ಉತ್ತನಹಳ್ಳಿ ಸಮೀಪ ನಡೆಯಲಿರುವ ಯುವ ದಸರಾ ಕಾರ್ಯಕ್ರಮದ ಸ್ಥಳಕ್ಕೆ ಇಂದು ಜಿಲ್ಲಾಧಿಕಾರಿಗಳಾದ ಶ್ರೀ ಲಕ್ಷ್ಮಿಕಾಂತ್ ರೆಡ್ಡಿ ಐಎಎಸ್ ರವರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು ಭೇಟಿ ನೀಡಿ, ಭದ್ರತಾ ವ್ಯವಸ್ಥೆ, ಸಂಚಾರ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.
ಮೈಸೂರು ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ವತಿಯಿಂದ ಎಚ್.ಡಿ.ಕೋಟೆ ಹಾಗೂ ಬಂಡಿಪಾಳ್ಯ ಗ್ರಾಮಗಳಲ್ಲಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ರೈತರಿಗೆ OTP ವಂಚನೆ, UPI ವಂಚನೆ, ಲೋನ್ ಆಪ್ ವಂಚನೆ ಮತ್ತು ಉದ್ಯೋಗ ವಂಚನೆಗಳ ಕುರಿತು ಜಾಗೃತಿ ಮೂಡಿಸಲಾಯಿತು.
#CyberSafety#StayAlert
CEIR ಪೋರ್ಟಲ್ ಮೂಲಕ ಪತ್ತೆಯಾದ ಕಳೆದುಹೋಗಿದ್ದ ಮೊಬೈಲ್ ಫೋನ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಪಿರಿಯಾಪಟ್ಟಣ, ಹುಣಸೂರು ಗ್ರಾಮಾಂತರ ಹಾಗೂ ಬನ್ನೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಮೊಬೈಲ್ ಫೋನ್ಗಳನ್ನು CEIR ಪೋರ್ಟಲ್ ಮೂಲಕ ಪತ್ತೆಹಚ್ಚಿ, ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
#CEIR
ಇಂದು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ರವರು ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೈಸೂರು–ಟಿ. ನರಸೀಪುರ ರಾಷ್ಟ್ರೀಯ ಹೆದ್ದಾರಿ (NH-766) ಟೋಲ್ ಬಳಿ ಸಂಭವಿಸಿದ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
#TNarasipura@Rangepol_SR@KarnatakaCops@PITNpuraPS
ಮೈಸೂರು ದಸರಾ–2026ರ ಅಂಗವಾಗಿ ನಾಡಕುಸ್ತಿ ಪಂದ್ಯಾವಳಿಯ “ಜೋಡಿ ಕಟ್ಟುವ ಕಾರ್ಯಕ್ರಮ”ವನ್ನು ಡಾ. ಯತೀಂದ್ರ ಸಿದ್ದರಾಮಯ್ಯ ರವರು ಉದ್ಘಾಟಿಸಿ, ಕುಸ್ತಿ ಪಂದ್ಯಾವಳಿಯ ಪೋಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಗಣ್ಯರು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
#Dasara2026#MysuruDasara
ನಂಜನಗೂಡು ಪಟ್ಟಣದಲ್ಲಿ ನಡೆಯಲಿರುವ ಗಣಪತಿ ವಿಸರ್ಜನಾ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮಾನ್ಯ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕ್ ಸಿ ರವರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ರವರು ಆಗಮಿಸುವ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಪಿರಿಯಾಪಟ್ಟಣ ಟೌನ್ನಲ್ಲಿ ಹಮ್ಮಿಕೊಂಡಿರುವ‘ಪ್ರಜಾಸೇವೆ ಆಂದೋಲನ’ ಸಮಾವೇಶಕ್ಕೆ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರು ಆಗಮಿಸುವ ಹಿನ್ನೆಲೆಯಲ್ಲಿ,ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ರವರು ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿದರು..
ಗಾಂಧಿ ಜಯಂತಿಯ ಅಂಗವಾಗಿ ಇಂದು ಮೈಸೂರು ಮಹಾ ನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ಮೈಸೂರು ನಗರದ ಪುರಭವನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಸರ್ವಧರ್ಮ ಪ್ರಾರ್ಥನಾ’ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.
#mysuru