ನುಡಿದಂತೆ ನಡೆದ ಜನನಾಯಕ, ಹೆಮ್ಮೆಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ಹೃದಯವನ್ನು ಭಾರವಾಗಿಸಿದೆ.
17 ಬಜೆಟ್ಗಳನ್ನು ಮಂಡಿಸಿದ ಅಪರೂಪದ ಸಾಧನೆ ಮೂಲಕ ತಾವೊಬ್ಬ ಆರ್ಥಿಕ ತಜ್ಞ ಎಂಬುದನ್ನು ಸಾಬೀತುಪಡಿಸಿದಷ್ಟೇ ಅಲ್ಲ, ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೂ ಅವರು ಭಾಜನರಾಗಿದ್ದಾರೆ.
ರೈತರ ಸಾಲಮನ್ನಾ, ಅನ್ನಭಾಗ್ಯ, ಕ್ಷೀರಭಾಗ್ಯ, 5 ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ, ರಾಜ್ಯಕ್ಕೆ ಅವರ ಕೊಡುಗೆಗಳ ಪಟ್ಟಿ ದೊಡ್ಡದಾಗಿಯೇ ಇದೆ. ಸುಮಾರು 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವುದು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಮಹತ್ವದ ಮೈಲಿಗಲ್ಲಾಗಿದೆ.
ವಿಶ್ವಗುರು ಬಸವಣ್ಣ ಅವರನ್ನು ನಾಡಿನ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿ, ಎಲ್ಲ ಬಸವ ಭಕ್ತರ ಹೃದಯದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದ್ದಾರೆ. ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಬಜೆಟ್ನಲ್ಲಿ ಅನುಮೋದನೆ ನೀಡಿ, ಶರಣರ ತತ್ವ, ವಚನ ಸಾಹಿತ್ಯ ಹಾಗೂ ಸಮಾನತೆಯ ಸಂದೇಶವನ್ನು ಮುಂದಿನ ಪೀಳಿಗೆಗಳಿಗೆ ತಲುಪಿಸುವ ಐತಿಹಾಸಿಕ ಕಾರ್ಯಕ್ಕೆ ಭದ್ರ ಅಡಿಗಲ್ಲು ಹಾಕಿದ್ದಾರೆ.
ಅವರ ಸಚಿವ ಸಂಪುಟದಲ್ಲಿ 2013ರಿಂದ 2018ರವರೆಗೆ ರಾಜ್ಯದ ಜಲಸಂಪನ್ಮೂಲ ಸಚಿವನಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ನನ್ನ ಮೇಲೆ ಸಂಪೂರ್ಣ ಭರವಸೆ ಇಟ್ಟು, ರಾಜ್ಯದ ಎಲ್ಲ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಾದ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸಿ, ಆ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಅವಕಾಶ ಕಲ್ಪಿಸಿದ್ದರು.
ಅದಾದ ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಗೃಹಖಾತೆ ಸಚಿವನಾಗಿದ್ದಾಗಲೂ ತಮ್ಮ ಅಮೂಲ್ಯ ಮಾರ್ಗದರ್ಶನ ನೀಡುತ್ತಾ ಸದಾ ಬೆಂಬಲವಾಗಿ ನಿಂತಿದ್ದರು. 2023ರಿಂದ ಇಂದಿನ ವರೆಗೆ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವನಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ‘ಇನ್ವೆಸ್ಟ್ ಕರ್ನಾಟಕ’ ಮೂಲಕ ವಿದೇಶಿ ನೇರ ಬಂಡವಾಳ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುವಂತೆ ಮಾಡಲು ನನಗೆ ಸಂಪೂರ್ಣ ಸ್ವಾತಂತ್ರ್ಯ ಮತ್ತು ಶಕ್ತಿ ನೀಡಿದ್ದು ನನ್ನ ಸೌಭಾಗ್ಯ.
ಸಂವಿಧಾನದ ಮೇಲಿನ ಅವರ ಅಚಲ ಬದ್ಧತೆ, ಸಾಮಾಜಿಕ ನ್ಯಾಯದ ಪರವಾದ ಅವರ ಹೋರಾಟ, ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರ ತತ್ವಗಳ ಮೇಲಿನ ನಿಷ್ಠೆ ನಮಗೆಲ್ಲರಿಗೂ ದಾರಿದೀಪವಾಗಿದೆ.
ಬಡವರು, ಹಿಂದುಳಿದವರು, ರೈತರು, ಕಾರ್ಮಿಕರು ಹಾಗೂ ಸಾಮಾನ್ಯ ಜನರ ಕಣ್ಣೀರಿನ ಭಾಷೆಯನ್ನು ಅರ್ಥಮಾಡಿಕೊಂಡ ನಾಯಕ ಅವರು. ಅಧಿಕಾರವನ್ನು ವೈಭವಕ್ಕಾಗಿ ಅಲ್ಲ, ಜನಸೇವೆಯ ಸಾಧನವಾಗಿ ಬಳಸಿದ ಅಪರೂಪದ ಮುತ್ಸದ್ಧಿ ರಾಜಕಾರಣಿ.
ಅಧಿಕಾರಕ್ಕಿಂತ ಮೌಲ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ ಅವರ ನಡೆ, ಸಾರ್ವಜನಿಕ ಜೀವನದಲ್ಲಿ ತತ್ವನಿಷ್ಠ ರಾಜಕಾರಣ ಹೇಗಿರಬೇಕು ಎಂಬುದಕ್ಕೆ ಜೀವಂತ ಉದಾಹರಣೆಯಾಗಿದೆ. ಅವರು ನಾಡಿನ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ.
ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ನಾಡಿಗೆ, ರಾಷ್ಟ್ರಕ್ಕೆ ಹಾಗೂ ಪಕ್ಷಕ್ಕೆ ತಮ್ಮ ಮಾರ್ಗದರ್ಶನ ನೀಡುತ್ತಿರಲಿ ಎಂಬುದು ಹೃತ್ಪೂರ್ವಕ ಆಶಯ.
@siddaramaiah
Today, I went to Lok Bhavan and, in the absence of the Governor, handed over my resignation letter from the post of Chief Minister to the Governor’s Special Secretary.
As someone who was born and brought up in a small village, I had never imagined that one day I would become an MLA, a Minister, the Leader of the Opposition, and serve twice as the Chief Minister of Karnataka. A dream this big became possible only because of the Constitution written by Babasaheb Dr. B. R. Ambedkar.
Buddha, Basavanna, Babasaheb Ambedkar, and Mahatma Gandhi have always shown me the path. Through my forty-eight years in public life, I have always tried to stand with honesty beside the poor, the oppressed, the neglected, and those who were denied opportunities in society. That is the greatest satisfaction of my life.
I will forever remain grateful to the party legislators who trusted me and chose me to lead, to my cabinet colleagues who walked with me through every challenge, and to Smt. Sonia Gandhi, Shri Rahul Gandhi, and AICC President Shri Mallikarjun Kharge for believing in me and giving me this responsibility.
But above all, I bow my head before the people of Karnataka, the lakhs of affectionate hearts who treated me as one among their own, blessed me, encouraged me, corrected me, stood by me in difficult times, and held my hand throughout this long journey. Whatever I am today is because of you.
The Constitution is my religion, and the people are my God. My resignation is only from the Chief Minister’s post, not from public life or from my commitment to the people.
Till my last breath, I will continue to fight for social justice and stand against divisive communal forces that go against the spirit of our Constitution.
Thank you for your love, trust, and companionship through every step of this journey. ❤
ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು.
ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ.
ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ.
ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ.
ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ.
@siddaramaiah
ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.
ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ ❤
Took part in the Kanchipuram-Chengalpattu public meeting and addressed the massive gathering today, along with Tamil Nadu Chief Minister @mkstalin and Tamil Nadu Pradesh Congress Committee President K. Selvaperunthagai, and other senior leaders of our alliance.
The enthusiasm of the people reflects the trust they have in our alliance. The current government’s welfare measures have positively impacted lives across the state, and our alliance stands united to continue this progress.
I thank the people for their overwhelming support. This energy strengthens our resolve as we move forward together.
ಕರ್ನಾಟಕದ ಮೊದಲ ರಾಜ್ಯಪಾಲರಾಗಿದ್ದವರು ಜಯಚಾಮರಾಜೇಂದ್ರ ಒಡೆಯರ್ ಅವರು. ಮೈಸೂರು ಸಂಸ್ಥಾನದ ಕೊನೆಯ ಮಹಾರಾಜರಾಗಿದ್ದ ಅವರು ಕನ್ನಡ ನಾಡಿನ ಸಂಸ್ಕೃತಿ, ಕಲೆ, ಸಾಹಿತ್ಯದ ದೊಡ್ಡ ಪೋಷಕರಾಗಿದ್ದವರು. ಕರ್ನಾಟಕದಲ್ಲಿ ಆಗಿಹೋದ ಟಿ.ಎನ್.ಚತುರ್ವೇದಿ, ಖುರ್ಷಿದ್ ಆಲಂ ಖಾನ್, ವಿ.ಎಸ್.ರಮಾದೇವಿ ಅವರುಗಳು ಈ ನಾಡಿನ ಅಸ್ಮಿತೆಯನ್ನು ಗೌರವಿಸಿ ಕನ್ನಡಿಗರ ಪ್ರೀತಿ ಗೆದ್ದಿದ್ದರು.
ಕನ್ನಡಿಗರ ದೌರ್ಭಾಗ್ಯವೆಂಬಂತೆ ಈ ಬೆರಳೆಣಿಕೆಯ ರಾಜ್ಯಪಾಲರನ್ನು ಹೊರತುಪಡಿಸಿದರೆ ರಾಷ್ಟ್ರೀಯ ಪಕ್ಷಗಳ ಕೈಗೊಂಬೆ ರಾಜಕಾರಣಿಗಳನ್ನು ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ರಾಜ್ಯಪಾಲರುಗಳು ಪಕ್ಷ ರಾಜಕಾರಣದಿಂದ ದೂರ ಉಳಿಯಬೇಕು ಎಂಬುದು ಸಾಂವಿಧಾನಿಕ, ನೈತಿಕ ಕರ್ತವ್ಯ. ಆದರೆ ತಾವು ಪ್ರತಿನಿಧಿಸುತ್ತಿದ್ದ ರಾಜಕೀಯ ಪಕ್ಷ, ತನ್ನನ್ನು ನೇಮಕ ಮಾಡಿದ ಸರ್ಕಾರದ ಏಜೆಂಟರಂತೆ ಇವರು ವರ್ತಿಸಿದ್ದೇ ಹೆಚ್ಚು.
ಹಿಂದೆ ರಾಜ್ಯಪಾಲರಾಗಿದ್ದ ವಜೂಬಾಯಿ ವಾಲಾ ಎಂಬುವವರು ರಾಜಭವನವನ್ನು ಗುಜರಾತ್ ಭವನವನ್ನಾಗಿ ಮಾಡಿಕೊಂಡಿದ್ದರು. ಈಗ ಮಧ್ಯಪ್ರದೇಶದವರಾದ ತಾವರ್ ಚಂದ್ ಗೆಹ್ಲೋಟ್ ತಮಗೆ ಬೇಡವಾದ ವಿಷಯಕ್ಕೆ ತಲೆಹಾಕಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಮಾಡಿದರೆ ರಾಜ್ಯಪಾಲರಿಗೇನು ಸಮಸ್ಯೆ? ಜನರಿಂದ ಆಯ್ಕೆಯಾದ ರಾಜ್ಯ ಸರ್ಕಾರ ಕರ್ನಾಟಕದ ಶಾಲಾಮಕ್ಕಳ ಮೇಲಿನ ಹೊರೆಯನ್ನು ಕಡಿಮೆ ಮಾಡಿದರೆ ರಾಜ್ಯಪಾಲರ ಗಂಟೇನು ಹೋಗುತ್ತದೆ? ಸರ್ಕಾರ ತನ್ನ ನೀತಿಯನ್ನು ಪುನರ್ ಪರಿಶೀಲಿಸಲಿ ಎಂದು ಅವರು ಯಾಕೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆಯುತ್ತಾರೆ? ಇದೇ ಕಾಳಜಿಯನ್ನು ಅವರು ತಮ್ಮ ತವರು ರಾಜ್ಯ ಮಧ್ಯಪ್ರದೇಶದ ಮಕ್ಕಳ ಮೇಲೆ ಏಕೆ ತೋರುವುದಿಲ್ಲ. ಅವರು ಅಲ್ಲಿಯೂ ಮಕ್ಕಳಿಗೆ ಮೂರನೇ ಭಾಷೆಯನ್ನು ಅಂಕಗಳಿಗೆ ಕಡ್ಡಾಯ ಮಾಡಬೇಕಲ್ಲವೇ? ಅಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸಲಿ ನೋಡೋಣ.
ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ಅಡಿಯಾಳಾಗಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿಯ ಗುಲಾಮರನ್ನಾಗಿಸಲು ಯತ್ನಿಸಲಾಗುತ್ತಿದೆ. ಈಗ ಕರ್ನಾಟಕ ಎಚ್ಚೆತ್ತುಕೊಂಡಿದೆ. ಇನ್ನು ಈ ಷಡ್ಯಂತ್ರಗಳಿಗೆ ನಾವು ಬಲಿಯಾಗುವುದಿಲ್ಲ.
ಕನ್ನಡ ವಿರೋಧಿ ಧೋರಣೆ ತಳೆದಿರುವ ತಾವರ್ ಚಂದ್ ಗೆಹ್ಲೋಟ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಲಿ, ಅಥವಾ ಅವರನ್ನು ನೇಮಿಸಿರುವ ಕೇಂದ್ರ ಸರ್ಕಾರ ಅವರನ್ನು ಹಿಂದಕ್ಕೆ ಕರೆಯಿಸಿಕೊಳ್ಳಲಿ. ಕರ್ನಾಟಕದಲ್ಲಿ ಕನ್ನಡದ್ರೋಹಿಗಳಿಗೆ ಯಾವುದೇ ಜಾಗವಿಲ್ಲ.
- ಟಿ.ಎ.ನಾರಾಯಣಗೌಡ
#GoBackGoverner
Advisory:
In view of the current regional situation, all Indian nationals in Bahrain are advised to take due care, & follow news and advisories as & when issued by the Embassy & local authorities.
First Tamil Nadu. Then Kerala. Now Karnataka. The pattern is clear and deliberate.
Governors refusing to read the speech prepared by state governments and behaving like party agents, undermining duly elected state governments.
As I stated earlier, the only solution now is to end the practice of commencing the first annual Assembly session with the #Governor’s address.
#DMK will consult like-minded opposition parties across India and pursue a constitutional amendment in the very next parliamentary session to abolish this obsolete and irrelevant practice.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ತಿರು. @Siddaramaiah ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.
ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ; ಹಾಗೂ ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುವರು.
ನಿಮಗೆ ನಿರಂತರ ಶಕ್ತಿ, ಸಂತೋಷ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ.
Birthday greetings to Hon’ble Chief Minister of Karnataka Thiru. @Siddaramaiah avaru.
Your strong voice in defending language rights and advancing social justice reflects the spirit of true federalism and inclusive democracy. These values hold immense significance in today’s India, and the people of Tamil Nadu and Karnataka shall stand together in upholding them.
Wishing you continued strength, happiness and long life.