Draft Seed Bill 2019 is against the interests of farmers & intends to ensure profits to private companies. I urge @PMOIndia@narendramodi to review the draft, hold all stakeholders meet & revise the draft to help farmers.
Here is my letter to PM @narendramodi:
ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ಅಸಂಘಟಿತ ವಲಯದ ಮಹಿಳಾ ಕಾರ್ಮಿಕರ ಸಮಾವೇಶವನ್ನು ಉದ್ಘಾಟಿಸಿದೆ.
ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷರಾದ @sushmitadevinc ಅವರು ಭಾಗವಹಿಸಿದ್ದರು.
ಭಾರತದ ಪಾಲಿಗೆ ರತ್ನಸ್ವರೂಪಿಯಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕಾಯ ನಮ್ಮನಗಲಿ ವರುಷವಾದರೂ ಅವರ ಸತ್ಕಾರ್ಯಗಳು ನಿತ್ಯ ಸ್ಮರಣೀಯ. ಜನತೆಯ ಸೇವೆಯೇ ಜನಾರ್ಧನನ ಸೇವೆ ಎಂಬ ಸರಳ ಸತ್ಯವನ್ನು ಕಲಿಸಿದ ಗುರುಗಳು ನನಗೆ ಸದಾ ದಾರಿದೀಪ.
ಹುಣಸೂರು ವಿಧಾನಸಭೆ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷದ ಉಸ್ತುವಾರಿ ವಹಿಸಿಕೊಂಡು ಗೆಲುವಿಗಾಗಿ ಶ್ರಮಿಸಿದ ಮುಖಂಡರಿಗೆ ಅಭಿನಂದನೆ ಸಲ್ಲಿಸಿದ ಸಮಾರಂಭದಲ್ಲಿ ನಿನ್ನೆ ಭಾಗವಹಿಸಿದೆ.
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕು ಕುರುಬರ ಸಂಘದ ವತಿಯಿಂದ ಆಯೋಜಿಸಿದ್ದ ಶ್ರೀ ಕನಕದಾಸ ಜಯಂತ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದೆ.
ಸಂಭ್ರಮದ ಸಂಕ್ರಾಂತಿ ಹಬ್ಬವು ಸಮಸ್ತ ಜನರ ಬಾಳಲ್ಲಿ ಸಮೃದ್ಧಿಯನ್ನು ಹೊತ್ತು ತರಲಿ, ಪ್ರಸಕ್ತ ಸಾಲಿನಲ್ಲಿ ಮಳೆ, ಬೆಳೆ ಉತ್ತಮವಾಗಿ ಬಂದು ರೈತರು, ಶ್ರಮಿಕರ ಬಾಳಲ್ಲಿ ನೆಮ್ಮದಿಯು ನೆಲೆಸಲಿ ಎಂದು ಹಬ್ಬದ ಶುಭ ಸಂದರ್ಭದಲ್ಲಿ ಪ್ರಾರ್ಥಿಸುತ್ತೇನೆ.
ಸರ್ವರಿಗೂ ಸಂಕ್ರಾಂತಿಯ ಶುಭಾಶಯಗಳು. #Sankranthi2020
ರಾಜ್ಯಸಭೆಯ ಸದಸ್ಯರಾದ ಅಹ್ಮದ್ ಪಟೇಲ್ ಅವರನ್ನು ಇಂದು ದೆಹಲಿಯಲ್ಲಿ ಭೇಟಿಮಾಡಿ, ಮಾತುಕತೆ ನಡೆಸಿದೆ.
ಈ ವೇಳೆ ಮಾಜಿ ಸಚಿವ @BZZameerAhmedK , ಶಾಸಕರಾದ ಬೈರತಿ ಸುರೇಶ್, ಭೀಮಾ ನಾಯ್ಕ್, ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಹಲವರು ಜೊತೆಗಿದ್ದರು.
Best wishes to AICC Gen Secretary Smt. @priyankagandhi on her birthday. With her efforts to fight against fascism & her support to anti-CAA campaign, India is seeing an emerging leader in the making.
I wish her good health & happiness.
ವಾಲ್ಮೀಕಿ ಸಮುದಾಯದ ಗುರುಗಳಾದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಇಂದು ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಸೇರಿದಂತೆ ವಾಲ್ಮೀಕಿ ಸಮುದಾಯದ ಹಲವು ಕಾಂಗ್ರೆಸ್ ಶಾಸಕರು ಈ ಸಂದರ್ಭದಲ್ಲಿ ಹಾಜರಿದ್ದರು.
ಹಿಂದೂ ಧರ್ಮದ ಸುಧಾರಣೆಗೆ ಅವಿರತವಾಗಿ ಪ್ರಯತ್ನ ಮಾಡುತ್ತಾ ಬಂದ..
ನೇರ ನಡೆ-ನುಡಿಯ ಮೂಲಕ ಎಲ್ಲರ ಪ್ರೀತಿ-ಅಭಿಮಾನಕ್ಕೆ ಪಾತ್ರರಾಗಿದ್ದ...
ಸದಾ ಹೊಸ ಆಲೋಚನೆಗಳ ಪ್ರಯೋಗ ಶೀಲ ಮನಸ್ಸು ಹೊಂದಿದ್ದ...
ಪೂಜ್ಯರಾದ ಪೇಜಾವರ ಮಠದ ವಿಶ್ವೇಶತೀರ್ಥ
ಶ್ರೀಗಳ ನಿಧನಕ್ಕೆ ನನ್ನ ಸಂತಾಪಗಳು.
ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸುವ ಉದ್ದೇಶ ಇಲ್ಲ ಎಂದು ಮುಖ್ಯಮಂತ್ರಿ @BSYBJP ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳು ಆಡಿದ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ನಂಬಿದ್ದೇನೆ.
ಅವರಿಗೆ ಧನ್ಯವಾದಗಳು.
@INCKarnataka
ಕಾಗವಾಡದಲ್ಲಿ ನನ್ನ ಭಾಷಣದ ವೇಳೆ "ಹೌದೋ ಹುಲಿಯಾ" ಅಂತ ಅವನದ್ದೇ ಶೈಲಿಯಲ್ಲಿ ಪ್ರೀತಿಯಿಂದ ಕೂಗಿದ್ದ ಈ ಪೀರಪ್ಪ ಕಟ್ಟೀಮನಿ.
ಅಷ್ಟೇ ಪ್ರೀತಿಯಿಂದ ಇಂದು ನನ್ನ ಆರೋಗ್ಯ ವಿಚಾರಿಸಲು ಬಂದಿದ್ದಾನೆ.
ಇಂಥ ನಿಷ್ಕಲ್ಮಶ ಪ್ರೀತಿ ತುಂಬಿದ ಹೃದಯದ ಈತನೇ ನಿಜವಾದ 'ಹುಲಿಯಾ'.