ಸಿಎಂ ಕುರ್ಚಿ ನನ್ನದಲ್ಲ, ಜನರದ್ದು
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ಮೊದಲ ಸಚಿವ ಸಂಪುಟ ಸಭೆ ನಡೆಸಿ, ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಾಯಿತು.
ಸಿಎಂ ಕುರ್ಚಿ ಈ ಡಿ. ಕೆ. ಶಿವಕುಮಾರನದ್ದಲ್ಲ, ಇದು ಜನರ ಕುರ್ಚಿ. ಜನರು ಕೊಟ್ಟಿರುವ ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ. ನನ್ನ ವೈಯಕ್ತಿಕ ವಿಚಾರ ಬದಿಗೊತ್ತಿ, ರಾಜ್ಯದ ಜನರ ಸೇವೆಗೆ ಸಂಕಲ್ಪ ಮಾಡಿ ಈ ಅಧಿಕಾರ ಸ್ವೀಕರಿಸಿದ್ದೇನೆ.
'ಹಿಂದಿನ ಹೆಜ್ಜೆಗಳನ್ನು ಮರೆತವನು ಮುಂದಿನ ಹೆಜ್ಜೆ ಇಡಲಾರ' ಎಂಬ ಮಾತನ್ನು ನಂಬಿರುವವನು ನಾನು. ನಾವು ನಮ್ಮ ಬೇರು ಮರೆತರೆ ಫಲ ಸಿಗುವುದಿಲ್ಲ ಎಂದು ಹೇಳುತ್ತಿರುತ್ತೇನೆ. ಇಂದು ಹೊಸ ದಿನ. ಹೊಸ ಕೆಲಸ ಮಾಡಿ, ಹೊಸ ಅವಕಾಶಗಳನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯದ ಜನತೆ ನೀಡಿದ್ದಾರೆ.
ರಾಜ್ಯದ ಜನತೆಗೆ ನನ್ನ ಮೇಲೆ ಅಪಾರ ವಿಶ್ವಾಸ ಇದೆ. ಹಿಂದೆ ಅನೇಕ ಟೀಕೆ, ಹೊಗಳಿಕೆ ವ್ಯಕ್ತವಾಗಿರಬಹುದು. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ನಾನು ಹೇಳಿದ್ದೆ. ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಿಸಲು ನನ್ನ 40 ವರ್ಷಗಳ ರಾಜಕೀಯ ಅನುಭವದಲ್ಲಿ ಪ್ರಯತ್ನ ಮಾಡುತ್ತೇನೆ. ನಾನು ಭರವಸೆಗಳ ಮೇಲೆ ಬದುಕಿದೆ. ಇದೇ ವಿಶ್ವಾಸ ಮತ್ತೆ ರಾಜ್ಯದ ಜನರ ಸೇವೆ ಮಾಡಿ, ಸಾಕ್ಷಿಗುಡ್ಡೆ ಬಿಟ್ಟು ಹೋಗಲು ಅವಕಾಶ ಸಿಕ್ಕಿದೆ.
ಈ ಸರ್ಕಾರದ ಪ್ರತಿ ತೀರ್ಮಾನ ಕೇವಲ ಶಿವಕುಮಾರ್ ತೀರ್ಮಾನ ಮಾತ್ರವಲ್ಲ. ಸಾಮೂಹಿಕ ತೀರ್ಮಾನವಾಗಿರುತ್ತದೆ.
ರಾಜ್ಯದ ಅಭಿವೃದ್ಧಿಗೆ ಹೊಸ ರೂಪ - ಹೊಸ ವೇಗ ನೀಡುವ ನನ್ನ ಸಂಕಲ್ಪಕ್ಕೆ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುನ್ನುಡಿ ಬರೆದಿದ್ದೇನೆ.
ರಾಜ್ಯದ ಜನರ ಸರ್ವತೋಮುಖ ಪ್ರಗತಿಯ ಭರವಸೆಯನ್ನಿತ್ತು ಅಧಿಕಾರಕ್ಕೆ ಬಂದಿರುವ ನಾವು ಜನತೆ ಕೊಟ್ಟ ಈ ಅವಕಾಶವನ್ನು ಅಧಿಕಾರವೆಂದು ಭಾವಿಸದೆ, ಸೇವೆಯ ಭಾಗ್ಯವೆಂದು ತಿಳಿದು ಈ ಎಲ್ಲಾ ನೂತನ ಕಾರ್ಯಕ್ರಮಗಳನ್ನು ನಾಡಿಗೆ ಜನತೆಗೆ ಅರ್ಪಿಸುತ್ತಿದ್ದೇನೆ.
* ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಎಲ್ಲಾ ಹಂತದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಸಂಬಂಧಪಟ್ಟ ಅರ್ಜಿ ವಿತರಣೆಯ ಬಗ್ಗೆ ಸಾರಿಗೆ ಇಲಾಖೆಯು ಸದ್ಯದಲ್ಲಿಯೇ ಕ್ರಮ ಕೈಗೊಳ್ಳಲಿದೆ.
* ರಾಜ್ಯದಲ್ಲಿ ಉದ್ಯೋಗದ ಸಮಸ್ಯೆಯನ್ನು ನೀಗಿಸುವ ದಿಸೆಯಲ್ಲಿ ಸರ್ಕಾರ, ಈಗಾಗಲೇ 56,000 ಹುದ್ದೆಗಳನ್ನು ಭರ್ತಿಗೊಳಿಸುವ ನಿರ್ಣಯವನ್ನು ಕೈಗೊಂಡಿದೆ. ಈ ಬಗ್ಗೆ ಎಲ್ಲಾ ತೊಡಕುಗಳನ್ನು ನಿವಾರಿಸಿ ನೇಮಕಾತಿ ಪ್ರಕ್ರಿಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಕರ್ನಾಟಕ ರಾಜ್ಯವು ಗುಣಮಟ್ಟದ ಮಾನವಸಂಪನ್ಮೂಲದಲ್ಲಿ ಭಾರತದ ರಾಜಧಾನಿಯೆಂದೇ ಹೆಸರು ಗಳಿಸಿದೆ. ಶಿಕ್ಷಣ, ಆರೋಗ್ಯ, ತಂತ್ರಜ್ಞಾನ, ಐಟಿ ಬಿಟಿ ಸೇರಿದಂತೆ ವಿವಿಧ ವಲಯಗಳಲ್ಲಿ ಕರ್ನಾಟಕದಿಂದ ಶ್ರೇಷ್ಠ ಮಾನವಸಂಪನ್ಮೂಲ ಮೂಡಿಬಂದಿದೆ. ಖಾಸಗಿ ರಂಗದಲ್ಲಿ ಉದ್ಯೋಗ ಬಯಸುವ ಯುವಜನರಿಗೆ ಹಾಗೂ ಖಾಸಗಿ ಕಂಪನಿಗಳ ಉದ್ಯೋಗದ ಬೇಡಿಕೆಗಳ ನಡುವೆ ಸಂಪರ್ಕ ಕಲ್ಪಿಸುವ 'ಯುವ ಉದ್ಯೋಗ ಸೇತು' ವ್ಯವಸ್ಥೆಯನ್ನು ರೂಪಿಸಲು ನಿರ್ಣಯಿಸಲಾಗಿದೆ.
ಈ ಸೌಲಭ್ಯ ಕೇಂದ್ರದಲ್ಲಿ ಕಂಪನಿಗಳಿಗೆ ಅಗತ್ಯವಿರುವ ತರಬೇತಿಯನ್ನೂ ನೀಡಿ, ಅಲ್ಲಿನ ಅಭ್ಯರ್ಥಿಗಳನ್ನು ಕಂಪನಿಗಳಿಗೆ ಆಯ್ಕೆ ಮಾಡಲಾಗುವುದು. ಕರ್ನಾಟಕದವರಿಗೆ, ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಪಾಲು ನೀಡಲಾಗುವುದು. ಕನ್ನಡಿಗರಿಗೆ ನೀಡಬೇಕಾದ ಉದ್ಯೋಗದ ಶೇಕಡಾವಾರನ್ನು ಕಂಪನಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು.
ಈ ರಾಜ್ಯದ ಯುವಕರು, ವಿದ್ಯಾರ್ಥಿಗಳು, ನಿರುದ್ಯೋಗಗಳ ಉದ್ಯೋಗದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಇಲ್ಲಿನ ಯುವಕರನ್ನು ಜಾಗತಿಕ ಮಟ್ಟದಲ್ಲಿ ತಯಾರು ಮಾಡುವ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದ್ದು, ತಿಂಗಳೊಳಗೆ ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು. ಎಲ್ಲವೂ ಆನ್ ಲೈನ್ ಮೂಲಕ ಲಭ್ಯವಾಗಲಿದೆ.
* 10,000 ಭಾರತ ಜೋಡೋ ಯುವಕ ಸಂಘ ರಚಿಸಲು ತೀರ್ಮಾನಿಸಲಾಗಿದ್ದು, ಪ್ರತಿ ಪಂಚಾಯತಿಗೂ ಒಂದು ಯುವಕ ಸಂಘ ರಚಿಸುತ್ತೇವೆ. ಸಂಘದಲ್ಲಿ ಕನಿಷ್ಠ 150 ರಿಂದ 200 ಜನರಿರುತ್ತಾರೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಯುವಕ ಸಂಘಗಳು ಕೈಗೊಳ್ಳುವುದಲ್ಲದೇ ನಾಯಕತ್ವ ಬೆಳವಣಿಗೆಗೆ, ಸಾಮಾಜಿಕ ಸಾಮರಸ್ಯ ಕಾಪಾಡಲು ಶ್ರಮಿಸಲಿವೆ. ಅವರ ಪ್ರತಿಭೆಗೂ ಇಲ್ಲಿ ಅವಕಾಶ ದೊರೆಯಲಿದೆ. ಭಾರತ ಜೋಡೋ ಯುವಕ ಸಂಘಗಳಿಗೆ ಸರ್ಕಾರ ತಲಾ 10 ಲಕ್ಷ ರೂ.ಗಳ ಅನುದಾನ ನೀಡಲಿದೆ.
* ಬೆಂಗಳೂರು ನಗರದಲ್ಲಿ ವಿದ್ಯುತ್ ಸಮಸ್ಯೆ ಇದ್ದು, 2500 ಅಡಿ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಒಸಿ (OC) ಮತ್ತು ಸಿಸಿ (CC) ಪಡೆಯುವುದರಿಂದ ಒಂದು ಬಾರಿ ಮಾತ್ರ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ.
* ಬಿ ಖಾತೆಯನ್ನು ಎ ಖಾತೆಯಾಗಿ ಪರಿವರ್ತಿಸುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ಆರನೇ ಗ್ಯಾರಂಟಿಯಾದ ಭೂ ಗ್ಯಾರಂಟಿಗೆ ಸೂಕ್ತ ದಾಖಲೆ ಮಾಡಿಕೊಡಲು ತೀರ್ಮಾನಿಸಲಾಗಿದೆ.
* ನಗರ ಮೂಲಸೌಕರ್ಯವನ್ನು ಉತ್ತಮಗೊಳಿಸಲು, ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಹೊರತುಪಡಿಸಿ ಜಿಬಿಎ, ಬಿಡಿಎ ವ್ಯಾಪ್ತಿ ಸೇರಿ ಕೇವಲ ರಸ್ತೆಗಳನ್ನು ಉತ್ತಮಪಡಿಸಲು 2000 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.
- ಮುಖ್ಯಮಂತ್ರಿ ಶ್ರೀ @DKShivakumar
@BasanagoudaBJP ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಪಕ್ಷಾತೀತವಾಗಿ ಕೇಲವು ತಾಲೂಕು/ ಜಿಲ್ಲೆಗಳಲ್ಲಿ ಕೇವಲ ಒಂದೇ ಕುಟುಂಬ ಸ್ವಾತಂತ್ರ್ಯ ನಂತರದಿಂದ ಇಲ್ಲಿಯವರೆಗೂ ಅವರುಗಳೆ ಪಂಚಾಯತ್ ಅಧ್ಯಕ್ಷದಿಂದ ಶಾಸಕ ಸಚಿವ ಸಂಸದ ಸ್ಥಾನವನ್ನು ಅಕ್ರಮಿಸಿಕೊಂಡಿದ್ದಾರೆ ಯಾವುದೇ ಶೈಕ್ಷಣಿಕ ಅರ್ಹತೆಗಳಿಲ್ಲದೆ. ವಿಪರ್ಯಾಸವೆಂದರೆ ಇವರಿಗೆ ಮತದಾನ ಮಾಡುವವರು ಬೀದಿಯಲ್ಲಿದ್ದಾರೆ
@RAshokaBJP@DrParameshwara@BJP4Karnataka ನಿಮಗೆ ನಾಚಿಕೆ ಆಗಬೇಕು ನೇರವಾಗಿ ಕೇಂದ್ರ ಗೃಹ ಸಚಿವರಿಗೆ ತನಿಖೆ ಮಾಡಲು ಒತ್ತಾಯ ಮಾಡೊದು ಬಿಟ್ಟು ಟ್ವೀಟ್ ಮಾಡುವುದು ಅಷ್ಟೇ ನಿಮ್ಮ ಹೊಂದಾಣಿಕೆ ರಾಜಕೀಯ
ಕಾಂಗ್ರೆಸ್ ಪಕ್ಷದಿಂದ 7-8 ಬಾರಿ ಶಾಸಕರಾದವರು ಇಲ್ಲಿಯವರೆಗೂ ಉತ್ತರ ಕರ್ನಾಟಕದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ.
- ಶ್ರೀ ಶರಣಗೌಡ ಕಂದಕೂರ್, ಶಾಸಕರು, ಗುರುಮಿಠಕಲ್ ವಿಧಾನಸಭಾ ಕ್ಷೇತ್ರ
@Bhavyanmurthy ಮೇಡಂ ರಿ ನೀವು 2022 ರ ಟೈಮ್ ಅಲ್ಲಿ ವಿದ್ಯಾರ್ಥಿಗಳ ಜೊತೆ ಇದ್ದು ಹೋರಾಟಕ್ಕೆ ಬಂದಿದ್ರೆ ನೇಮಕಾತಿ ಮಾಡಿ ಅಂತಾ ಈಗ ಎಲೆಕ್ಷನ್ಸ್ ಎಲ್ಲಾ ನೀವು ಗೆದ್ದು ಆಯ್ತು ಅಲ್ವಾ ಹೋರಾಟಕ್ಕೆ ಬರಲ್ಲ ಬಟ್ Notifications ಮಾಡಿಸಿ ಅಂತಾ ಅದ್ರು ಹೇಳಿ ನಿಮ್ಮ ಸರ್ಕಾರಕ್ಕೆ
@Bhavyanmurthy ಬಿಜೆಪಿ ಅಧಿಕಾರದಲ್ಲಿ ಇದ್ದಾಗ ದಿನಬೆಳಗಾದರೂ ಭ್ರಷ್ಟಾಚಾರ ನಿರುದ್ಯೋಗ ಅದು ಇದು ಎಂದು ದೊಡ್ಡ ದೊಡ್ಡ ಭಾಷಣ ಮಾಡುತ್ತಿದ್ದ ತಾವು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಮಾಡಿಲ್ಲ ಎರಡುವರೆ ವರ್ಷಗಳಾದರೂ ಇದರ ಬಗ್ಗೆ ಮಾತನಾಡಿ
@Bhavyanmurthy ಕರ್ನಾಟಕದ ಸ್ಪರ್ಧಾರ್ಥಿಗಳು ಬೀದಿಯಲ್ಲಿ ನಿಂತಿದ್ದಾರೆ ಈಗ ನಿಮ್ಮದೆ ಸರ್ಕಾರ ವಿದೆ ಬಿಜೆಪಿ ಇದ್ದಾಗ ಪ್ರತಿನಿತ್ಯ ಹೋರಾಡ ಮಾಡುತ್ತಿದ್ದ ನೀವು ಈಗ ಯಾಕೆ ಕಣ್ಮರೆಯಾಗಿದ್ದೀರಾ?
@Madhu_Bangarapp ಪುಣ್ಯಾತ್ಮರೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಾತಿ ಮಾಡಪ್ಪ, ನಿಮ್ಮ ಉಚಿತ ಗಿಚಿತ ಏಕೆ? ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ಖಾಯಂ ಶಿಕ್ಷಕರ ನೀಡಿ ಅಲ್ಲಿಗೆ ಯಾವ ಉಚಿತ ಬೇಕಾಗಿಲ್ಲ