साथियों, यह त्योहार का मौसम है, लेकिन इस समय आप कमरतोड़ महंगाई से जूझ रहे हैं।
सरकार को इसकी बिल्कुल भी चिंता नहीं, क्योंकि वह सिर्फ 'वोट चोरी' करना जानती है। 'वोट चोरी' बड़े पैमाने पर हुई है और अब भी हो रही है।
करोड़ों भारतीयों का मत देने का संवैधानिक हक खतरे में है। इसके लिए CEC ज्ञानेश कुमार ही जिम्मेदार है। उन्होंने यह सब कुछ प्रधानमंत्री और गृहमंत्री के कहने पर किया है।
सभी विपक्षी दलों की मांग है:
⦿ ज्ञानेश कुमार इस्तीफा दें
⦿ SIR प्रक्रिया को तत्काल रोका जाए
इसी सिलसिले में 1 नवंबर को नई दिल्ली के रामलीला मैदान में "वोट बचाओ, देश बचाओ" महारैली होगी।
आप सभी से अपील है कि संविधान और लोकतंत्र को बचाने के लिए, इस रैली में बढ़-चढ़कर हिस्सा लें और इस मुहिम को सफल बनाएं।
जय संविधान, जय हिंद 🇮🇳
#ChaloDilli
: कांग्रेस अध्यक्ष श्री @kharge
नरेंद्र मोदी को झूठ बोलने की आदत है। उन्होंने कहा था-
⦿ 100 दिन में काला धन वापल लाऊंगा
⦿ सबको 15-15 लाख रुपए दूंगा
⦿ किसानों की आमदनी दोगुना करुंगा
⦿ अर्थव्यवस्था को 5 ट्रिलियन डॉलर करुंगा
आज 2026 में इनका एक भी वादा पूरा नहीं हुआ है।
: कांग्रेस अध्यक्ष श्री @kharge
📍 पटना, बिहार
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವಂತೆ ಹಾಗೂ ಉತ್ತರ ಕರ್ನಾಟಕದಲ್ಲಿ ಕಬ್ಬು ಅರೆಯುವ ಹಂಗಾಮು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಒತ್ತಾಯಿಸಿದ್ದಾರೆ.
1. ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (MSP) ಪರಿಷ್ಕರಣೆ: ಪ್ರಸ್ತುತ ಪ್ರತಿ ಕೆ.ಜಿ.ಗೆ ₹31 ಇರುವ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು, ಹೆಚ್ಚುತ್ತಿರುವ ಕಬ್ಬು ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಪರಿಷ್ಕರಿಸಿ ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಮಾಡಬೇಕು.
2. ದೇಶೀಯ ಮತ್ತು ವಾಣಿಜ್ಯ ಸಕ್ಕರೆಗೆ ಪ್ರತ್ಯೇಕ ಬೆಲೆ ನಿಗದಿ: ಗೃಹಬಳಕೆದಾರರ ಹಿತಾಸಕ್ತಿ ಕಾಪಾಡುವುದರ ಜೊತೆಗೆ, ಬೃಹತ್ ಪ್ರಮಾಣದಲ್ಲಿ ಸಕ್ಕರೆ ಖರೀದಿಸುವ ವಾಣಿಜ್ಯ ಗ್ರಾಹಕರಿಗೂ ನ್ಯಾಯಯುತ ಬೆಲೆ ದೊರೆಯುವಂತೆ ಪ್ರತ್ಯೇಕ ಕನಿಷ್ಠ ಮಾರಾಟ ಬೆಲೆ ನಿಗದಿಪಡಿಸಬೇಕು.
3. ಎಥೆನಾಲ್ ಖರೀದಿ ನೀತಿಯಲ್ಲಿನ ನಿರ್ಬಂಧಗಳ ಮರುಪರಿಶೀಲನೆ: ಕಬ್ಬಿನ ರಸ, ಸಕ್ಕರೆ ಪಾಕ ಹಾಗೂ ಬಿ-ಹೆವಿ ಮೊಲಾಸಿಸ್ನಿಂದ ಉತ್ಪಾದಿಸುವ ಎಥೆನಾಲ್ ಖರೀದಿಗೆ ಸಂಬಂಧಿಸಿದ ನಿರ್ಬಂಧಗಳನ್ನು ಮರುಪರಿಶೀಲಿಸಿ, ನ್ಯಾಯಯುತ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು.
4. ಕಬ್ಬು ಆಧಾರಿತ ಎಥೆನಾಲ್ ಬೆಲೆ ಹೆಚ್ಚಳ: ಹೆಚ್ಚುತ್ತಿರುವ ಕಬ್ಬು ಉತ್ಪಾದನಾ ವೆಚ್ಚವನ್ನು ಪರಿಗಣಿಸಿ, ಕಬ್ಬಿನಿಂದ ಉತ್ಪಾದಿಸುವ ಎಥೆನಾಲ್ನ ಖರೀದಿ ಬೆಲೆಯನ್ನು ಹೆಚ್ಚಿಸಬೇಕು.
5. FRP ಮೂಲ ಸಕ್ಕರೆ ಇಳುವರಿ ದರವನ್ನು ಶೇ. 9.50ಕ್ಕೆ ಮರುಸ್ಥಾಪನೆ: ಕಡಿಮೆ ಸಕ್ಕರೆ ಇಳುವರಿ ಹೊಂದಿರುವ ಪ್ರದೇಶಗಳ ರೈತರ ಹಿತಾಸಕ್ತಿ ಕಾಪಾಡಲು, ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ನಿಗದಿಪಡಿಸುವ ಮೂಲ ಸಕ್ಕರೆ ಇಳುವರಿ ದರವನ್ನು ಶೇ. 9.50ಕ್ಕೆ ಮರುಸ್ಥಾಪಿಸಬೇಕು.
ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಕಬ್ಬಿನ ತೂಕದ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ಸಕ್ಕರೆ ಇಳುವರಿ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ರೈತರಿಗೆ ಹೆಚ್ಚುವರಿ ಆರ್ಥಿಕ ನೆರವು ಒದಗಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ, ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಆದಷ್ಟು ಶೀಘ್ರ ಈಡೇರಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಕಬ್ಬು ಬೆಳೆಗಾರರ ಹಿತಾಸಕ್ತಿ ರಕ್ಷಿಸುವುದು ಮತ್ತು ಅವರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದೊರಕಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವಂತೆ ಮಾಡಲು ಹಾಗೂ ಅವರ ಬದುಕಿನಲ್ಲಿ ಆರ್ಥಿಕ ಭದ್ರತೆ ಖಚಿತಪಡಿಸಲು ನಮ್ಮ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸಲಿದೆ.
A new chapter, a new way of sharing stories. ❤️
CPP Chairperson Smt. Sonia Gandhi ji makes her Instagram debut with the first look of Belonging: A Journey of Love, a story that explores love, duty, loss and the search for a place to call home.
A heartfelt journey that promises to stay with you.
https://t.co/wK8LK09GtH
In a small Greek restaurant in Cambridge my journey of love began.
Rajiv and I created a world filled with love, laughter and memories. On 10th November, I share that world with you.
ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ.
-ಶುಭವಾಗಲಿ
ಓಂ ರೇಣುಕಾಯೈ ನಮಃ | ಜಗಜ್ಜನನ್ಯೈ ನಮಃ
ಭಕ್ತ ರಕ್ಷಾಯೈ ನಮಃ | ಯಲ್ಲಮ್ಮ ದೇವ್ಯೈ ನಮಃ
ಇಂದು ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಪವಿತ್ರ ಕ್ಷೇತ್ರದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ.
ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಬೆಳಗಾವಿಯ ಸರ್ಕ್ಯೂಟ್ ಹೌಸ್ನಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಇಂದು ಎರಡನೇ ಸುತ್ತಿನ ಚರ್ಚೆ ನಡೆಸಿದೆ.
ಈ ಚರ್ಚೆಯಲ್ಲಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಶ್ರೀ ಲಕ್ಷ್ಮಣ್ ಸವದಿ, ಶ್ರೀ ಸಂತೋಷ್ ಲಾಡ್, ಶಾಸಕರಾದ ಶ್ರೀ ಯಶವಂತರಾಯಗೌಡ ಪಾಟೀಲ್, ಶ್ರೀ ಎನ್.ಎಚ್. ಕೋನರೆಡ್ಡಿ, ವಿವಿಧ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುವಂತೆ ಮಾಡುವುದು ನಮ್ಮ ಅಚಲ ನಿರ್ಧಾರ
ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜತೆ ಚರ್ಚೆ ಮಾಡಿದ್ದೇವೆ. ನಾವು ಕೇಂದ್ರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತೀರ್ಮಾನ ಮಾಡಲು ಸಾಧ್ಯವಿಲ್ಲ. ಸಕ್ಕರೆ ಎಂಎಸ್ಪಿ ಏರಿಕೆಯಾಗದೆ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪುವುದಿಲ್ಲ. ರೈತರು ಕಬ್ಬು ಅರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ರೈತರಿಗೆ ತೊಂದರೆಯಾಗುತ್ತದೆ.
ನಾನು ಆತುರದ ತೀರ್ಮಾನ ಮಾಡುವುದಿಲ್ಲ: 29ರಂದು ಕೇಂದ್ರ ಸರ್ಕಾರ ರಚಿಸಿರುವ ಸಮಿತಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಒಂದೇ ದಿನದಲ್ಲಿ ನಾನು ಆತುರದ ತೀರ್ಮಾನ ಮಾಡುವುದಿಲ್ಲ. ಮತ್ತೊಮ್ಮೆ ಸಕ್ಕರೆ ಕಾರ್ಖಾನೆ ಮಾಲೀಕರು, ಅಧಿಕಾರಿಗಳು, ಕೇಂದ್ರ ಸರ್ಕಾರ ಹಾಗೂ ಸಮಿತಿ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಇದಕ್ಕೆ ಸಹಕಾರ ನೀಡಿ ಎಂದು ನಾನು ರೈತರಿಗೆ ಮನವಿ ಮಾಡಿದ್ದೇನೆ.
ನಾವು ರೈತರ ಪರವಾಗಿರುವಾಗ ಪ್ರತಿಭಟನೆ ಯಾಕೆ? ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದೇನೆ, ಕೇಂದ್ರ ಸಚಿವರ ಜತೆಗೂ ಚರ್ಚಿಸುವೆ. ಮಹಾರಾಷ್ಟ್ರ ಸಿಎಂ ಅವರನ್ನು ಭೇಟಿ ಮಾಡುವೆ. ನಮ್ಮ ರಾಜ್ಯದವರೆಲ್ಲ ಸೇರಿ ಒಟ್ಟಾಗಿ ತೀರ್ಮಾನ ಮಾಡಬೇಕಿದೆ.
ಕಬ್ಬು ಅರೆಯಲು ಅವಕಾಶ ನೀಡಲು ರೈತರಿಗೆ ಮನವಿ: ಸಕ್ಕರೆ ಕಾರ್ಖಾನೆ ಆರಂಭ ವಿಚಾರವಾಗಿ ಮನವಿ ಮಾಡುತ್ತೇನೆ. ಕಬ್ಬು ಅರೆಯುವುದು ಆರಂಭವಾಗಲಿ. ಈಗಾಗಲೇ ಮಹಾರಾಷ್ಟ್ರದಲ್ಲಿ ಕಬ್ಬು ಅರೆಯುವುದು ಆರಂಭವಾಗಿದೆ. ನಮ್ಮ ಕಬ್ಬು ಬೆಳೆ ಮಹಾರಾಷ್ಟ್ರಕ್ಕೆ ಹೋಗುವುದಕ್ಕೆ ಅವಕಾಶ ನೀಡುವುದು ಬೇಡ. ಇದರಿಂದ ರೈತರು ಹಾಗೂ ಸರ್ಕಾರಕ್ಕೆ ತೊಂದರೆಯಾಗುತ್ತದೆ.
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ನಾವು ಮಹಾರಾಷ್ಟ್ರ ಸಿಎಂ ಜೊತೆ ಸೇರಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ. ಈ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಸಮಿತಿ ರಾಜ್ಯಕ್ಕೆ ಬಂದಾಗ ಅದರ ಮುಂದೆ ನಾನು ಬರುತ್ತೇನೆ, ಕಬ್ಬು ಬೆಳೆಗಾರರ ಪರವಾಗಿ ನಾನು ಮಾತನಾಡುತ್ತೇನೆ.
ಸಕ್ಕರೆ ಎಂಎಸ್ಪಿ ಹೆಚ್ಚಾಗುವವರೆಗೂ ನಾವು ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ. ಇದು ಆತುರ, ಆವೇಶದಲ್ಲಿ ನಿರ್ಧಾರ ತೆಗೆದುಕೊಳ್ಳುವ ವಿಚಾರ ಅಲ್ಲ. ನಿಮ್ಮ ಧ್ವನಿ ನನ್ನ ಧ್ವನಿಯಾಗುತ್ತದೆ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನ್ನ ಹಾಗೂ ಸರ್ಕಾರದ ಪರಿಸ್ಥಿತಿ ಅರಿಯಬೇಕು. ನಾವು ನಿಮ್ಮ ಪರವಾಗಿ ವಾದ ಮಾಡಲು ಸಿದ್ಧವಿದ್ದೇವೆ.
ನಿಮ್ಮ ಹೋರಾಟಕ್ಕೆ ಗೌರವ ನೀಡಿ ನಾನೇ ನಿಮ್ಮನ್ನು ಕಿತ್ತೂರಿನಲ್ಲಿ ಭೇಟಿ ಮಾಡಿದೆ. ಅಂದು ನಾನು ಎಲ್ಲರ ಜೊತೆ ಚರ್ಚೆ ಮಾಡಿ ನಿಮ್ಮ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೆ. ಅದರಂತೆ ಇಂದು ಸಭೆ ಕರೆದಿದ್ದೇನೆ. ಕಳೆದ ವರ್ಷ ಕಾರ್ಖಾನೆ ಮಾಲೀಕರ ಜತೆ ಚರ್ಚೆ ಮಾಡಿ 300 ರೂ. ನೀಡಲು ತೀರ್ಮಾನಿಸಿದೆವು. ನಿಮ್ಮ ಬೇಡಿಕೆ ತಪ್ಪಿಲ್ಲ. ಡೀಸೆಲ್, ರಸಗೊಬ್ಬರ, ಕೀಟನಾಶಕ ಬೆಲೆ ಹೆಚ್ಚಾಗಿದೆ. ಸಕ್ಕರೆ ಬೆಲೆ ಏರಿಕೆಯಾಗಿಲ್ಲ. ನಾವು ರಾಜಕಾರಣ ಮಾಡಿ ಜಗಳವಾಡಿದರೆ ಪರಿಹಾರ ಸಿಗಲ್ಲ.
ರೈತರ ಬದುಕಿನ ಬಗ್ಗೆ ನನಗೆ ಅರಿವಿದೆ. ನಿಮಗೆ ಸಹಾಯ ಮಾಡಬೇಕು ಎಂದು ಜನಪ್ರತಿನಿಧಿಗಳು ಬಂದಿದ್ದಾರೆ. ಕಬ್ಬು ಇಳುವರಿ ಹಾಗೂ ಸಕ್ಕರೆ ಉತ್ಪಾದನೆ ಕುಸಿದಿದೆ. ಎಥನಾಲ್ ಉತ್ಪಾದನೆಗೆ ಕಬ್ಬು ಬಳಸಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಇತ್ತ ಸಕ್ಕರೆ ಎಂಎಸ್ಪಿ ಏರಿಕೆಯಾದರೆ ನಾವು ನೀಡುತ್ತೇವೆ ಎಂದು ಕಾರ್ಖಾನೆ ಮಾಲೀಕರು ಹೇಳಿದ್ದಾರೆ. ಸರ್ಕಾರದ ಹಣಕಾಸಿನ ಪರಿಸ್ಥಿತಿ ನೋಡಿ ಬೇಡಿಕೆ ಇಡಬೇಕು. ಇಂದೇ ಸಿಹಿ ಸುದ್ದಿ ನೀಡಿ ಎಂದರೆ ಎಲ್ಲಿಂದ ಹಣ ನೀಡೋಣ?
- ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಪ್ರತ್ಯೇಕವಾಗಿ ನಡೆಸಿದ ಸಭೆಗಳು, ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಸಭೆಗಳು ಹಾಗೂ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯ ಪ್ರಮುಖ ಅಂಶಗಳು.