ಔರಾದ್ ಮತಕ್ಷೇತ್ರದ ಕಮಲನಗರ ತಾಲೂಕಿನ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವರ ಕುಂದು-ಕೊರತೆಗಳನ್ನು ಆಲಿಸಿದೆ. ಕೆಲವು ಮುಖ್ಯ ಸಮಸ್ಯೆಗಳಿಗೆ ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಯಿತು.
ಬೀದರ ಲೋಕಸಭಾ ಕ್ಷೇತ್ರದ ಜನತೆಯ ಸೇವೆ ಮಾಡುವುದು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಮೊದಲ ಕರ್ತವ್ಯ ಹಾಗೂ ಆದ್ಯತೆಯಾಗಿದೆ.
Met with citizens today at the MP office in Kamalnagar taluk (Aurad constituency) to listen to their concerns and grievances. We discussed several major issues with officials right on the spot and resolved them immediately!
Serving the people of Bidar Lok Sabha constituency and responding to their needs is—and always will be my top priority.
#Kamalnagar #Aurad #Bidar
ಜೂನ್ 21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ @HariprasadBK2 ಅವರು ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ, ಇಂದು ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದೆ.
ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಕೈಗೊಳ್ಳಲಾಗಿರುವ ವ್ಯವಸ್ಥೆಗಳನ್ನು ವೀಕ್ಷಿಸಿ, ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದೆ.
@INCKarnataka
ಲೋಕಸಭೆಯ ವಿರೋಧ ಪಕ್ಷದ ನಾಯಕರು, ನಮ್ಮ ನಾಯಕರು ಹಾಗೂ ಮಾರ್ಗದರ್ಶಕರಾದ ಮಾನ್ಯ ಶ್ರೀ @RahulGandhi ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಸಂವಿಧಾನದ ಮೌಲ್ಯಗಳ ಸಂರಕ್ಷಣೆ, ಸಾಮಾಜಿಕ ನ್ಯಾಯ, ಸಮಾನತೆ, ಪ್ರಜಾಪ್ರಭುತ್ವ ಮತ್ತು ಸಾಮರಸ್ಯದ ಭಾರತ ನಿರ್ಮಾಣಕ್ಕಾಗಿ ತಮ್ಮ ಅಚಲ ಬದ್ಧತೆಯೊಂದಿಗೆ ನಡೆಸುತ್ತಿರುವ ನಿರಂತರ ಹೋರಾಟವು ನಮ್ಮಂತಹ ಯುವಜನತೆಗೆ ಸದಾ ಸ್ಫೂರ್ತಿದಾಯಕವಾಗಿದೆ.
ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಅಪಾರ ಶಕ್ತಿ ಹಾಗೂ ರಾಷ್ಟ್ರಸೇವೆಯನ್ನು ಇನ್ನಷ್ಟು ಸಮರ್ಥವಾಗಿ ಮುಂದುವರಿಸುವ ಸಾಮರ್ಥ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
@INCIndia
Grateful to the Almighty and Hon'ble CM @DKShivakumar Sir for inducting me into his team. Taking charge as Officer on Special Duty to the Hon’ble CM today. My team has been my pillar of strength. Immense gratitude to my parents, family and Gurus for the blessings.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಂದು ಮೊದಲ ಬಾರಿಗೆ ತವರು ಜಿಲ್ಲೆ ಬೀದರ್ಗೆ ಆಗಮಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರೀತಿ, ಆತ್ಮೀಯತೆ ಹಾಗೂ ಅಭಿಮಾನದಿಂದ ಸ್ವಾಗತಿಸಿದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜಿಲ್ಲೆಯ ಜನತೆಗೆ ಹೃತ್ಪೂರ್ವಕ ಧನ್ಯವಾದಗಳು.
ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನಗೆ ಇನ್ನಷ್ಟು ಜವಾಬ್ದಾರಿಯುತವಾಗಿ ಕೆಲಸ ಮಾಡಲು ಪ್ರೇರಣೆಯಾಗಿದೆ. ಬೀದರ್ ಜಿಲ್ಲೆಯ ಅಭಿವೃದ್ಧಿ ಹಾಗೂ ರಾಜ್ಯದ ಗ್ರಾಮೀಣ ಭಾಗಗಳ ಸಮಗ್ರ ಪ್ರಗತಿಗಾಗಿ ಇನ್ನಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತೇನೆ.
ನಿಮ್ಮ ಆಶೀರ್ವಾದ ಮತ್ತು ಸಹಕಾರ ಸದಾ ಹೀಗೆ ಇರಲಿ.🙏🏻
ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಪದಾಧಿಕಾರಿಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಭಿನಂದನೆಗಳು.
40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟ ಹೆಗ್ಗಳಿಕೆ ಬೀದರ ಜಿಲ್ಲಾ ಪತ್ರಕರ್ತರದ್ದು. ಮುಂದೆಯೂ ಉತ್ತಮ ಕೆಲಸಗಳನ್ನು ಬೀದರ ಜಿಲ್ಲಾ ಪತ್ರಕರ್ತರ ಸಂಘ ಮಾಡಲಿ ಎಂದು ಕೆಯುಡಬ್ಲ್ಯೂಜೆ ಶುಭ ಕೋರಿದೆ.
ಪತ್ರಕರ್ತರ ಬೇಡಿಕೆಗಳಿಗೆ ಸದಾ ಸ್ಪಂಧನೆ:
ಸಿದ್ದರಾಮಯ್ಯಗೆ ಕೆಯುಡಬ್ಲ್ಯೂಜೆ ಕೃತಜ್ಞತೆ
ಬೆಂಗಳೂರು:
ತಮ್ಮ ಅಧಿಕಾರವಧಿಯಲ್ಲಿ ಪತ್ರಕರ್ತರ ಬೇಡಿಕೆಗಳಿಗೆ ಸದಾ ಸ್ಪಂಧಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಧನ್ಯವಾದಗಳನ್ನು ತಿಳಿಸಿದೆ.
ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಸಿದ್ದರಾಮಯ್ಯ ಅವರಿಗೆ ಹೂಬೊಕ್ಕೆ ನೀಡಿ ಕೆಯುಡಬ್ಲೂೃಜೆ ಕೃತಜ್ಞತೆ ಸಲ್ಲಿಸಿದರು.
ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪತ್ರಕರ್ತರ ಬೇಡಿಕೆಗಳನ್ನು ಸಂಯಮದಿಂದ ಆಲಿಸಿ ನಿಮ್ಮ ಸಲಹೆಗಾರರಾಗಿದ್ದ ಕೆ.ವಿ.ಪ್ರಭಾಕರ್ ಮೂಲಕ ಈಡೇರಿಸುವ ಪ್ರಯತ್ನ ಮಾಡಿರುವುದನ್ನು ಸಂಘ ಮರೆಯುವುದಿಲ್ಲ ಎಂದು ಅವರಿಗೆ ತಿಳಿಸಿದರು.
38ನೇ ದಾವಣಗೆರೆ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ೋಷಿಸಿದ್ದೀರಿ. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಸಮ್ಮೇಳನದಲ್ಲಿ ಪತ್ರಕರ್ತರಿಗಾಗಿ ಮುಖ್ಯಮಂತ್ರಿಗಳ ಆರೋಗ್ಯ ಸಂಜೀವಿನಿ ಯೋಜನೆಯನ್ನು ೋಷಿಸಿ ಜಾರಿಗೆ ನೀಡಿದ್ದೀರಿ ಎನ್ನುವುದನ್ನು ಅವರಿಗೆ ನೆನಪಿಸಿದಾಗ, ನನ್ನ ಜವಬ್ದಾರಿ ಇದ್ದುದರಿಂದ ಮಾಡಿದ್ದೇನೆ. ನಿಮಗೆಲ್ಲ ಒಳ್ಳೆಯದಾಗಲಿ ಎಂದು ಸಿದ್ದರಾಮಯ್ಯ ಹೇಳಿದರು.
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಬೇಕು ಎಂದು ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ತಾವು, ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದೀರಿ. ಹಾಗೆಯೇ ನಿಮ್ಮ ಅಧಿಕಾರವಧಿ ಕೊನೆಯಲ್ಲಿ ಆದೇಶ ಮಾಡಿದ್ದು, ಈಗ ನಿಯಮಾವಳಿ ಸರಳೀಕರಣವಾಗಿದೆ ಎಂದು ತಿಳಿಸಿ ಶಿವಾನಂದ ತಗಡೂರು ಧನ್ಯವಾದಗಳನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಹಾಜರಿದ್ದ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಎಚ್.ಎನ್.ನಾಗಮೋಹನದಾಸ್ ಅವರು, ಲೇಬರ್ ಯೂನಿಯನ್ ಆಗಿರುವ ಕೆಯುಡಬ್ಲೂೃಜೆ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಅವರಿಗೂ ತಿಳಿಸಿ ಪ್ರಶಂಸೆ ವ್ಯಕ್ತಪಡಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ @HariprasadBK2 ಅವರನ್ನು ಇಂದು ಭೇಟಿಯಾಗಿ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದೆ.
ಸುದೀರ್ಘ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಪಕ್ಷದ ತತ್ವಗಳಿಗೆ ಅವರಿರುವ ಬದ್ಧತೆಯೊಂದಿಗೆ ಅವರ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಇನ್ನಷ್ಟು ಬಲಿಷ್ಠವಾಗಲಿದೆ ಎಂಬ ವಿಶ್ವಾಸವಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ @RahimKhan_MLA ಅವರು ಉಪಸ್ಥಿತರಿದ್ದರು.
@INCKarnataka
ನನ್ನ ಪ್ರೀತಿಯ ಭಾಲ್ಕಿ ಕ್ಷೇತ್ರದ ಜನತೆಯ ಆಶೀರ್ವಾದದಿಂದ, ಇಂದು ಕರ್ನಾಟಕ ರಾಜ್ಯದ ಸಚಿವನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುವ ಸೌಭಾಗ್ಯ ನನಗೆ ದೊರೆತಿದೆ.
ಭಾರತದ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿದು, ಯಾವುದೇ ಭಯ, ಪಕ್ಷಪಾತ, ರಾಗ-ದ್ವೇಷಗಳಿಗೆ ಅವಕಾಶ ನೀಡದೆ, ರಾಜ್ಯದ ಸಮಸ್ತ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಸಂಕಲ್ಪದೊಂದಿಗೆ ಇಂದು ದೇವರು ಹಾಗೂ ನಮ್ಮ ಗುರುಗಳಾದ ಪೂಜ್ಯ ಚನ್ನಬಸವ ಪಟ್ಟದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ.
ತಮ್ಮೆಲ್ಲರ ಅಪಾರ ಪ್ರೀತಿ, ವಿಶ್ವಾಸ ಮತ್ತು ನಿರೀಕ್ಷೆಗಳಿಗೆ ತಕ್ಕಂತೆ ಭಾಲ್ಕಿ ಕ್ಷೇತ್ರದ ಅಭಿವೃದ್ಧಿ ಹಾಗೂ ಕರ್ನಾಟಕ ರಾಜ್ಯದ ಸರ್ವತೋಮುಖ ಪ್ರಗತಿಗಾಗಿ ಶಕ್ತಿಮೀರಿ ದುಡಿಯುತ್ತೇನೆ. ಜನರ ಆಶೋತ್ತರಗಳಿಗೆ ಎಂದಿಗೂ ಚ್ಯುತಿ ಬರದಂತೆ ಸೇವೆ ಸಲ್ಲಿಸುವುದು ನನ್ನ ಕರ್ತವ್ಯವಾಗಿದೆ.
ನನಗೆ ಮೂರನೇ ಬಾರಿಗೆ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ನೀಡಿದ ಎಐಸಿಸಿ ಅಧ್ಯಕ್ಷರಾದ ಶ್ರೀ @kharge ಅವರು, ಶ್ರೀಮತಿ ಸೋನಿಯಾ ಗಾಂಧಿ ಅವರು, ಶ್ರೀ @RahulGandhi ಅವರು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ @siddaramaiah ಅವರು, ಮುಖ್ಯಮಂತ್ರಿ ಶ್ರೀ @DKShivakumar ಅವರು, ಶ್ರೀ @kcvenugopalmp ಅವರು, ರಾಜ್ಯ ಉಸ್ತುವಾರಿಗಳಾದ ಶ್ರೀ @rssurjewala ಅವರು ಹಾಗೂ ಪಕ್ಷದ ಕೇಂದ್ರ ಮತ್ತು ರಾಜ್ಯ ಮಟ್ಟದ ಎಲ್ಲಾ ನಾಯಕರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ಜೊತೆಗೆ ನನ್ನನ್ನು ಪ್ರೀತಿಸಿ, ನಂಬಿ, ಬೆಳೆಸಿರುವ ಭಾಲ್ಕಿ ಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಮತ್ತು ಶುಭ ಹಾರೈಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನ್ನ ಶಕ್ತಿ.
ಜನಸೇವೆಯೇ ನನ್ನ ಧ್ಯೇಯ, ಕರ್ನಾಟಕದ ಅಭಿವೃದ್ಧಿಯೇ ನನ್ನ ಗುರಿ.
ಇಂದು ಕರ್ನಾಟಕ ರಾಜ್ಯದ ಸಚಿವನಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದು, ಇದು ನನ್ನ ಜೀವನದ ಅತ್ಯಂತ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ.
ನನ್ನ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ನೀಡಿದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರು, ಶ್ರೀ ಕೆ.ಸಿ. ವೇಣುಗೋಪಾಲ್ ಅವರು, ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಮಾಜಿ ಮುಖ್ಯಮಂತ್ರಿ ಮಾನ್ಯ ಶ್ರೀ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರು ಹಾಗೂ ಪಕ್ಷದ ಎಲ್ಲಾ ಹಿರಿಯ ನಾಯಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ನನ್ನ ರಾಜಕೀಯ ಪಯಣದ ಪ್ರತಿಯೊಂದು ಹಂತದಲ್ಲೂ ಬೆಂಬಲವಾಗಿ ನಿಂತಿರುವ ಬೀದರ್ ಜಿಲ್ಲೆಯ, ವಿಶೇಷವಾಗಿ ಭಾಲ್ಕಿ ಕ್ಷೇತ್ರದ ಜನತೆ, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ನನ್ನ ಕುಟುಂಬದವರ ಪ್ರೀತಿ, ಆಶೀರ್ವಾದ ಮತ್ತು ವಿಶ್ವಾಸವೇ ನನ್ನ ಶಕ್ತಿ.
ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿದು, ಜನಸೇವೆ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಇನ್ನಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸುವ ಸಂಕಲ್ಪದೊಂದಿಗೆ ನನ್ನ ಜವಾಬ್ದಾರಿಯನ್ನು ಮುಂದುವರಿಸುತ್ತೇನೆ.
ನಿಮ್ಮ ವಿಶ್ವಾಸಕ್ಕೆ ಸದಾ ಚಿರಋಣಿ.
ನಮ್ಮೆಲ್ಲರ ನೆಚ್ಚಿನ ನಾಯಕರು ಹಾಗೂ ನನ್ನ ಮಾರ್ಗದರ್ಶಕರು ಸನ್ಮಾನ್ಯ ಶ್ರೀ @siddaramaiah ನವರು.
ಬಸವಣ್ಣ, ಬುದ್ಧ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಗಳಿಂದ ಪ್ರೇರಿತರಾಗಿ, ಸಾಮಾಜಿಕ ನ್ಯಾಯವನ್ನು ತಮ್ಮ ರಾಜಕೀಯ ಜೀವನದ ಮುಖ್ಯ ಧ್ಯೇಯವನ್ನಾಗಿಸಿಕೊಂಡ ನಾಯಕರು. ಬಸವ ಜಯಂತಿಯಂದೇ ಮೊದಲ ಬಾರಿಗೆ ಈ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು, ಸಮಾನತೆ ಮತ್ತು ಸರ್ವಜನ ಹಿತಾಯದ ಮೌಲ್ಯಗಳ ಆಧಾರದ ಮೇಲೆ ಜನಪರ ಆಡಳಿತ ನೀಡಿದ್ದಾರೆ.
ಅನ್ನಭಾಗ್ಯ ಸೇರಿದಂತೆ ಹಲವು 'ಭಾಗ್ಯ' ಯೋಜನೆಗಳು, ಅವರು ಮಂಡಿಸಿದ ದಾಖಲೆಯ 17 ಆಯವ್ಯಯಗಳು (ಬಜೆಟ್ಗಳು) ಹಾಗೂ ಬಡವರು, ರೈತರು ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಜಾರಿಗೊಳಿಸಿದ ಅನೇಕ ಜನಕಲ್ಯಾಣ ಕಾರ್ಯಕ್ರಮಗಳು ಅವರ ಆಡಳಿತದ ಹೆಗ್ಗುರುತುಗಳಾಗಿವೆ.
ಈ ರಾಜ್ಯದ ಮುಖ್ಯಮಂತ್ರಿಯಾಗಿ ಅವರು ರಾಜ್ಯಕ್ಕೆ ಸಲ್ಲಿಸಿದ ಸೇವೆ, ಸಾಮಾಜಿಕ ನ್ಯಾಯಕ್ಕಾಗಿ ನಡೆಸಿದ ಹೋರಾಟ ಮತ್ತು ಅವರ ಜನಪರ ಬದ್ಧತೆ ಕರ್ನಾಟಕದ ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿರಲಿದೆ.
ನಿಮ್ಮ ಅಮೂಲ್ಯ ಸೇವೆಯನ್ನು ಕರುನಾಡು ಸದಾ ಸ್ಮರಿಸುತ್ತದೆ.
Our most beloved leader and my mentor, the Honorable Shri Siddaramaiah ravaru.
He is Inspired by the philosophies of Basavanna, Buddha, and Dr. B.R. Ambedkar, he is a leader who made social justice the central mission of his political life. Having taken the oath as the Chief Minister of this state for the very first time on the auspicious occasion of Basava Jayanti, he has delivered a people-centric administration rooted in the values of equality and the welfare of all.
His welfare initiatives, including the 'Anna Bhagya' scheme, a record-breaking 17 state budgets presented by him, and numerous development programs implemented for the upliftment of the poor, farmers, and backward classes, stand as the hallmarks of his governance.
His service to the state as Chief Minister, his relentless struggle for social justice, and his commitment to the welfare of the people will always remain unforgettable in the history of Karnataka.
Karunadu (the land of Karnataka) will forever remember your invaluable service.
#Siddaramaiah
ಔರಾದ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಮಹಾರಾಜವಾಡಿ ಗ್ರಾಮದಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ದಾಖಲೆಗಳಲ್ಲೇ ಗೊಂದಲ ಕಂಡುಬಂದ ಆರೋಪ ಕೇಳಿಬಂದಿದೆ.
ಮಹಾರಾಜವಾಡಿ ಗ್ರಾಮದ ಜೆಜೆಮ್ ಕಾಮಗಾರಿ ಸಮಗ್ರ ತನಿಖೆ ನಡೆಸಲು ಕೋರಿದೆ @osd_cmkarnataka
ಔರಾದ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಮಹಾರಾಜವಾಡಿ ಗ್ರಾಮದಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ದಾಖಲೆಗಳಲ್ಲೇ ಗೊಂದಲ ಕಂಡುಬಂದ ಆರೋಪ ಕೇಳಿಬಂದಿದೆ.
ಮಹಾರಾಜವಾಡಿ ಗ್ರಾಮದ ಜೆಜೆಮ್ ಕಾಮಗಾರಿ ಸಮಗ್ರ ತನಿಖೆ ನಡೆಸಲು ಕೋರಿದೆ @osd_cmkarnataka
Ms. Muktha Shekhar, Joint Secretary, Ministry of Rural Development, chaired a meeting of the Committee for the formulation of Model Bye-laws on Solid Waste Management for Rural Local Bodies. 1/2