ದಕ್ಷಿಣ ಕನ್ನಡ ಜಿಲ್ಲೆಯ ಆದಿದ್ರಾವಿಡ ಸಮುದಾಯದ ಮುಖಂಡರೊಂದಿಗೆ ಸಂವಾದ ನಡೆಸಿ, ಸಮುದಾಯದ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ಕುಲದೈವಗಳ ಅಭಿವೃದ್ಧಿ, ಜಾತಿ ಪ್ರಮಾಣಪತ್ರದ ಸಮಸ್ಯೆಗಳ ಪರಿಹಾರ ಹಾಗೂ ಸಮುದಾಯ ಭವನ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಲಾಯಿತು.
ನಮ್ಮ ಹೋರಾಟಕ್ಕೆ ಮುಖ್ಯ ಚುನಾವಣಾಧಿಕಾರಿ ಕಚೇರಿ ಮಣಿದಿದೆ
SIR ನೆಪದಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಷಡ್ಯಂತ್ರ ಖಂಡಿಸಿ ನಡೆಸಿದ ನಮ್ಮ ಹೋರಾಟಕ್ಕೆ ಮುಖ್ಯ ಚುನಾವಣಾಧಿಕಾರಿ ಕಚೇರಿ ಮಣಿದಿದೆ. ಮತದಾರರ ಹೆಸರನ್ನು ಅಳಿಸುವ ಉದ್ದೇಶದಿಂದ ಫಾರ್ಮ್ 6, ಫಾರ್ಮ್ 6ಎ, ಫಾರ್ಮ್ 7 ಬಳಸಿ ಸುಳ್ಳು ಅರ್ಜಿಗಳನ್ನು ಸಲ್ಲಿಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಸೂಚನೆ ನೀಡಿದೆ. ಮತದಾರರ ಪಟ್ಟಿಯಿಂದ ಅರ್ಹ ಮತದಾರರನ್ನು ತೆಗೆದುಹಾಕುವವರ ವಿರುದ್ಧ ಪ್ರಕರಣ ದಾಖಲಿಸಲು ಚುನಾವಣಾಧಿಕಾರಿಗಳು ಒಪ್ಪಿಗೆ ನೀಡಿದ್ದಾರೆ.
ಮರಣ ಹಾಗೂ ಎರಡು ಬಾರಿ ನೋಂದಣಿಯಾದ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಯಾವುದೇ ಫಾರ್ಮ್ 7 ಅನ್ನು ಅನುಮೋದಿಸುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತರು ರಾಜ್ಯದ ಎಲ್ಲಾ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದ್ದಾರೆ. ಮರಣ ಪ್ರಕರಣಗಳಲ್ಲಿ ಮರಣ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಕೆಯಾಗಬೇಕು. ಎರಡು ಬಾರಿ ನೋಂದಣಿಯಾಗಿದ್ದರೆ ಎರಡನೇ ಎಪಿಕ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ.
ಎಸ್ಐಆರ್ ಅಕ್ರಮದ ಕುರಿತು ಹಲವು ಪ್ರಕರಣಗಳು ಗಮನಕ್ಕೆ ಬಂದಿದ್ದು, ಇದರಲ್ಲಿ ವಿಪಕ್ಷಗಳ ಕುತಂತ್ರವಿದೆ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ದಲಿತರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಗಳ ಮತದಾರರನ್ನು ಗುರಿಯಾಗಿಸಿಕೊಂಡು ಈ ಪ್ರಕ್ರಿಯೆ ನಡೆಸಲಾಗಿದೆ. ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಅರ್ಜಿಗಳನ್ನು ಸಲ್ಲಿಸಿರುವ ಪ್ರಕರಣಗಳು ವರದಿಯಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಇಂತಹ ಅರ್ಜಿಗಳು ಸಾವಿರಾರು ಸಂಖ್ಯೆಯಲ್ಲಿವೆ.
ಈ ಬಗ್ಗೆ ಹಲವು ಜಿಲ್ಲೆಗಳಲ್ಲಿ ಮತದಾರರು ಈಗಾಗಲೇ ದೂರುಗಳನ್ನು ಸಲ್ಲಿಸಿದ್ದು, ಕೆಲವು ಪ್ರಕರಣಗಳಲ್ಲಿ ಎಫ್ಐಆರ್ಗಳೂ ದಾಖಲಾಗಿವೆ. ತಮ್ಮ ಹೆಸರು ಅಥವಾ ಮತದಾನದ ಹಕ್ಕಿನ ಮೇಲೆ ಪರಿಣಾಮ ಬೀರಿರುವುದನ್ನು ಗಮನಿಸಿದ ಬಳಿಕ ಮತದಾರರು ದೂರು ನೀಡಿದ್ದಾರೆ. ಕೆಲವು ರಾಜಕೀಯ ನಾಯಕರು ಹಿರಿಯ ನಾಯಕರಿಂದ ಫಾರ್ಮ್-7 ಅರ್ಜಿಗಳನ್ನು ಪಡೆದಿರುವುದಾಗಿ ಒಪ್ಪಿಕೊಂಡಿದ್ದಾರೆ.
ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರು ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಮುಖ್ಯ ಚುನಾವಣಾಧಿಕಾರಿ ಕಚೇರಿ ಮಣಿದಿದೆ. ಅರ್ಹ ಮತದಾರರಿಗೆ ನ್ಯಾಯ ಒದಗಿಸುವ ಭರವಸೆ ಸಿಕ್ಕಿದೆ. ಸೂಕ್ತ ತನಿಖೆ ಆಗದಿದ್ದರೆ ಮತ್ತೆ ಹೋರಾಟ ಮಾಡುತ್ತೇವೆ. ಇದರಲ್ಲಿ ವಿರೋಧ ಪಕ್ಷಗಳ ಕುತಂತ್ರವಿದೆ. ನಮ್ಮ ದಾಖಲೆಗಳನ್ನು ನೋಡಿ ಮುಖ್ಯ ಚುನಾವಣಾಧಿಕಾರಿ ಕಚೇರಿ ಅಚ್ಚರಿ ವ್ಯಕ್ತಪಡಿಸಿದೆ. ಇದು ನಾಡಿನ ಜನತೆ ನಮಗೆ ಕೊಟ್ಟಿರುವ ಹಕ್ಕು. 136 ಮಂದಿಯನ್ನು ಗೆಲ್ಲಿಸಿ ಇಡೀ ಜನರ ರಕ್ಷಣೆ ಮಾಡುವಂತೆ ಸೂಚಿಸಿದ್ದಾರೆ. ಆ ಪ್ರಕಾರ ನಾವು ಈ ನಾಡಿನ ಜನರ ಹಕ್ಕನ್ನು ರಕ್ಷಿಸಲು ಇಂದು ಹೋರಾಟ ಮಾಡಿದ್ದೇವೆ.
ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆದಿರುವ ಅತಿದೊಡ್ಡ ವಂಚನೆ. ಮುಖ್ಯ ಚುನಾವಣಾಧಿಕಾರಿ ಕಚೇರಿಯು ನಮ್ಮನ್ನು ಮನವೊಲಿಸಲು ಬಂದರೂ ನಾವು ಜಗ್ಗಲಿಲ್ಲ. ಮಹಾತ್ಮ ಗಾಂಧೀಜಿ ನಮಗೆ ಹೇಳಿಕೊಟ್ಟ ಮಾರ್ಗದಲ್ಲಿ ಚುನಾವಣಾ ಅಧಿಕಾರಿಗಳಿಗೆ ಅವರ ಕಚೇರಿಯಲ್ಲಿ ಕುಳಿತು ಅಕ್ರಮದ ಬಗ್ಗೆ ಮನದಟ್ಟು ಮಾಡಿಕೊಟ್ಟಿದ್ದೇವೆ. ಅವರಿಗೆ ಅಗತ್ಯ ದಾಖಲೆಗಳನ್ನು ನೀಡಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ.
ವಿಪಕ್ಷ ನಾಯಕರಾದ ಆರ್. ಅಶೋಕ್ ಅವರು 25,000 ಫಾರ್ಮ್-7 ಅರ್ಜಿಗಳನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ. ಅದು ಒಂದಾಗಿರಲಿ, ಹತ್ತಾಗಿರಲಿ, 25 ಸಾವಿರವಾಗಿರಲಿ ಅಥವಾ 25 ಲಕ್ಷವಾಗಿರಲಿ, ತನಿಖೆ ತನ್ನದೇ ಆದ ರೀತಿಯಲ್ಲಿ ನಡೆಯಲಿದೆ. ಈ ಅರ್ಜಿಗಳನ್ನು ಎಲ್ಲಿಂದ ಮುದ್ರಿಸಲಾಯಿತು..? ಹೇಗೆ ಮುದ್ರಿಸಲಾಯಿತು..? ಯಾರು ವಿತರಿಸಿದರು..? ಎಂಬುದು ನಮ್ಮ ಪ್ರಶ್ನೆ.
ನಾವು ಜನರ ಮತದಾನದ ಹಕ್ಕನ್ನು ರಕ್ಷಿಸಲು ಬದ್ಧರಾಗಿದ್ದೇವೆ. ಮುಖ್ಯ ಚುನಾವಣಾಧಿಕಾರಿ ಕಚೇರಿ ನೋಟಿಸ್ ನೀಡಿರುವ ಬಾಕಿ 35 ಲಕ್ಷ ಮತದಾರರಿಗೆ ಅಗತ್ಯ ದಾಖಲೆ ಒದಗಿಸಲು ಸರ್ಕಾರ ಬದ್ಧವಾಗಿದೆ. ರಾಜ್ಯದ ಪ್ರತಿಯೊಬ್ಬ ಅರ್ಹ ಮತದಾರನಿಗೂ ಮತದಾನದ ಹಕ್ಕು ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ.
- ಮುಖ್ಯ ಚುನಾವಣಾಧಿಕಾರಿ ಕಚೇರಿ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖ ಅಂಶಗಳು
SIR ಪ್ರಕ್ರಿಯೆಯಲ್ಲಿನ ಅಕ್ರಮಗಳು, ಮತದಾರರ ಹೆಸರು ಕೈಬಿಟ್ಟಿರುವುದು ಹಾಗೂ ಮತಗಳ್ಳತನದ ಆರೋಪಗಳ ಕುರಿತು ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಇಂದು ಭೇಟಿ ನೀಡಿ, ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಅವರ ಕಲಿಕೆಯ ಕುರಿತು ಪರಿಶೀಲನೆ ನಡೆಸಲಾಯಿತು.
#SocialWelfare#StudentHostel#KHMuniyappa
ಇಂದು ಬೆಂಗಳೂರಿನ ವಸಂತನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯಗಳ ರಾಜ್ಯ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶ್ರೀ ಹನುಮಂತ ಸಿಂಧೋಳ್ಳು ಅವರ ನೇತೃತ್ವದ ನಿಯೋಗವನ್ನು ಭೇಟಿ ಮಾಡಿ, ಅವರ ಪ್ರಮುಖ ಬೇಡಿಕೆಗಳ ಕುರಿತಾದ ಮನವಿ ಸಲ್ಲಿಸಿದರು.
#SocialWelfare#KHMuniyappa
#SPIRIT OF WIPRO RUN 2026
Together We Run Further
WIPRO RUN 2026
5 KM RUN
Health • Fitness • Inclusion • Impact
🌟 Run for Health. Run for Fitness. Run for a Better Tomorrow.
🤝 Togetherness • Team Spirit • Positive Energy
Every Step Counts. Every Run Creates an Impact.
Congratulations to shri Anant Nag received the prestigious Dadasaheb Phalke Award for 2024 at the 72nd National Film Awards ceremony Pride of Kannada film industry.
ಬೆಂಗಳೂರಿನಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದೆ.
ಸಭೆಯಲ್ಲಿ ರಾಜ್ಯದ ಪ್ರಸ್ತುತ ಬೆಳವಣಿಗೆಗಳು, ಜನಪರ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ನಾಡಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಸಹೋದ್ಯೋಗಿ ಸಚಿವರು, ಶಾಸಕರು ಹಾಗೂ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಯಿತು.
ಬೆಂಗಳೂರಿನ ಭೂಪಸಂದ್ರದಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಸಚಿವರೊಂದಿಗೆ ಭಾಗವಹಿಸಿದೆ.
#DKShivakumar#ByrathiSuresh#KHMuniyappa
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಮಾನ್ಯ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಹಾಗೂ ಶ್ರೀ ರಘುಮೂರ್ತಿ ಅವರ ಉಪಸ್ಥಿತಿಯಲ್ಲಿ, ಸರ್ಕಾರದ ಕಾರ್ಯದರ್ಶಿಗಳಾದ ಶ್ರೀ ಮೋಹನ್ ರಾಜ್ ಹಾಗೂ ಆಯುಕ್ತರಾದ ಶ್ರೀ ರಾಕೇಶ್ ಕುಮಾರ್ ಅವರೊಂದಿಗೆ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಲಾಯಿತು.
#KHMuniyappa#Mangalore#CabinetMeeting
ಇಂದು ಅರಸೀಕೆರೆಯಲ್ಲಿ ಜಗಜ್ಯೋತಿ ಬಸವಣ್ಣ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಲಾಯಿತು.
ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸ್ವಾಭಿಮಾನದ ಮೌಲ್ಯಗಳನ್ನು ಸಾರಿದ ಮಹನೀಯರ ಆದರ್ಶಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
#Arasikere
ಬೆಂಗಳೂರು ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ ವತಿಯಿಂದ ಆಯೋಜಿಸಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರೊಂದಿಗೆ ಚರ್ಚಿಸಲಾಯಿತು.
#KHMuniyappa#SocialWelfare#Karnataka#Education
ಎಸ್ಸಿಎಸ್ಪಿ/ಟಿಎಸ್ಪಿ ಅನುದಾನ: 2ನೇ ದಿನದ ಪರಿಶೀಲನಾ ಸಭೆ
2026-27ನೇ ಸಾಲಿನಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಅಡಿ ವಿವಿಧ ಇಲಾಖೆಗಳಿಗೆ ಒದಗಿಸಲಾಗುವ ಅನುದಾನ ಹಾಗೂ ಅದಕ್ಕೆ ಸಂಬಂಧಿಸಿದ ಕ್ರಿಯಾ ಯೋಜನೆಗಳ ಕುರಿತು 2ನೇ ದಿನ ಪರಿಶೀಲನಾ ಸಭೆ ನಡೆಸಲಾಯಿತು.
#SCSP#TSP#Karnataka#KHMuniyappa