ವ್ಯಕ್ತಿತ್ವ, ದೇಶದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿರುವ ರಾಹುಲ್ ಗಾಂಧಿ ಅವರ ನಾಯಕತ್ವವು ಕಾಂಗ್ರೆಸ್ ಪಕ್ಷವನ್ನು ಮತ್ತೆ ಜನಚಳವಳಿಯಾಗಿ ಮರುಸ್ಥಾಪಿಸಲಿದೆ ಎಂಬ ವಿಶ್ವಾಸ ನನ್ನದು.
ಸೈದ್ಧಾಂತಿಕ ಸಂಗಾತಿ ರಾಹುಲ್ರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು ಆರೋಗ್ಯದ ಭಾಗ್ಯ ನಿಮ್ಮದಾಗಲಿ. @RahulGandhi
ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ @HariprasadBK2 ಅವರ ಪದಗ್ರಹಣ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಮಂಗಳವಾರ ಇಂದಿರಾಗಾಂಧಿ ಭವನದ ಭಾರತ ಜೋಡೋ ಸಭಾಂಗಣದಲ್ಲಿ ನಡೆಸಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ @GCC_MP, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಎಸ್ ಉಗ್ರಪ್ಪ ಅವರು ಉಪಸ್ಥಿತರಿದ್ದರು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಲು ಪ್ರಮಾಣವಚನ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷರಾದ ಸಿಎಂ @DKShivakumar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಜನರಿಂದ, ಜನರಿಗಾಗಿ, ಜನರಿಗೋಸ್ಕರ
ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ನನ್ನ ಪ್ರೀತಿಯ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತ ಬಂಧುಗಳ ಆಶೀರ್ವಾದದಿಂದ ಲೋಕಭವನದಲ್ಲಿ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ.
ಇಂದು ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ. ಈ ಅವಕಾಶವನ್ನು ನನಗೆ ಕರುಣಿಸಿದ ಹಿರಿಯರಿಗೆ, ಮಾರ್ಗದರ್ಶಕರಿಗೆ ಹಾಗೂ ನನ್ನ ಶಕ್ತಿಯಾಗಿ ನಿಂತ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು.
ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ನಮ್ಮ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ. ಈ ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ.
ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಬನ್ನಿ, ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ.
ಜೈ ಹಿಂದ್!
ಜೈ ಕರ್ನಾಟಕ!
God does not give boons or curses. He only gives opportunities. What truly matters is what we make of those opportunities.
Shri Siddaramaiah avaru’s life is one of the finest reflections of this thought. From a humble village in Mysuru to leading Karnataka as Chief Minister, his journey stands as a testament to resilience, perseverance, and an unwavering commitment to social justice.
As he steps down from the office of the Chief Minister, I express my heartfelt gratitude and deep respect for his years of service and leadership to the people of Karnataka.
The impact of several public welfare schemes and the many developmental initiatives undertaken during his tenure will remain significant chapters in Karnataka’s growth story. Over nearly five decades in public life, he has shaped the political and social fabric of our state through people-centric governance and inclusive leadership.
Ever since I was entrusted with the responsibility of serving as KPCC President in 2020, Siddaramaiah avaru has stood firmly beside me like a pillar of strength. Together, we have worked shoulder to shoulder in strengthening the party and taking its vision to the people.
It has been a privilege to serve alongside him as Deputy Chief Minister and to continuously learn from his experience, wisdom, and political foresight. I sincerely hope his guidance will continue to inspire and strengthen all of us in the years ahead as we work towards Karnataka’s progress and welfare.
As the saying goes, “If you want to walk fast, walk alone. If you want to walk far, walk together.”
I look forward to carrying this journey forward together for the people of Karnataka.
@siddaramaiah