ಮಾನ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೇ (@NswamyChalavadi ) , ಶೇ.50ರ ಮೀಸಲಾತಿ ಅನ್ವಯ ನೇಮಕಾತಿಗೆ ಆಕ್ಷೇಪವಿಲ್ಲ: ಹೈಕೋರ್ಟ್ ಹೇಳುತ್ತಿದೆ.ಆದ್ದರಿಂದ ತಾವು ಸರ್ಕಾರಕ್ಕೆ ಒತ್ತಡ ಹಾಕಿ ಶೇ.50ರ ಮೀಸಲಾತಿ ಅನ್ವಯ ನೇರ ನೇಮಕಾತಿ ಅಧಿಸೂಚನೆ ಹೊರಡಿಸಲು , ಕಳೆದ ೨ ವರ್ಷಗಳಿಂದ ಯಾವುದೇ ನೇರ ನೇಮಕಾತಿ ಅಧಿಸೂಚನೆ ಆಗಿಲ್ಲ (೧/೨)
ಮಾನ್ಯ ಬಿಜೆಪಿ ರಾಜ್ಯಾಧ್ಯಕ್ಷರೇ (@BYVijayendra ) ಶೇ.50ರ ಮೀಸಲಾತಿ ಅನ್ವಯ ನೇಮಕಾತಿಗೆ ಆಕ್ಷೇಪವಿಲ್ಲ: ಹೈಕೋರ್ಟ್ ಹೇಳುತ್ತಿದೆ.ಆದ್ದರಿಂದ ತಾವು ಸರ್ಕಾರಕ್ಕೆ ಒತ್ತಡ ಹಾಕಿ ಶೇ.50ರ ಮೀಸಲಾತಿ ಅನ್ವಯ ನೇರ ನೇಮಕಾತಿ ಅಧಿಸೂಚನೆ ಹೊರಡಿಸಲು , ಕಳೆದ ೨ ವರ್ಷಗಳಿಂದ ಯಾವುದೇ ನೇರ ನೇಮಕಾತಿ ಅಧಿಸೂಚನೆ ಆಗಿಲ್ಲ, (೧/೨)
ಮಾನ್ಯ ವಿಧಾನ ಪರಿಷತ್ ಸದಸ್ಯರೇ ( @CTRavi_BJP ) ಶೇ.50ರ ಮೀಸಲಾತಿ ಅನ್ವಯ ನೇಮಕಾತಿಗೆ ಆಕ್ಷೇಪವಿಲ್ಲ: ಹೈಕೋರ್ಟ್ ಹೇಳುತ್ತಿದೆ.ಆದ್ದರಿಂದ ತಾವು ಸರ್ಕಾರಕ್ಕೆ ಒತ್ತಡ ಹಾಕಿ ಶೇ.50ರ ಮೀಸಲಾತಿ ಅನ್ವಯ ನೇರ ನೇಮಕಾತಿ ಅಧಿಸೂಚನೆ ಹೊರಡಿಸಲು , ಕಳೆದ ೨ ವರ್ಷಗಳಿಂದ ಯಾವುದೇ ನೇರ ನೇಮಕಾತಿ ಅಧಿಸೂಚನೆ ಆಗಿಲ್ಲ, (೧/೨)
ಮಾನ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೇ (@NswamyChalavadi ) , ಶೇ.50ರ ಮೀಸಲಾತಿ ಅನ್ವಯ ನೇಮಕಾತಿಗೆ ಆಕ್ಷೇಪವಿಲ್ಲ: ಹೈಕೋರ್ಟ್ ಹೇಳುತ್ತಿದೆ.ಆದ್ದರಿಂದ ತಾವು ಸರ್ಕಾರಕ್ಕೆ ಒತ್ತಡ ಹಾಕಿ ಶೇ.50ರ ಮೀಸಲಾತಿ ಅನ್ವಯ ನೇರ ನೇಮಕಾತಿ ಅಧಿಸೂಚನೆ ಹೊರಡಿಸಲು , ಕಳೆದ ೨ ವರ್ಷಗಳಿಂದ ಯಾವುದೇ ನೇರ ನೇಮಕಾತಿ ಅಧಿಸೂಚನೆ ಆಗಿಲ್ಲ (೧/೨)
@INCKarnataka ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವಾಗಿ ಆರಂಬಿಸಿ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ @siddaramaiah , @DKShivakumar ,@RahulGandhi@DrParameshwara ಕೊಟ್ಟ ಮಾತನ್ನು ಉಳಿಸಿಕೊಳ್ಳಿ ವಿದ್ಯಾರ್ಥಿ ಪರ ಆಡಳಿತ ನಡೆಸಿ, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಯುವ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ
ಅಕ್ರಮ ನೇಮಕಾತಿಗೆ 'ಸುಪ್ರೀಂ'ಚಾಟಿ !
ಶಾಸಕಾಂಗ ಮತ್ತು ಕಾರ್ಯಾಂಗ ಸಹಿತ ನೇಮಕಾತಿ ಅಕ್ರಮದಲ್ಲಿ ಭಾಗಿಯಾದಾಗ ನ್ಯಾಯವು ಮರೀಚಿಕೆ ಯಾಗಿರುತ್ತದೆ
ಈ ದೇಶದ ನ್ಯಾಯಾಂಗದ ಮೇಲೆ ಸಾಕಷ್ಟು ಭರವಸೆ ಮತ್ತು ನಂಬಿಕೆಗಳಿವೆ
ನ್ಯಾಯಯುತ ನೇಮಕಾತಿಗಳಲ್ಲಿ ನ್ಯಾಯಾಂಗದ ಪಾತ್ರ ಬಹು ದೊಡ್ಡದು
ಕೆಎಎಸ್ ಅಭ್ಯರ್ಥಿಗಳಿಗೆ ಇದೇ ರೀತಿಯ ನ್ಯಾಯ ಸಿಗಲಿ!
ಮಾನ್ಯ ಮುಖ್ಯಮಂತ್ರಿ @siddaramaiah ಅವರನ್ನು ಇಂದು ಮತ್ತೆ ಭೇಟಿ ಮಾಡಿ ಕೆಪಿಎಸ್ ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ವಿವರಿಸಿದೆ.
ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷೆ ಬರೆದವರೂ ಕನ್ನಡದ ಮಕ್ಕಳೇ ಗೌಡ್ರೇ, ಈಗ ಮರು ಅಧಿಸೂಚನೆ ಮಾಡಿದರೆ ಅವರಿಗೆ ಅನ್ಯಾಯವಾಗೋದಿಲ್ವಾ ಎಂದು ಹಿರಿಯ ಅಧಿಕಾರಿಯೊಬ್ಬರು ಪ್ರಶ್ನಿಸಿದರು. ನಿಜ, ಅವರೂ ಕನ್ನಡದ ಮಕ್ಕಳೇ ಇರಬಹುದು. ಇಂಗ್ಲಿಷ್ ಮಾಧ್ಯಮದವರಿಗೆ ಸರಿಯಾದ ಪ್ರಶ್ನೆಪತ್ರಿಕೆ, ಕನ್ನಡ ಮಾಧ್ಯಮದವರಿಗೆ ತಪ್ಪುತಪ್ಪಾದ ಪ್ರಶ್ನೆ ಪತ್ರಿಕೆ ಕೊಡುವುದು ಎಷ್ಟು ನ್ಯಾಯ ಎಂದು ಹೇಳಿದೆ. ಕನ್ನಡ ಮಾಧ್ಯಮದವರೇನು ಪಾಪ ಮಾಡಿದ್ದರು? ಅವರಿಗೆ ಯಾಕೆ ಶಿಕ್ಷೆ ಎಂದು ಪ್ರಶ್ನಿಸಿದೆ. ಹೀಗಾದರೆ ಮುಂದೆ ಕನ್ನಡ ಮಾಧ್ಯಮದಲ್ಲಿ ಯಾರು ಓದುತ್ತಾರೆ ಎಂದು ಕೇಳಿದೆ.
ಮುಖ್ಯಮಂತ್ರಿಗಳು ತಾಳ್ಮೆಯಿಂದ ನನ್ನ ಮಾತುಗಳನ್ನು ಕೇಳಿದರು. ನಾಳೆ ಕೆಪಿಎಸ್ ಸಿ ಅಧಿಕಾರಿಗಳನ್ನು ಕರೆಯಿಸಿ ಮಾತನಾಡುವುದಾಗಿ ಹೇಳಿದ್ದಾರೆ. ಅವರು ಸೂಕ್ತ ನಿರ್ಧಾರ ತೆಗೆದುಕೊಂಡು ಅನ್ಯಾಯಕ್ಕೆ ಒಳಗಾದ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲಿ ಎಂಬುದು ಆಶಯ.
ಕೆಪಿಎಸ್ ಸಿಗೆ ಸಾವಿರಾರು ಕರವೇ ಕಾರ್ಯಕರ್ತರಿಂದ ಮುತ್ತಿಗೆಗೆ ತೀರ್ಮಾನ
ಇಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮುಖಂಡರು, ಬೆಂಗಳೂರು ನಗರ ಪದಾಧಿಕಾರಿಗಳ ತುರ್ತು ಸಭೆ ಇಂದು ನಡೆಯಿತು. ಬಹಳ ಮುಖ್ಯವಾಗಿ
ಕೆಪಿಎಸ್ ಸಿ ನಡೆಸಿದ ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯದ ಹಿನ್ನೆಲೆಯಲ್ಲಿ ಕರವೇ ಸಂಘಟಿಸಿರುವ ಚಳವಳಿಯನ್ನು ತೀವ್ರಗೊಳಿಸುವ ಕುರಿತು ಚರ್ಚೆ ನಡೆಯಿತು.
ಫೆ.18ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟ ನಡೆಸಿದ್ದೆವು. ಚಳವಳಿಯ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ @siddaramaiah ಸಿದ್ಧರಾಮಯ್ಯನವರನ್ನು ಕರವೇ ನಿಯೋಗ ಭೇಟಿ ನೀಡಿ ಆಗಿರುವ ಅನ್ಯಾಯವನ್ನು ಬಿಡಿಸಿ ಹೇಳಿತ್ತು. ಈ ಸಂದರ್ಭದಲ್ಲಿ ನಮ್ಮ ಚಳವಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಕೆಪಿಎಸ್ ಸಿ ಅಧ್ಯಕ್ಷರ ಮತ್ತು ಅಧಿಕಾರಿಗಳನ್ನು ಕರೆಯಿಸಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು.
ಆದರೆ ನಾಲ್ಕು ದಿನಗಳು ಕಳೆದರೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡುವ ಕುರಿತು ಸ್ವತಃ ಮುಖ್ಯಮಂತ್ರಿಗಳಾಗಲೀ, ಕೆಪಿಎಸ್ ಸಿಯಾಗಲೇ ಒಂದೇ ಒಂದು ಮಾತು ಹೇಳಿಲ್ಲ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯಕ್ಕೆ ಯಾರೂ ಸ್ಪಂದಿಸುವ ಹಾಗೆ ಕಾಣುತ್ತಿಲ್ಲ.
ನಮ್ಮ ಶಾಂತಿಯುತ ಹೋರಾಟಕ್ಕೆ ಸರ್ಕಾರ, ಕೆಪಿಎಸ್ ಸಿ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟಕ್ಕೆ ಕೈ ಹಾಕಬೇಕಾಗಿದೆ. ಚಳವಳಿಯ ಸ್ವರೂಪದ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಚರ್ಚೆಯ ನಂತರ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕರವೇ ಕಾರ್ಯಕರ್ತರು ಮತ್ತು ಸಾವಿರಾರು ವಿದ್ಯಾರ್ಥಿಗಳು ಕೆ.ಪಿ.ಎಸ್.ಸಿ. ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರ ಕೈಗೊಳ್ಳಲಾಯಿತು. ಸರ್ಕಾರ ಮತ್ತು ಕೆಪಿಎಸ್ ಸಿ ನಮ್ಮ ಮುಂದಿನ ಹೋರಾಟಗಳ ಆಗುಹೋಗುಗಳಿಗೆ ಜವಾಬ್ದಾರಿ ಹೊರಬೇಕು. ನಾವು ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ.
-ಟಿ.ಎ.ನಾರಾಯಣಗೌಡ
ರಾಜ್ಯಾಧ್ಯಕ್ಷರು
ಕರ್ನಾಟಕ ರಕ್ಷಣಾ ವೇದಿಕೆ
ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನಡೆಸಿರುವ ಪರೀಕ್ಷೆಯ ಫಲಿತಾಂಶ ತಡೆ ಹಿಡಿದು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಒಂದು ದಿನದ ಎಕ್ಸ್ (ಟ್ವಿಟರ್) ಅಭಿಯಾನ ಏರ್ಪಡಿಸಲಾಗಿದೆ. ಅಭಿಯಾನವು 17-2-2025ರ ಸೋಮವಾರ ಸಂಜೆ 5 ಗಂಟೆಯಿಂದ 18-2-2025ರ ಮಂಗಳವಾರ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಎಲ್ಲ ಕನ್ನಡದ ಮನಸುಗಳು ಈ ಅಭಿಯಾನ ಬೆಂಬಲಿಸಲು ಕೋರುತ್ತೇವೆ.
ಹ್ಯಾಶ್ ಟ್ಯಾಗ್:
#KPSCMosa
#KPSCDroha
ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ. ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಿಂದೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಾನುವಾದದ ಸಮಸ್ಯೆ ಕಂಡುಬಂದಿದ್ದರಿಂದ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡಿತ್ತು. ನಮ್ಮ ಚಳವಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮರುಪರೀಕ್ಷೆಗೆ ಆದೇಶಿಸಿದ್ದರು. ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವೆಲ್ಲ ಒಕ್ಕೊರಲಿನಿಂದ ಅಭಿನಂದಿಸಿದ್ದೆವು.
ಆದರೆ ಮರುಪರೀಕ್ಷೆಯಲ್ಲೂ ಕನ್ನಡಾನುವಾದದ ಸಮಸ್ಯೆ ಉಂಟಾಗಿದೆ. ಹೋರಾಟದ ಸಂದರ್ಭದಲ್ಲಿ ನಾವು ಕನ್ನಡದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಅದನ್ನು ಇಂಗ್ಲಿಷ್ ಗೆ ಅನುವಾದಿಸುವಂತೆ ಆಗ್ರಹಿಸಿದ್ದೆವು. ಕರ್ನಾಟಕದ ಆಡಳಿತ ಭಾಷೆ ಕನ್ನಡವಾದ್ದರಿಂದ ಇದೇ ಸಹಜವಾಗಿ ನಡೆಯಬೇಕಿತ್ತು. ಆದರೆ ದುರಂಹಕಾರಿ ಅಧಿಕಾರಿಗಳಿಂದಾಗಿ ಮತ್ತೆ ಇಂಗ್ಲಿಷ್ ನಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ, ಕನ್ನಡಕ್ಕೆ ತಪ್ಪುತಪ್ಪಾಗಿ ಅನುವಾದಿಸಲಾಗಿದೆ. ಇದರಿಂದಾಗಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವಂಚನೆ ಎಸಗಲಾಗಿದೆ.
ಈಗ ಫಲಿತಾಂಶದಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ತೀರಾ ಕನಿಷ್ಟ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ ಎಂಬ ಮಾಹಿತಿ ಇದೆ. ಇದಕ್ಕೆ ಕೆಟ್ಟದಾಗಿ ಸಿದ್ಧಪಡಿಸಿದ ಕನ್ನಡಾನುವಾದದ ಪ್ರಶ್ನೆ ಪತ್ರಿಕೆಗಳೇ ಕಾರಣ ಎಂದು ಕನ್ನಡ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಇವರೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಸಾಮಾಜಿಕವಾಗಿ ಹಿಂದುಳಿದ ಜನವರ್ಗಗಳಿಂದ ಬಂದವರು. ಇಂಥವರಿಗೆ ಅನ್ಯಾಯವಾಗುತ್ತಿದ್ದರೂ ಸರ್ಕಾರ ಮೌನವಾಗಿ ಕುಳಿತುಕೊಳ್ಳಲು ಹೇಗೆ ಸಾಧ್ಯ?
ಹಲವಾರು ವಿದ್ಯಾರ್ಥಿಗಳು ಪ್ರತಿನಿತ್ಯ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಅವರ ಸಂಕಟಗಳನ್ನು ಹೇಳುತ್ತಿದ್ದಾರೆ. ಅವರ ಭವಿಷ್ಯದ ಬದುಕು ಬೀದಿಗೆ ಬಿದ್ದಂತಾಗಿದೆ. ಎಷ್ಟೋ ವರ್ಷಗಳಿಂದ ಅವರು ಈ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದರು. ಇದಕ್ಕಾಗಿ ಅವರ ಪೋಷಕರೂ ತ್ಯಾಗ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಅನುತ್ತೀರ್ಣಗೊಂಡರೆ ಬಹುತೇಕರು ವಯೋಮಿತಿಯ ಕಾರಣಕ್ಕೆ ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಯಾರೋ ದುಷ್ಟ ಅಧಿಕಾರಿಗಳು ಮಾಡಿದ ದ್ರೋಹಕ್ಕೆ ಅವರ ಬದುಕು ನರಕವಾಗಿದೆ.
ಪರೀಕ್ಷೆ ಬರೆದವರಿಗೆಲ್ಲ ಕೆಎಎಸ್ ಹುದ್ದೆಯೇನು ಲಭಿಸುವುದಿಲ್ಲ. ಆದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳನ್ನು ಬೇಕೆಂದೇ ತಪ್ಪುತಪ್ಪಾದ ಪ್ರಶ್ನೆ ಪತ್ರಿಕೆ ಕೊಟ್ಟು ಅಂಕಗಳಿಸಿದಂತೆ ತಡೆಯಲಾಯಿತು ಎಂಬ ಅನ್ಯಾಯ ಪ್ರಜ್ಞೆ ಅವರನ್ನು ಕೊನೆಯವರೆಗೂ ಬಾಧಿಸಲಿದೆ. ಅಧಿಕಾರಿಗಳಾಗುವ ನಮ್ಮ ಆಸೆಗೆ ರಾಜ್ಯ ಸರ್ಕಾರವೇ ತಣ್ಣೀರೆರಚಿತು, ನಮಗೆ ಮೋಸ ಮಾಡಿತು ಎಂದು ಅವರು ಭಾವಿಸುತ್ತಾರೆ. ಇದು ಬೇಕಾಗಿರಲಿಲ್ಲ. ಇದಕ್ಕೆ ನೇರವಾಗಿ ಕೆಪಿಎಸ್ ಸಿ ಮತ್ತು ರಾಜ್ಯ ಸರ್ಕಾರವೇ ಹೊಣೆ. ಇದನ್ನು ಸರಿಪಡಿಸುವ ಜವಾಬ್ದಾರಿಯನ್ನೂ ಸರ್ಕಾರವೇ ಹೊರಬೇಕಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಿಂದೆ ಮಾಡಿದಂತೆ ಕೂಡಲೇ ಮಧ್ಯೆ ಪ್ರವೇಶಿಸಿ ಕೂಡಲೇ ಫಲಿತಾಂಶವನ್ನು ತಡೆಹಿಡಿಯಬೇಕು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಪರಿಹಾರ ಸೂತ್ರವನ್ನು ರೂಪಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು. ಫೆ. 18ರಂದು ನಡೆಯುವ ಸಾಂಕೇತಿಕ ಪ್ರತಿಭಟನೆಯಲ್ಲೇ ಹತ್ತಾರು ಸಾವಿರ ಮಂದಿ ನೆರೆಯುತ್ತಿದ್ದಾರೆ. ಅನ್ಯಾಯ ಸರಿಪಡಿಸದೇ ಹೋದಲ್ಲಿ ಅದರ ಪರಿಣಾಮ ಗಂಭೀರವಾಗಿರುತ್ತದೆ.
ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಆಗಸ್ಟ್ 27ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಗೆ ಬರೋಬ್ಬರಿ 13.40 ಕೋಟಿ ವೆಚ್ಚವಾಗಿದೆ. ಪರೀಕ್ಷೆ ನಡೆಸಲು ಇಷ್ಟು ದೊಡ್ಡ ಮೊತ್ತ ವೆಚ್ಚ ಆಗಿರುವುದಕ್ಕೆ ಆಯೋಗದ ಸದಸ್ಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ.ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಇಂಗ್ಲೀಷ್ ನಿಂದ ಕನ್ನಡಕ್ಕೆ ಭಾಷಾಂತರಿಸಿದ ಪ್ರಶ್ನೆ-ಉತ್ತರಗಳಲ್ಲಿ ತಪ್ಪುಗಳು ಕಂಡಂತ ಕಾರಣಕ್ಕೆ ಆ ಪರೀಕ್ಷೆಯನ್ನು ಸರ್ಕಾರವು ರದ್ದುಗೊಳಿಸಿದೆ. ಈಗ ಡಿಸೆಂಬರ್ 29ಕ್ಕೆ ಮರು ಪರೀಕ್ಷೆ ಆಯೋಗವು ನಿಗದಿಗೊಳಿಸಿದೆ. ಮರು ಪರೀಕ್ಷೆ ನಡೆಸಲು ಅಂದಾಜು 15 ಕೋಟಿ ವೆಚ್ಚ ಆಗಬಹುದೆಂದು ಅಂದಾಜಿಸಲಾಗಿದೆ.
ಆದರೆ, ಇಷ್ಟೆಲ್ಲಾ ಅವಾಂತರಗಳಾದ ಭಾಷಾಂತರದಲ್ಲಿ ಲೋಪ, ಸರ್ಕಾರದ ಬೊಕ್ಕಸಕ್ಕೆ ಭಾರಿ ಮೊತ್ತ ನಷ್ಟ ಹಾಗೂ ವೈಯಕ್ತಿಕವಾಗಿ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಮಾನಸಿಕವಾಗಿ ಹಿಂಸೆ ಮತ್ತು ಆರ್ಥಿಕವಾಗಿ ನಷ್ಟವಾಗಲು ಕಾರಣವಾದ ಅಧಿಕಾರಿವರ್ಗಕ್ಕೆ ಮಾತ್ರ ಯಾವುದೇ ಶಿಕ್ಷೆ ಇಲ್ಲ. ಈವರೆಗೂ ರಾಜ್ಯ ಸರ್ಕಾರ ಅಥವಾ ಮಾನ್ಯ ಮುಖ್ಯಮಂತ್ರಿಗಳು ತಪ್ಪೆಸಗಿದ ಅಧಿಕಾರಿಯನ್ನು ಆಯೋಗದಿಂದ ವರ್ಗಾವಣೆ ಮಾಡದೆ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ತುಂಬಾ ಬೇಸರದ ಸಂಗತಿಯಾಗಿದೆ.
AKSSA ಸಂಘಟನೆಯು ಆಯೋಗಕ್ಕೆ ಖಾಯಂ ಕಾರ್ಯದರ್ಶಿ ನೇಮಕ ಮತ್ತು ಕನ್ನಡಕ್ಕೆ ಅಪಮಾನ ಎಸಗಿದ ಪರೀಕ್ಷಾ ನಿಯಂತ್ರಕರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತಿದೆ.
ಧನ್ಯವಾದಗಳು 🙏
ಈ ಕೂಡಲೇ ಈ ಕೆಳಕಂಡ ವಿಷಯಗಳ ಬಗ್ಗೆ ಸ್ಪಷ್ಟೀಕರಣ ನೀಡಬೇಕೆಂದು ಕರ್ನಾಟಕ ಲೋಕಸೇವಾ ಆಯೋಗವನ್ನು AKSSA ಸಂಘಟನೆಯು ಒತ್ತಾಯಿಸುತ್ತಿದೆ. @KpscSecretary@siddaramaiah
✴️ ಅಕ್ಟೋಬರ್ 20ರಂದು ನಿಗದಿಯಾಗಿರುವ ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಡೆಸುವುದು ಅಥವಾ ಮುಂದೂಡುವುದರ ಬಗ್ಗೆ ಈವರೆಗೂ ಕರ್ನಾಟಕ ಲೋಕಸೇವಾ ಆಯೋಗವು ಯಾವುದೇ ಸ್ಪಷ್ಟನೆ ನೀಡಿರುವುದಿಲ್ಲ.
✴️ ಉಳಿಕೆ ಮೂಲ ವೃಂದದ(RPC) AC SAAD ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿರುವುದಿಲ್ಲ ಆದರೆ ಮುಖ್ಯ ಪರೀಕ್ಷೆಯನ್ನು ಡಿಸೆಂಬರ್ 17 ರಿಂದ ನಡೆಸಲು ದಿನಾಂಕ ನಿಗದಿಗೊಳಿಸಲಾಗಿದೆ. ಇನ್ನೆರಡು ದಿನಗಳ ಒಳಗೆ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಬೇಕು.
ಈ ಎರಡು ವಿಷಯಗಳ ಬಗ್ಗೆ ಕೂಡಲೇ ಆಯೋಗದ ಕಾರ್ಯದರ್ಶಿಗಳು ಸ್ಪಷ್ಟನೆಯನ್ನು ನೀಡಬೇಕೆಂದು ಸಂಘಟನೆಯ ಒತ್ತಾಯವಾಗಿದೆ.