ಕರ್ನಾಟಕದ ಹೆಮ್ಮೆಯ ನೇತಾರ, ಎಐಸಿಸಿ ಅಧ್ಯಕ್ಷರು, ರಾಜ್ಯಸಭಾ ವಿರೋಧ ಪಕ್ಷದ ನಾಯಕರು ಹಾಗೂ ಮಾರ್ಗದರ್ಶಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಜನ್ಮದಿನದ ಶುಭಾಶಯ ಕೋರಿದೆನು..
#MallikarjunKhrage#SatishJarkiholi@incindia@inckarnataka @mallikarjunkhargeinc
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತದಿಂದ ಹಲವಾರು ಭಕ್ತರು ಸಾವನ್ನಪ್ಪಿರುವ ಸುದ್ದಿ ಅತ್ಯಂತ ನೋವಿನ ಸಂಗತಿಯಾಗಿದೆ.
ಎಲ್ಲಾ ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಆಶಿಸುತ್ತೇನೆ.
#hathras@INCIndia@PMOIndia
ಟಿ20 ವಿಶ್ವಕಪ್ ಗೆದ್ದು ಬಿಗಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು 🇮🇳
ಸೌತ್ ಆಫ್ರಿಕಾ ವಿರುದ್ಧ ಫೈನಲ್ ಪಂದ್ಯದಲ್ಲಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತೀಯ ಕ್ರಿಕೆಟ್ ತಂಡಕ್ಕೆ ಹಾಗೂ ಮುಖ್ಯ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಕೋಟ್ಯಾಂತರ ಅಭಿಮಾನಿಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು
#t20worldcup
ಯೋಗವು ಭಾರತದ ಪ್ರಾಚೀನ ಸಂಪತ್ತು. ಅನನ್ಯತೆಯ ಪ್ರತೀಕ. ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ಆರೋಗ್ಯವಂತರಾಗಿರೋಣ. ಆರೋಗ್ಯಕರ ಕರ್ನಾಟಕವನ್ನು ನಿರ್ಮಿಸೋಣ.
ಎಲ್ಲರಿಗೂ ವಿಶ್ವ ಯೋಗ ದಿನಾಚರಣೆಯ ಶುಭಾಶಯಗಳು.
#ವಿಶ್ವಯೋಗದಿನ#worldyogaday
ಸೈದ್ಧಾಂತಿಕ ಗಟ್ಟಿತನ ಇರುವ, ಸಾಮಾಜಿಕ ಸಾಮರಸ್ಯಕ್ಕಾಗಿ ದುಡಿಯುತ್ತಿರುವ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಶ್ರೀ @rahulgandhi ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಉತ್ತಮ ಆರೋಗ್ಯ ನಿಮ್ಮದಾಗಲಿ ಮತ್ತು ಇನ್ನಷ್ಟು ಜನ ಸೇವೆ ಮಾಡುವ ಶಕ್ತಿ ನಿಮಗೆ ಸಿಗಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸುತ್ತೇನೆ.
@RahulGandhi
ಗೋಕಾಕ ನಗರದ ಬೀರೇಶ್ವರ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ಪಾರಂಪರಿಕ ಡೊಳ್ಳಿನ ಪದಗಳನ್ನು ಸವಿಯುವ ಮೂಲಕ ಸಂತಸದ ಕ್ಷಣಗಳನ್ನು ಕಳೆಯಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಆತ್ಮೀಯವಾಗಿ ಸನ್ಮಾನಿಸಿದರು.
@INCKarnataka@INCIndia@siddaramaiah
ಬೆಳಗಾವಿ ನಗರದ ಬುಡಾ ಕಚೇರಿಯ ಸಭಾಂಗಣದಲ್ಲಿ ಇಂದು ಜರುಗಿದ ಸಾಮಾನ್ಯ ಸಭೆ. ಈ ಸಭೆಯಲ್ಲಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರುಗಳಾದ ಶ್ರೀ ಆಸೀಫ್ ಸೇಠ್, ಶ್ರೀ ಅಭಯ ಪಾಟೀಲ, ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
@INCIndia@INCKarnataka@kharge@RahulGandhi
ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡಸಿದೆ.
ಅನುಮೋದನೆಗೊಂಡಿರುವ ಲೋಕೋಪಯೋಗಿ ಇಲಾಖೆಯ ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದೆ. @INCKarnataka
ಸಂಪುಟ ಸಹೋದ್ಯೋಗಿಗಳು ಹಾಗೂ ಆತ್ಮೀಯರಾದ ಶ್ರೀ ಕೆ.ಎನ್. ರಾಜಣ್ಣ ಅವರು ಇಂದು ಬೆಂಗಳೂರಿನ ನನ್ನ ಗೃಹಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ ಉಪಸ್ಥಿತರಿದ್ದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಶ್ರೀ ರಾಜಶೇಖರ್ ಹಿಟ್ನಾಳ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.
ಈ ವೇಳೆ ಅವರ ರಾಜಕೀಯ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದೆ.