ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ: 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
ಬೆಂಗಳೂರು:
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ, ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿದ್ದ ಸುಮಾರು 400 ಪತ್ರಕರ್ತರ ಬಸ್ ಪಾಸ್ಗಳಿಗೆ ವಾರ್ತಾ ಇಲಾಖೆ ಅನುಮೋದನೆ ನೀಡಿದೆ.
ವಾರ್ತಾ ಇಲಾಖೆ ಆಯುಕ್ತರಾದ ಎಂ.ಎನ್. ಅನುಚೇತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕಮಿಟಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಿರಂತರವಾಗಿ ನಡೆಸಿದ ಹೋರಾಟ ಮತ್ತು ಒತ್ತಾಯದ ಫಲವಾಗಿ, ಒಂದೇ ಹಂತದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಮಂಜೂರು ಮಾಡಿರುವುದು ಇದೇ ಮೊದಲ ಬಾರಿ ಎನ್ನುವುದು ಸ್ವಾಗತಾರ್ಹ.
ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ದಾಖಲೆಗಳನ್ನು ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಿರುವ ವಾರ್ತಾ ಇಲಾಖೆಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ.
ಇದೇ ವೇಳೆ, ಇನ್ನೂ ಬಸ್ ಪಾಸ್ಗೆ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕೆಯುಡಬ್ಲ್ಯೂಜೆ ಮನವಿ ಮಾಡಿದೆ.
ಇದೇ ಸಂದರ್ಭದಲ್ಲಿ ವಾರ್ತಾ ಇಲಾಖೆ ಆಯುಕ್ತರನ್ನು ಸನ್ಮಾನಿಸಲಾಯಿತು.
ವಾರ್ತಾ ಇಲಾಖೆ ಉಪ ನಿರ್ದೇಶಕ ಗುರುನಾಥ್ ಕಡಬೂರು ಹಾಜರಿದ್ದರು.
ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸದಸ್ಯರಾದ ಶ್ರೀನಿವಾಸ ನಾಯಕ ಇಂಡಾಜೆ, ಚಂದ್ರು, ಮೋಹನ, ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
@CMofKarnataka@DKShivakumar@DrParameshwara
.
ಪತ್ರಿಕಾ ದಿನಾಚರಣೆಯಲ್ಲಿ ಡಾ. ವಿಜಯ ಸಂಕೇಶ್ವರ: ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಸಲು ಕರೆ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಆರ್ಎಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ವಿಜಯ ಸಂಕೇಶ್ವರ ಅವರು ಭಾಗವಹಿಸಿ ಮಾತನಾಡಿದರು.
ಪತ್ರಿಕೋದ್ಯಮವು ಸಮಾಜದ ನಾಲ್ಕನೇ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ. ಸತ್ಯ, ನಿಷ್ಪಕ್ಷಪಾತತೆ ಮತ್ತು ವಿಶ್ವಾಸಾರ್ಹತೆಯೇ ಪತ್ರಕರ್ತರ ದೊಡ್ಡ ಶಕ್ತಿಯಾಗಿದ್ದು, ಯಾವುದೇ ಸಂದರ್ಭದಲ್ಲೂ ಈ ಮೌಲ್ಯಗಳನ್ನು ಬಿಟ್ಟುಕೊಡಬಾರದು ಎಂದು ಅವರು ಹೇಳಿದರು.
ಇಂದಿನ ವೇಗದ ಮಾಹಿತಿ ಯುಗದಲ್ಲಿ ಸುದ್ದಿಗಳಿಗಿಂತ ವಿಶ್ವಾಸಾರ್ಹ ಸುದ್ದಿಗಳ ಅಗತ್ಯ ಹೆಚ್ಚಾಗಿದೆ. ಪತ್ರಕರ್ತರು ಸಮಾಜದ ಧ್ವನಿಯಾಗಿ ಕೆಲಸ ಮಾಡುತ್ತಾ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ವೃತ್ತಿಯ ಮೇಲಿನ ಬದ್ಧತೆ ಮತ್ತು ನೈತಿಕತೆ ಉಳಿಸಿಕೊಂಡಾಗ ಮಾತ್ರ ಪತ್ರಿಕೋದ್ಯಮ ತನ್ನ ಗೌರವವನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಿಕಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿರುವುದನ್ನು ಶ್ಲಾಘಿಸಿದ ಅವರು, ಪತ್ರಕರ್ತರ ಕಲ್ಯಾಣ, ವೃತ್ತಿ ಅಭಿವೃದ್ಧಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಸಂಘ ಇನ್ನಷ್ಟು ಬಲ ತುಂಬಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಪತ್ರಕರ್ತರು, ವಿವಿಧ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳು, ಗಣ್ಯರು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.
ಬೀದರ್ನ ಗುರುನಾನಕ್ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಶ್ರೀ @eshwar_khandre ಚಾಲನೆ ನೀಡಿದರು.
ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಶ್ರೀಮತಿ ಶಿಲ್ಪಾ ಶರ್ಮಾ, ಗುರುನಾನಕ್ ಎಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷರಾದ ಡಾ. ಎಸ್ ಬಲ್ಬೀರ್ ಸಿಂಗ್, ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಅಯೇಷಾ ಖಾನಂ, ಕಾರ್ಯದರ್ಶಿ ಶ್ರೀಮತಿ ಸಹನಾ ಎಂ., ಅಕಾಡೆಮಿ ಸದಸ್ಯರಾದ ಶ್ರೀ ಅಬ್ಬಾಸ್ ಮುಲ್ಲಾ, ಶ್ರೀಮತಿ ರಶ್ಮಿ ಎಸ್ ಮತ್ತಿತರರು ಉಪಸ್ಥಿತರಿದ್ದರು.
Forest, Environment, and Ecology Minister Shri Eshwar Khandre inaugurated the Kalyana Karnataka Regional Media Training Program held at the auditorium of Guru Nanak Dev Engineering College in Bidar. The event was organized by the Karnataka Media Academy in collaboration with the Department of Information and Public Relations.
Deputy Commissioner Smt. Shilpa Sharma, President of Guru Nanak Engineering College Dr. S. Balbir Singh, Academy Chairperson Smt. Ayesha Khanam, Secretary Sahana M., and Academy Members Abbas Mulla, Rashmi S. were present.
#karnatakamediaacademy #bidar | @ChairpersonKMA | @AyeshaKhanumAK | @diprbidar | @KarnatakaVarthe | @bidarupdates
ಹುಬ್ಬಳ್ಳಿ ಜೆ.ಸಿ.ನಗರದ ಮುನ್ಸಿಪಲ್ ಎಂಪ್ಲಾಯೀಜ್ ಹಾಲ್ನಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸನತ್ಕುಮಾರ ಬೆಳಗಲಿ ಅವರಿಗೆ ಜೀವಮಾನ ಸಾಧನೆ, ಸುನಿತಾ ಕುಲಕರ್ಣಿ ಹಾಗೂ ನಿರ್ಮಲಾ ಕುದರಿ ಅವರಿಗೆ ಅವ್ವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಹಿರಿಯ ಪತ್ರಕರ್ತ ಹುಣಸವಾಡಿ, ಹುಡಾ ಅಧ್ಯಕ್ಷ ಶಾಕೀರ ಸನದಿ, ಸಂಘದ ಅಧ್ಯಕ್ಷ ಲೋಚನೇಶ ಹೂಗಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಜೆ.ಅಬ್ಬಾಸ ಮುಲ್ಲಾ, ಗಣಪತಿ ಗಂಗೊಳ್ಳಿ, ಸುಶೀಲೇಂದ್ರ ಕುಂದರಗಿ, ವಿಜಯ ಹೂಗಾರ, ಬಂಡು ಕುಲಕರ್ಣಿ, ಬಸವರಾಜ ಬಿಜಾಪುರ, ಗುರುರಾಜ ಹೂಗಾರ, ವೀರೇಶ ಹಂಡಿಗಿ, ಗಿರೀಶ ಪಟ್ಟಣಶೆಟ್ಟಿ, ವೆಂಕಟೇಶ ಪ್ರಭು, ಬಸವರಾಜ ಹೂಗಾರ, ಮಲ್ಲಿಕಾರ್ಜುನ ಸಿದ್ದಣ್ಣವರ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
#dharwad
Rashmi S elevated , Head incharge of Sudha Magazine published by DH Prajavani Media House.
Shobha M takes over Head and Editor Republic Kannada News.
Karnataka Media Academy is proud of these shining Achievers and they add glory to the Media Academy as both as Members of the Academy.
Karnataka Media Academy congratulates Shobha and Rashmi and wish them Best .!
ಹಿರಿಯ ಪತ್ರಕರ್ತೆ ಶ್ರೀಮತಿ ರಶ್ಮಿ ಎಸ್. ಅವರನ್ನು ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪ್ರಕಟಣಾ ಸಂಸ್ಥೆಯ ಸುಧಾ ನಿಯತಕಾಲಿಕೆಯ ಮುಖ್ಯಸ್ಥೆಯಾಗಿ ನೇಮಕ ಮಾಡಲಾಗಿದೆ. ಹಾಗೆಯೇ ರಿಪಬ್ಲಿಕ್ ಕನ್ನಡದ ಮುಖ್ಯಸ್ಥರು ಹಾಗೂ ಸಂಪಾದಕಿಯಾಗಿ ಶೋಭಾ ಎಂ ಅವರನ್ನು ನೇಮಕ ಮಾಡಲಾಗಿದೆ.
ಈ ಇಬ್ಬರೂ ಮಾಧ್ಯಮ ಅಕಾಡೆಮಿಯ ಸದಸ್ಯೆಯರಾಗಿದ್ದು, ಹಾರ್ದಿಕ ಅಭಿನಂದನೆಗಳು. ಇಬ್ಬರೂ ತಮ್ಮ ವೃತ್ತಿ ಜೀವನದಲ್ಲಿ ಇನ್ನೂ ದೊಡ್ಡ ಗೌರವ ಪಡೆಯುವಂತಾಗಲಿ.
#Congratulations #karnatakamediaacademy
@prajavani | @sudha_weekly | @KannadaRepublic | @mcshobha | @ChairpersonKMA | @AyeshaKhanumAK
ಕರ್ನಾಟಕ ಮಾಧ್ಯಮ ಅಕಾಡೆಮಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹುಬ್ಬಳ್ಳಿಯ ಇಂದಿರಾ ಗಾಂಧಿ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ Focus On News ಛಾಯಾಚಿತ್ರ ಪ್ರದರ್ಶನ ಹಾಗೂ ಪತ್ರಿಕಾ ಛಾಯಾಗ್ರಹಣ ತರಬೇತಿ ಕಾರ್ಯಾಗಾರಕ್ಕೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ @SantoshSLadINC ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ, ಶ್ರೀ @MTenginkai , ಶ್ರೀ @nhkonaraddy , ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ @AyeshaKhanumAK , ಖ್ಯಾತ ಪತ್ರಿಕಾ ಛಾಯಾಗ್ರಾಹಕಿ @Siprapix , ಅಕಾಡೆಮಿ ಸದಸ್ಯರಾದ ಶ್ರೀ ಶಿವಾನಂದ ತಗಡೂರು, ಶ್ರೀ ಅಬ್ಬಾಸ್ ಮುಲ್ಲಾ, ಶ್ರೀ ಸಂಗಮೇಶ್ ಚೂರಿ, ಕಾರ್ಯದರ್ಶಿಗಳಾದ ಶ್ರೀಮತಿ ಸಹನಾ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ಲೋಚನೇಶ್ ಹೂಗಾರ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
@CMofKarnataka | @siddaramaiah| @DKShivakumar | @ChairpersonKMA | @KarnatakaVarthe