ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸಹಾಯಕ ನಿರ್ದೇಶಕರು (ಗ್ರಾ.ಉ) ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ ನರೇಗಾ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.
*ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ರವರಿಂದ ನರೇಗಾ ಕೆಲಸಗಳ ಪರಿಶೀಲನೆ*
ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಹೊನ್ನಯ್ಯ ಜಿ.ಕೆ ರವರು ಇಂದು ಗೌರಿಬಿದನೂರು ತಾಲ್ಲೂಕಿನ ನಕ್ಕಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಸಾಪುರ ಗ್ರಾಮಕ್ಕೆ ಭೇಟಿ ನೀಡಿ, ಕಾಲುವೆ ಹೂಳೆತ್ತುವ ಕಾಮಗಾರಿಯನ್ನು ಪರಿಶೀಲಿಸಿದರು.
ಈ ವೇಳೆ ನರೇಗಾ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿ ತಕ್ಷಣ ಬಗೆಹರಿಸಿದರು.
ಈ ಕಾಮಗಾರಿಯಲ್ಲಿ ಒಟ್ಟು 48 ಜನ ನರೇಗಾ ಕೂಲಿ ಕಾರ್ಮಿಕರು ತೊಡಗಿಸಿಕೊಂಡಿದ್ದು, ಅವರಿಗೆ ನರೇಗಾ ಯೋಜನೆ ಅಡಿಯಲ್ಲಿ ಇನ್ನಷ್ಟು ಕೆಲಸಗಳು ಹಾಗೂ ವೈಯಕ್ತಿಕ ಅನುಕೂಲಕರ ಕಾಮಗಾರಿಗಳನ್ನು ಕೂಡಾ ಪಡೆಯಲು ಪ್ರೋತ್ಸಾಹಿಸಲಾಯಿತು.
ಮಕ್ಕಳಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್), ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
*ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಬೇವಿನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ – ಚರಂಡಿ ಸ್ವಚ್ಛತೆ ಹಾಗೂ ಶಾಲಾ–ಅಂಗನವಾಡಿ ಪರಿಶೀಲನೆ*
ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಹೊನ್ನಯ್ಯ ಜಿ.ಕೆ ರವರು ಇಂದು ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಮಲ್ಲೆಕೆರೆ ಗ್ರಾಮಕ್ಕೆ ಭೇಟಿ ನೀಡಿ,
ಎಸ್.ಸಿ ಮತ್ತು ಎಸ್.ಟಿ ಕಾಲೋನಿಗಳಲ್ಲಿನ ಚರಂಡಿ ಸ್ವಚ್ಛತಾ ಕಾರ್ಯಗಳ ಸ್ಥಿತಿಯನ್ನು ಪರಿಶೀಲಿಸಿದರು.
ನಂತರ ಅವರು ಗ್ರಾಮದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಶಾಲೆ ಮತ್ತು ಅಂಗನವಾಡಿಯ ಮೂಲಭೂತ ಸೌಕರ್ಯಗಳು, ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಹಾಗೂ
ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಅವಶ್ಯಕ ವಸ್ತುಗಳ ಕಿಟ್ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವರು ಉಪಸ್ಥಿತರಿದ್ದರು
*ಗೌರಿಬಿದನೂರು ತಾಲ್ಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಿಟ್ ವಿತರಣೆ ಕಾರ್ಯಕ್ರಮ*
ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಹೊನ್ನಯ್ಯ ಜಿ.ಕೆ ರವರು ಇಂದು ಗೌರಿಬಿದನೂರು ತಾಲ್ಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
*ಶ್ರೀ ಅತಿಕ್ ಪಾಷಾ ಮಾನ್ಯ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ರವರಿಂದ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿಗಳ ಪರಿಶೀಲನೆ*
ಮಾನ್ಯ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ, ನೋಡಲ್ ಅಧಿಕಾರಿಗಳಾಗಿ ದತ್ತು ಪಡೆದಿರುವ ಮಂಚೇನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದರು
ತೊಂಡೇಬಾವಿ, ಬೇವಿನಹಳ್ಳಿ, ಹೊಸೂರು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದರು.
ನಂತರ ಕಾಯಕ ಗ್ರಾಮ ಪಂಚಾಯಿತಿಗಳಾಗಿ ಆಯ್ಕೆ ಆಗಿರುವ ಇಡಗೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚತಂತ್ರ 2.0 ರಾಂಕಿಂಗ್ ಹಾಗೂ DCB, E-KYC ಮತ್ತು ಇತರೆ ಯೋಜನೆಗಳ ಪ್ರಗತಿ ಕುರಿತು ಪರಿಶೀಲಿಸಿದರು.
*ಜಿಲ್ಲಾ ಪಂಚಾಯತ್ ಸಿಇಒ ಡಾ|| ನವೀನ್ ಭಟ್ ರವರಿಂದ ಗೌಡಗೆರೆ ಬಳಿಯ MRF ಘಟಕ ಕಾಮಗಾರಿ ಪರಿಶೀಲನೆ*
ಮಂಚೇನಹಳ್ಳಿ ತಾಲ್ಲೂಕಿನ ಗೌಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ನಿರ್ಮಾಣವಾಗುತ್ತಿರುವ ವಸ್ತು ಪುನಸ್ಸಂದನಾ ಘಟಕ (Material Recovery Facility – MRF)ದ ಕಾಮಗಾರಿ ಸ್ಥಳಕ್ಕೆ
ಈ ಸಂದರ್ಭದಲ್ಲಿ ಶ್ರೀ ಹೊನ್ನಯ್ಯ ಜಿ.ಕೆ, ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ರವರು ಹಾಗೂ ಕಾರ್ಯಪಾಲಕ ಅಭಿಯಂತರರು( EE) ಶ್ರೀ ರಾಮಕೃಷ್ಣಪ್ಪ ರವರು, ಸಹಾಯಕ ಕಾರ್ಯಪಾಲಕ ಅಭಿಯಂತರರು
(AEE) ಲೋಕೇಶ್, JE ,ಪಂ.ರಾಜ್, ಸಹಾಯಕ ನಿರ್ದೇಶಕರು ಬಾಲಕೃಷ್ಣ , ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, SBMG ಜಿಲ್ಲಾ ಸಮಾಲೋಚಕರು ಮತ್ತು
*ಕಸದ ರಾಶಿ ತುಂಬಿದ ಸ್ಥಳಕ್ಕೆ ಸುಂದರ ಸ್ಪರ್ಷ*
ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ
ಕಸದ ರಾಶಿಯನ್ನು ಮುಕ್ತಗೊಳಿಸುವ ಸಲುವಾಗಿ ಸ್ವಚ್ಛತೆಯೆಂಬ ದಿಟ್ಟ ಹೆಜ್ಜೆಯನ್ನು ಇಡಲಾಗಿದೆ.
ಗೌರಿಬಿದನೂರು ತಾಲ್ಲೂಕಿನ ನಾಮಗೊಂಡ್ಲು ಗ್ರಾಮ ಪಂಚಾಯತಿ ನಾಮಗೊಂಡ್ಲು ಗ್ರಾಮದ ಕಸದ ರಾಶಿಯಿರುವ ಸ್ಥಳಗಳನ್ನು ಗುರುತಿಸಿದ್ದು
ಸ್ವಚ್ಛತಾ ಇ ಸೇವಾ ಆಂದೋಲನದಲ್ಲಿ ಮೂಲಕ ಸ್ವಚ್ಛತೆಯನ್ನು ಕೈಗೊಂಡು ಅಂತಹ ಕಸ ಹಾಕುವ ಜಾಗಗಳನ್ನು ಸ್ವಚ್ಛ ಮತ್ತು ಸುಂದರವಾಗಿ ಮರು ನಿರ್ಮಾಣ ಮಾಡಿ ಅಲ್ಲಿ ಮತ್ತೆ ಕಸ ಹಾಕದೆ ದಂಡಪಾಲಕ ಮತ್ತು ಸಸಿಗಳನ್ನು ಹಾಕಿ ಸುಂದರವಾಗಿ ಪರಿವರ್ತಿಸಲಾಗಿದೆ.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು( ಪಂಚಾಯತ್ ರಾಜ್), ಗ್ರಾಮ ಪಂಚಾಯತಿ ಅಧ್ಯಕ್ಷರು ,
ಸದರಿ ಕಾರ್ಯಕ್ರಮದಲ್ಲಿ ಕಲಾ ತಂಡದವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಿಗುವಂತಹ ಸೌಲಭ್ಯಗಳ ಬಗ್ಗೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು.
ತದನಂತರ ಮನೆ ಮನೆಗೆ ಭೇಟಿ ನೀಡಿ ಕರ ಪತ್ರಗಳನ್ನು ನೀಡಿ ಪ್ರಚಾರಪಡಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಕೊತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸದಸ್ಯರು, ಅಧಿಕಾರಿ, ಸಿಬ್ಬಂದಿ ವರ್ಗದವರು,