ಗ್ರಾಮಗಳಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಿ, ಜನ ಸಂಚಾರವನ್ನು ಸುಗಮಗೊಳಿಸುವ ಜೊತೆಗೆ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ��ೇಗ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಯೋಜನೆಯಡಿ ₹10,000 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ 15,000 ಕಿ.ಮೀ. ಗ್ರಾಮೀಣ ರಸ್ತೆಗಳನ್ನು
ಇಂದಿನ ಮಕ್ಕಳೇ ನಾಳಿನ ಪ್ರಜೆಗಳು – ಮಹಾತ್ಮ ಗಾಂಧೀಜಿ ಅವರ �� ಸ್ಪೂರ್ತಿದಾಯಕ ನುಡಿಯಂತೆ, ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ ಬೆಳೆಸುವ ಹಾಗೂ ಭವ್ಯ ಭಾರತವನ್ನು ನಿರ್ಮಿಸುವ ದೊಡ್ಡ ಜವಾಬ್ದಾರಿ ಇರುವುದು ನಮ್ಮ ಯುವ ಪೀಳಿಗೆಯ ಕೈಯಲ್ಲಿ!
#InternationalDemocracyDay #ConstitutionOfIndia #YouthPower #KHMuniyappa
ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ. ಕೆ.ಹೆಚ್. ಮುನಿಯಪ್ಪ ಅವರು ಇಂದು ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ, ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.
#SocialWelfare#SocialJustice#Mangaluru#DakshinaKannada
ನಾಡಿನ ಸಮಸ್ತ ಜನತೆಗೆ ವಿಶ್ವದ ಸೃಷ್ಟಿಕರ್ತ, ದೇವಶಿಲ್ಪಿ ಶ್ರೀ ವಿಶ್ವಕರ್ಮ ಜಯಂತಿಯ ಹಾರ್ದಿಕ ಶುಭಾಶಯಗಳು.
ಶ್ರಮ, ಕಲೆ, ಶಿಲ್ಪಕಲೆ ಮತ್ತು ನಾವೀನ್ಯತೆಗಳ ಮೂಲಕ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕುವ ಪ್ರತಿಯೊಬ್ಬ ಕಾಯಕಯೋಗಿ ಹಾಗೂ ಕುಶಲಕರ್ಮಿಗಳಿಗೆ ಈ ದಿನ ಗೌರವ ಸಲ್ಲಿಸೋಣ.
#VishwakarmaJayanti#SocialWelfareDepartment
ಅಕ್ಷರವ��� ಅಸ್ತ್ರ, ಜ���ಞಾನವೇ ಶಕ್ತಿ, ಇವರೇ ನಾಳಿನ ಕರ್ನಾಟಕದ ಆಸ್ತಿ!
ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಸಂಕಲ್ಪ. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ನಾಳಿನ ಸತ್ಪ್ರಜೆಗಳಾದ ಮಕ್ಕಳೊಂದಿಗೆ.
– ಶ್ರೀ ಕೆ. ಹೆಚ್. ಮುನಿಯಪ್ಪ
ಮಾನ್ಯ ಸಚಿವರು, ಸಮಾಜ ಕಲ್ಯಾಣ ಇಲಾಖೆ,
ಕರ್ನಾಟಕ ಸರ್ಕಾರ
#KHMuniyappa
ಕೊಡಗಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ 'ಯುವ ಸಂಸತ್ ಅಭಿಯಾನ'ಕ್ಕೆ ಚಾಲನೆ!
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ 'ಯುವ ಸಂಸತ್ ಅಭಿಯಾನ'ಕ್ಕೆ ಯಶಸ್ವಿಯಾಗಿ ಚಾಲನೆ ನೀಡಲಾಯಿತು.
#Kodagu
ಹಾವೇರಿಯ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತಾರಾಷ್ಟ್ರೀ��� ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ 'ಯುವ ಸಂಸತ್ತು' ಸಭೆಯನ್ನು ಮಾನ್ಯ ಸಕ್ಕರೆ ಮತ್ತು ಜವಳಿ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರುದ್ರಪ್ಪ ಲಮಾಣಿ ಅವರು ಉದ್ಘಾಟಿಸಿದರು.
#InternationalDemocracyDay #Haveri
#KHMuniyappa
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಾಗೂ ಯುವ ಸಂಸತ್ ಕಾರ್ಯಕ್ರಮಕ್ಕೆ ಚಾಲನೆ
ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ ಕಾರ್ಯಕ್ರಮಕ್ಕೆ ಮಾನ್ಯ ಯಾದಗಿರಿ ಶಾಸಕರಾದ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಚಾಲನೆ ನೀಡಿದರು.
#DemocracyDay2026#yadagiri
ಬೀದರ್ನಲ್ಲಿ ಜಿಲ್ಲಾಡಳಿತ, ಜಿ.ಪಂ ಹಾಗ�� ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ-2026 ಮತ್ತು ಯುವ ಸಂಸತ್ ಕಾರ್ಯಕ್ರಮಕ್ಕೆ ಸಚಿವರಾದ ಶ್ರೀ @eshwar_khandre ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಿದರು.
#bidar
ಮಂಡ್ಯ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗ���ದ್ದ "ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ" ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಗೆ ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ @NChaluvarayaS ಅವರು ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ - 2026 ರ ಅಂಗವಾಗಿ, ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
#Mysuru