Today organised from youth Congress Team Kalgi blood donate camp On the occasion of priyank kharge Sab birthday
Once again wish u happy birthday sir
#PriyankKharge Ji
Power of youths 🖤🦁💪✌️.
ನಮ್ಮ ಸಾಧನೆಗಳನ್ನು ಮೋದಿಯವರು ಮೆಚ್ಚುತ್ತಿದ್ದಾರೆ, ಆದರೆ ಕರ್ನಾಟಕದ ಬಿಜೆಪಿಯವರು ಮೆಚ್ಚಲು ತಯಾರಿಲ್ಲ!!
ನನ್ನ ಸಾಧನೆಗಳನ್ನು, ಕೆಲಸಗಳನ್ನು ಪ್ರಶ್ನಿಸುವುದು ಬಿಜೆಪಿ ಸ್ನೇಹಿತರಿಗೆ ನಿತ್ಯದ ಉದ್ಯೋಗದಂತಾಗಿದೆ, ಉತ್ತರ ಸಿಕ್ಕರೂ ಮತ್ತದೇ ಪ್ರಶ್ನೆಗಳನ್ನು ಎತ್ತುವುದು ಅವರ ಹವ್ಯಾಸ.
ಬಿಜೆಪಿಯವರ ಪ್ರಶ್ನೆಗಳಿಗೆ ನಾನು ಉತ್ತರಿಸುವುದಕ್ಕಿಂತ ಕೇಂದ್ರ ಸರ್ಕಾರ ನನ್ನ ಕೆಲಸಗಳ ಬಗ್ಗೆ ಪುರಾವೆಗಳನ್ನು ನೀಡುತ್ತಿದೆ!
ಮೋದಿಯವರ ಮನ್ ಕಿ ಬಾತ್ ನಲ್ಲಿ ನಮ್ಮ ಕಾಮ್ ಕಿ ಬಾತ್ ಸದ್ದು ಮಾಡಿವೆ, ಕಲಬುರಗಿಗೆ ಪ್ರಿಯಾಂಕ್ ಖರ್ಗೆ ಮಾಡಿದ್ದೇನು ಎಂದು ಕೇಳುವ ಬಿಜೆಪಿಯವರಿಗೆ ಮೋದಿಯವರ ಮನ್ ಕಿ ಬಾತ್ ಉತ್ತರವಾಗುತ್ತದೆ.
ಕಲಬುರಗಿ ರೊಟ್ಟಿಗಳ ಬ್ರಾಂಡಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆಗೆ ನಾವು ಕೈಗೊಂಡ ಕ್ರಮಗಳಿಂದ ಕಲಬುರಗಿ ರೊಟ್ಟಿಗಳು ಈಗ ಜಾಗತಿಕ ಮಾರುಕಟ್ಟೆ ಪಡೆದುಕೊಂಡಿದೆ.
ಈ ವಿಷಯವನ್ನು ಈ ಹಿಂದೆ ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿದ್ದ ಮೋದಿಯವರು ಈಗ ನಮ್ಮ ಜಿಐ ಟ್ಯಾಗ್ ಪಡೆದಿರುವ ಕಲಬುರಗಿಯ ತೊಗರಿಯನ್ನು ಮಾಲ್ಡಿವ್ಸ್ ಗೆ ರಫ್ತು ಮಾಡುತ್ತಿರುವ ಉಪಕ್ರಮವನ್ನು ಪ್ರಸ್ತಾಪಿಸಿದ್ದಾರೆ.
ಕಲಬುರಗಿಯ ವೈಶಿಷ್ಟ್ಯಮಯ ತೊಗರಿಯ ಮಾರುಕಟ್ಟೆಯನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸುವ ಮೂಲಕ ಜಿಲ್ಲೆಯ ರೈತರಿಗೆ 30%ನಷ್ಟು ಹೆಚ್ಚು ಧಾರಣೆ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದೇವೆ.
ಮಾತ್ರವಲ್ಲದೆ, ಜಿಲ್ಲೆಯಲ್ಲಿ ಬೆಳೆಯುವ ಹೆಸರು, ತೊಗರಿ, ಉದ್ದು, ಹುರುಳಿ ಮುಂತಾದ ಬೆಳೆಗಳನ್ನು ಸ್ಥಳೀಯವಾಗಿ ಮೌಲ್ಯವರ್ಧನೆ ಮಾಡುವ ನಿಟ್ಟಿನಲ್ಲಿ ಎನರ್ಜಿ ಬಾರ್ ಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡುವ ವಿಶಿಷ್ಟ ಕಾರ್ಯಕ್ರಮವೂ ಜಾರಿಯಲ್ಲಿದೆ.
ಕಲಬುರಗಿ ಪಲ್ಸ್, ಭೀಮಾ ಪಲ್ಸ್, ಕಲಬುರಗಿ ಖಡಕ್ ರೊಟ್ಟಿ, ಕಮಲಾಪುರ ಕೆಂಪು ಬಾಳೆ ಸೇರಿದಂತೆ ಇಲ್ಲಿನ ರೈತರು ಉತ್ಪಾದಿಸುವ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಗುರುತು ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ. ಈ ಮೂಲಕ ರೈತರು ಮತ್ತು ಕಾರ್ಮಿಕರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ನಮ್ಮ ಉದ್ದೇಶವಾಗಿದೆ.
ಬಿಜೆಪಿಯವರು ನನ್ನನ್ನು ಪ್ರಶ್ನಿಸುವ ಮತ್ತು ಟೀಕಿಸುವ ಮುನ್ನ ಮೋದಿಯವರ ಮನ್ ಕಿ ಬಾತ್ ಕೇಳಲಿ, ನಂತರ ಆತ್ಮಸಾಕ್ಷಿಯಿಂದ ತಮ್ಮ ದಿಲ್ ಕಿ ಬಾತ್ ಆಡಲಿ!
Dear @IncomeTaxIndia, perhaps the scrutiny should begin with the RSS and its sprawling “Vichaar Parivaar.”
Here is a useful starting point for your investigation:
https://t.co/zvgFjmUFSP
It documents more than 2,500 organisations reportedly linked to the RSS.
My deepest respect to the visually impaired citizens protesting at Jantar Mantar, standing in solidarity with crores of students across India who are demanding meaningful reforms in education.
Their courage and determination have brought the anguish and aspirations of India’s youth into sharp focus. Yet the power drunk @narendramodi government continues to ignore their voices and refuse accountability.
*ಇಂದು ಟೆಂಗಳಿ ಜಿಲ್ಲಾ ಪಂಚಾಯತ್ ಮತಕ್ಷೇತ್ರದ ಟೆಂಗಳಿ ಗ್ರಾಮದಲ್ಲಿ ವಿವಿಧ ಬಡಾವಣೆ ತೆರಳಿ SIR ಮಾಹಿತಿ ನೀಡಿ enumeration ಫಾರಂ ತುಂಬುವ ಬಗ್ಗೆ ಮಾಹಿತಿ ನೀಡಲಾಯಿತು ಸಂದರ್ಭದಲ್ಲಿ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರು ಶರಣು ಮಜ್ಜಗಿ,ಯುವ ಕಾಂಗ್ರೆಸ್ ಅಧ್ಯಕ್ಷರು ಪ್ರದೀಪ್ ಕುಮಾರ್ ಡೊಣ್ಣೂರ್,NSUI ಅಧ್ಯಕ್ಷರು ಅವಿನಾಶ್, ಯುವಕರು ಇದ್ದರು.
ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್, ಐಟಿಬಿಟಿ ಇಲಾಖೆಯ ಮಾನ್ಯ ಸಚಿವರು ಹಾಗೂ ಕಲಬುರ್ಗಿ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆಜೀ ರವರ ಹುಟ್ಟು ಹಬ್ಬದ ಅಂಗವಾಗಿ ಕೊಡದುರಿನಲ್ಲ ಮಾಜಿ ತಾಲೂಕಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶರಣು ಮಜ್ಜಗಿ ಅವರು ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು🥳
ಮಾನ್ಯ ಶ್ರೀ ಪ್ರಿಯಾಂಕ ಖರ್ಗೆ ಜೀ ಯವರಿಗೆ ಫೋನ್ ಕರೆ ಮಾಡುವುದರ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದಂತಹ ಮತ್ತು ಜೀವ ಬೆದರಿಕೆ ಹಾಕಿರುವಂತಹ RSS ನ ಕಿಡಿಗೇಡಿಗಳ ವಿರುದ್ಧ ಬ್ಲಾಕ್ ಕಾಂಗ್ರೆಸ್ ಕಾಳಗಿ ವತಿಯಿಂದ ನಡೆದ ಬೃಹತ್ ಪ್ರತಿಭಟನೆ ನಡೆಸಲಾಯಿತು 🖤
#westandwithpriyankkharge#PriyankKharge#youthcongress
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಸಚಿವಾಲಯ ಸ್ಥಾಪನೆಯಾಗಿರುವುದರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಸಕಾಲದಲ್ಲಿ ಪೂರೈಸುವ ಸಲುವಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ಈ ಕಚೇರಿಗಳನ್ನು ಮತ್ತಷ್ಟು ಬಲಪಡಿಸಲೂ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ನಿಟ್ಟನಲ್ಲಿ ಹೊಸ ಸಚಿವಾಲಯವನ್ನು ಸೃಷ್ಟಿಸಲು ಕಾರಣರಾದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪಟದ ನನ್ನೆಲ್ಲ ಸಹೋದ್ಯೋಗಿಗಳಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ
ಶರಣರ ನಾಡಾದ ಕಲಬುರಗಿಯಲ್ಲಿ ಶರಣ ಪರಂಪರೆಯ ಪ್ರಮುಖ ಕೇಂದ್ರವಾಗಿರುವ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಡಾ.ಶರಣಬಸಪ್ಪ ಅಪ್ಪಾ ಅವರು ಲಿಂಗಕ್ಯರಾಗಿರುವುದು ಅತೀವ ನೋವಿನ ವಿಷಯವಾಗಿದೆ.
ಕಾಯಕ ಜೀವಿಯಾಗಿ, ಮಹಾ ದಾಸೋಹಿಯಾಗಿ, ಶರಣಪರಂಪರೆಯ ಉದಾತ್ತ ಚಿಂತನೆಗಳ ವಕ್ತಾರರಾಗಿ, ಕಲಬುರಗಿ ಜನತೆಗೆ ತಾತ್ವಿಕ ಮಾರ್ಗದರ್ಶಕರಾಗಿದ್ದ ಶ್ರೀಗಳು ಸಮಸ್ತ ಜನರ ಏಳಿಗೆ ಬಯಸುತ್ತಾ, ಜಿಲ್ಲೆಯ ಸೌಹಾರ್ಧ ಪರಂಪರೆಗೆ ಶಕ್ತಿಯಾಗಿದ್ದರು.
ನಾನು ಅವರಿಂದ ರಾಜಕೀಯ ಮೌಲ್ಯಗಳ, ಬದುಕಿನ ಮೌಲ್ಯಗಳ ಅರಿವನ್ನು ಪಡೆದಿದ್ದೇನೆ, ನನಗೆ ಅವರು ಬಹುದೊಡ್ಡ ಪ್ರೇರಕ ಶಕ್ತಿಯಾಗಿ, ಮಾರ್ಗದರ್ಶಕರಾಗಿ ಮುನ್ನಡೆಸಿದವರಾಗಿದ್ದರು, ಇಂದು ಅವರಿಲ್ಲ ಎಂದು ಕಲ್ಪಿಸಿಕೊಳ್ಳುವುದು ನನಗೆ ಅತ್ಯಂತ ಕಷ್ಟದ ಸನ್ನಿವೇಶ.
ಬಂದೆನವಾಜ್ ದರ್ಗಾದ ಡಾ. ಸಯ್ಯದ್ ಶಾ ಖುಸ್ರೋ ಹುಸೇನಿಯವರು ಮತ್ತು ಶರಣಬಸವೇಶ್ವರ ಮಠದ ಪೂಜ್ಯ ಶರಣಬಸಪ್ಪ ಅಪ್ಪಾ ಈ ಇಬ್ಬರೂ ಕಲಬುರಗಿಯ ಭಾವೈಕ್ಯತೆಗೆ ಎರಡು ಕಣ್ಣುಗಳಂತಿದ್ದವರು, ಒಂದು ವರ್ಷದ ಅವಧಿಯಲ್ಲಿ ಈ ಇಬ್ಬರೂ ಮಹನೀಯರನ್ನು ಕಳೆದುಕೊಳ್ಳುವ ಮೂಲಕ ಎರಡು ಕಣ್ಣುಗಳನ್ನು ಕಳೆದುಕೊಂಡು ಕತ್ತಲಲ್ಲಿ ನಿಂತಂತೆ ಭಾಸವಾಗುತ್ತಿದೆ.
ಸದಾ ಸಮಾಜದ ಔನತ್ಯವನ್ನು ಬಯಸುತ್ತಿದ್ದ ಶ್ರೀ ಡಾ. ಶರಣಬಸಪ್ಪಾ ಅಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟಿರುವ ಕೊಡುಗೆ ಅಪಾರವಾದುದು, ವಿದ್ಯೆ ಎಂಬುದು ಅಭ್ಯಾಸಿಗನ ಕೈವಶ. ಅದು ಕೇವಲ ಉಳ್ಳವರ ಸೊತ್ತಲ್ಲ ಎಂಬ ಆಶಯದೊಂದಿಗೆ ತಮ್ಮ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಸರ್ವರಿಗೂ ಜ್ಞಾನದಾಸೋಹ ನೀಡಿದ್ದಾರೆ.
91 ವರ್ಷಗಳ ತುಂಬು ಜೀವನದಲ್ಲಿ ಅವರು ಸಮಾಜಕ್ಕೆ ನೀಡಿದ್ದು ಅಪಾರ.
ಕಲಬುರಗಿ ಜಿಲ್ಲೆಯ ಜನತೆಯ ಏಳಿಗೆಯಲ್ಲಿ ಅವರ ಈ ಜ್ಞಾನದಾಸೋಹವು ಪ್ರಮುಖ ಮೆಟ್ಟಿಲಾಗಿದೆ ಎಂದರೆ ಅತಿಶಯೋಕ್ತಿಯಲ್ಲ.
ಮಹಾ ದಾಸೋಹಿ ಶ್ರೀ ಶರಣಬಸಪ್ಪ ಅಪ್ಪಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ನಾನೂ ಸೇರಿದಂತೆ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ, ಎಲ್ಲರಿಗೂ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ದೊರಕಲಿ ಎಂದು ಆಶಿಸುತ್ತೇನೆ.
ಶ್ರೀಗಳು ನೀಡಿದ ಮಾರ್ಗದರ್ಶನವು ನಮ್ಮೆಲ್ಲರಿಗೂ ಸದಾ ಪ್ರೇರಕ ಶಕ್ತಿಯಾಗಿರಲಿದೆ ಎಂದು ಭಾವಿಸಿದ್ದೇನೆ.
ಪ್ರಾಕೃತಿಕ ಅಸಮತೋಲನಗಳಿಂದ ಬೆಳೆ ಕಳೆದುಕೊಳ್ಳುವ ರೈತ ಸಮುದಾಯದ ಆತ್ಮವಿಶ್ವಾಸ ಕುಸಿಯದಂತೆ ನೋಡಿಕೊಳ್ಳುವ ಸಲುವಾಗಿ ಬೆಳೆ ವಿಮೆ ಮಾಡಿಸುವ ಕುರಿತು ಹೆಚ್ಚಿನ ಆಸಕ್ತಿವಹಿಸಿ ರೈತರಲ್ಲಿ ಜಾಗೃತಿ ಮೂಡಿಸಲಾಗಿತ್ತು.
ಇದರ ಪರಿಣಾಮ ಬೆಳೆ ವಿಮೆ ನೋಂದಣಿಯಲ್ಲಿ ಕಲಬುರಗಿ ಜಿಲ್ಲೆಯು ಮುಂಚೂಣಿಯಲ್ಲಿದೆ.
ಬೆಳೆ ನಷ್ಟದ ಸಮೀಕ್ಷೆಯು ಸಮರ್ಪಕವಾಗಿ ನಡೆಯುವಂತೆ ನೋಡಿಕೊಂಡಿದ್ದರ ಪರಿಣಾಮ ಕಳೆದ ಸಾಲಿನಲ್ಲಿ ₹656 ಕೋಟಿ ರೂಪಾಯಿಯ ಅತಿ ಹೆಚ್ಚು ಬೆಳೆ ವಿಮೆಯ ಪರಿಹಾರ ಕಲಬುರಗಿ ಜಿಲ್ಲೆಗೆ ಮಂಜೂರಾಗಿತ್ತು.
ಇದರಿಂದ ಪ್ರೇರಣೆಗೊಂಡ ರೈತರು ಈ ಸಾಲಿನಲ್ಲಿ ಹೆಚ್ಚಿನ ಉತ್ಸಾಹ ತೋರಿದ್ದಾರೆ, ಹಾಗೂ ಅಧಿಕಾರಿಗಳ ಶ್ರದ್ದೆ, ಶ್ರಮವೂ ಇದರಲ್ಲಿದೆ.
ಕಲಬುರಗಿ ಜಿಲ್ಲೆಯ ರೈತರ ಹಿತ ಕಾಯುವುದು ನಮ್ಮ ಸಂಕಲ್ಪ.
#ಕಲಬುರಗಿಕಲ್ಯಾಣ
ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ. ಶರಣಬಸವಪ್ಪ ಅಪ್ಪ ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ನಮ್ಮ ನಾಯಕರಾದ ಶ್ರೀ @PriyankKharge ಜೀ.
As part of its ongoing commitment to modernising law enforcement and empowering youth through emerging technologies, the Government of Karnataka today launched a major drone deployment initiative in Kalaburagi.
The move not only strengthens public safety infrastructure but also sets the foundation for creating a skilled drone workforce in the state.
At an official ceremony held at Vidhana Soudha, Hon’ble Home Minister @DrParameshwara handed over advanced surveillance drones to the Commissioner of Police, Kalaburagi.
These drones, designed and manufactured in Karnataka by NeoSky, are equipped with AI/ML-based surveillance features and are being deployed through private CSR support.
The drones bring enhanced capabilities to the field with features like day & night surveillance, Number Plate Recognition, crowd and vehicle detection and ultra-portability for rapid deployment.
NeoSky will also partner with District Administration to train 500 youth from Kalaburagi in DGCA-certified drone operation, opening up employment and entrepreneurial avenues in one of India’s fastest-growing tech sectors.
@CMofKarnataka
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳು ಹಾಗೂ ಇ-ಸ್ವತ್ತುಗಳ ವಿತರಣೆ ಶ್ರೀ @DKShivakumar ಅವರ ನೇತೃತ್ವದಲ್ಲಿ ಮಾಡಲಾಯಿತು.
ಶ್ರೀ @SBG4Hosakote ಅವರ ಪ್ರಯತ್ನಗಳಿಂದಾಗಿ, ಇಂದಿನ ಕಾರ್ಯಕ್ರಮದಲ್ಲಿ ಕೇವಲ ಹೊಸಕೋಟೆ ತಾಲೂಕಿನಲ್ಲೇ ಸುಮಾರು 5,561 ಫಲಾನುಭವಿಗಳಿಗೆ ಇ-ಸ್ವತ್ತು ಹಾಗೂ 1,010 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಇದು ಆಡಳಿತ ವ್ಯವಸ್ಥೆ ಸುಧಾರಣೆ ಹಾಗೂ ಜನರ ಭೂ ದಾಖಲೆಗಳ ಸಂರಕ್ಷಣೆಗೆ ನಮ್ಮ ಸರ್ಕಾರದ ಅವಿರತ ಶ್ರಮದ ಪ್ರತೀಕ. ಜೊತೆಗೆ,
- ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಗೆ ಸಮುದಾಯ ಬಂಡವಾಳ ನಿಧಿ ಅಡಿಯಲ್ಲಿ 429 ಫಲಾನುಭವಿಗಳಿಗೆ ₹2.14 ಕೋಟಿ ಅನುದಾನ
- ₹1.44 ಕೋಟಿ ವೆಚ್ಚದಲ್ಲಿ 263 ಅಂಗನವಾಡಿಗಳಿಗೆ LED ಟಿವಿ ವಿತರಣೆ
- ಗ್ರಾಮಪಂಚಾಯಿತಿಗಳ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ 1,475 ಫಲಾನುಭವಿಗಳಿಗೆ ₹38.36 ಲಕ್ಷ (ಹೊಸಕೋಟೆ ತಾಲೂಕಿನ 28 ಗ್ರಾ.ಪಂಗಳ ಸಂಪೂರ್ಣ ಅನುದಾನದ 25% ಮೀಸಲು ಹಣ) ಅನುದಾನ
- ಗ್ರಾಮಪಂಚಾಯಿತಿಗಳ ವಿಶೇಷ ಚೇತನರ ಕಲ್ಯಾಣಕ್ಕಾಗಿ 1,106 ಫಲಾನುಭವಿಗಳಿಗೆ ₹44.45 ಲಕ್ಷ (ಹೊಸಕೋಟೆ ತಾಲೂಕಿನ 28 ಗ್ರಾ.ಪಂಗಳ ಸಂಪೂರ್ಣ ಅನುದಾನದ 5% ಮೀಸಲು ಹಣ) ಅನುದಾನ
- 81 ವಾಟರ್ ಮ್ಯಾನ್ ಗಳಿಗೆ ನೇಮಕಾತಿ ಪತ್ರ ವಿತರಣೆ
- ನಲ್ - ಜಲ್ ಮಿತ್ರ ಯೋಜನೆಯಡಿ ತರಬೇತಿ ಹೊಂದಿದ 56 ಫಲಾನುಭವಿಗಳಿಗೆ ಆದೇಶ ಪತ್ರ, ಸಮವಸ್ತ್ರ ಹಾಗೂ ಟೂಲ್ ಕಿಟ್ ವಿತರಣೆ
- 27 ಗ್ರಾಮ ಪಂಚಾಯತಿಗಳಿಗೆ ತೆರಿಗೆ ಸಂಗ್ರಹಿಸಲು POS ಯಂತ್ರಗಳ ವಿತರಣೆ
- 28 ಗ್ರಾಮಪಂಚಾಯಿತಿಗಳ ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.
ಗ್ಯಾರೆಂಟಿಗಳ ಜೊತೆ ಜೊತೆಯಲ್ಲಿ, ನಾಡಿನ ಎಲ್ಲಾ ಜನರ ಹಾಗೂ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರದ ಕಂಕಣಬದ್ಧ ಕಾರ್ಯನಿರ್ವಹಿಸುವಿಕೆಗೆ ಇಂದಿನ ಕಾರ್ಯಕ್ರಮೇ ಸಾಕ್ಷಿ.
@CMofKarnataka