ಇದು ನನ್ನ ಕೊನೆಯ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ. 2/4
#ವರುಣಾ
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ ಅವರ ನಿಧನದ ಗೌರವಾರ್ಥ ದಾವಣಗೆರೆಯಲ್ಲಿ ಇಂದು ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ, ಮೃತರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವ ಸಮರ್ಪಿಸಿದೆ.
ರಾಜ್ಯ ಬಿಜೆಪಿ ಸರ್ಕಾರ ಅಡಿಯಿಂದ ಮುಡಿವರೆಗೆ 40% ಕಮಿಷನ್ನಲ್ಲಿ ಮುಳುಗಿದೆ ಎಂಬ ನಮ್ಮ ಆರೋಪಗಳಿಗೆ ದಾಖಲೆ ಕೇಳುತ್ತಿದ್ದ ಮುಖ್ಯಮಂತ್ರಿಗಳಿಗೆ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಲಂಚ ಪಡೆಯುವಾಗ ಹಣದ ಸಮೇತ ಸಿಕ್ಕಿಬಿದ್ದ ದಾಖಲೆ ಸಾಕಲ್ಲವೇ?
@BSBommai ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಹುದ್ದೆಯ ಗೌರವವನ್ನು ಉಳಿಸಲಿ.
ನಮ್ಮ ಹೆಮ್ಮೆಯ ನಾಯಕರು ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಸರ್ ರವರಿಗೆ ಇಂದು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಬಸವಕಲ್ಯಾಣ ವಿಧಾನ ಸಭೆ ಚುನಾವಣೆಯ ಬಗ್ಗೆ ಹಲವು ಮಾತುಗಳು ಚರ್ಚೆ ಮಾಡಿದರು...💐💐
#malaBNarayanRao@kharge
ನಮ್ಮ ಹೆಮ್ಮೆಯ ನಾಯಕರು ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಸರ್ ರವರಿಗೆ ಇಂದು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಬಸವಕಲ್ಯಾಣ ವಿಧಾನ ಸಭೆ ಚುನಾವಣೆಯ ಬಗ್ಗೆ ಹಲವು ಮಾತುಗಳು ಚರ್ಚೆ ಮಾಡಿದರು...💐💐
#malaBNarayanRao@kharge
ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು.
ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ರಾಜ್ಯದ ಒಬ್ಬ ಕಾಂಗ್ರೆಸ್ನ ಹಿರಿಯ ಶಾಸಕರನ್ನು ಈ ರೀತಿ ಅವಮಾನ ಮಾಡುವುದು ನಾವು ಬೀದರ್ ಜನತೆ ಖಂಡಿಸುತ್ತೇವೆ .
ಸ್ಪೀಕರ್ ಸ್ಥಾನದಲ್ಲಿರುವ ನೀವು ಒಂದು ಪಕ್ಷದ ಪರವಾಗಿ ಕೆಲಸ ಮಾಡುವುದಾದರೆ ಆ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬನ್ನಿ .
ನೀವು ಭಾಲ್ಕಿ ಮತಕ್ಷೇತ್ರದ ಜನತೆಗೆ ಮಾಡಿದ ಅಪಮಾನ ನೀವು ಕ್ಷಮೆ ಕೇಳಲೇಬೇಕು.
#speaker@eshwar_khandre
ಕೊಪ್ಪಳದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಮ್ಮ ಪಕ್ಷದ ಪ್ರಜಾಧ್ವನಿ ಯಾತ್ರೆಗೆ ಹರಿದು ಬಂದಿರುವ ಜನಸಾಗರ ಕಂಡು ಸಂತಸವಾಗುತ್ತಿದೆ. ನಾಡಿನ ಜನ ಭ್ರಷ್ಟ, ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೆಸೆದು, ಜನಪರವಾದ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಲ್ಲಿ ಕಾಣಲು ಬಯಸಿದ್ದಾರೆ ಎಂಬುದಕ್ಕೆ ಇಲ್ಲಿ ಸೇರಿರುವ ಅಪಾರ ಜನಸ್ತೋಮವೇ ಸಾಕ್ಷಿ.
ಇಂದು ರಾಜ್ಯದಲ್ಲಿ ವಾತಾವರಣ ಕಾಂಗ್ರೆಸ್ ಪರವಾಗಿ ಬದಲಾಗುತ್ತಿದೆ. ಸೋನಿಯಾ ಗಾಂಧಿ, @RahulGandhi ಮತ್ತು @kharge ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. 12/14
#Kolar
ಕೋಲಾರದಲ್ಲಿ @BJP4Karnataka ಪಕ್ಷವಿಲ್ಲ. ಆದರೂ ಬಿಜೆಪಿ ಬಗ್ಗೆ ಜನ ಎಚ್ಚರವಾಗಿರಬೇಕು. ಅವರು ಕೇವಲ ಅಲ್ಪಸಂಖ್ಯಾತರ ವಿರೋಧಿಗಳು ಮಾತ್ರ ಅಲ್ಲ, ರೈತರು, ಮಹಿಳೆಯರು, ಯುವ ಜನರ ವಿರೋಧಿಗಳು. 13/14
#Kolar
ವಿಧಾನಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಅನುಸರಿಸಬೇಕಾದ ಮಾರ್ಗಸೂಚಿಯ ರೂಪುರೇಷೆಗಳ ಬಗ್ಗೆ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದೆ.