Thinking of buying property in Bengaluru? 🏡
I'm your go-to expert for:
🔍 Raja Kaluve (Stormwater drain) checks
🌊 Flood risk assessment
⚠️ Buffer zone cross-verification
Don’t make a costly mistake — DM me before you buy! 💬
#BengaluruRealEstate#Compliance
■ Figure Says it all ■
#Karnataka PSU KSDL Record Turnaround in 2 Years , ever since Ind Minister @MBPatil took over 👏
Growth From 2022-23 to 2024-25 :
●Revenue: ₹1127 Cr to ₹1700 Cr (51 % ⬆️)
●Profit:₹182 Cr to ₹451 Cr (147% ⬆️)
●Dividend:₹54Cr to₹135Cr(150% ⬆️)
Wishing you a Happy Deepavali!🥰💥
ಬೆಳಕಿನ ಹಬ್ಬ ದೀಪಾವಳಿಯ ಶುಭ ಹಾರೈಕೆಗಳನ್ನು ತಿಳಿಸುತ್ತಾ, ಸಂಭ್ರಮದಿಂದ ಆಚರಿಸಿ ಎಂದು ಕೋರುತ್ತೇವೆ. ಹಬ್ಬಕ್ಕೆ ಏನು ಸ್ಪೆಷಲ್?👀
#BengaluruBulls#FullChargeMaadi#GooliKano
ಹತ್ತು ಲಕ್ಷದ ಈ ಸೇನೆಗೆ ನಾವು ಆಭಾರಿ!💛❤️
A million reasons to smile, a million reasons to celebrate, and 1️⃣0️⃣0️⃣0️⃣0️⃣0️⃣0️⃣ voices chanting #FullChargeMaadi!⚡️
Our Instagram family, is now 1M strong and still growing. Thank you for all your love and support!
#BengaluruBulls#GooliKano
ಬೆಂಗಾಲ್ ವಾರಿಯರ್ಸ್ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ಗೂಳಿಪಡೆ!💛❤️
A 30 point victory over the Bengal Warriorz for the Bulls, our biggest win of the season!
#BengaluruBulls#FullChargeMaadi#GooliKano
ನಿಜವಾದ ಬಸವಣ್ಣರ ಅನುಯಾಯಿ
ಅಭಿವೃದ್ಧಿ ಹರಿಕಾರ
ನವ ಕರ್ನಾಟಕ ಕನಸುಗಾರ
ಬದ್ಧತೆ,ಶ್ರದ್ದೆ ಇರುವ ಜನ ನಾಯಕ
ಭವಿಷ್ಯದ ಚಿಂತಕ
ಮುಂದಿನ ಕರ್ನಾಟಕ ಮುಖ್ಯಮಂತ್ರಿ
ಎಂ ಬಿ ಪಾಟೀಲ ಸರ್ ಗೆ ಹುಟ್ಟುಹಬ್ಬದ ಶುಭಾಶಯಗಳು.
ನಿಮಗೆ ಆರೋಗ್ಯ,ಆಯುಷ ಕೊಟ್ಟು ಆ ದ್ಯಾವ್ರು ಕಾಪಾಡಲಿ.
@MBPatil@INCKarnataka
He is not just a politician...
He is a visonary and a true worker. A person way different from others, someone who has all the potential to transform North Karnataka ✨
Wishing a happiest birthday @MBPatil avare 💛❤️
Never stop your good work 👏
ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ.
ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ.
- ಮುಖ್ಯಮಂತ್ರಿ @siddaramaiah
ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ.
ನಮ್ಮಲ್ಲಿ ಅನೇಕ ಜಾತಿ, ಅನೇಕ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು.
ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ - ಬದ್ಧತೆ ಇಟ್ಟುಕೊಂಡಿದ್ದೇನೆ.
ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ.
ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ.
ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ.
ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ.
ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ.
ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು.
- ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ @siddaramaiah ಅವರ ಮಾತುಗಳು
#Basaveshwara
ರಾಜ್ಯದ ಪ್ರಥಮ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿಯವರ ಹೆಸರಿಟ್ಟವರು ಸಿದ್ದರಾಮಯ್ಯನವರು. ವಿರಕ್ತ ಮಠಗಳಲ್ಲಿಯೇ ಬಸವಣ್ಣನವರ ಭಾವಚಿತ್ರ ಕಾಣೆಯಾಗಿರುವ ಹೊತ್ತಿನಲ್ಲಿ ಸರ್ಕಾರದ ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರ ಹಾಕಬೇಕು ಎಂದು ಆದೇಶ ಮಾಡಿದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು.
- ಎಸ್.ಎಂ.ಜಾಮದಾರ, ನಿವೃತ್ತ ಐಎಎಸ್ ಅಧಿಕಾರಿ
ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹13,000 ಕೋಟಿ ಅನುದಾನ ನೀಡಿದ್ದೇವೆ. ಈ ಹಣ ಕೊಟ್ಟಿದ್ದೂ ನಮ್ಮದೇ ಸರ್ಕಾರ. ಕೃಷ್ಣಾ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ರೂಪಾಯಿ ಪರಿಹಾರ ಕೊಡ್ತಾ ಇರುವುದೂ ಇದೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ.
ನುಡಿದಂತೆ ನಡೆದ ಯಾವುದಾದರೂ ಸರ್ಕಾರ ಇದ್ದರೆ ಅದು ನಮ್ಮ ಸರ್ಕಾರ. ಬಿಜೆಪಿ ತನ್ನ ಅವಧಿಯಲ್ಲಿ ಒಂದೇ ಒಂದು ಮನೆ ಕೊಡಲಿಲ್ಲ. ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಈ ಕಾರಣಕ್ಕೆ ನಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೊಟ್ಟೆಕಿಚ್ಚು ಪಡುತ್ತಿದ್ದಾರೆ.
ನಾವು ಎರಡು ವರ್ಷದಲ್ಲಿ ಒಂದು ಲಕ್ಷ ಕೋಟಿ ಹಣವನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ. ಇದರಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಜನರ ತಲಾ ಆದಾಯ ಹೆಚ್ಚಾಗಿ ರಾಜ್ಯದ ಆರ್ಥಿಕತೆ ಪ್ರಗತಿ ಕಂಡಿದೆ. ಈ ಬಗ್ಗೆ ಸಾಕಷ್ಟು ವರದಿಗಳು ಬಂದಿವೆ.
ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಕನ್ನಡಿಗರೇ ನಂಬರ್ ಒನ್. ಇದು ನಮ್ಮ ಸರ್ಕಾರದ ಆರ್ಥಿಕ ಸಾಧನೆ. ತೆರಿಗೆ ಪಾವತಿಯಲ್ಲಿ ರಾಜ್ಯ ಇಡೀ ದೇಶದಲ್ಲಿ ನಂಬರ್ ಟು ಇದ್ದೇವೆ. ಇದು ನಮ್ಮ ಸರ್ಕಾರದ ಜಾತ್ಯತೀತ ಸಾಧನೆ.
ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದವರ ಪ್ರಗತಿಗಾಗಿ ಯೋಜನೆ ರೂಪಿಸಿದೆವು ಹೀಗಾಗಿ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಸೇರಿ ರಾಜ್ಯದ ಆರ್ಥಿಕತೆಯನ್ನು ಪ್ರಗತಿಗೆ ಕೊಂಡೊಯ್ದಿದ್ದಾರೆ. 1/2
- ಮುಖ್ಯಮಂತ್ರಿ @siddaramaiah
#Koppala
ಹನುಮಂತ ಎದೆ ಸೀಳಿ ನಿಂತಿರುವ ಫೋಟೋವನ್ನು ನೀವು ನೋಡಿರುತ್ತೀರಿ. ಅದರಲ್ಲಿ ರಾಮ, ಲಕ್ಷ್ಮಣರ ಚಿತ್ರಣ ಇರುತ್ತದೆ. ಹಾಗೆಯೇ ಸಿದ್ದರಾಮಯ್ಯನವರ ಎದೆಯಲ್ಲಿ ಬಸವಣ್ಣ ಕಾಣಿಸುತ್ತಾರೆ. ಯಾಕೆಂದರೆ ಅಷ್ಟು ಬಸವಕಾರ್ಯಗಳನ್ನು ಅವರು ಮಾಡಿದ್ದಾರೆ.
ಬಸವಣ್ಣನವರ ಹೆಸರು ಇರುವವರೆಗೂ ಸಿದ್ದರಾಮಯ್ಯನವರ ಹೆಸರು ಚಿರಸ್ಥಾಯಿಯಾಗಿರುತ್ತದೆ. ನಿಜಲಿಂಗಪ್ಪನವರಂತೆ ಸಿದ್ದರಾಮಯ್ಯನವರು ಕೂಡ ಕಳಂಕರಹಿತ ಮತ್ತು ಪ್ರಾಮಾಣಿಕ ರಾಜಕಾರಣಿ.
- ಬಸವಲಿಂಗ ಪಟ್ಟದ್ದೇವರು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರು