2024 ರಲ್ಲೂ ನಾವು ಶಿಕ್ಷಣ, ಆ���ೋಗ್ಯ ಮತ್ತು ಉದ್ಯೊಗ ಮತ್ತು ಪ್ರತಿಯೊಂದನ್ನೂ ಸಮಾಜದಲ್ಲಿ ಕಷ್ಟ ಪಟ್ಟು ಪಡೆದು ದೊಡ್ಡ ಜಾತಿಯವರ ಸರಿಸಮಾನವಾಗಿ ಬೆಳೆದರೂ ಸಮಾಜದಲ್ಲಿ ನಮಗೆ ಸಮಾನವಾಗಿ ಬದುಕಲು ಅವಕಾಶ ಕೊಡಿ ಅಂತ ಬೇಡ್ಕೊಬೇಕಾಗಿದೆ. ಇನ್ನೂ ಯಾವಾಗ ಈ ಜಾತಿ ಆತಂಕವಾದ ಕೊನೆಗೊಳ್ಳುವುದು..??
ಜಾಗತಿಕ ಕ್ರಿ���ೆಟ್ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ.
ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ.
- ಮುಖ್ಯಮಂತ್ರಿ @siddaramaiah
#SachinTendulkar
ಪಕ್ಷದ ವರಿಷ್ಠರಾದ @RahulGandhi ಅವರನ್ನು ದೆಹಲಿಯಲ್ಲಿ ಇಂದು ಭೇಟಿಯಾಗಿ, ಮಾತುಕತೆ ನಡೆಸಿದೆ.
ದ್ವೇಷ, ಅಸತ್ಯದ ವಿರುದ್ಧದ ಅವರ ಹೋರಾಟಕ್ಕೆ ನಾನೆಂದೂ ಜೊತೆಗಿರಲಿದ್ದೇನೆ.
#RahulGandhiVoiceOfIndia
ಪ್ರಧಾನಿ @narendramodi ಅವರೇ,
ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ 'ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡುತ್ತಿದ್ದೇನೆ.
- ಮುಖ್ಯಮಂತ್ರಿ @siddaramaiah
#SaveMourya
ಇಂದು ನನ್ನ ಗೃಹ ಕಛೇರಿಗೆ ಆಗಮಿಸಿದ ತುಮಕೂರು ಜಿಲ್ಲೆಯ ಖುಷಿ ಎಂಬ ವಿದ್ಯಾರ್ಥಿನಿಯು ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನಲ್ಲಿ 2ನೇ ವರ್ಷದ ಬಿ.ಇ ವ್ಯಾಸಂಗ ಪಡೆಯುತ್ತಿದ್ದು ವಿದ್ಯಾರ್ಥಿನಿಯ ಉನ್ನತ ವಿದ್ಯಾಭ್ಯಾಸಕ್ಕಾಗಿ ನನ್ನ ಸ್ವಂತ ಹಣದಲ್ಲಿ ಧನಸಹಾಯ ಮಾಡಿದೆ.
ರಣಹೇಡಿ ನರೇಂದ್ರ ಮೋದಿ ಮತ್ತು Team BJP ತನ್ನ ದುರಾಡಳಿತ, ಭ್ರಷ್ಟಾಚಾರ, ಧರ್ಮ ಮತ್ತು ಮತಾಂಧ ರಾಜಕೀಯದಿಂದ ತನ್ನ ಪ್ರಭಾವವು ರಾಷ್ಟ್ರದಲ್ಲಿ ಮಟ್ಟದಲ್ಲಿ ಕುಗ್ಗುತ್ತಿರುವುದರಿಂದ ಜನರನ್ನು ದಿಕ್ಕು ತಪ್ಪಿಸಲು ED ದುರ್ಬಳಕೆಯಿಂದ ವಿರೋಧಿಗಳನ್ನು ಜೈಲಿಗೆ ಕಳಿಸುವ ನೀಚ ಕೆಲಸಕ್ಕೆ ಕೈ ಹಾಕಿದ್ದಾರೆ,ಇದು ಅತ್ಯಂತ ಶೋಚನೀಯ ಮತ್ತು ಖಂಡನೀಯ.
ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3,000 ಕ್ಯೂಸೆಕ್ ನೀರು ಬಿಡಲು ಆದೇಶಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ ಸೂಚಿಸಿದ್ದಾರೆ. 4/5
- ಮುಖ್ಯಮಂತ್ರಿ @siddaramaiah
#ಕಾವೇರಿ_ನಮ್ಮದು
ರಾಜ್ಯ ವಿಧಾನಸಭೆಗಳು ಮತ್ತು ಲೋಕಸಭೆಯ ಶೇ.33 ಸ್ಥಾನಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದು ಕಾಂಗ್ರೆಸ್ ಪಕ್ಷದ ಬಹುದಿನಗಳ ಕನಸು ಮತ್ತು ಬದ್ಧತೆ.
ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ
ನಾರಿ ಶಕ್ತಿ ವಂದನಾ ಅಧಿನಿಯಮವೆಂಬ ಹೆಸರಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿರುವುದನ್ನು ಸ್ವಾಗತಿಸುತ್ತೇನೆ.
ಯುಪಿಎ ಸರ್ಕಾರ 2010ರಲ್ಲಿಯೇ ಮಹಿಳಾ ಮೀಸಲಾತಿ ���ಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ.
#WomenReservationBill
"If god is the root cause for our degradation, destroy that god. If it is religion, destroy it. If it is Manu Darma, Gita, or any other Mythology (Purana), burn them to ashes. If it is a temple, tank, or festival, boycott them"
– Periyar E. V. Ramasamy
#HBDPeriyar
The man who coined the word "Godi Media" has this to say about INDIA Alliance decision to boycott 14 Godi Anchors. @ravishndtv has been for years advising people to stop watching News debates by Godi media and their Anchors.
Here is the full video
: https://t.co/ePlFnXt03E
ಮಾನ್ಯ @JPNadda ಅವರೇ,
ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ನಾವು ಕೊಡುತ್ತೇವೆ. ಇದನ್ನೆಲ್ಲ ನೀವು ಮರೆತಿರಬಹುದು, ಆದರೆ “ಇಂಡಿಯಾ” ಮರೆತಿಲ್ಲ.
ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು:
•ಸಿದ್ದಿಕ್ ಕಪ್ಪನ್
•ಮೊಹಮ್ಮದ್ ಝುಬೇರ್
•ಅಜಿತ್ ಓಝಾ
•ಜಸ್ಪಾಲ್ ಸಿಂಘ್
•ಸಜದ್ ಗುಲ್
ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು:
•ರಾಕೇಶ್ ಸಿಂಗ್ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ
•ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ, ಮರಳು ದಂಧೆ ಕುರಿತು ವರದಿ
•ಜಿ ಮೋಸೆಸ್, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ
•ಪರಾಗ್ ಭುಯಾನ್, ಅಸ್ಸಾಮ್, ಎಸ್ಐನೇಮಕಾತಿ ಹಗರಣ ಕುರಿತು ವರದಿ
•ಗೌರಿ ಲಂಕೇಶ್, ಕೋಮುವಾದ ವಿರೋಧಿಸಿದ್ದಕ್ಕೆ
ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ..!!
2015 - 136ನೇ ಸ್ಥಾನ
2019 - 140ನೇ ಸ್ಥಾನ
2022 - 150ನೇ ಸ್ಥಾನ
2023 - 161ನೇ ಸ್ಥಾನ
ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ.
ಪ್ರಧಾನಿ @narendramodi ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ���ನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ…!!
‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ @narendramodi ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯ���ದುದು.
ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆ.
ವಿಷಯ - ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಆಗುತ್ತದೆ. 1/3
#SanatanaDharma
ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗೌರಿಯವರು ನನ್ನನ್ನು ಹತ್ತಾರು ಬಾರಿ ಭೇಟಿಯಾಗಿದ್ದರು. ಆದರೆ ಒಂದು ಬಾರಿಯೂ ಪತ್ರಿಕೆಗೆ ಸಹಾಯ ಕೇಳಲು, ತನ್ನ ಕುಟುಂಬಕ್ಕೆ ಸಹಾಯ ಕೇಳಲು, ವೈಯುಕ್ತಿಕ ಕೆಲಸಗಳಿಗಾಗಿ ಬಂದಿರಲಿಲ್ಲ. ಕೇವಲ ಆದಿವಾಸಿಗಳ, ರೈತರ, ಕಾರ್ಮಿಕರ ಸಮಸ���ಯೆಗಳಿಗಾಗಿ ಪರಿಹಾರ ಕೇಳಲು ಬರುತ್ತಿದ್ದರು.
ಗೌರಿಯನ್ನು ಕೊಂದವರು ಹೇಡಿಗಳು. ವೈಚಾರಿಕವಾಗಿ ಆಕೆಯನ್ನು ಎದುರಿಸಲಾಗದವರು ಕೊಂದಿದ್ದಾರೆ. 2/4
#ಗೌರಿಲಂಕೇಶ್_ಸ್ಮರಣೆ
ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು.
ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು.
ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ @ColorsKannada ವಾಹಿನಿಗೆ ಧನ್ಯವಾದಗಳು.