Getting Half page Appraisal from one of leading Newspapers tht too during this Pandemic Time is priceless... Thank you God for giving me Strength to help the needy 🙏🙏
I ve been trying to book a Tatkal Ticket since Last few Days. Irony is i m nt able to pass through payments page. A common man cannot buy a ticket & we are dreaming of world class Railway Stations. I m sure Touts & Agents are easily booking & paying their akas @AshwiniVaishnaw
"ನನ್ನ ಹೆಮ್ಮೆಯ ಬೀದರ ಲೋಕಸಭಾ ಕ್ಷೇತ್ರದ ಜನತೆಯೇ ನನ್ನ ಶಕ್ತಿ."
ಇಂದು ಬೀದರ ನಗರದ ಸಂಸದರ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ ಅಹವಾಲುಗಳನ್ನು ಆಲಿಸಿದೆ. ಜನರ ತೊಂದರೆಗಳಿಗೆ ಅಧಿಕಾರಿಗಳ ಮೂಲಕ ಸ್ಥಳದಲ್ಲೇ ಪರಿಹಾರ ರೂಪಿಸಲಾಯಿತು.
ಕ್ಷೇತ್ರದ ಪ್ರತಿಯೊಬ್ಬ ನಾಗರಿಕರ ಸಂಕಷ್ಟಗಳಿಗೆ ಹೆಗಲಾಗುವುದು ನನ್ನ ಮೊದಲ ಆದ್ಯತೆಯಾಗಿದೆ.
Today, I met with members of the public at the Bidar city MP office and listened to their grievances. Prompt solutions were provided on the spot through the relevant officials.
Standing by every citizen of the constituency in their times of distress remains my topmost priority.
#Bidar
ಕರ್ನಾಟಕದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ನಾಯಕರು, ಎಐಸಿಸಿ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಶ್ರೀ @kharge ಸಾಹೇಬರು, ಶ್ರೀ @Pawankhera ಹಾಗೂ ಶ್ರೀ @MansoorKhanINC ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
I fondly remember and pay tributes to my father, Late Shri Rajesh Pilot ji, on his death anniversary.
A life well lived as an air force officer and then as a politician — dedicated to the nation and committed to public service.
His radiant smile and values continue to remind me of the path of service he believed in.
🙏
#राजेश_पायलट_अमर_रहे
Hearty congratulations Respected @eshwar_khandre Sir for New Ministry, Rural Development Panchayat Raj (RDPR) Govt Of Karnataka , I'm 💯 Percent Sure Not Only Bidar Dist Will Benefit But Our State Will Witness a remarkable Change for Development under Ur Guidance 💐🙏
The rejection of Smt. Meenakshi Natarajan Ji’s Rajya Sabha nomination raises serious questions on the functioning of democracy in our country.
Denying a deserving candidate through questionable means is against the democratic spirit and constitutional principles India stands for. Such actions only weaken public trust in institutions.
Strongly condemn this injustice. Democracy must always prevail over political vendetta.
Heartiest congratulations to Shri B. K. Hariprasad ji on being appointed President of Karnataka Pradesh Congress Committee.
Wishing him great success in strengthening the organization and taking the Congress movement to greater heights across Karnataka.
As Shri @DKShivakumar takes charge as Chief Minister of Karnataka, heartfelt appreciation for his outstanding contribution and leadership as KPCC President, which laid the foundation for Congress' success in the state. @HariprasadBK2
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಿಸಿದ ಎಐಸಿಸಿ ಅಧ್ಯಕ್ಷರಾದ @kharge, ನನ್ನ ಮೇಲೆ ಪ್ರೀತಿ ವಿಶ್ವಾಸ ನಂಬಿಕೆ ಇರಿಸಿ ಜವಾಬ್ದಾರಿ ವಹಿಸಿದ ನನ್ನ ಅಚ್ಚುಮೆಚ್ಚಿನ ನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರಿಗೆ, ವಿರೋಧ ಪಕ್ಷದ ನಾಯಕರಾದ ಶ್ರೀ @RahulGandhi ಅವರಿಗೆ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ @kcvenugopalmp , ಎಐಸಿಸಿ ಪ್ರಧಾನ ಕಾರ್ಯದರ್ಶಿ @priyankagandhi ಹಾಗೂ ಕೆಪಿಸಿಸಿ ರಾಜ್ಯ ಉಸ್ತುವಾರಿ @rssurjewala ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.
ಕಾಂಗ್ರೆಸ್ ನ ಕೇಂದ್ರ ನಾಯಕತ್ವದ ಈ ನಿರ್ಧಾರವು ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ. ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನವಾದ ಮತ್ತು ದುರ್ಬಲ ವರ್ಗಗಳ ಸಬಲೀಕರಣದ ಪರವಾಗಿ ನೀಡಿರುವ ಸ್ಪಷ್ಟ ಸಂದೇಶವಾಗಿದೆ ಎಂದು ನಾನು ಭಾವಿಸುತ್ತೇನೆ.
ದೀರ್ಘಕಾಲದಿಂದ ಪಕ್ಷದ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿರುವ ನಾನು ಯಾವುದೇ ಅಧಿಕಾರದ ಹುದ್ದೆಗಳಿಗಾಗಿ ರಾಜಕೀಯ ಮಾಡದೇ, ನನ್ನ ಜೀವನ ಪೂರ್ತಿ ಕಾಂಗ್ರೆಸ್ ತತ್ವಗಳ ಜಾರಿಗೆ ಮೀಸಲಿಟ್ಟಿದ್ದೇನೆ. ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ ಎಂಬ ನಿಲುವಿನಂತೆ ನಾನು ರಾಜಕೀಯ ಬದುಕನ್ನು ಕಟ್ಟಿಕೊಂಡಿದ್ದೇನೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ಎಂಬ ಪಕ್ಷ ಕಟ್ಟುವ ಕಾಯಕವನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿದ್ದೇನೆ.
ದೇಶದಲ್ಲಿ ದ್ವೇಷದ ರಾಜಕಾರಣ, ಧರ್ಮದ ಹೆಸರಿನ ಧ್ರುವೀಕರಣ ಮತ್ತು ಸಂವಿಧಾನ ವಿರೋಧಿ ಪ್ರವೃತ್ತಿಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಸಾಮಾಜಿಕ ಸಾಮರಸ್ಯ ಮತ್ತು ಜಾತ್ಯತೀತ ಮೌಲ್ಯಗಳನ್ನು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿರುವ ನನಗೆ, ದೇಶದ ದುರಿತ ಕಾಲದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ನೇತೃತ್ವ ಸಿಕ್ಕಿರುವುದು ಹೊಸ ಜವಾಬ್ದಾರಿ, ಸವಾಲು ನೀಡಿದಂತಾಗಿದೆ. ಈ ಸವಾಲು ಮತ್ತು ಜವಾಬ್ದಾರಿಯನ್ನು ಪಕ್ಷದ ಸೈದ್ದಾಂತಿಕ ಕಾರ್ಯಕರ್ತರ ಬಲದಿಂದ ಯಶಸ್ವಿಯಾಗಿ ಪೂರೈಸುತ್ತೇನೆ ಎಂಬ ಅಚಲ ನಂಬಿಕೆ ನನಗಿದೆ.
ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಜನರ ಆಶೋತ್ತರಗಳನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಹಾಗಾಗಿ ಈ ನಿಟ್ಟಿನಲ್ಲೇ ನಾನು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬೂತ್ ಮಟ್ಟದಿಂದ ಸಂಘಟಿಸಿ, ಸೈದ್ಧಾಂತಿಕವಾಗಿ ಬಲಪಡಿಸೋಣ. ರಾಜ್ಯದಲ್ಲಿರುವ ಸಮರ್ಥ ಸೈದ್ದಾಂತಿಕ ನಾಯಕರು, ಕಾರ್ಯಕರ್ತರು ಈ ನಿಟ್ಟಿನಲ್ಲಿ ನನ್ನ ಕೈಜೋಡಿಸಲಿದ್ದಾರೆ.
ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತುವವರು, ಕೋಮುವಾದದ ವಿರುದ್ಧ ಹೋರಾಡುವವರು, ಸಂವಿಧಾನವನ್ನು ರಕ್ಷಿಸುವ ಹೋರಾಟಗಾರರು ಮತ್ತು ಪ್ರಗತಿಪರ ಚಿಂತನೆ ಹೊಂದಿರುವ ಕೋಟ್ಯಾಂತರ ಕಾಂಗ್ರೆಸ್ಸೇತರ ಕಾರ್ಯಕರ್ತರೂ ನಮ್ಮ ದೇಶದ ಈ ದುರಿತ ಕಾಲದಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕಿದೆ. ಕಾಂಗ್ರೆಸ್ಸಿಗರಾದ ನಾವೂ ಕೂಡಾ ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಜಾತ್ಯಾತೀತ ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಹೋಗಬೇಕಿದೆ ಎಂಬ ಅರಿವು ನನಗಿದೆ.
ಸಂವಿಧಾನವೇ ನಮ್ಮ ದಾರಿ, ಸಾಮಾಜಿಕ ನ್ಯಾಯವೇ ನಮ್ಮ ಗುರಿ, ಜಾತ್ಯತೀತತೆಯೇ ನಮ್ಮ ಶಕ್ತಿ ಎಂಬ ಕಾಂಗ್ರೆಸ್ನ ಮೂಲ ಸಂದೇಶವನ್ನು ಬಲಪಡಿಸುವ ಈ ನಿರ್ಧಾರದ ಜೊತೆ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು, ಜಾತ್ಯಾತೀತ ಯುವ ಸಮುದಾಯ, ಕಾಂಗ್ರೆಸ್ಸೇತರ ಜಾತ್ಯಾತೀತ ಪಕ್ಷ, ಸಂಘಟನೆಗಳು ನನ್ನ ಜೊತೆ ಕೈ ಜೋಡಿಸುತ್ತದೆ ಎಂಬ ಭರವಸೆಯಲ್ಲಿ ಎಐಸಿಸಿ ನೀಡಿದ ಜವಾಬ್ದಾರಿಯನ್ನು ಒಪ್ಪಿ ನಿರ್ವಹಿಸುತ್ತೇನೆ.
ಎಲ್ಲರಿಗೂ ಧನ್ಯವಾದಗಳು.
@INCIndia@INCKarnataka
Hearty Congratulations to Our Beloved Peoples Favourite Sri @DKShivakumar Sir For Being Sworn in as CM of Karnataka,I wish you Many Successful Endeavours Ahead.... Under ur guidance i m sure we will make Karnataka a Great Place to Live..Hearty Congratulations Sir💐🙏
Hon'ble Congress President Shri @kharge has appointed Shri B. K. Hariprasad as the President of the Karnataka Pradesh Congress Committee, with immediate effect.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಯಶಸ್ಸು ಲಭಿಸಲಿ ಎಂದು ಹಾರೈಸುತ್ತೇನೆ. ನಿಮ್ಮ ನಾಯಕತ್ವದಲ್ಲಿ ಪಕ್ಷವು ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ.
@rssurjewala
@DKShivakumar Sir you too have Worked hard all those years and we have seen you ... Never sleep be it party works or any other works in these 7 years you have really worked hard...as The saying goes those who work hard will be Paid accordingly...its ur Hard earned.... You deserve it Sir🙏💐
ನಿಜವಾಗಿಯೂ ನೀವು ನಮ್ಮನ್ನು ಒಬ್ಬ ಕನ್ನಡಿಗನನ್ನಾಗಿ ಮಾಡಿದ್ದೀರಿ ನಾನು ಸೇರಿದ್ದೇನೆ ಎಂದು ಹೇಳಲು ಹೆಮ್ಮೆಪಡುತ್ತೇನೆ,8ವರ್ಷಗಳ ಕಾಲ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯನ್ನು ಹೊಂದಿರುವ ಮತ್ತು ಅವರ ಸುತ್ತ ಒಂದೇ ಒಂದು ಹಗರಣವೂ ನಡೆದಿಲ್ಲ,ವಾಸ್ತವವಾಗಿ, ನಾನು ನಿಮ್ಮ ಅಡಿಯಲ್ಲಿ ಕೆಲಸ ಮಾಡಿದ ಕಾಂಗ್ರೆಸ್ಸಿಗ ಎಂದು ಹೇಳಲು ನನಗೆ ಹೆಮ್ಮೆಯಾಗುತ್ತಡೆ
Respected CM Siddaramaiah Sir,
You are the Man of Masses.....You took Brave decision to Implement the 5 Guarantees wch you and DK Shivakumar Sir gave in By Giving in Writing..which is First of its kind in Country....you are Man of its words ... People will never Forget your good
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಸರ್,
ನೀವು ಜನಸಾಮಾನ್ಯರ ಮನುಷ್ಯ,ನೀವು ಮತ್ತು ಡಿಕೆ ಶಿವಕುಮಾರ್ ಸರ್ ನೀಡಿದ 5 ಭರವಸೆಗಳನ್ನು ಲಿಖಿತವಾಗಿ ಜಾರಿಗೆ ತರುವ ಧೈರ್ಯಶಾಲಿ ನಿರ್ಧಾರವನ್ನು ತೆಗೆದುಕೊಂಡಿದ್ದೀರಿ.. ಇದು ದೇಶದಲ್ಲೇ ಮೊದಲನೆಯದು,ನೀವು ಮಾತಿನ ಮನುಷ್ಯ,ಬಡವರ ಏಳಿಗೆಗಾಗಿ ನಿಮ್ಮ ಒಳ್ಳೆಯ ಕಾರ್ಯಗಳನ್ನು ಜನರು ಎಂದಿಗೂ ಮರೆಯುವುದಿಲ್ಲ...