ಆಘಾತಕಾರಿ ಸುದ್ದಿಯೊಂದು ನನ್ನಲ್ಲಿ ತೀವ್ರ ನೋವನ್ನುಂಟು ಮಾಡಿದೆ, ಆತ್ಮೀಯ ಗೆಳೆಯ ಎನ್ನುವುದಕ್ಕಿಂತಲೂ ಮಿಗಿಲಾಗಿ, ನಮ್ಮ ಕುಟುಂಬಕ್ಕೆ ಆತ್ಮೀಯರಾಗಿ ನನ್ನ ಸಹೋದರನಂತೆ ಇದ್ದ ಸೂರಜ್ ಹೆಗ್ಡೆಯವರು ಹೀಗೆ ಏಕಾಏಕಿ ನಮ್ಮೆಲ್ಲರನ್ನು ಬಿಟ್ಟು ಹೊರಟ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಸೂರಜ್ ಹೆಗ್ಡೆಯವರು ಮತ್ತು ನಮ್ಮ ಸ್ನೇಹ ರಾಜಕೀಯ ವಲಯಕ್ಕೆ ಮಾತ್ರ ಸೀಮಿತವಾಗಿರಲಿಲ್ಲ, ಮಿಗಿಲಾಗಿ ನಮ್ಮ ಇಡೀ ಕುಟುಂಬದ ಆತ್ಮೀಯ ಒಡನಾಡಿಯಾಗಿದ್ದರು, ನಮ್ಮ ಕುಟುಂಬದ ಸದಸ್ಯರಂತಿದ್ದರು.
NSUI, ಯುವ ಕಾಂಗ್ರೆಸ್ ಸಂಘಟನೆಗಳಿಂದಲೂ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿವಿಧ ಹುದ್ದೆಗಳಲ್ಲಿ ಪಕ್ಷ ಸಂಘಟನೆಗೆ ತಮ್ಮ ಬದುಕನ್ನು ಮೀಸಲಿರಿಸಿದ್ದ ನಾನು ಕಂಡ ಅತ್ಯುತ್ತಮ ಸಂಘಟಕ, ಸ್ನೇಹಜೀವಿ, ಸೌಜನ್ಯದ ವ್ಯಕ್ತಿತ್ವದ ಸೂರಜ್ ಹೆಗಡೆಯವರ ಸಾವಿನಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ನಷ್ಟ, ಮಾತ್ರವಲ್ಲ ವೈಯಕ್ತಿಕವಾಗಿ ನನಗೆ ಮತ್ತು ನಮ್ಮ ಕುಟುಂಬಕ್ಕೆ ಆತ್ಮೀಯರೊಬ್ಬರನ್ನು ಕಳೆದುಕೊಂಡ ಅತೀವ ನೋವಿದೆ.
ದೇವರಾಜ್ ಅರಸುರವರ ಮೊಮ್ಮಗನಾಗಿ, ಅವರ ಗುಣಗಳನ್ನು ತತ್ವಗಳನ್ನು ಅಳವಡಿಸಿಕೊಂಡಿದ್ದ ಸೂರಜ್ ಹೆಗಡೆಯವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಈ ಆಘಾತವನ್ನು ಸಹಿಸುವ ಶಕ್ತಿ ಸಿಗಲಿ ಎಂದಷ್ಟೇ ನಾನೀಗ ಹೇಳಬಹುದಾದ ಸಮಾಧಾನಕರ ಮಾತುಗಳು.
ನಾಡಿನ ಸಮಸ್ತ ಜನತೆಗೆ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು.
ಸಂಕ್ರಾಂತಿಯ ಸಮೃದ್ಧ ಬೆಳೆಯಂತೆ ನಿಮ್ಮ ಬಾಳು ಸಹ ಸಮೃದ್ಧವಾಗಿ ಬೆಳಗಲಿ.ನಾಡಿನಲ್ಲೆಡೆ ಶಾಂತಿ - ಸಮೃದ್ಧಿ ನೆಲೆಸಲಿ.ಹೊಸ ವರ್ಷದಲ್ಲಿ ಹೊಸ ಭರವಸೆಗೆ ಮುನ್ನುಡಿ ಬರೆಯಲಿ ಎಂದು ಆಶಿಸುತ್ತೇನೆ.
ನಾಡಿನ ಸಮಸ್ತ ಜನತೆಗೆ ವೈಕುಂಠ ಏಕಾದಶಿಯ ಹಾರ್ದಿಕ ಶುಭಾಶಯಗಳು. ಈ ಪವಿತ್ರ ದಿನದಂದು ಭಗವಾನ್ ಶ್ರೀ ವಿಷ್ಣು ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ನಾಡಿನಾದ್ಯಂತ ಸುಖ, ಶಾಂತಿ, ಸಮೃದ್ಧಿ ಮತ್ತು ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು, ಹಾಗೂ ಹಿರಿಯರಾದ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ನೋವುಂಟಾಗಿದೆ.
ಶಾಮನೂರು ಶಿವಶಂಕರಪ್ಪನವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುವೆ.
ಜೊತೆಗಿರದ ಜೀವ ಎಂದಿಗೂ ಜೀವಂತ
ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. ಬಾಲ್ಯದಿಂದಲೂ ಚಂದನವನಕ್ಕೆ ಅನನ್ಯ ಕೊಡುಗೆ ನೀಡುವ ಜೊತೆಗೆ ತಮ್ಮ ಸರಳ, ಸಜ್ಜನಿಕೆ ವ್ಯಕ್ತಿತ್ವ ಹಾಗೂ ಸಾಮಾಜಿಕ ಕಳಕಳಿ ಮೂಲಕ ಕನ್ನಡಿಗರ ಹೃದಯದಲ್ಲಿ ಅಪ್ಪು ಎಂದಿಗೂ ಅಜರಾಮರ.
ಶ್ರೇಷ್ಠ ಶಿಕ್ಷಣ ತಜ್ಞ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರನ್ನು ಗೌರವಪೂರ್ವಕ ನಮನಗಳು
ಸಮಾಜದಲ್ಲಿ ಅರಿವು ಮೂಡಿಸುತ್ತಿರುವ ನಾಡಿನ ಸಮಸ್ತ ಶಿಕ್ಷಕವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
"ನಾಡಿನ ಸಮಸ್ತ ಜನತೆಗೆ ಗೌರಿ ಹಬ್ಬದ ಹಾರ್ದಿಕ ಶುಭಾಶಯಗಳು!"
"ಜಗನ್ಮಾತೆ ಸ್ವರ್ಣ ಗೌರಿ ಎಲ್ಲರ ಬಾಳಲ್ಲೂ ಸುಖ, ಸಮೃದ್ಧಿ, ನೆಮ್ಮದಿ ಕರುಣಿಸಲಿ, ಎಲ್ಲರಿಗೂ ಶುಭ ತರಲಿ."
"ನಿಮಗೂ ನಿಮ್ಮ ಕುಟುಂಬಕ್ಕೂ ಗೌರಿ ಗಣೇಶ ಹಬ್ಬದ ಶುಭಾಶಯಗಳು".
"ಸ್ವರ್ಣಗೌರಿ ಮತ್ತು ಸಿದ್ದಿವಿನಾಯಕ ಸುಖ, ಸಂತೋಷ ನೀಡಿ ಹರಸಿ ಇಷ್ಟಾರ್ಥಗಳನ್ನು ನೆರವೇರಿಸಲಿ."…..!!
ಯುವಜನರು 18ನೇ ವಯಸ್ಸಿಗೆ ಮತ ಚಲಾಯಿಸುವ ಹಕ್ಕನ್ನು ಒದಗಿಸಿದ ಧೀಮಂತ ನಾಯಕರು, ಅಧಿಕಾರ ವಿಕೇಂದ್ರೀಕರಣ ಮೂಲಕ ಸಾಮಾನ್ಯರಿಗೂ ಅಧಿಕಾರ ಸಿಗುವಂತೆ ಮಾಡಿದ ಯುವಕರ ಕಣ್ಮಣಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
#RajivGandhi
ಹಿಂದುಳಿದ ವರ್ಗಗಳ ಹರಿಕಾರರು, ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದು ರೈತರಿಗೆ ನೆಮ್ಮದಿಯ ಬದುಕನ್ನು ಕೊಟ್ಟ ಮಹಾನ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ದೇವರಾಜ ಅರಸ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು
#DevrajUrs
ಶರಣರ ನಾಡಾದ ಕಲಬುರಗಿಯಲ್ಲಿ ಶರಣ ಪರಂಪರೆಯ ಪ್ರಮುಖ ಕೇಂದ್ರವಾಗಿರುವ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಡಾ.ಶರಣಬಸಪ್ಪ ಅಪ್ಪಾ ಅವರು ಲಿಂಗಕ್ಯರಾಗಿರುವುದು ಅತೀವ ನೋವಿನ ವಿಷಯವಾಗಿದೆ.
ಕಾಯಕ ಜೀವಿಯಾಗಿ, ಮಹಾ ದಾಸೋಹಿಯಾಗಿ, ಶರಣಪರಂಪರೆಯ ಉದಾತ್ತ ಚಿಂತನೆಗಳ ವಕ್ತಾರರಾಗಿ, ಕಲಬುರಗಿ ಜನತೆಗೆ ತಾತ್ವಿಕ ಮಾರ್ಗದರ್ಶಕರಾಗಿದ್ದ ಶ್ರೀಗಳು ಸಮಸ್ತ ಜನರ ಏಳಿಗೆ ಬಯಸುತ್ತಾ, ಜಿಲ್ಲೆಯ ಸೌಹಾರ್ಧ ಪರಂಪರೆಗೆ ಶಕ್ತಿಯಾಗಿದ್ದರು.
ನಾನು ಅವರಿಂದ ರಾಜಕೀಯ ಮೌಲ್ಯಗಳ, ಬದುಕಿನ ಮೌಲ್ಯಗಳ ಅರಿವನ್ನು ಪಡೆದಿದ್ದೇನೆ, ನನಗೆ ಅವರು ಬಹುದೊಡ್ಡ ಪ್ರೇರಕ ಶಕ್ತಿಯಾಗಿ, ಮಾರ್ಗದರ್ಶಕರಾಗಿ ಮುನ್ನಡೆಸಿದವರಾಗಿದ್ದರು, ಇಂದು ಅವರಿಲ್ಲ ಎಂದು ಕಲ್ಪಿಸಿಕೊಳ್ಳುವುದು ನನಗೆ ಅತ್ಯಂತ ಕಷ್ಟದ ಸನ್ನಿವೇಶ.
ಬಂದೆನವಾಜ್ ದರ್ಗಾದ ಡಾ. ಸಯ್ಯದ್ ಶಾ ಖುಸ್ರೋ ಹುಸೇನಿಯವರು ಮತ್ತು ಶರಣಬಸವೇಶ್ವರ ಮಠದ ಪೂಜ್ಯ ಶರಣಬಸಪ್ಪ ಅಪ್ಪಾ ಈ ಇಬ್ಬರೂ ಕಲಬುರಗಿಯ ಭಾವೈಕ್ಯತೆಗೆ ಎರಡು ಕಣ್ಣುಗಳಂತಿದ್ದವರು, ಒಂದು ವರ್ಷದ ಅವಧಿಯಲ್ಲಿ ಈ ಇಬ್ಬರೂ ಮಹನೀಯರನ್ನು ಕಳೆದುಕೊಳ್ಳುವ ಮೂಲಕ ಎರಡು ಕಣ್ಣುಗಳನ್ನು ಕಳೆದುಕೊಂಡು ಕತ್ತಲಲ್ಲಿ ನಿಂತಂತೆ ಭಾಸವಾಗುತ್ತಿದೆ.
ಸದಾ ಸಮಾಜದ ಔನತ್ಯವನ್ನು ಬಯಸುತ್ತಿದ್ದ ಶ್ರೀ ಡಾ. ಶರಣಬಸಪ್ಪಾ ಅಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟಿರುವ ಕೊಡುಗೆ ಅಪಾರವಾದುದು, ವಿದ್ಯೆ ಎಂಬುದು ಅಭ್ಯಾಸಿಗನ ಕೈವಶ. ಅದು ಕೇವಲ ಉಳ್ಳವರ ಸೊತ್ತಲ್ಲ ಎಂಬ ಆಶಯದೊಂದಿಗೆ ತಮ್ಮ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಸರ್ವರಿಗೂ ಜ್ಞಾನದಾಸೋಹ ನೀಡಿದ್ದಾರೆ.
91 ವರ್ಷಗಳ ತುಂಬು ಜೀವನದಲ್ಲಿ ಅವರು ಸಮಾಜಕ್ಕೆ ನೀಡಿದ್ದು ಅಪಾರ.
ಕಲಬುರಗಿ ಜಿಲ್ಲೆಯ ಜನತೆಯ ಏಳಿಗೆಯಲ್ಲಿ ಅವರ ಈ ಜ್ಞಾನದಾಸೋಹವು ಪ್ರಮುಖ ಮೆಟ್ಟಿಲಾಗಿದೆ ಎಂದರೆ ಅತಿಶಯೋಕ್ತಿಯಲ್ಲ.
ಮಹಾ ದಾಸೋಹಿ ಶ್ರೀ ಶರಣಬಸಪ್ಪ ಅಪ್ಪಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ನಾನೂ ಸೇರಿದಂತೆ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ, ಎಲ್ಲರಿಗೂ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ದೊರಕಲಿ ಎಂದು ಆಶಿಸುತ್ತೇನೆ.
ಶ್ರೀಗಳು ನೀಡಿದ ಮಾರ್ಗದರ್ಶನವು ನಮ್ಮೆಲ್ಲರಿಗೂ ಸದಾ ಪ್ರೇರಕ ಶಕ್ತಿಯಾಗಿರಲಿದೆ ಎಂದು ಭಾವಿಸಿದ್ದೇನೆ.
“ಆನಾಲಿಟಿಕ್ಸ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲಿ AI ಕ್ಷೇತ್ರದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ದೇಶದ 9ನೇ ಸ್ಥಾನ ಗಳಿಸಿದ ಮಾನ್ಯ ಪ್ರಿಯಾಂಕ್ ಖರ್ಗೆ ರವರಿಗೆ ಹೃತ್ಪೂರ್ವಕ ಶುಭಾಶಯಗಳು. ನಿಮ್ಮ ತ್ಯಾಗ, ನಿಪುಣತೆ ಹಾಗೂ ಮಹತ್ವದ ಕೊಡುಗೆಗಳು ಎಲ್ಲರಿಗೂ ಸ್ಪೂರ್ತಿಯಾಗಿದೆ.”@PriyankKharge
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸ್ವಪಕ್ಷದವರು ವಿರೋಧಿಸುವ ನಾಯಕನಾಗಿದ್ದಾರೆಯೇ!
ಬೆಂಗಳೂರು ಮೆಟ್ರೋ ಫೇಸ್ 2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಕೇಂದ್ರ ಸರ್ಕಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೇ ವೇದಿಕೆಯಲ್ಲಿ ಜಾಗ ನೀಡುವುದನ್ನು ನಿರಾಕರಿಸಿದೆ.
ಕೇಂದ್ರ ಸರ್ಕಾರ ಪ್ರೊಟೋಕಾಲ್ ಮರೆತಿದೆಯೇ?
ಅಥವಾ ಉದ್ದೇಶಪೂರ್ವಕ ಕಡೆಗಣನೆಯೇ?
ಮೊದಲ ಬಾರಿ ಶಾಸಕರಾಗಿರುವ ಹಾಗೂ ಬೆಂಗಳೂರಿನ ಶಾಸಕರಲ್ಲದಿರುವ @BYVijayendra ಅವರಿಗೆ ಸಿಕ್ಕ ಅವಕಾಶ ಅಶೋಕ್ ಅವರಿಗಿಲ್ಲ.
ಮಾನ್ಯ @RAshokaBJP ಅವರೇ,
ತಾವು ಬೆಂಗಳೂರು ಶಾಸಕರಾಗಿದ್ದರೂ, ವಿರೋಧ ಪಕ್ಷದ ನಾಯಕನಾಗಿದ್ದರೂ, @BJP4Karnataka ಪಕ್ಷದ ಹಿರಿಯ ನಾಯಕ ಎನಿಸಿಕೊಂಡಿದ್ದರೂ, ಹಲವು ಬಾರಿ ಆಯ್ಕೆ ಆಗಿದ್ದರೂ ನಿಮ್ಮನ್ನು ಕಡೆಗಣಿಸಲಾಗಿದೆ ಎಂದರೆ ನಿಮ್ಮ ಕುರ್ಚಿ ಕಿತ್ತುಕೊಳ್ಳುವ ಸಂದೇಶ ಬಂದಿದೆ ಎಂದು ಭಾವಿಸೋಣವೇ?
ಯಾರು ಯಾರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿಲ್ಲ ಎಂದು ತಲೆಕೆಡಿಸಿಕೊಂಡು ಕುಳಿತಿದ್ದ ತಮಗೆ ಈಗ “ನನಗೇಕೆ ಆಹ್ವಾನವಿಲ್ಲ” ಎಂದು ತಲೆಕೆಡಿಸಿಕೊಂಡು ಕೂರುವ ಸಮಯ ಬಂದಿದೆ.
ಇನ್ನಾದರೂ ಇತರರ ಮನೆ ಇಣುಕುವ ಬದಲು ನಿಮ್ಮ ಬುಡ ಅಲ್ಲಾಡುತ್ತಿರುವುದನ್ನು ಗಮನಿಸಿದರೆ ಒಳ್ಳೆಯದು!