ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದು, ಸೌಹಾರ್ದತೆಯ ಸಿಹಿ ಹಂಚುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಪಕ್ಷದ ಧೀಮಂತ ನಾಯಕ ಶ್ರೀ ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು!
#HappyBirthdayRahulGandhi#CongressPride
ಕುವೆಂಪು ಅವರ ಪ್ರಕಾರ ಹೆಣ್ಣೆಂದರೆ, ಅವಳು ಸೃಷ್ಟಿಕರ್ತಳು, ಪೋಷಕಿ ಮತ್ತು ಸಮಾಜದ ಆಧಾರಸ್ತಂಭ.
ಅವಳಲ್ಲಿ ಪ್ರಕೃತಿಯ ಸಹಜ ಗುಣಗಳು, ಸಹಾನುಭೂತಿ ಮತ್ತು ಪ್ರೀತಿ ಎದ್ದು ಕಾಣುತ್ತವೆ.
ಹೆಣ್ಣು ಯಾವುದೇ ರೀತಿಯಲ್ಲಿಯೂ ಅಶಕ್ತಳಲ್ಲ, ಅವಳಿಗೆ ತನ್ನದೇ ಆದ ಶಕ್ತಿ ಮತ್ತು ಸಾಮರ್ಥ್ಯವಿದೆ.
ಇಡೀ ಸೃಷ್ಟಿಗೆ ಆಧಾರವಾಗಿರುವ ಮಹಾನ್ ಶಕ್ತಿಯ ಸ್ವರೂಪ ಎಂದು ಹೆಣ್ಣಿಗೆ ಗೌರವ, ಸಮಾನತೆ ಮತ್ತು ಅವಳ ಸಾಮರ್ಥ್ಯಗಳನ್ನು ಗುರುತಿಸುವಂತೆ ಪ್ರೇರೇಪಿಸುವ ಆಧುನಿಕ ಮತ್ತು ಪ್ರಗತಿಪರ ಸಂದೇಶವನ್ನು ತೆರೆದಿಡುತ್ತಾರೆ.
#BRNaidu
#Kuvempu
#ಕುವೆಂಪು
ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ.
56 ಇಂಚಿನ ಎದೆಯ ಪ್ರಧಾನಿ @narendramodi ಅವರು ನಿಷ್ಕ್ರಿಯ ಆಗಿದ್ದಾರೆ. ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ ಇಲ್ಲ.
ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ₹1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ?
ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ @BJP4Karnataka ನಾಯಕರವರೆಗೂ, "ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ" ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ.
ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ.
ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ.
ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ.
ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ.
ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ.
- ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ 8 ವರ್ಷಗಳ ಬಳಿಕ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ನಿಯೋಜನಾ ಆದೇಶ ವಿತರಣೆಯನ್ನು ಮಾಡಲು ತೀರ್ಮಾನಿಸಿದ್ದು, ಸಾಂಕೇತಿಕವಾಗಿ ಇಂದು 51 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ ಮಾಡಲಾಯಿತು.
ಚಾಲನಾ ಸಿಬ್ಬಂದಿಯ ನೇಮಕಾತಿಯು ಪಾರದರ್ಶಕವಾಗಿ ಮಾಡಿದ್ದು, ಮಾನವ ಹಸ್ತಕ್ಷೇಪವಿರುವುದಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿರುತ್ತದೆ.
ನಾಲ್ಕು ಸಾರಿಗೆ ನಿಗಮಗಳಿಂದ ಸುಮಾರು 1000ಕ್ಕೂ ಹೆಚ್ಚು ಮೃತರ ಅವಲಂಭಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿರುತ್ತದೆ.
ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ ₹1 ಕೋಟಿ ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ ₹10 ಲಕ್ಷಗಳ ಕುಟುಂಬ ಕಲ್ಯಾಣ ಯೋಜನೆಯಡಿ ಪರಿಹಾರವನ್ನು ನೀಡಲಾಗುತ್ತಿದೆ.
ಶ್ರೀ ಎಸ್.ಆರ್. ಶ್ರೀನಿವಾಸ್, ಅಧ್ಯಕ್ಷರು ಕೆ.ಎಸ್.ಆರ್.ಟಿ.ಸಿ ಹಾಗೂ ಶಾಸಕರು, ಉಪಾಧ್ಯಕ್ಷರಾದ ಶ್ರೀ ಮೊಹಮ್ಮದ್ ರಿಜ್ವಾನ್ ನವಾಬ್, ಶ್ರೀ. ಅಕ್ರಂ ಪಾಷ, ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ, ಡಾ. ನಂದಿನಿದೇವಿ ಕೆ., ಭಾ.ಆ.ಸೇ. ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ), ಶ್ರೀ ಇಬ್ರಾಹಿಂ ಮೈಗೂರ, ಭಾಆಸೇ., ನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ಕರಾರಸಾ ನಿಗಮ, ಕಾರ್ಮಿಕ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
#KSRTC #RamalingaReddy
Had the opportunity to get an up-close look at the Rafale and engage in a
technical briefing.
Undoubtedly, it is one of the most advanced fighter aircraft in the world. The sophistication of its avionics, weapon systems and versatility across mission profiles is impressive and reinforces why it’s a good asset.
Encouraging to see such cutting-edge technology and the possibilities it holds for collaboration and capability building in Karnataka soon.
More roads. More bridges. More access.
From state highways to student hostels—Karnataka’s infrastructure is expanding with purpose and inclusion.
#2YearsOfGuaranteeSarkara#GuaranteeSarkara
ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡುವ ಜ್ಞಾನಾಂಕುರ ಹಾಗೂ ಯುವ ಪದವೀಧರರಿಗೆ ಪದವಿ ಪ್ರದಾನ ಮಾಡುವ ಎರಡು ಅರ್ಥಪೂರ್ಣ ಕಾರ್ಯಕ್ರಮಗಳಲ್ಲಿ ಜಗದ್ಗುರುಗಳು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಭಾಗವಹಿಸಿ ಶುಭ ಕೋರಿದೆ.
ಪೂಜ್ಯ ಸ್ವಾಮೀಜಿಗಳು ಭಾಗವಹಿಸಿ ಆಶೀರ್ವಚನ ನೀಡಿ ಶುಭ ಹಾರೈಸಿದರು.
#Jnanankura
ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ರಾಂತಿ!
ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲು ಸರ್ಕಾರದಿಂದ ದಿಟ್ಟ ನಿರ್ಧಾರ!
✅ 13,000 ಶಿಕ್ಷಕರ ಶೀಘ್ರ ನೇಮಕಾತಿ
✅ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಒತ್ತು
✅ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಆಧಾರ
ಗುಣಮಟ್ಟದ ಶಿಕ್ಷಣದೊಂದಿಗೆ ರಾಜ್ಯದ ಶಾಲೆಗಳನ್ನು ಮಾದರಿಯಾಗಿಸಲು ಬದ್ಧ!
#ಕರ್ನಾಟಕಶಿಕ್ಷಣ #ಶಿಕ್ಷಕರನೇಮಕಾತಿ #ಗ್ಯಾರಂಟಿ_ಸರ್ಕಾರ
ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದಾತ್ತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಪಾಕಿಸ್ತಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನ ನಡೆಸುವ ಎಲ್ಲ ನೆರೆಯ ದೇಶಗಳಿಗೂ ನಮ್ಮ ವಾಯುಸೇನಾ ದಾಳಿ ಎಚ್ಚರಿಕೆಯ ಗಂಟೆಯಾಗಿದೆ.
- @siddaramaiah
ಬೆಂಗಳೂರು- ಕನಕಪುರ ನಡುವಣ ರಸ್ತೆ ಅರು ಪಥಕ್ಕೆ ಉನ್ನತೀಕರಣ, ನನೆಗುದಿಗೆ ಬಿದ್ದಿರುವ ಕಗ್ಗಲಿಪುರ ಟೋಲ್ ವರೆಗಿನ ರಸ್ತೆ ಕಾಮಗಾರಿ, ಉಪನಗರ ವರ್ತುಲ ರಸ್ತೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ಬಿಡುಗಡೆ, ಹೆಬ್ಬಾಳ ಜಂಕ್ಷನ್ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ವೇತುವೆ ನಿರ್ಮಾಣ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ @DKShivakumar ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ದೇಶದ ಸೇನಾಪಡೆ 'ಆಪರೇಷನ್ ಸಿಂಧೂರ' ಮೂಲಕ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನ ನಾಶಗೊಳಿಸಿ ಪರಾಕ್ರಮ ಮೆರೆದಿದೆ. ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ಸೂಚಿಸಿದ್ದೇನೆ.
- @siddaramaiah
ಪಹಲ್ಗಾಮ್ ದಾಳಿಯಲ್ಲಿ ನಮ್ಮ ರಾಜ್ಯದವರು ಮಾತ್ರವಲ್ಲ, ದೇಶದ ಇತರೆ ಭಾಗಗಳ ಜನರು ಮೃತರಾಗಿದ್ದರು.
ಈ ವಿಚಾರದಲ್ಲಿ ಕೇವಲ ಕರ್ನಾಟಕ ಎಂದು ನೋಡಬಾರದು, ಇಡೀ ದೇಶವೇ ಒಂದು ಎಂದು ನೋಡಬೇಕು.
ನಾವೆಲ್ಲರೂ ಈ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕು, ಅದೇ ರೀತಿ ಒಟ್ಟಾಗಿ ನಿಂತಿದ್ದೇವೆ.
- @DKShivakumar#OperationSindoor #PehalgamTerroristAttack