ಬಸವಣ್ಣನವರಿಂದ ಪ್ರಾರಂಭವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಮುನ್ನಡೆಯುತ್ತಾ ಬಂದ ಸಾಮಾಜಿಕ ನ್ಯಾಯದ ಬಂಡಿಯನ್ನು ಮುನ್ನಡೆಸಿದವರು ಡಿ.ದೇವರಾಜ ಅರಸು. ಅರಸು ಜಾತಿಯಲ್ಲಿ ಹುಟ್ಟಿದ್ದರೂ ತಳಸಮುದಾಯಗಳ ಹಿತರಕ್ಷಕನಾಗಿ ತಾನು ಪರಿವರ್ತನೆಗೊಂಡದ್ದು ಮಾತ್ರವಲ್ಲ, ಆ ಇಡೀ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಯೊಂದಿಗೆ ಪರಿವರ್ತನೆಗೊಳಪಡಿಸಿದವರು.
ಕಾಲವನ್ನು ಮೀರಿ ಯೋಚನೆ ಮಾಡುವ ಶಕ್ತಿ ಹೊಂದಿದ್ದ ದೇವರಾಜ ಅರಸು ಅವರು ಭೂ ಸುಧಾರಣೆ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯಂತಹ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ತಳ ಸಮುದಾಯಗಳಿಗೆ ಅಧಿಕಾರ, ಸಂಪತ್ತು ಮತ್ತು ಅವಕಾಶದ ಬಾಗಿಲು ತೆರೆದವರು.
ನಮ್ಮ ಮೈಸೂರಿನವರೇ ಆಗಿರುವ ದೇವರಾಜ ಅರಸು ಅವರ ಚಿಂತನೆ ಮತ್ತು ಸಾಧನೆ ನನ್ನನ್ನು ಪ್ರಭಾವಿಸಿದೆ. ಅವರು ಎಳೆದುಕೊಂಡು ಬಂದಿದ್ದ ಸಾಮಾಜಿಕ ನ್ಯಾಯದ ಬಂಡಿಯನ್ನು ಇನ್ನಷ್ಟು ಮುಂದಕ್ಕೆ ಎಳೆದೊಯ್ಯುವ ಅವಕಾಶ ನನಗೆ ಸಿಕ್ಕಿರುವುದು ನನ್ನ ಬದುಕಿನ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ. ಸಾಮಾಜಿಕ ನ್ಯಾಯದ ಬಂಡಿ ಇನ್ನಷ್ಟು ದೂರ ಸಾಗಲಿ ಎಂದು ಹಾರೈಸುವೆ.
ಆ ಪುಣ್ಯಾತ್ಮನನ್ನು ಪುಣ್ಯಸ್ಮರಣೆಯ ದಿನ ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸುವೆ.
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರ ಸಲ್ಲಿಸಿ ಹೊರಬಂದ ಬಳಿಕ ಭೇಟಿಮಾ���ಿ ಶುಭಕೋರಿ ಆಶೀರ್ವಾದ ಪಡೆಯಲಾಯಿತು.
@kharge
ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಿ.ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಿರುವ ಡಾ.ಬಾಬು ಜಗಜೀವನ ರಾಮ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಜತೆಗೂಡಿ ಅನಾವರಣಗೊಳಿಸಲಾಯಿತು.
೧/೨
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹುದ್ದೆಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆ ನಾಟಕೀಯವಾದದ್ದು, ಈ ರೀತಿ ಹೇಳಿಕೆ ನ���ಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ.
ಸಂವಿಧಾನ ಬದ್ಧವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ನಮ್ಮ ಪಕ್ಷವೇ ಹೊರತು ಬಿಜೆಪಿ ಪಕ್ಷವಲ್ಲ.
ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ ಮಾಡುತ್ತಿದೆ. ಈ ಷಡ್ಯಂತ್ರವನ್ನು ರಾಜ್ಯದ ಮತ್ತು ದೇಶದ ಯುವ ಜನತೆ ಸೋಲಿಸಲು ಕಟ್ಟಿಬದ್ಧವಾಗಿ ನಿಂತು ಹೋರಾಟ ಮುನ್ನಡೆಸುತ್ತದೆ ಎನ್ನುವ ಭರವಸೆ ನನಗಿದೆ.
@IYCKarnataka ಕಾರ್ಯಕರ್ತರು ಸೈದ್ಧಾಂತಿಕವಾಗಿ ಯಾವತ್ತೂ ರಾಜಿ ಮಾಡಿಕೊಳ್ಳಬಾರದು. ರಾಜಿ ಮಾಡಿಕೊಂಡವರು ರಾಜಕೀಯವಾಗಿ ಉಳಿಯುವುದಿಲ್ಲ, ಬೆಳೆಯುವುದಿಲ್ಲ.
@BJP4India ಪಕ್ಷಕ್ಕೆ ಭಾರತೀಯ ಸಮಾಜಕ್ಕೆ ಪೂರಕವಾದ ಸಿದ್ಧಾಂತವೇ ಇಲ್ಲ. ಸಮಾಜವನ್ನು ವಿಭಜಿಸುವ ಸಿದ್ಧಾಂತ ಬಿಜೆಪಿಯದ್ದು. ಜೆಡಿಎಸ್ ರಾಜ್ಯದ ಕೆಲವೇ ಸ್ಥಳಗಳಲ್ಲಿ ಅಸ್ತಿತ್ವದಲ್ಲಿದೆ, ಈ ಪಕ್ಷಕ್ಕೂ ಸರಿಯಾದ ಸಿದ್ಧಾಂತ ಇಲ್ಲ.
ಮಂಡಲ್ ಕಮಿಷನ್ ವರದಿಯನ್ನು ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಕೊಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಮಂಡಲ್ ವರದಿಯನ್ನು ವಿರೋಧಿಸಿದ್ದು ಇದೇ ಕಮಂಡಲವಾದಿಗಳು ಮತ್ತು ಮನುವಾದಿಗಳು. ಇವರ ಈ ಜನವಿರೋಧಿ ಇತಿಹಾಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನೆನಪಿಡಬೇಕು.
ಮಹಿಳಾ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ತಂದು 35% ಮಹಿಳಾ ಮೀಸಲಾತಿ ತಂದರು. ಈ ಮೀಸಲಾತಿಯನ್ನು 50% ಗೆ ಹೆಚ್ಚಿಸಲು ಹೋರಾಟ ಮಾಡಿದ್ದು ಸೋನಿಯಾಗಾಂಧಿ. ಇದನ್ನು ಕೂಡ ನೆನಪಿಡಬೇಕು. 1/3
#Mysuru #YouthCongress
ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದ @IYCKarnataka ದ ಜಾತ್ಯತೀತ ಸೇನಾನಿಗಳು ಸೈದ್ಧಾಂತಿಕ ಹೋರಾಟ ಮುಂದುವರೆಸುತ್ತಾರೆ, ಸೈದ್ಧಾಂತಿಕವಾಗಿ ಯುವ ಸಂಘಟನೆಯನ್ನು ಬಲಗೊಳಿಸುತ್ತಾರೆ ಎಂದು ನಂಬಿದ್ದೇನೆ.
ಕಾಂಗ್ರೆಸ್ ಭಾರತ ದೇಶಕ್ಕೆ ಬ್ರಿಟೀಷರ ಗುಲಾಮಗಿರಿಯಿಂದ ಸ್ವಾತಂತ್ರ್ಯ ಕೊಡಿಸಿತು. ಆದರೆ ಸಂಘ ಪರಿವಾರವು ಬ್ರಿಟಿಷರ ���ೊತೆ ಶಾಮೀಲಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿತು್ತು ಎನ್ನುವುದು ಇತಿಹಾಸ. ಆರ್ಎಸ್ಎಸ್ 1925ರಲ್ಲೇ ಆರಂಭವಾದರೂ ಯಾವತ್ತೂ ಕೂಡ ಹೆಡಗೆವಾರ್ ಆಗಲಿ, ಗುರೂಜಿ ಹೆಸರಿನವರಾಗಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ ಆಗಲಿಲ್ಲ. ಇದನ್ನು ಯುವಮಿತ್ರರು ಅರ್ಥ ಮಾಡಿಕೊಳ್ಳಬೇಕು.
ಆರ್ಎಸ್ಎಸ್ನ ರಾಜಕೀಯ ಮುಖವಾಗಿ ಜನಸಂಘ ಆರಂಭವಾಯಿತು. ಬಳಿಕ @BJP4India ಆಯಿತು. ಇವರು ದೇಶಭಕ್ತಿ ಬಗ್ಗೆ ಭಯಾನಕವಾಗಿ ಮಾತನಾಡುತ್ತಾರೆ, ಆದರೆ ದೇಶದ ಸ್ವಾತಂತ್ರ್ಯ ಹೋರಾ��ದ��ಂದ ದೂರ ಉಳಿದಿದ್ದರು.
ಭಾರತೀಯ ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರಯತ್ನವನ್ನು ಬಿಜೆಪಿ ಮಾಡುವುದೇ ಇಲ್ಲ. @narendramodi ಅವರು ಬಾಯಲ್ಲಿ "ಸಬ್ ಕ ಸಾಥ್ - ಸಬ್ ಕ ವಿಕಾಸ್" ಅಂತ ಡೈಲಾಗ್ ಹೊಡಿತಾರೆ. ಆದರೆ, ಬಿಜೆಪಿಯಲ್ಲಿರುವ 240 ಮಂದಿ ಸಂಸದರಲ್ಲಿ ಒಬ್ಬರೂ ಅಲ್ಪ ಸಂಖ್ಯಾತ ಸಮುದಾಯದವರಿಲ್ಲ. 2/3
#Mysuru #YouthCongress
ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದ್ದು ಆರ್ಎಸ್ಎಸ್ನ ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ಪತ್ರ ಬರೆದಿದ್ದಾರೆ. ಇದನ್ನು ಯುವ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಅರ್ಥ ಮಾಡಿಸುವ ಕೆಲಸವನ್ನು @IYCKarnataka ಸೇನಾನಿಗಳು ಮಾಡಬೇಕು.
ಯುವ ಕಾಂಗ್ರೆಸ್ ಚುನಾವಣೆ ಮುಗಿದ ಮೇಲೆ ಮುಗಿಯಿತು. ಗೆದ್ದವರು, ಸೋತವರೆಲ್ಲಾ ಒಟ್ಟಾಗಿ ಹೋಗಬೇಕು. ಗುಂಪುಗಾರಿಕೆ ಬೇಡ, ಒಬ್ಬ ನಾಯಕರ ಹಿಂದೆ ಹೋಗಬಾರದು. ಸಿದ್ಧಾಂತವೇ ನಾಯಕತ್ವ. ಸಿದ್ಧಾಂತದ ಜೊತೆಗೆ ನೀವೆಲ್ಲಾ ಇರಬೇಕು.
@BJP4Karnataka ��ಧಿಕಾರದಲ್ಲಿದ್ದಾಗ ಮೈಸೂರಿಗೆ ಏನಾದ್ರೂ ಮಾಡಿದ್ರಾ? ಇಲ್ಲಿರುವ ಮಹಾರಾಣಿ ಕಾಲೇಜು, ಜಿಲ್ಲಾ ಆಸ್ಪತ್ರೆ, ಜಯದೇವ ಆಸ್ಪತ್ರೆ ಸೇರಿ ಇಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳೆಲ್ಲಾ ನಮ್ಮಿಂದ ಆಗಿದ್ದು. ನಾನು ಮುಖ್ಯಮಂತ್ರಿಯಾಗಿರುವಾಗ ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿ ಮಾಡಿದ್ದೇ ಹೊರತು ಬುರುಡೆ ಬಿಜೆಪಿ ಮಾಡಿದ್ದೇನೂ ಇಲ್ಲ.
ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ನಮ್ಮ ಜೊತೆ ಒಂದೇ ವೇದಿಕೆಯಲ್ಲಿ ಬಹಿರಂಗ ಚರ್ಚೆಗೆ ಬರಲಿ. ನಾನೇ ಬರುತ್ತೇನೆ. ಈ ಸವಾಲನ್ನು ಬಿಜ��ಪಿ ಸ್ವೀಕರಿಸಲು ಸಿದ್ಧವಿಲ್ಲ ಏಕೆ? ಬಿಜೆಪಿ ಏನೂ ಕೆಲಸ ಮಾಡದೆ ಕೇವಲ ಬರೀ ಬುರುಡೆ ಬಿಡುತ್ತದೆ. ಬಿಜೆಪಿಯವರು ಕೆಲಸ ಮಾಡಿದ ಸಾಕ್ಷಿ ಗುಡ್ಡೆ ತೋರಿಸಲಿ.
- ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ ��ಕ್ತಿ ಪ್ರತಿಜ್ಞೆ 2025" ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದೆ 3/3
#Mysuru #YouthCongress
On July 15, I paid my respects to the mortal remains of the late B. Saroja Devi - a moment of deep personal and public sorrow. A post about this was shared in Kannada from the official Chief Minister of Karnataka Facebook page.
Unfortunately, some people saw a wrong English translation of that post by default on their Facebook feed. The post was written only in Kannada. No English version was posted, and no auto-translation was added or requested from our side.
Facebook’s translation feature shows up on user feeds based on their settings, and content creators have no way to disable or control the auto-translation feature on viewers feed.
In many cases, Facebook shows auto-translated versions of posts by default in user feeds. The original Kannada post remains unchanged and can be viewed by selecting “See original" option.
Following this, my Media Advisor Shri K V Prabhakar wrote to @Meta. They acknowledged the glitch, apologised, and claimed to have fixed the issue.
Meta/Facebook has often previously faced similar issues globally for such auto-translation errors — including in Myanmar (2018), Palestine (2017), and most recently in Malaysia (2024) — where poor translations led to serious miscommunication and public backlash.
Facebook has been in operation for nearly two decades and has a vast user base in India — including a large number of Kannada-speaking users. Despite this, it is unfortunate that a sound and reliable translation system has not been put in place. We hope this concern is taken seriously.
I request everyone not to spread confusion or misinformation based on an error that did not originate from us. It is time Meta puts in place better and more responsible translation systems.
#StopFaultyTranslation #ProtectKannada
ಜುಲೈ 15ರಂದು ಮೃತರಾದ ಬಿ. ಸರೋಜಾದೇವಿ ಅವರಿಗೆ ಅವರ ಮನೆಗೆ ತೆರಳಿ ನನ್ನ ಶ್ರದ್ಧಾಂಜಲಿ ಸಲ್ಲಿಸಿದ್ದೆ. ಈ ಸ��ದ್ದಿಯನ್ನು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಫೇಸ್ಬುಕ್ ಖಾತೆ ( Chief Minister of Karnataka ) ಇಂದ ಕನ್ನಡ ಭಾಷೆಯಲ್ಲಿ ಪೋಸ್ಟ್ ��ಾಡಲಾಗಿತ್ತು. ಆದರೆ ಕೆಲವು ಫೇಸ್ಬುಕ್ ಬಳಕೆದಾರರ ವಾಲ್ನಲ್ಲಿ ನನ್ನ ಕನ್ನಡದ ಪೋಸ್ಟ್ ನ ಇಂಗ್ಲಿಷ್ ಭಾಷಾಂತರ ಕಾಣಿಸಿಕೊಂಡಿದೆ.
ಅಪಾರ್ಥ ಕಲ್ಪಿಸುವ, ಗಂಭೀರವಾದ ದೋಷದಿಂದ ಕೂಡಿದ ಈ ಪೋಸ್ಟ್ ಓದಿದ ಅನೇಕ ಮಂದಿ ನಮ್ಮ ಕಚೇರಿಯಿಂದಲೇ ಇಂಗ್ಲೀಷ್ ಪೋಸ್ಟ್ ಹಾಕಿರಬಹುದೆಂದು ತಿಳಿದು ಟೀಕೆ-ಟಿಪ್ಪಣಿ ಮಾಡಿರುವುದನ್ನು ನಾನು ಗಮನಿಸಿದ್ದೇನೆ. ಈ ಕಾರಣಕ್ಕಾಗಿ ಸ್ಪಷ್ಟೀಕರಣವನ್ನು ನೀಡಬೇಕಾಗಿ ಬಂದಿದೆ.
ಫೇಸ್ಬುಕ್ನಲ್ಲಿ ಆಟೋ ಟ್ರಾನ್ಸ್ಲೇಷನ್ (ಸ್ವಯಂ ಅನುವಾದ) ಎಂ��� ಆಯ್ಕೆಯಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ. ಈ ಆಯ್ಕೆ ಮುಕ್ತವಾಗಿದ್ದು, ಇದನ್ನು ರದ್ದುಪಡಿಸುವ ಅವಕಾಶ ಪೋಸ್ಟ್ ಮಾಡುವ ಖಾತೆದಾರನಿಗೆ ಇರುವುದಿಲ್ಲ. ಇದರಿಂದಾಗಿ ಜಗತ್ತಿನ ಯಾವುದೇ ಭಾಷಿಕರು ಇದನ್ನು ತಮ್ಮ ಭಾಷೆಗೆ ಭಾಷಾಂತರಿಸಿಕೊಂಡು ಓದಬಹುದಾಗಿದೆ. ಈ ಸ್ವಯಂ ಅನುವಾದದ ಪ್ರಕ್ರಿಯೆಯೇ ದೋಷಪೂರ್ಣವಾಗಿದೆ. (Facebook’s auto-translation feature shows up on user feeds based on their settings, and content creators have no way to disable or control the auto-translation feature on viewers feed).
ನಮ್ಮ ಕಚೇರಿ ಕನ್ನಡದಲ್ಲಿ ಮಾಡಿದ್ದ ಮೂಲ ಪೋಸ್ಟ್ ಕೆಲವರ ನ್ಯೂಸ್ ಫೀಡ್ನಲ್ಲಿ ಇಂಗ್ಲಿಷ್ಗೆ ಭಾಷಾಂತರಗೊಂಡು ಕಾಣಿಸಿಕೊಂಡಿದೆ. ಈ ಭಾಷಾಂತರವೇ ದೋಷಪೂರ್ಣವಾಗಿದೆ. ಅಪಾರ್ಥ ಕಲ್ಪಿಸುವ ಇಂಗ್ಲೀಷ್ ಪೋಸ್ಟ್ ನೋಡಿದ ಕೆಲವರು ಕೂಡಲೇ ಅದರ ಕೆಳಭಾಗದಲ್ಲಿರುವ 'See Original Post' (ಮೂಲ ಬರಹವನ್ನು ನೋಡಿ) ಎಂಬ ಆಯ್ಕೆಯ ಮೂಲಕ ಮೂಲ ಕನ್ನಡ ಪೋಸ್ಟ್ ನೋಡಿ ಸರಿಯಾದ ಸುದ್ದಿಯನ್ನು ಗ್ರಹಿಸಿ ಕೊಂಡಿದ್ದು ಮಾತ್ರವಲ್ಲ, ಫೇಸ್ಬುಕ್ನ ಸ್ವಯಂ ಭಾಷಾಂತರದಲ್ಲಿ ಕಂಡುಬಂದಿರುವ ದೋಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ವಿಚಾರ ನಮ್ಮ ಗಮನಕ್ಕೆ ಬಂದ ಕೂಡಲೇ ನನ್ನ ಮಾಧ್ಯಮ ಸಲಹೆಗಾರರು ಮೆಟಾದವರನ್ನು ಸಂಪರ್ಕಿಸಿ ದೋಷವನ್ನು ಸ���ಿಪಡಿಸುವಂತೆ ಮನವಿ ಮಾಡಿದ್ದರು. ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿ, ದೋಷವನ್ನು ಸರಿಪಡಿಸುವುದಾಗಿ ಇ-ಮೈಲ್ ಮೂಲಕ ತಿಳಿಸಿದ್ದಾರೆ.
ಈ ಹಿಂದೆಯೂ ಮೆಟಾ/ಫೇಸ್ಬುಕ್ ಮೂಲ ಭಾಷೆಯನ್ನು ಸ್ವಯಂ ಅನುವಾದ ಮಾಡಿ, ಜಾಗತಿಕ ಮಟ್ಟದಲ್ಲಿ ಇಂತಹ ಎಡವಟ್ಟುಗಳನ್ನು ಮಾಡಿಕೊಂಡಿತ್ತು. ಇಂತಹ ತಪ್ಪುಗಳಿಗಾಗಿ ಇತ್ತೀಚೆಗೆ ಮಲೇಷಿಯಾ(2024) ಸೇರಿದಂತೆ ಮಯನ್ಮಾರ್(2018), ಪ್ಯಾಲೇಸ್ತೀನ್(2017) ಮತ್ತಿತರ ಕಡೆಗಳಲ್ಲೂ ಸಾರ್ವಜನಿಕವಾಗಿ ತೀವ್ರ ವಿರೋಧ ಎದುರಿಸಿತ್ತು.
ಸುಮಾರು 2 ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಫೇಸ್ಬುಕ್ಗೆ ದೊಡ್ಡ ಪ್ರಮಾಣ�� ಕನ್ನಡಿಗರು ಸೇರಿದಂತೆ ಭಾರತದಲ್ಲಿ ಅತಿಹೆಚ್ಚು ಬಳಕೆದಾರರಿದ್ದಾರೆ. ಆದರೆ ಸ್ವಯಂ ಅನುವಾದ ನೀಡುವಾಗ ಮೂಲ ಭಾಷೆಯಲ್ಲಿ ಹೇಳಿದ್ದು ಅನರ್ಥವಾಗಿ ಭಾಷಾಂತರಗೊಳ್ಳುತ್ತಿರುವುದು ವಿಷಾದನೀಯ. ಮೆಟಾ ಸ್ವಯಂ ಅನುವಾದ (Auto translation) ಮಾಡುವಲ್ಲಿ ಆಗುತ್ತಿರುವ ದೋಷವನ್ನು ಸರಿಪಡಿಸುವ ನಿಟ್ಟಿನಲ್ಲಿ ಗಂಭೀರ ಕ್ರಮ ಕೈಗೊಳ್ಳುತ್ತದೆ ಎಂದು ಭಾವಿಸಿದ್ದೇನೆ.
ಫೇಸ್ಬುಕ್ನವರ ಸ್ವಯಂ ಅನುವಾದದಿಂದ (Auto translation) ಆಗಿರುವ ತಪ್ಪನ್ನು ಕೆಲವರು ಸ್ಕ್ರೀನ್ಶಾಟ್ ತೆಗೆದುಕೊಂಡು ಹಂಚಿಕೊಳ್ಳುವ ಮೂಲಕ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ಕಿಡಿಗೇಡಿತನ ಮಾಡುವವರಲ್ಲಿ ವಿರೋಧಪಕ್ಷದ ಕೆಲವು ಶಾಸಕರು, ಮಾಜಿ ಸಚಿವರು ಕೂಡಾ ಸೇರಿರುವುದು ವಿಷಾದನೀಯ. ಹಾಗಾಗಿ ಯಾರೂ ಈ ಸುಳ್ಳು ಸುದ್ದಿಯ ಬಗ್ಗೆ ಗೊಂದಲಕ್ಕೆ ಒಳಗಾಗಬಾರದೆಂದು ಮನವಿ ಮಾಡುತ್ತಿದ್ದೇನೆ.
#Meta #Facebook
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಶ್ರೀ ವಿಭು ಬಖ್ರು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು, ನೂತನ ನ್ಯಾಯಮೂರ್ತಿಗಳಿಗೆ ಶುಭ ಕೋರಿದೆ.
ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಪ್ರಮಾಣ ವಚನ ಬೋಧಿಸಿದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯಲ್ಲ. ಈಗಾಗಲೇ ಪೊಲೀಸರು ತನಿಖೆ ನಡೆಸ���ತ್ತಿದ್ದಾರೆ, ತನಿಖೆಯ ವರದಿ ಬಂದ ಬಳಿಕ ಚರ್ಚಿಸಿ ಎಸ್ಐಟಿ ರಚನೆ ಬಗ್ಗೆ ನಿರ್ಧರಿಸಲಾಗುವುದು.
#ಕನ್ನಡಸುದ್ದಿ