ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BSYBJP ಹೊಸಕೋಟೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಡೈರಿಗೆ ಭೇಟಿ ನೀಡಿ ಅಧಿಕಾರಕ್ಕೆ ಬಂದ ನಂತರ ಹಾಲಿನ ಸಂಗ್ರಹ ಮತ್ತು ಸಂಸ್ಕರಣ ಪದ್ಧತಿಯನ್ನು ಸರಳೀಕೃತಗೊಳಿಸಿ, ಉತ್ತಮ ಬೆಲೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.
ಬೆಂಗಳೂರಿನ ಶಿವಾಜಿನಗರಕ್ಕೆ ಆಟೋದಲ್ಲಿ ತೆರಳಿ ಆಟೋ ಚಾಲಕರು ಮತ್ತು ಮಾಲೀಕರ ಜೊತೆ ಸಂವಾದ ನಡೆಸಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದೊಡನೆ ಆಟೋ ಚಾಲಕರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಆಟೋ ಚಾಲಕರಿಗೆ ಆರ್ಥಿಕ ನೆರವು, ಆರೋಗ್ಯ ಸೇವೆ ಮತ್ತು ಅವರ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ.
ಸೂಕ್ತ ಬೆಲೆ ಸಿಗದೆ ಹಾಗೂ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರನ್ನು ರಾಜ್ಯ ಸರಕಾರ ನಿರ್ಲಕ್ಷಿಸಿದೆ. ಕೇಂದ್ರ ಸರಕಾರ ರೈತರ ನೆರವಿಗೆ ಧಾವಿಸಿದ್ದು, ಮಿಲ್ಲಿಂಗ್ ಕೊಬ್ಬರಿಯ ಬೆಂಬಲ ಬೆಲೆಯನ್ನು ₹6,500ರಿಂದ ₹7,500ಕ್ಕೆ, ತಿನ್ನಲು ಬಳಸುವ ಕೊಬ್ಬರಿಯ ಬೆಂಬಲ ಬೆಲೆಯನ್ನು ₹6,785ರಿಂದ ₹7,780ಕ್ಕೆ ಏರಿಕೆ ಮಾಡಿದೆ.