ಇವರಿಗೆ
ಮಾನ್ಯ ಜಿಲ್ಲಾಧಿಕಾರಿಗಳು
ವಿಜಯಪುರ ಜಿಲ್ಲೆ
ಕರ್ನಾಟಕ ಸರ್ಕಾರ
ವಿಷಯ: ಮೀಸಲಾತಿ ಗೊಂದಲವನ್ನು ಆದಷ್ಟು ಬೇಗ ನಿವಾರಿಸಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡುವ ಹಾಗೂ ವಯೋಮಿತಿ ಸಡಿಲಿಸುವ ಕುರಿತು.
ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಗ್ರಾಮೀಣ ಭಾಗದ ಬಡ ನಿರುದ್ಯೋಗಿ ಯುವಕರು/ಯುವತಿಯರು ಸರ್ಕಾರಿ ನೌಕರಿಯನ್ನು ಪಡೆದುಕೊಳ್ಳಬೇಕೆಂಬ ಮಹದಾಸೆಯೊಂದಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಸ್ವಂತ ಊರು. ವಯಸ್ಸಾದ ತಂದೆ-ತಾಯಿ ಹಾಗೂ ಕುಟುಂಬ. ವರ್ಗದವರನ್ನು ಬಿಟ್ಟು ದೂರದ ಬೆಂಗಳೂರು, ಧಾರವಾಡ ಹಾಗೂ ವಿಜಯಪುರದಂತಹ ನಗರಗಳಲ್ಲಿ ಸಾಲ ಶೂಲ ಮಾಡಿ ಸುಮಾರು 5-6 ವರ್ಷಗಳಿಂದ ಬಾಡಿಗೆ ಮನೆ. ಪಿಜಿಗಳಲ್ಲಿ ಕಷ್ಟ ಪಟ್ಟು ಹಗಲಿರುಳು ಓದುತ್ತಿದ್ದಾರೆ. ಅಲ್ಲದೆ ಕಳೆದ ಎರಡು ವರ್ಷಗಳಿಂದ ಒಳ ಮೀಸಲಾತಿ ಜಾರಿ ವಿಳಂಬದಿಂದಾಗಿ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ತಡೆ ಹಿಡಿದಿರುವುದರಿಂದ ಪಿಜಿ ರೂಮುಗಳ ಬಾಡಿಗೆಯನ್ನು ಕಟ್ಟೋಕು ಆಗದೇ, ಊಟ ಮಾಡುವುದಕ್ಕೂ ಪರದಾಡೋ ಪರಿಸ್ಥಿತಿ ನಿರ್ಮಾಣವಾಗಿದ್ದು ಹೊಸ ನೇಮಕಾತಿಗಳಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದರಿಂದಾಗಿ ಲಕ್ಷಾಂತರ ಯುವಕರು ತಮ್ಮ ಬದುಕಿನ ಬಗ್ಗೆ ಭರವಸೆಗಳನ್ನು ಕಳೆದುಕೊಳ್ಳುವಂತಾಗಿದ್ದು. ವಯೋಮಿತಿ ಮೀರಿ ಸರ್ಕಾರಿ ನೌಕರಿಯಿಂದ ವಂಚಿತರಾಗಿ ಮಾನಸಿಕವಾಗಿ ಕುಗ್ಗುವಂತಾಗಿದೆ. ಅಲ್ಲದೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಧಾರವಾಡದಲ್ಲಿ 5-6 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಓದುತ್ತಿದ್ದ ಬಡ ಯುವ ಸ್ಪರ್ಧಾಕಾಂಕ್ಷಿಯೊಬ್ಬರು ಮಾನಸಿಕವಾಗಿ ನೊಂದು ಹೃದಯಾಘಾತದಿಂದಾಗಿ ಮೃತ ಪಟ್ಟಿದ್ದು ಅವರ ಪೋಷಕರಿಗೆ ದಿಕ್ಕೇ ತೋಚದಂತಾಗಿ ಚಿಂತಾ ಜನಕವಾಗುವ ಸ್ಥಿತಿ ನಿರ್ಮಾಣವಾಗಿದೆ.
ಅಲ್ಲದೆ 56% ಮೀಸಲಾತಿ ಹಾಗೂ ರೋಸ್ಟರ್ ಬಿಂದು ವಿಚಾರಕ್ಕೆ ಸಂಬಂಧಿಸಿದಂತ ಪ್ರಕರಣವು ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ಎಲ್ಲ ನೇಮಕಾತಿಗಳು ನೆನೆಗುದಿಗೆ ಬಿದ್ದು ವಿಳಂಬವಾಗುತ್ತಿದ್ದು. ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ ಯಿಂದಾಗಿ ಇದರ ನೇರ ಪರಿಣಾಮ ಸರ್ಕಾರದ ಆಡಳಿತದ ಮೇಲೂ ಬೀರುತ್ತಿದೆ.
ಸರ್ಕಾರದ ಈ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಲಕ್ಷಾಂತರ ನಿರುದ್ಯೋಗಿ ಸ್ಪರ್ಧಾರ್ಥಿಗಳು ಕಳೆದ ಸೆಪ್ಟೆಂಬರ್ ನಲ್ಲಿ ರಾಜ್ಯದ ವಿದ್ಯಾಕಾಶಿ ಧಾರವಾಡದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಅದರ ಮುಂದುವರೆದ ಭಾಗವಾಗಿ ಇದೇ ನವೆಂಬರ್ 12ರಂದು ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಪ್ರತಿಭಟನೆಯನ್ನು ಗಂಭಿರವಾಗಿ ಪರಿಗಣಿಸದಿದ್ದರೆ ಯುವಕರ ಪ್ರತಿಭಟನೆ ಕಾವು ವಿಕೋಪಕ್ಕೆ ಹೋಗುವ ಸಾಧ್ಯತೆಯಿದ್ದು ಸರ್ಕಾರವೇ ಅದರ ಸಂಪೂರ್ಣ ಜವಾಬ್ದಾರಿ ಹೊರಬೇಕಾಗುವುದರಿಂದ ಅಂತಹದಕ್ಕೆ ದಯಮಾಡಿ ಅವಕಾಶ ನೀಡದೇ ಅದಕ್ಕೂ ಮುಂಚೆಯೇ ಸರ್ಕಾರ ಎಚ್ಚೆತ್ತುಕೊಳ್ಳಬೇಕೆಂದು ಈ ಮೂಲಕ ನಮ್ಮ ಕೆಳಕಂಡ ಬೇಡಿಕೆ ಗಳನ್ನು ಈ ಕೂಡಲೇ ಈಡೀರಿಸಬೇಕು ಅವುಗಳೆಂದರೆ
ವಿಷಯ: ಕರ್ನಾಟಕ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಎಲ್ಲಾ ನೇಮಕಾತಿಗಳನ್ನು ಒಳಮೀಸಲಾತಿ ಒಳಗೊಂಡಂತೆ ತ್ವರಿತವಾಗಿ ಪ್ರಾರಂಭ ಮಾಡಬೇಕು
1)ಒಳ ಮೀಸಲಾತಿ ಮತ್ತು ಒಳ ಮೀಸಲಾತಿ ಒಳಗೊಂಡಂತೆ ಎಲ್ಲ ನೇಮಕಾತಿ ಪ್ರಕ್ರಿಯೆ ಕೂಡಲೇ ಪ್ರಾರಂಭಿಸಬೇಕು
2) ಪೊಲೀಸ್ ಕಾನ್ಸ್ಟೇಬಲ್ SC,ST,OBC ಗೆ 33 ವರ್ಷ ಮತ್ತು GM ಗೆ ಕಾಯಂ ಗೊಳಿಸಲೇಬೇಕು.
3) 545 PSI ಪರೀಕ್ಷೆ ಮತ್ತು 402 PSI ಪರೀಕ್ಷೆಗೆ ಅರ್ಹತೆ ಪಡೆದವರಿಗೆ ಮತ್ತೊಂದು ಅವಕಾಶ ಕೊಡಲೇಬೇಕು ಹಾಗೂ ಪೊಲೀಸ್ ಇಲಾಖೆಯ ಎಲ್ಲಾ ನೇಮಕಾತಿಯನ್ನು ಕೂಡಲೆ ಪ್ರಾರಂಭಿಸಲೇಬೇಕು.
4) PSTR,GPSTR,HSTR, ದೈಹಿಕ ಶಿಕ್ಷಕರು, PU ಉಪನ್ಯಾಸಕರು, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕೂಡಲೇ ಪ್ರಾರಂಭಿಸಬೇಕು
6)ಭ್ರಷ್ಟಾಚಾರ ಮುಕ್ತ ನೇಮಕಾತಿ
7) ಗ್ರಂಥಪಾಲಕ ಹಾಗು ಸಹಾಯಕ ಗ್ರಂಥಪಾಲಕ ನೇಮಕಾತಿ ಪ್ರಕ್ರಿಯೆಯನ್ನು ಆರಂಭ ಮಾಡಬೇಕು.
8)ಪ್ರತಿ ವರ್ಷ ಎಲ್ಲಾ ಇಲಾಖೆಗಳಿಂದ ಎಲ್ಲಾ ಹುದ್ದೆಗಳ ನೇಮಕಾತಿ ಮಾಡಲೇಬೇಕು
9)ಐದು ವರ್ಷ ಎಲ್ಲಾ ಇಲಾಖೆಯಿಂದ ಶಾಶ್ವತ ವಯೋಮಿತಿ ಖಾಯಂಗೊಳಿಸಿ
10)ಕೇಂದ್ರ ಲೋಕಸೇವಾ ಆಯೋಗ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ಪರೀಕ್ಷಾ ಶುಲ್ಕ ಅನ್ವಯಿಸಲೇಬೇಕು
11)AO, AAO, Land surveyor, veterinary officer ಕೂಡಲೇ ನೇಮಕಾತಿ ಆರಂಭಿಸಲೇಬೇಕು
12) 3A, 3B category ಅಭ್ಯರ್ಥಿಗಳಿಗೆ ನ್ಯಾಯತವಾಗಿ ಪೋಸ್ಟರ್ ಬಿಂದುವನ್ನು ನೇಮಕಾತಿಯಲ್ಲಿ ಕೂಡಲೆ ಅಳವಡಿಸಬೇಕು.
13) ಆರೋಗ್ಯ ಇಲಾಖೆಯಲ್ಲಿರುವ ಗ್ರೂಪ್ A, ಗ್ರೂಪ್ B, ಗ್ರೂಪ್ C ಹಾಗೂ ನರ್ಸಿಂಗ್ ಸ್ಟಾಪ್ ಕೂಡಲೇ ನೇಮಕಾತಿ ಆರಂಭಿಸಬೇಕು
14) ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಕೌನ್ಸಿಲಿಂಗ್ ಪ್ರಕ್ರಿಯೆ ಶುರು ಮಾಡಬೇಕು
ಈ ಕೂಡಲೇ ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಆದಷ್ಟು ಬೇಗ ನಮ್ಮ ಬೇಡಿಕೆಗಳ್ಳನ್ನು ಈಡೇರಿಸಿ ಈ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದರ ಜೊತೆಗೆ ಅವರ ಬದುಕಿನ ಆಶಾಕಿರಣ ತಾವಾಗಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿಸುತ್ತೇನೆ.
ವಂದನೆಗಳೊಂದಿಗೆ
@siddaramaiah@RahulGandhi@kharge@BasanagoudaBJP@tv9kannada@publictvnews@BJPKarnataka@INCIndia@BYVijayendra@RAshokaBJP
ಕೆಪಿಎಸ್ಸಿ ಭ್ರಷ್ಟಾಚಾರದ ಬಗ್ಗೆ ನಿನ್ನೆ ವಿಧಾನಸಭೆಯಲ್ಲಿ ಆದ ಚರ್ಚೆಗಳನ್ನು ಗಮನಿಸಿದೆ. ಸರ್ಕಾರದ ಮಂತ್ರಿಗಳಿಂದ ಹಿಡಿದು ವಿರೋಧ ಪಕ್ಷದ ನಾಯಕರು, ಎಲ್ಲ ಪಕ್ಷಗಳ ಶಾಸಕರೂ ಕೆಪಿಎಸ್ಸಿ ಭ್ರಷ್ಟಾಚಾರದ ಬಗ್ಗೆ ಕಠೋರವಾಗಿ ಮಾತನಾಡಿದರು. ಕಾನೂನು ಸಚಿವರಾದ ಶ್ರೀ ಎಚ್.ಕೆ.ಪಾಟೀಲರಂತೂ ನಾವು ಕೆಪಿಎಸ್ಸಿ ಅಧ್ಯಕ್ಷರು, ಸದಸ್ಯರನ್ನು ಕಿತ್ತು ಹಾಕಲು ಸಾಧ್ಯವಿಲ್ಲ. ಅದು ಸ್ವಾಯತ್ತ ಸಂಸ್ಥೆ. ಆಗಿರುವ ಭ್ರಷ್ಟಾಚಾರಗಳ ಹಿನ್ನೆಲೆಯಲ್ಲಿ ಅವರು ಆತ್ಮಸಾಕ್ಷಿಯ ನಿರ್ಧಾರ ಕೈಗೊಳ್ಳಬೇಕು ಎಂದರು.
ಇದೆಲ್ಲ ನೋಡಿದರೆ ಎಲ್ಲರಿಗೂ ಒಂದು ವಿಷಯ ಸ್ಪಷ್ಟವಾಗುತ್ತದೆ. ಕೆಪಿಎಸ್ಸಿ ಒಂದು ಮಹಾಭ್ರಷ್ಟ ಸಂಸ್ಥೆ ಎಂಬುದನ್ನು ಎಲ್ಲ ಪಕ್ಷಗಳೂ ಒಪ್ಪಿಕೊಳ್ಳುತ್ತವೆ. ಸ್ವತಃ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರೇ ಕೆಪಿಎಸ್ಸಿ ಒಂದು ರೋಗಗ್ರಸ್ಥ ಸಂಸ್ಥೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಹೀಗಿದ್ದ ಮೇಲೆ ಅದನ್ನು ಯಾವ ಪುರುಷಾರ್ಥಕ್ಕೆ ಉಳಿಸಿಕೊಳ್ಳಬೇಕು. ಯಾಕೆ ಜನರ ತೆರಿಗೆಯ ಹಣವನ್ನು ಈ ರೋಗಿಷ್ಠ ಸಂಸ್ಥೆಯನ್ನು ಸಾಕಲು ಬಳಸಬೇಕು? ಯಾಕೆ ಈ ಭ್ರಷ್ಟರಿಗೆ ಸರ್ಕಾರ ಪೊಲೀಸ್ ರಕ್ಷಣೆ ನೀಡಿಕೊಂಡು ಕುಳಿತಿದೆ?
ಮಾನ್ಯ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠದ ನ್ಯಾಯಮೂರ್ತಿಗಳು ಕೆಪಿಎಸ್ಸಿ ಭ್ರಷ್ಟಾಚಾರದ ಕುರಿತಾದ ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ಮಾತನಾಡಿರುವುದನ್ನು ನಾನು ಗಮನಿಸಿದೆ. ಕೆಪಿಎಸ್ಸಿ ಭ್ರಷ್ಟರಿಗೆ ಯಾರ ಭಯವೂ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ. ಕೆಪಿಎಸ್ಸಿ ಹಣ ಮಾಡುವ ದಂಧೆಯ ಕಚೇರಿಯಾಗಿ ಹೋಗಿದೆ.
ಸರ್ಕಾರ, ವಿರೋಧ ಪಕ್ಷಗಳು, ವಿಧಾನಸಭೆ-ವಿಧಾನಪರಿಷತ್ ಸದಸ್ಯರು, ನ್ಯಾಯಮೂರ್ತಿಗಳು ವಿಶ್ವಾಸ ಕಳೆದುಕೊಂಡಿರುವ ಒಂದು ಸಂಸ್ಥೆಯನ್ನು ರಿಪೇರಿ ಮಾಡಲು ಸರ್ಕಾರ ಹೊರಟಿದೆ. ಕೆಪಿಎಸ್ಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಇದು ಸ್ವಾಗತಾರ್ಹ ನಿರ್ಧಾರವಾದರೂ, ಏನೇ ರಿಪೇರಿ ಮಾಡಲು ಹೊರಟರೂ ಅದು ರಿಪೇರಿಯಾಗುವ ಸಾಧ್ಯತೆ ಕಾಣಿಸುತ್ತಿಲ್ಲ. ಕೋಟಿಗಟ್ಟಲೆ ಹಣ ನುಂಗಿ ರೂಢಿಯಾಗಿರುವ ಈ ಜನರು ಹಣ ಗಳಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಾರೆ. ಸರ್ಕಾರ ಏನೇ ಹೊಸ ನಿಯಮಾವಳಿ ರೂಪಿಸಿದರೂ ಇವರು ಅವುಗಳನ್ನು ಉಲ್ಲಂಘಿಸಿ, ತಮ್ಮ ದಂಧೆಯನ್ನು ನಿರಾತಂಕವಾಗಿ ಮುಂದುವರೆಸುತ್ತಾರೆ.
ನಿನ್ನೆಯ ಚರ್ಚೆಯ ಸಂದರ್ಭದಲ್ಲಿ ಈಗಾಗಲೇ ಮುಖ್ಯಪರೀಕ್ಷೆಯ ಹಂತದಲ್ಲಿರುವ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಕುರಿತು ಯಾರೂ ಮಾತನಾಡಲಿಲ್ಲ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದವರು ಬೀದಿಗೆ ಬಿದ್ದಿದ್ದಾರೆ. ಅವರಿಗೆ ನ್ಯಾಯ ಮರೀಚಿಕೆಯಾಗಿದೆ. ಅದರ ಕುರಿತು ಯಾರೂ ಮಾತನಾಡಲಿಲ್ಲ. ಬಹುಶಃ ನಮ್ಮೆಲ್ಲ ಜನಪ್ರತಿನಿಧಿಗಳು ಎಲ್ಲ ಭಾರವನ್ನು ನ್ಯಾಯಾಲಯದ ಮೇಲೆ ಹೊರೆಸಿ ಕುಳಿತಿದ್ದಾರೆ. ಎಲ್ಲ ನ್ಯಾಯಾಲಯಗಳ ತೀರ್ಮಾನಕ್ಕೆ ಬಿಡುವುದಾದರೆ ನಾವು ಶಾಸಕರನ್ನು ಆಯ್ಕೆ ಮಾಡಿ ಕಳಿಸುವುದಾದರೂ ಯಾಕೆ? ಸರ್ಕಾರವೇಕೆ ಬೇಕು? ಇವರಿಗೆ ಹೊಣೆಗಾರಿಕೆ ಇಲ್ಲವೇ? ಪರೀಕ್ಷೆ ಬರೆದು ಅನ್ಯಾಯಕ್ಕೆ ಒಳಗಾದ 76 ಸಾವಿರಕ್ಕೂ ಹೆಚ್ಚು ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಇವರು ಉತ್ತರದಾಯಿಗಳಲ್ಲವೇ? ಅವರು ಈ ದೇಶದ ಪ್ರಜೆಗಳಲ್ಲವೇ? ಅವರ ಗೋಳು ಕೇಳುವವರು ಯಾರು?
ಸರ್ಕಾರಕ್ಕೆ ಕೆಪಿಎಸ್ಸಿ ರಿಪೇರಿ ಮಾಡುವುದು ಸಾಧ್ಯವಾಗದೇ ಇದ್ದಲ್ಲಿ, ಜನರೇ ಕೆಪಿಎಸ್ಸಿಗೆ ನುಗ್ಗಿ ರಿಪೇರಿ ಮಾಡುವ ಕೆಲಸ ಮಾಡುತ್ತಾರೆ. ಅದು ಬೇಡ ಎನ್ನುವುದಾದರೆ ಸರ್ಕಾರ ಏನೇನು ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವೋ ತೆಗೆದುಕೊಳ್ಳಲಿ.
-ಟಿ.ಎ.ನಾರಾಯಣಗೌಡ
ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ
ಕೆಪಿಎಸ್ಸಿ ಪರೀಕ್ಷೆಯ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಮಾತನಾಡಿದೆ.
ಕೆಪಿಎಸ್ಸಿಯಲ್ಲಿ ಹಲವು ಬಾರಿ ಗೊಂದಲಗಳಾಗಿ, ನ್ಯಾಯಾಲಯಗಳ ಮೆಟ್ಟಿಲು ಏರಿರುವ ಚರಿತ್ರೆ ಇದೆ.
ಭ್ರಷ್ಟಾಚಾರ ಕೆಪಿಎಸ್ಸಿ ಇಂದ ಹೋಗಬೇಕು. ಇದರ ಬಗ್ಗೆ ಎರಡು ಮಾತಿಲ್ಲ. ಹೀಗಾಗಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಸಲಹೆಗಳಿಗೆ ನಾವು ಮುಕ್ತರಾಗಿದ್ದೇವೆ.
ದಿನಾಂಕ 4/3/2025 ರಂದು ವಿರೋಧ ಪಕ್ಷದ ಸದಸ್ಯರು ನಿಲುವಳಿ ಸೂಚನೆಯನ್ನು ಮಂಡಿಸಿದ್ದಾರೆ. ನಿಲುವಳಿ ಸೂಚನೆಯನ್ನು ನಿಯಮ 69 ಕ್ಕೆ ಪರಿವರ್ತಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಕುರಿತು ವಿರೋಧ ಪಕ್ಷದ ನಾಯಕರಾದಿಯಾಗಿ ಹಲವರು ಮಾತನಾಡಿದ್ದಾರೆ. ನಿಲುವಳಿ ಸೂಚನೆಯು ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪಗಳ ಕುರಿತು ಹಾಗೂ ಪರೀಕ್ಷೆಗಳು ನಡೆದು ಸಂದರ್ಶನಗಳನ್ನು ಮಾಡದೆ ಲೋಪ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರವರು ಕೆ.ಪಿ.ಎಸ್.ಸಿ.ಯನ್ನು ರೋಗಗ್ರಸ್ತ ಸಂಸ್ಥೆಯೆಂದು ಹಾಗೂ ಹುದ್ದೆಗಳಿಗೆ ರೇಟ್ ಫಿಕ್ಸ್ ಮಾಡುವ ಬಗ್ಗೆ ಮಾತನಾಡಿದ್ದಾರೆ.
ವಿರೋಧ ಪಕ್ಷದ ಸದಸ್ಯರುಗಳು ಕೆಪಿಎಸ್ಸಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಪ್ರಸ್ತುತ ನಡೆಯುತ್ತಿರುವ ಗೆಜೆಟೆಡ್ ಪ್ರೊಬೇಷರ್ಸ್ ಪರೀಕ್ಷೆಯಲ್ಲಿ ಕನ್ನಡ ಅನುವಾದಗಳನ್ನು ತಪ್ಪು ಮಾಡಲಾಗಿದೆ. ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ತಪ್ಪು ಮಾಡಿದ ಕಾರಣದಿಂದ ಉಂಟಾಗಿರುವ 30 ಕೋಟಿ ರೂ ನಷ್ಟವನ್ನು ತಪ್ಪಿತಸ್ಥರಿಂದ ವಸೂಲು ಮಾಡಬೇಕು. ಪರೀಕ್ಷೆ ನಡೆಸಲು ಈ ಹಿಂದೆ ಮಾಡಿರುವ ಅಧಿಸೂಚನೆಯನ್ನು ರದ್ದು ಮಾಡಿ ಹೊಸ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಕೆಪಿಎಸ್ಸಿಯ ಸಮಗ್ರ ಬದಲಾವಣೆಯಾಗಬೇಕು ಎಂದೂ ಸಹ ಸಲಹೆ ನೀಡಿದ್ದಾರೆ.
ಕೆಪಿಎಸ್ಸಿ ಸುಧಾರಿಸಬೇಕು ಎಂಬ ಈ ಸದನದ ಕಳಕಳಿ ಸರಿಯಾಗಿದೆ. ನಮ್ಮ ಸರ್ಕಾರದ ಕಳಕಳಿ ಕೂಡ ಅದೇ ಆಗಿದೆ. ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಗಳು ಕಳಂಕರಹಿತವಾಗಿರಬೇಕು, ದಕ್ಷರೂ, ಪ್ರಾಮಾಣಿಕರೂ ಆದ ಅಧಿಕಾರಿಗಳು ರಾಜ್ಯದ ಆಡಳಿತ ಸೇವೆಗೆ ಬರಬೇಕು ಎಂಬ ಉದ್ದೇಶ, ಕಳಕಳಿ ನಮ್ಮದೂ ಆಗಿದೆ. 1/7
#KPSC #GovtJobs
ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ರಾಜ್ಯ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಈ ಕೆಳಕಂಡ ಸುಧಾರಣೆಗಳನ್ನು ತರಲು ಉದ್ದೇಶಿಸಿದ್ದೇವೆ
#KPSC#GovtJobs
ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ
#KPSC#GovtJobs
ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆಯ ವಿಷಯ:-
384 ಹುದ್ದೆಗಳ ಗೆಜೆಟೆಡ್ ಪ್ರೊಬೆಷನರ್ ಪೂರ್ವಭಾವಿ ಪರೀಕ್ಷೆಯನ್ನು ಆಯೋಗವು ಮೊದಲಿಗೆ ದಿನಾಂಕ:27-08-2024 ರಂದು ನಡೆಸಿದ್ದು, ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳ ಕನ್ನಡ ಭಾಷಾಂತರದಲ್ಲಿನ ಲೋಪದೋಷಗಳು ಉಂಟಾಗಿರುವ ಬಗ್ಗೆ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು, ಆಯೋಗವು ವಿಷಯ ತಜ್ಞರುಗಳ ಸಮಿತಿಗಳನ್ನು ರಚಿಸಿದೆ. ಸದರಿ ಸಮಿತಿಯು ಭಾಷಾಂತರದ ಲೋಪದಿಂದಾಗಿ ಎರಡೂ ಪತ್ರಿಕೆಗಳಿಂದ ಒಟ್ಟು 10 ಪ್ರಶ್ನೆಗಳ ಕೀ-ಉತ್ತರಗಳು ಪರಿಷ್ಕೃತಗೊಳ್ಳಲಿವೆ ಎಂಬ ಅಭಿಪ್ರಾಯವನ್ನು ನೀಡಿದ್ದರು.
ಆದಾಗ್ಯೂ, ಆಯೋಗವು ಮರು ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿ, ದಿನಾಂಕ:29-12-2024ರAದು ಮರುಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಸದರಿ ಮರು ಪರೀಕ್ಷೆಯಲ್ಲಿಯೂ ಸಹ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಬಾಷಾಂತರದಲ್ಲಿ ಲೋಪವಿರುವುದಾಗಿ ದೂರುಗಳು ಸ್ವೀಕೃತವಾದ ಹಿನ್ನೆಲೆಯಲ್ಲಿ ಆಯೋಗವು ವಿಷಯ ತಜ್ಞರುಗಳ ಸಮಿತಿಗಳನ್ನು ಮತ್ತೊಮ್ಮೆ ರಚಿಸಿದ್ದು, ಸದರಿ ಸಮಿತಿಯು ಎರಡೂ ಪತ್ರಿಕೆಗಳನ್ನು ಪರಿಶೀಲಿಸಿ, ಒಟ್ಟು 6 ಪ್ರಶ್ನೆಗಳು ತಪ್ಪಾಗಿದ್ದು, ಕೃಪಾಂಕ ನೀಡಬಹುದೆಂದು ಅಭಿಪ್ರಾಯಿಸಿರುತ್ತಾರೆ.
ಇಂತಹ ಪ್ರಕರಣಗಳಲ್ಲಿ ವಿಷಯ ತಜ್ಞರ ಸಮಿತಿಯು ನೀಡುವ ಅಭಿಪ್ರಾಯಗಳನ್ನು ಪರಿಗಣಿಸುವುದನ್ನು ಉತ್ತರ ಪ್ರದೇಶ ಸರ್ವಿಸ್ ಕಮಿಷನ್ V/s ರಾಹುಲ್ ಸಿಂಗ್ ಪ್ರಕರಣ ಸಂಖ್ಯೆ:https://t.co/utoF9432K2.5838/2018, ದಿನಾಂಕ:14-06-2018 ರಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿದೆ.
ಈ ಹಿಂದಿನ ಪರೀಕ್ಷೆಗಳ ತುಲನಾತ್ಮಕ ದತ್ತಾಂಶ ವಿಶ್ಲೇಷಣೆಯನ್ವಯ 2023-24ನೇ ಸಾಲಿನಲ್ಲಿ ಕನ್ನಡ ಮಾಧ್ಯಮ ಪರೀಕ್ಷೆಯನ್ನು ತೆಗೆದುಕೊಂಡು ಮುಖ್ಯ ಪರೀಕ್ಷೆಗೆ ಅರ್ಹರಾದ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಸಂಖ್ಯೆಯು ಕಳೆದ ಸಾಲಿನ ನೇಮಕಾತಿಗೆ ಹೋಲಿಸಿದಲ್ಲಿ ಶೇ.6.50 ರಷ್ಟು ಹೆಚ್ಚಳವಾಗಿರುತ್ತದೆಂದು ಆಯೋಗವು ಮಾಧ್ಯಮಗಳಿಗೆ ಪ್ರಕಟ ಮಾಡಿದೆ.
ಈಗಾಗಲೇ ಮುಖ್ಯ ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಿ, ಆಯೋಗವು ಅಧಿಸೂಚನೆಯನ್ನು ಹೊರಡಿಸಿದ್ದು, ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ನ್ಯಾಯಾಲಯದಲ್ಲಿ ಪ್ರಕರಣ ಸಂಖ್ಯೆ: https://t.co/IhtD9gy1b2.285-308/2025 ದಾಖಲಿಸಿದ್ದು, ಮಾನ್ಯ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಪ್ರಕರಣ ಬಾಕಿ ಇರುತ್ತದೆ.
ಪ್ರಸ್ತುತ ಪ್ರಕರಣವು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಈ ಹಂತದಲ್ಲಿ ಸರ್ಕಾರವು ಯಾವುದೇ ನಿರ್ಣಯವನ್ನು ಕೈಗೊಳ್ಳುವುದು ನ್ಯಾಯೋಚಿತವಾಗಿರುವುದಿಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದ ನಂತರ ಆಯೋಗವು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವು ಆಯೋಗಕ್ಕೆ ಸೂಚನೆ ನೀಡುತ್ತದೆ. ಈ ಹಂತದಲ್ಲಿ ಸರ್ಕಾರವು ಯಾವುದೇ ಕ್ರಮಗಳನ್ನು ಕೈಗೊಳ್ಳಲು ಬರುವುದಿಲ್ಲ. 4/7
#KPSC #GovtJobs
ಕೆಪಿಎಸ್ಸಿ ಪರೀಕ್ಷೆ ಇಂಗ್ಲಿಷ್ ಮಾಧ್ಯಮದಲ್ಲೇಕೆ? ಕನ್ನಡದಲ್ಲೇ ಇನ್ನು ಮಂದೆ ಪರೀಕ್ಷೆ ನಡೆಯಲಿ
ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಕೆಪಿಎಸ್ಸಿ ಸುಧಾರಣೆಗೆ ರಾಜ್ಯ ಸರ್ಕಾರ ಕೆಪಿಎಸ್ಸಿ ಕಾಯ್ದೆಗೆ ತಿದ್ದುಪಡಿ ತರಲು ಯತ್ನಿಸುತ್ತಿದೆ ಎಂಬ ಮಾಹಿತಿ ಇದೆ. ಇದು ಕೂಡಲೇ ಆಗಬೇಕಾಗಿರುವ ಕೆಲಸ. ಪ್ರತಿ ಬಾರಿಯೂ ಕೆಪಿಎಸ್ಸಿ ಪರೀಕ್ಷೆ ನಡೆದಾಗಲೂ ಒಂದಲ್ಲ ಒಂದು ಅವಾಂತರಗಳು ನಡೆಯುತ್ತದೆ. ಕೆಪಿಎಸ್ಸಿ ಅಧಿಕಾರಿಗಳ ಅಪ್ರಾಮಾಣಿಕತೆ, ಭ್ರಷ್ಟತೆ, ಅದಕ್ಷತೆ, ಹೊಣೆಹೇಡಿತನ, ಕನ್ನಡ ದ್ರೋಹ, ವೃತ್ತಿಪರವಲ್ಲದ ನಡವಳಿಕೆ, ಕ್ರಿಯೆಗಳಿಂದ ಕೆಪಿಎಸ್ಸಿ ಸರ್ವನಾಶವಾಗುವ ಹಂತ ತಲುಪಿದೆ. ಇದನ್ನು ಈಗ ರಿಪೇರಿ ಮಾಡದೇ ಇದ್ದರೆ ಶಾಶ್ವತವಾಗಿ ಮುಚ್ಚಿಬಿಡುವುದೇ ವಾಸಿ.
ಸರ್ಕಾರ ಕಾಯ್ದೆಗೆ ತಿದ್ದುಪಡಿ ತರುವಾಗ ಕೆಪಿಎಸ್ಸಿ ನಡೆಸುವ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿಯೇ ನಡೆಸಬೇಕು ಎಂಬುದು ನನ್ನ ಆಗ್ರಹವಾಗಿದೆ. ಕೆಪಿಎಸ್ಸಿ ಪರೀಕ್ಷೆ ಬರೆದು ವಿವಿಧ ಹುದ್ದೆಗಳಿಗೆ ನೇಮಕವಾಗುವವರು ಕನ್ನಡದಲ್ಲಿಯೇ ಆಡಳಿತ ನಡೆಸಬೇಕು. ಯಾಕೆಂದರೆ ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡ ಭಾಷೆಯಲ್ಲಿ ಹಿಡಿತವಿರುವ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳೇ ರಾಜ್ಯ ಸರ್ಕಾರದ ಉದ್ಯೋಗ ಮಾಡಲು ಹೆಚ್ಚು ಸಮರ್ಥರು. ಹೀಗಾಗಿ ಎಲ್ಲ ಪರೀಕ್ಷೆಗಳೂ ಕನ್ನಡ ಮಾಧ್ಯಮದಲ್ಲೇ ನಡೆಯಲಿ.
ಅವರು ಆಯ್ಕೆ ಆದ ನಂತರ ಯಾರಿಗಾದರೂ ಇಂಗ್ಲಿಷ್ ತಿಳಿವಳಿಕೆ ಅಗತ್ಯವಿದ್ದಲ್ಲಿ ಅಂತವರಿಗೆ ಬೇಕಾದರೆ ಆಡಳಿತಾತ್ಮಕ ಇಂಗ್ಲಿಷ್ ಭಾಷೆಯ ತರಬೇತಿ ನೀಡಿದರೆ ಸಾಕಾಗುತ್ತದೆ. ಹೀಗೆ ಮಾಡುವುದರಿಂದ ಎಲ್ಲೋ ಕೆಲವರ ಕಾರಣದಿಂದ ಲಕ್ಷಾಂತರ ಕನ್ನಡದ ಮಕ್ಕಳ ಕತ್ತು ಹಿಚುಕುವ ಕೆಲಸ ತಪ್ಪುತ್ತದೆ.
ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗೆ ಯುಪಿಎಸ್ಸಿ ಸೇರಿದಂತೆ ಇತರೆ ಪರೀಕ್ಷೆಗಳನ್ನು ಇಂಗ್ಲಿಷ್ ನಲ್ಲಿ ಬರೆಯುವ ವಿಪುಲ ಅವಕಾಶಗಳಿವೆ. ಇಂಥ ಆಡಳಿತ ಸೇವೆಗಳು ಮಾತ್ರವಲ್ಲದೆ ಇತರೆ ಖಾಸಗಿ ಉದ್ಯೋಗಗಳನ್ನು ನಿರ್ವಹಿಸಲೂ ಅವರಿಗೆ ಹೆಚ್ಚಿನ ಅವಕಾಶವಿದೆ. ಆದರೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಆಡಳಿತ ಸೇವೆ ಬಿಟ್ಟರೆ ಇತರೆ ಅವಕಾಶಗಳು ಕಡಿಮೆ. ಯುಪಿಎಸ್ಸಿ ಪರೀಕ್ಷೆಯಲ್ಲೂ ಕನ್ನಡ ಮಾಧ್ಯಮದವರು ಯಶಸ್ವಿಯಾಗುವುದು ಕಡಿಮೆ. ಯುಪಿಎಸ್ಸಿ ನಡೆಸುವ ಪೂರ್ವಭಾವಿ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ನಲ್ಲಿಯೇ ಬರೆಯಬೇಕು. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಕಷ್ಟಪಟ್ಟು ಇಂಗ್ಲಿಷ್ ಕಲಿತು ದಶಕಗಳಿಂದ ಬರೆಯುತ್ತಿದ್ದಾರೆ. ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳು ಆಡಳಿತ ಸೇವೆಯ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ಬರೆಯಲು ಬಯಸಿದರೆ ತಪ್ಪೇನಿಲ್ಲ. ಆದರೆ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿದೆ ಎಂಬುದು ನನ್ನ ಅಭಿಮತವಾಗಿದೆ.
ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಐದಾರು ತಿಂಗಳುಗಳಿಂದ ಆ ವಿದ್ಯಾರ್ಥಿಗಳೊಂದಿಗೆ ಸೇರಿಕೊಂಡು ಬಡಿದಾಡುತ್ತಿದ್ದೇನೆ. ಈ ಹೋರಾಟಕ್ಕೆ ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷೆ ಬರೆದವರೂ ಕೈಜೋಡಿಸಿದ್ದಾರೆ. ಅವರು ನನ್ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಅವರೂ ಕನ್ನಡದ ಮಕ್ಕಳೇ. ಹೀಗಾಗಿ ಅವರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವುದೇನು ಸಮಸ್ಯೆ ಅಲ್ಲ. ಹೀಗಾಗಿ ಕೆಪಿಎಸ್ಸಿ ಇನ್ನು ಮುಂದೆ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಬೇಕು ಎಂದು ಒತ್ತಾಯಿಸುತ್ತೇನೆ.
ಇವತ್ತು ಸಂಜೆ 7ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯುತ್ತಿದೆ. 70 ಸಾವಿರಕ್ಕೂ ಹೆಚ್ಚು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಕುರಿತು ಮಾನ್ಯ ಮುಖ್ಯಮಂತ್ರಿ @siddaramaiah ಸಿದ್ಧರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ನನ್ನದು. ಈಗಾಗಲೇ ಎಲ್ಲ ಸಚಿವರಿಗೂ ಆಗಿರುವ ಪ್ರಮಾದದ ಅರಿವಾಗಿದೆ. ಹೀಗಾಗಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಈಗ ಆಗಿರುವ ಪೂರ್ವಭಾವಿ ಪರೀಕ್ಷೆ ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸುವ ತೀರ್ಮಾನ ತೆಗೆದುಕೊಳ್ಳಬಹುದು ಎಂಬುದು ನನ್ನ ನಿರೀಕ್ಷೆ.
ಕೆಪಿಎಸ್ಸಿಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂಬುದು ಗೊತ್ತಾದ ನಂತರ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ ಹೋರಾಟ ಸಂಘಟಿಸುತ್ತ ಬಂದಿದೆ. ನಮ್ಮೆಲ್ಲರ ಸಾಂಘಿಕ ಹೋರಾಟದ ಫಲವಾಗಿಯೇ ಮುಖ್ಯಮಂತ್ರಿಗಳು ಈ ಹಿಂದೆ ಮರುಪರೀಕ್ಷೆಗೆ ಆದೇಶಿಸಿದ್ದರು. ಆದರೆ ಹೊಣೆಹೇಡಿತನದ ಪರಮಾವಧಿ ಎಂಬಂತೆ ಕೆಪಿಎಸ್ಸಿ ಮೊದಲ ಬಾರಿ ಮಾಡಿದ್ದ ತಪ್ಪುಗಳಿಂತ ಹೆಚ್ಚು ತಪ್ಪುಗಳನ್ನು ಮರುಪರೀಕ್ಷೆಯಲ್ಲಿ ಮಾಡಿತು.
ಮರುಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆ ಗಳಲ್ಲಿ 80 ತಪ್ಪುಗಳಾಗಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದಾಗ ಮತ್ತೆ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಕ್ಕೆ ಇಳಿಯಿತು. ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಗೆ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ನೆರೆದಿದ್ದರು. ಒಂದಲ್ಲ, ಎರಡಲ್ಲ ಮೂರುಬಾರಿ ಮುಖ್ಯಮಂತ್ರಿಗಳನ್ನು ನಾನೇ ಖುದ್ದಾಗಿ ಭೇಟಿ ಮಾಡಿ ಮಾತನಾಡಿದೆ. ಸಚಿವರು, ಶಾಸಕರ ಜೊತೆ ಮಾತಾಡಿದೆ, ವಿರೋಧ ಪಕ್ಷದ ನಾಯಕರ ಜೊತೆಯೂ ಮಾತಾಡಿದೆ. ನಮ್ಮ ಕರವೇ ಸೇನಾನಿಗಳು ಕೆಪಿಎಸ್ಸಿ ಮುತ್ತಿಗೆಯನ್ನೂ ನಡೆಸಿ ಬಂಧನಕ್ಕೊಳಗಾದರು, ಕೇಸೂ ಹಾಕಿಸಿಕೊಂಡರು. ಅಂದು ಸುಮಾರು ಇನ್ನೂರಕ್ಕೂ ಹೆಚ್ಚು ಪೊಲೀಸರನ್ನು ನನ್ನ ಮನೆಯ ಸುತ್ತ ಕಾವಲಿಗಿಟ್ಟು ನನ್ನ ಬಂಧನಕ್ಕೆ ತಯಾರಿ ನಡೆಸಲಾಗಿತ್ತು. (ನಾನು ಆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ನಿಗದಿಯಾಗಿರಲಿಲ್ಲವಾದ್ದರಿಂದ ನಾನು ಮನೆಯಿಂದ ಹೊರಗೆ ಬಂದಿರಲಿಲ್ಲ)
ಕೆಪಿಎಸ್ ಸಿ ಕುರಿತಾದ ಈ ಹೋರಾಟದಲ್ಲಿ ನಾವು ಪ್ರಜಾಪ್ರಭುತ್ವ ಮಾರ್ಗದ ಎಲ್ಲ ಹೋರಾಟದ ವಿಧಾನಗಳನ್ನು ಬಳಸಿದ್ದೇವೆ. ಕೊನೆಗೆ ಮುಖ್ಯಮಂತ್ರಿಗಳ ಮನ ಕರಗಲಿ ಎಂದು ರಕ್ತದಲ್ಲೂ ಪತ್ರ ಬರೆಯುವ ಅಭಿಯಾನ ನಡೆಸಿದ್ದೇವೆ. ನಾನೂ ಕೂಡ ನನ್ನ ರಕ್ತದಲ್ಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಪೋಸ್ಟರ್ ಕ್ಯಾಂಪೇನ್, ಟ್ವಿಟರ್ (ಎಕ್ಸ್) ಕ್ಯಾಂಪೇನ್ ಎಲ್ಲ ಮಾಡಿಮುಗಿಸಿದ್ದೇವೆ.
ಇವತ್ತು ಸಂಪುಟ ಸಭೆಯಲ್ಲಿ ಸರಿಯಾದ ತೀರ್ಮಾನ ಆಗದೇ ಹೋದಲ್ಲಿ ಪರಿಸ್ಥಿತಿ ಕೈ ಮೀರಬಹುದು. ಅದಕ್ಕೆ ನಾನು ಹೊಣೆಯಲ್ಲ. 7ನೇ ತಾರೀಕಿನಿಂದ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳು, ಅವರ ಪೋಷಕರು ಬೆಂಗಳೂರಿಗೆ ಬರಲಿದ್ದಾರೆ. ನಮ್ಮ ಹೋರಾಟದ ವರಸೆ ಬದಲಾಗುತ್ತದೆ. ದಯವಿಟ್ಟು ಯಾರೂ ನಮ್ಮನ್ನು ದೂರಬೇಡಿ.
ಸರ್ಕಾರ ಪರಿಸ್ಥಿತಿ ಕೈ ಮೀರಿ ಹೋಗುವುದಕ್ಕೆ ಅವಕಾಶ ನೀಡದೇ ಇಂದೇ ಸರಿಯಾದ ನಿರ್ಧಾರ ಕೈಗೊಳ್ಳಲಿ ಎಂದು ಆಶಿಸುತ್ತೇನೆ.
ಮಾನ್ಯ ಮುಖ್ಯಮಂತ್ರಿ @siddaramaiah
ಶ್ರೀ ಸಿದ್ಧರಾಮಯ್ಯನವರಿಗೆ ಬಹಿರಂಗ ಪತ್ರ.
ಗೌರವಾನ್ವಿತ ಮುಖ್ಯಮಂತ್ರಿಗಳಿಗೆ ನಮಸ್ಕಾರಗಳು.
ಡಿಸೆಂಬರ್ 29ರಂದು ಕೆಪಿಎಸ್ ಸಿ ನಡೆಸಿದ ಕೆಎಎಸ್ ಮರು ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿರುವುದು ಈಗಾಗಲೇ ತಮ್ಮ ಗಮನಕ್ಕೆ ಬಂದಿರುತ್ತದೆ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಕೊಡಲಾದ ಪ್ರಶ್ನೆಪತ್ರಿಕೆಗಳಲ್ಲಿ ಸುಮಾರು 54ಕ್ಕೂ ಹೆಚ್ಚು ಪ್ರಶ್ನೆಗಳು ತಪ್ಪಾಗಿವೆ. ಪ್ರಶ್ನೆ ಪತ್ರಿಕೆ ಗಳನ್ನು ಇಂಗ್ಲಿಷ್ ನಲ್ಲಿ ತಯಾರಿಸಿ, ಕನ್ನಡಕ್ಕೆ ತರ್ಜುಮೆ ಮಾಡಲಾಗಿದ್ದು, ವ್ಯಾಪಕವಾದ ದೋಷ ಕಾಣಿಸಿಕೊಂಡಿದೆ.
ಡಿಸೆಂಬರ್ 29ರಂದು ನಡೆದ ಮರುಪರೀಕ್ಷೆಯಲ್ಲಿ ಕನ್ನಡ ಭಾಷೆಯ ಯಾವ ನಿಘಂಟಿನಲ್ಲೂ ಇಲ್ಲದ ಚಿತ್ರವಿಚಿತ್ರ ಪದಗಳನ್ನು ಬಳಸಿ ಪ್ರಶ್ನೆಗಳನ್ನು ಕೇಳಲಾಗಿದೆ. ಉಪವೇಶನ, ಪುನರವ, ವೀಪರ್ಯ, ನೇಮಿತಗೊಳಿಸು, ಮೆಲವಿನ, ಅನುಪಾತನ ಎಂಬ ಹೊಚ್ಚಹೊಸ ಪದಗಳನ್ನು ಕೆಪಿಎಸ್ ಸಿ ಹಿಂದಿ ಅಧಿಕಾರಿಗಳು ಸೃಷ್ಟಿಸಿದ್ದಾರೆ. ಭೂಮಧ್ಯ ರೇಖೆ ಎಂಬ ಶಬ್ದ ಇರಬೇಕಾದ ಕಡೆ "ವಿಷುವದ್ವೈತದಿಂದ" ಎಂಬ ಪದ ಬಳಸಲಾಗಿದೆ. ಜೀವವೈವಿಧ್ಯತೆ ಎಂಬ ಪದದ ಬದಲಿಗೆ "ಜೀವವಿಮಾವಲದುಕ್ಕಿಂತ" ಎಂಬ ವಿಲಕ್ಷಣ ಪದ ಬಳಸಲಾಗಿದೆ. ಇದನ್ನೆಲ್ಲ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಹೇಗೆ ಅರ್ಥ ಮಾಡಿಕೊಂಡು ಉತ್ತರ ಬರೆಯಲು ಸಾಧ್ಯ?
ಕಳೆದ ಒಂದು ತಿಂಗಳಿನಿಂದ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳು ಆಗಿರುವ ಅನ್ಯಾಯವನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಹಲವು ಬಾರಿ ಪ್ರತಿಭಟನೆಗಳನ್ನೂ ನಡೆಸಿದ್ದಾರೆ. ಕಳೆದ ಫೆ.18ರಂದು ನಾವು ಕರ್ನಾಟಕ ರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾವಿರಾರು ಕರವೇ ಕಾರ್ಯಕರ್ತರು ಮತ್ತು ಪರೀಕ್ಷಾರ್ಥಿಗಳನ್ನು ಒಳಗೊಂಡಂತೆ ಬೃಹತ್ ಪ್ರತಿಭಟನೆ ನಡೆಸಿದ್ದೆವು. ಈ ಸಂದರ್ಭದಲ್ಲಿ ನಮ್ಮ ನಿಯೋಗ ತಮ್ಮನ್ನು ಭೇಟಿಯಾದಾಗ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ತಾವು ತಾತ್ತ್ವಿಕವಾಗಿ ಒಪ್ಪಿಕೊಂಡು, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಿರಿ. ಎರಡು ದಿನಗಳಲ್ಲಿ ಸಂಬಂಧಪಟ್ಟವರ ಸಭೆ ಕರೆದು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಿರಿ. ಆದರೆ ಇಂದಿಗೆ ಒಂಭತ್ತು ದಿನಗಳು ಕಳೆದರೂ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಇದು ನಮ್ಮೆಲ್ಲರಿಗೂ ಚಿಂತೆಗೆ ಕಾರಣವಾಗಿದೆ.
ಇದಾದ ನಂತರ ಕರ್ನಾಟಕ ರಕ್ಷಣಾ ವೇದಿಕೆ ಫೆ. 24ರಂದು ಬೆಂಗಳೂರಿನ ಕೆಪಿಎಸ್ ಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಯನ್ನೂ ನಡೆಸಿದೆ. ಪೊಲೀಸರು ನಮ್ಮ ಹಲವು ನಾಯಕರ ಮೇಲೆ ಮೊಕದ್ದಮೆ ದಾಖಲಿಸಿದ್ದಾರೆ. ಮೊಕದ್ದಮೆ ದಾಖಲಿಸಿದ್ದಕ್ಕೆ ನಮಗೆ ಚಿಂತೆಯಿಲ್ಲ. ನಮಗೆ ಅದು ಅಭ್ಯಾಸವಾಗಿ ಹೋಗಿದೆ. ಆ ಅಮಾಯಕ ಕನ್ನಡದ ಮಕ್ಕಳಿಗೆ ನ್ಯಾಯ ಸಿಗುತ್ತಿಲ್ಲವಲ್ಲ ಎಂಬುದು ನಮ್ಮ ಕಾಳಜಿಯಾಗಿದೆ.
ಸುಮಾರು 70,000ಕ್ಕೂ ಹೆಚ್ಚು ಮಂದಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ. ನಮ್ಮನ್ನು ವಂಚಿಸುವ ಉದ್ದೇಶದಿಂದಲೇ ತಪ್ಪುತಪ್ಪಾದ ಪ್ರಶ್ನೆ ಪತ್ರಿಕೆ ನೀಡಿ ಅನ್ಯಾಯವೆಸಗಲಾಗಿದೆ ಎಂಬ ಭಾವನೆ ಅವರಲ್ಲಿ ತೀವ್ರವಾಗಿ ಬೇರುಬಿಟ್ಟಿದೆ.
ಇಂಥ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಂಕಟಕ್ಕೆ ಧ್ವನಿಯಾಗಿರುವ ಕರ್ನಾಟಕ ರಕ್ಷಣಾ ವೇದಿಕೆ ಸರ್ಕಾರದೊಂದಿಗೆ ಸಂವಾದದ ಪ್ರಯತ್ನಗಳನ್ನು ನಡೆಸುತ್ತಿದೆ. ಕನ್ನಡಪರವಾದ ತಮ್ಮ ಕಾಳಜಿಯ ರಾಜಕಾರಣಕ್ಕೆ ಈ ಘಟನೆ ಕಪ್ಪುಚುಕ್ಕಿಯಾಗಿ ಉಳಿಯಬಾರದು ಎಂಬುದು ನನ್ನ ಕಾಳಜಿಯಾಗಿರುತ್ತದೆ.
ಕನ್ನಡ ಮಾಧ್ಯಮದ ಮಕ್ಕಳಿಗೆ ಅನ್ಯಾಯವಾಗಿರುವುದು ನಿಜ ಎಂಬುದು ತಮಗೂ ಮನವರಿಕೆ ಆಗಿದೆ, ಹೀಗಾಗಿ ತಡಮಾಡದೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ.
ವಂದನೆಗಳೊಂದಿಗೆ
ತಮ್ಮ ವಿಶ್ವಾಸಿ
(ಟಿ.ಎ.ನಾರಾಯಣಗೌಡ)
ರಾಜ್ಯಾಧ್ಯಕ್ಷರು
ಕರ್ನಾಟಕ ರಕ್ಷಣಾ ವೇದಿಕೆ
ಕೆ.ಎ.ಎಸ್ ಪರೀಕ್ಷಾರ್ಥಿಗಳ ಹಾಗೂ ನಮ್ಮ ನಿರಂತರ ಪ್ರಯತ್ನ ಹಾಗೂ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮರುಪರೀಕ್ಷೆ ಮಾಡಲು ನಿರ್ಧರಿಸಿದೆ. ಈ ವಿವೇಚನಾಯುತ ನಿರ್ಧಾರವನ್ನು ಸ್ವಾಗತಿಸುತ್ತಾ, ಈ ಕೆಳಕಂಡ ಸುಧಾರಣೆಗಳನ್ನು ಆಯೋಗದಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ಸರ್ಕಾರ ಮಾಡಲಿ.
➮ ಪರೀಕ್ಷಾರ್ಥಿಗಳು ವಾಸಿಸುವ ಊರು ಅಥವಾ ಗರಿಷ್ಟ 50 ಕಿ.ಮೀ. ದೂರವಿರುವ ಪರೀಕ್ಷಾ ಕೇಂದ್ರದಲ್ಲೇ ಅವರಿಗೆ ಪರೀಕ್ಷೆ ಬರೆಯುವ ಅವಕಾಶ ನೀಡಬೇಕು
➮ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಭಾನುವಾರವೇ ಪರೀಕ್ಷೆ ಆಗಬೇಕು ಮತ್ತು ಯಾವುದೇ ಇತರೆ ಪರೀಕ್ಷೆ ಇದ್ದ ದಿನ schedule ಮಾಡಬಾರದು
➮ಲೋಕಸೇವಾ ಆಯೋಗದಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ IAS ಕೆ.ಎಸ್.ಲತಾ ಕುಮಾರಿ ಅವರನ್ನು ಆಯೋಗದ ಕಾರ್ಯದರ್ಶಿಯಾಗಿ ನೇಮಕ ಮಾಡಬೇಕು.
➮ಕರ್ನಾಟಕ ಲೋಕ ಸೇವಾ ಆಯೋಗದ ಪರೀಕ್ಷಾ ನಿಯಂತ್ರಕರನ್ನು [Controller of Examinations ] ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತಿನಲ್ಲಿಡಬೇಕು. ಹಾಗೆಯೇ ಆಯೋಗದ ಅಧ್ಯಕ್ಷರನ್ನು ಕೂಡಲೇ ಬದಲಿಸಲಿ.
➮ಆಯೋಗವು ಆಯೋಜಿಸಿದ್ದ ಎಲ್ಲಾ ಪರೀಕ್ಷೆಗಳ ಫಲಿತಾಂಶವನ್ನು ಕೂಡಲೇ ಬಿಡುಗಡೆ ಮಾಡಬೇಕು.
➮ಆಯೋಗವು ನಡೆಸುವ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ನಡೆದ 100 ದಿನಗಳಲ್ಲಿ ಬಿಡುಗಡೆ ಮಾಡಬೇಕು
➮ಪ್ರಶ್ನೆ ಪತ್ರಿಕೆಯ ಗುಣಮಟ್ಟವನ್ನು ಧೃಡೀಕರಿಸಲು ಆಯೋಗದ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಆಗಬೇಕು. ಆಯೋಗದಲ್ಲೇ ಪ್ರಶ್ನೆಗಳು ತರ್ಜುಮೆ ಆಗಬೇಕು
➮ಪರೀಕ್ಷೆಯ ಕ್ಯಾಲೆಂಡರ್ ಅನ್ನು ಮುಂಚಿತವಾಗಿಯೇ ಆಯೋಗ ಪ್ರಕಟಿಸಬೇಕು. ಇದರಿಂದ ಪರೀಕ್ಷಾರ್ಥಿಗಳಿಗೆ ಎಷ್ಟು ಸಮಯ ಇದೆ ಮತ್ತು ಅವರ ಅಧ್ಯಯನಕ್ಕೆ ಸಹಕಾರಿಯಾಗಲಿದೆ.
➮ ಆಯೋಗದಲ್ಲಿರುವ ಭ್ರಷ್ಟರು, ದಲ್ಲಾಳಿಗಳ ಮೇಲೆ ಹಾಗೂ ಪರೀಕ್ಷಾರ್ಥಿಗಳ ಹಿತಾಸಕ್ತಿಯ ವಿರುದ್ಧ ನಿರ್ಧಾರವನ್ನು ಕೈಗೊಳ್ಳುವವರ ವಿರುದ್ಧ ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಅಂತಹವರನ್ನು ಆ ಸ್ಥಾನದಿಂದ ಎತ್ತಂಗಡಿ ಮಾಡಿ ಅಥವಾ ಶಿಸ್ತು ಕ್ರಮ ಜರುಗಿಸಿ.
➮ ಪರೀಕ್ಷೆಗಳು ಸಂಪೂರ್ಣವಾಗಿ ಪಾರದರ್ಶಕವಾಗಿರುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ fool proof ವ್ಯವಸ್ಥೆ ಕಲ್ಪಿಸಲಿ.
@tv9kannada I @AsianetNewsSN I @NewsFirstKan@AKSSAofficial I @prajavani I @publictvnews I @Vijayavani_Digi I @VijayaKarnataka I @DeccanHerald I @TheSouthfirst I @timesofindia I @Andolanadigital I @StarOfMysore I @HosadiganthaWeb I @thefileindia I
@KannadaPrabha I @CMofKarnataka I
In the light of reports of inappropriate kannada translation of questions in the KPSC Gazetted Probationers' examination, I have directed KPSC to reconduct of the examination within 2 months to ensure fairness to all candidates
Those responsible for these lapses have been relieved of their duties. The upcoming examination will be conducted with the utmost responsibility and accountability following all due diligence.
We remain committed to upholding the integrity of our recruitment processes.