ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಸರ್ಕಾರದ ಪ್ರತಿನಿಧಿಯಾಗಿ ಇಂದು ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರನ್ನು ಭೇಟಿಯಾಗಿ ನೌಕರರ ಪರ ಸರ್ಕಾರದ ಕಳಕಳಿಯನ್ನು ಮನವರಿಕೆ ಮಾಡಿಕೊಟ್ಟು ಮುಷ್ಕರ ಕೈಬಿಡುವಂತೆ ಮನವಿ ಮಾಡಲಾಯಿತು.
1/4
ಹಳೆ ಪದ್ಧತಿಯಂತೆ ಪಿಂಚಣಿ ಜಾರಿಗೊಳಿಸಲು ನೌಕರರು ಇಟ್ಟಿರುವ ಬೇಡಿಕೆಯನ್ನು ಮುಂದಿನ ಅಧಿವೇಶನದಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದ್ದು, ರಾಜ್ಯದ ಹಣಕಾಸು ಪರಿಸ್ಥಿತಿಯ ಸಾಧಕ ಬಾಧಕಗಳನ್ನು ಪರಿಗಣಿಸಿ ನೌಕರರ ಹಿತಾಸಕ್ತಿ ಕಾಪಾಡಲು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
3/4