ಮಡಿಕೇರಿಯ ಪ್ರಮುಖ ಪ್ರವಾಸಿ ತಾಣವಾಗಿರುವ ಅಬ್ಬಿಫಾಲ್ಸ್ - ಮಾಂದಲಪಟ್ಟಿಗೆ ತೆರಳುವ ರಸ್ತೆಯಲ್ಲಿ ಮುತ್ತಪ್ಪ ದೇವಸ್ಥಾನದ ಬಳಿಯ ತಿರುವಿನಲ್ಲಿ ವಾಹನವೊಂದು ಬೃಹತ್ ಗುಂಡಿಗೆ ಇಳಿದ ಪರಿಣಾಮ ಚಕ್ರವೇ ಹೊರ ಕಳಚಿ ಬಂದ ಘಟನೆ ಇಂದು ನಡೆದಿದ್ದು, 1 ಗಂಟೆಗೂ ಮಿಗಿಲು ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು.
@GowdaMantar
ಸಾರ್ವಜನಿಕರ ಹಾಗೂ ಪರಿಸರದ ಹಿತದೃಷ್ಟಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಜೂನ್ 11 ರಿಂದ ಮಾರಾಟ, ಖರೀದಿ ಹಾಗೂ ಶೇಖರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ತಾ.10ರ ಬೆಳಿಗ್ಗೆ 8:30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ತೀವ್ರ ಗಾಳಿ ಸಹಿತ ಮಳೆ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಸಂದರ್ಭ 115.6 ಮಿ.ಮೀ ನಿಂದ 204.4 ಮಿ.ಮೀ ವರೆಗೆ ಮಳೆ ಬೀಳುವ ಸಾಧ್ಯತೆ ಇದೆ.
ಹಾಡಹಗಲೇ ಕಾರ್ಮಿಕ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲ ಗ್ರಾಮದ ವ್ಯಾಪ್ತಿಯ ಬಜೆಕೊಲ್ಲಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಬಜೆಕೊಲ್ಲಿ ಪೈಸಾರಿಯ ನಿವಾಸಿ ಕಾರ್ಮಿಕ ಮಹಿಳೆ ಆಯಿಷಾ (58) ಇದೀಗ ಚಿಕಿತ್ಸೆ ಪಡೆದುಯುತ್ತಿದ್ದಾರೆ.
ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನದಿಯಲ್ಲಿ ಆನೆಗಳನ್ನು ಸ್ನಾನ ಮಾಡಿಸುವ ವೇಳೆ ಕಂಜನ್ ಹೆಸರಿನ ಸಾಕಾನೆ ಮತ್ತೊಂದು ಆನೆ ಮೇಲೆ ದಾಳಿ ಮಾಡಿದ್ದು, ಈ ಆನೆ ಕೆಳಗೆ ಬಿದ್ದಿದೆ. ಈ ಸಂದರ್ಭ ಸ್ಥಳದಲ್ಲೇ ಇದ್ದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಈ ಆನೆ ಕೆಳಗೆ ಸಿಲುಕಿ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡ ದುರ್ಘಟನೆ ನಡೆದಿದೆ.
ಇದೇ ಮೊದಲ ಬಾರಿಗೆ ಭಾರತದಲ್ಲಿ ಕಾಗದ ರಹಿತ ಡಿಜಿಟಲ್ ಗಣತಿ ಕಾರ್ಯವನ್ನು ಹಮ್ಮಿಕೊಂಡಿದ್ದು, ಕೊಡಗು ಜಿಲ್ಲೆಯಲ್ಲಿಯೂ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಈಗಾಗಲೇ ಅಂತರ್ಜಾಲದ ಮೂಲಕ ಗಣತಿ ಪ್ರಕ್ರಿಯೆ ಆರಂಭವಾಗಿದ್ದು, ಸರಳ ವಿಧಾನಗಳ ಮೂಲಕ ಮನೆಯಿಂದಲೇ ಗಣತಿ ಕಾರ್ಯವನ್ನು ನಡೆಸಬಹುದಾಗಿದೆ.
https://t.co/ryXnWsDA9G