ಭಾರತದ ಹೆಮ್ಮೆಯ ಮಾಜಿ ಪ್ರಧಾನ ಮಂತ್ರಿ, ಸರಳತೆ, ಸಜ್ಜನಿಕೆ ಮತ್ತು ನಿಷ್ಠೆಯ ಪ್ರತಿರೂಪ, ಅಗ್ರಗಣ್ಯ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು..
#DrManmohanSingh
ಭೂಮಿ ಮೇಲೆ ನಮಗಾಗಿ ಇರುವ ದೇವರೆಂದರೆ ಅಮ್ಮ. ತನ್ನೆಲ್ಲಾ ಭಾರವನ್ನು ಬದಿಗೊತ್ತಿ ಮಗುವಿನ ಬಾಳಿಗೆ ಬುನಾದಿಯಾಗುವವಳು ತಾಯಿ. ಅವಳ ತ್ಯಾಗಮಯಿ ಬದುಕಿಗೆ ಹಾಗೂ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಸಲ್ಲಿಸಲು ಒದಗಿರುವ ದಿನವೇ ತಾಯಂದಿರ ದಿನ. ಎಲ್ಲಾ ಮಾತೃಹೃದಯಿ ತಾಯಂದಿರಿಗೆ ತಾಯಂದಿರ ದಿನದ ಹಾರ್ದಿಕ ಶುಭಾಶಯಗಳು.
#HappyMothersDay2025
ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದು ಹಲವು ಬಾರಿ ಸೆರೆವಾಸ ಅನುಭವಿಸಿದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಅಧ್ಯಕ್ಷರಾಗಿ, 1925ರ ಕಾನ್ಪುರದ ವಾರ್ಷಿಕ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ, 'ಭಾರತದ ಕೋಗಿಲೆ' ಸರೋಜಿನಿ ನಾಯ್ಡು ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ ಪೂರ್ವಕವಾಗಿ ನೆನೆಯುತ್ತೇನೆ.
ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವಾಗಿದೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಅವರ ಸೇವೆ ಅಪಾರ. ರಾಜ್ಯದ ಮುಖ್ಯಮಂತ್ರಿಗಳಾಗಿ ರಾಜ್ಯಕ್ಕೆ ಅವರ ಸೇವೆ ಅತ್ಯಮೂಲ್ಯ, ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಯ ಮೂಲಕ ಬ್ರ್ಯಾಂಡ್ ಬೆಂಗಳೂರನ್ನು ಜಾಗತಿಕ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವ ಹಿರಿಮೆ ಅವರದ್ದಾಗಿತ್ತು.
ಎಸ್.ಎಂ.ಕೃಷ್ಣ ಅವರ ದೂರದೃಷ್ಟಿ, ಸರಳ ಸಜ್ಜನಿಕೆಯ ವ್ಯಕ್ತಿತ್ವ, ಸರಳಮಯ ಜೀವನ, ಕ್ರಿಯಾಶೀಲತೆ ಸದಾ ಸ್ಪೂರ್ತಿದಾಯಕ.
ಈ ಸಂದರ್ಭದಲ್ಲಿ ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯಿಂದ ನೋವಿನಲ್ಲಿರುವ ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದಿಂದ ಆಪ್ತ ಒಡನಾಡಿಯಾಗಿ ದುಃಖಿತರಾಗಿದ್ದೇವೆ. ಕರ್ನಾಟಕದ ಅಭಿವೃದ್ಧಿಗೆ ಅವರು ಕೊಟ್ಟ ದೃಷ್ಟಿ ಹಾಗೂ ಬೆಂಗಳೂರು ಜಾಗತಿಕ ನಗರವಾಗಲು ಮಾಡಿದ ಕೊಡುಗೆ ಅವಿಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ; ಅವರ ಸಾಧನೆಗಳು ಮುಂದಿನ ತಲೆಮಾರಿಗಾಗಿ ಪ್ರೇರಣೆಯಾಗಲಿ.
#SMKrishna#karnataka#bengaluru #politics
Under the leadership of LOP Sh. @RahulGandhi ji, attended a meeting of all Lok Sabha MPs to discuss the strategy for the remainder of the Winter Session of Parliament.
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ.
ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಸಂಬಂಧ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆ. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೃಷ್ಣರನ್ನು ಭೇಟಿಯಾಗಿದ್ದೆ.
- ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ನನ್ನ ಪ್ರತಿಕ್ರಿಯೆ
ಬೆಳಗಾವಿಯ ರಾಮತೀರ್ಥ ನಗರದಲ್ಲಿ ನಿರ್ಮಿಸಲಾಗುತ್ತಿರುವ ಶ್ರೀ ಗಂಗಾಧರರಾವ್ ದೇಶಪಾಂಡೆ ವಸ್ತು ಸಂಗ್ರಹಾಲಯದ ಪರಿಶೀಲನೆ ನಡೆಸಿದೆ. ಕರ್ನಾಟಕ ಕೇಸರಿ ಎಂಬ ಬಿರುದು ಪಡೆದ ಗಂಗಾಧರರಾವ್ ದೇಶಪಾಂಡೆಯವರು ಕರ್ನಾಟಕ ರಾಜ್ಯಕ್ಕೆ ಕೊಟ್ಟ ಕೊಡುಗೆ ಹಲವು. ಅನ್ಯಾಯದ ವಿರುದ್ದ ಹೋರಾಡಿದವರಲ್ಲಿ ದೇಶಪಾಂಡೆಯವರದ್ದು ಮೇಲುಗೈಯಾಗಿತ್ತು.
We honour the legacy of Bharat Ratna, C. Rajagopalachari on his birth anniversary.
Hailed by Mahatma Gandhi as his "conscience keeper," Rajaji was a multifaceted statesman.
He was a pivotal figure in India's freedom struggle, a prolific writer, a tireless advocate for world peace and disarmament, and a staunch supporter of Dalit rights.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಹೋಬಳಿಯ ಬೆಳಗುಂದಿ ಗ್ರಾಮದ ಪ್ರಗತಿ ಪರ ರೈತರಾದ ಕಿಟ್ಟು ಚವ್ಹಾಣ್ ಅವರ ಜಮೀನಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಜೊತೆ ಭೇಟಿ ನೀಡಲಾಯಿತು.
ರೈತ ಕಿಟ್ಟು ಚವ್ಹಾಣ್ ಅವರು ಒಟ್ಟು10 ಏಕರೆ ಪ್ರದೇಶದಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ, ಜಾನುವಾರು ಸಾಕಾಣಿಕೆ ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಸಮಗ್ರ ಕೃಷಿ (IFS) ಅಳವಡಿಸಿಕೊಂಡು ಸ್ವಾವಲಂಬಿ ರೈತರಾಗಿದ್ದಾರೆ.
ಹಲವು ಬಾರಿ ಪ್ರಗತಿಪರ ರೈತ ಪ್ರಶಸ್ತಿಗೆ ಭಾಜನರಾಗಿರುವ ಕಿಟ್ಟು ಚವ್ಹಾಣ್ ಅವರನ್ನು ಖುದ್ದು ಕೃಷಿ ಸಚಿವರೇ ಭೇಟಿ ಮಾಡಿ, ಕೃಷಿಗೆ ಸಂಬಂದಿಸಿದಂತೆ ಮಾಹಿತಿ ಪಡೆದು, ಸಂದರ್ಶಿಸಿದರು. ನನ್ನ ಕ್ಷೇತ್ರದ ರೈತನೊಬ್ಬ ಪ್ರಗತಿ ಪರ ರೈತನಾಗಿ ರಾಜ್ಯ ಮಟ್ಟದಲ್ಲಿ ಹೆಸರು ಪಡೆದಿರುವುದು ಹೆಮ್ಮೆಯ ವಿಷಯವೇ ಸರಿ.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Warm birthday greetings to the steadfast pillar of the Indian National Congress, Smt. Sonia Gandhi. Your unwavering dedication and tireless efforts have strengthened our movement and inspired millions across the nation. May the Congress party flourish and continue to serve under your visionary leadership.
#SoniaGandhi
ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರಾದ ಎಸ್.ಎಂ ಕೃಷ್ಣ ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ.
ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿ ರಾಜ್ಯಕ್ಕೆ ಅವರ ಕೊಡುಗೆ ಅವಿಸ್ಮರಣೀಯ.
ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ಲಭಿಸಲಿ.
#SMKrishna
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಉಗ್ರಾಣ ನಿಗಮದ ಅಧ್ಯಕ್ಷರು ಆದ ಶ್ರೀ ಎಸ್.ಜಯಣ್ಣ ಅವರ ನಿಧನದ ಸುದ್ಧಿ ಕೇಳಿ ಅತೀವ ದುಃಖವಾಯಿತು.
ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
2025ರ ಆರಂಭದಲ್ಲಿ ಬೆಂಗಳೂರು ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಬದಲಾಗುವ ಬೆಳಕು!
ಆರ್.ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಿನ 19.15 ಕಿಲೋಮೀಟರ್ ಸುದೀರ್ಘ ಎಲಿವೇಟೆಡ್ ಮೆಟ್ರೋ ಹಳದಿ ಮಾರ್ಗವು ಚಾಲಕರಹಿತ ಸೇವೆಯೊಂದಿಗೆ ಐಟಿ ಮತ್ತು ಬಿಟಿ ಕಂಪನಿಗಳ ಕಾರ್ಯಸ್ಥಳಗಳನ್ನು ಸಂಪರ್ಕಿಸುವುದರಿಂದ ಸಾವಿರಾರು ವೃತ್ತಿಪರರಿಗೆ ಸುಲಭ ಪ್ರಯಾಣವನ್ನು ಒದಗಿಸಲಿದೆ.
#nammametro #Brandbengaluru
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನೆರವೇರಲಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿರುವ ಸ್ಥಳ ಪರಿಶೀಲನೆ ನಡೆಸಿದೆ.
#SMKrishna
ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು.
ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ.
ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂಮರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂಮರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನದ ಮುಂದೆ ಮಂಡಿಸುತ್ತೇನೆ.
- ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆ ಸಂಬಂಧ ಸದನದಲ್ಲಿ ನನ್ನ ಮಾತುಗಳು