Deeply shocked by the tragic Air India crash from Ahmedabad to London. My heartfelt condolences to the families of the victims. Prayers for the injured and all those affected. May the departed souls rest in peace.
#AirIndiaPlaneCrash#Ahmedabad
I strongly condemn the terrorist attack that took place in Pahalgam, Jammu & Kashmir. It is deeply saddening that many people lost their lives in this tragic incident. I offer my heartfelt condolences to the departed souls and pray for the speedy recovery of those injured.
#PahalgamTerroristAttack
The Waqf (Amendment) Bill is a weapon aimed at marginalising Muslims and usurping their personal laws and property rights.
This attack on the Constitution by the RSS, BJP and their allies is aimed at Muslims today but sets a precedent to target other communities in the future.
The Congress party strongly opposes this legislation as it attacks the very idea of India and violates Article 25, the Right to Freedom of Religion.
Today marks 1 year of an onslaught against the Palestinian people by the terror state of Israel. More than 40,000 lives have been taken including innocent children.
For us you'll never be deäd but archived in our hearts forever.
I am mourning each one of you.
Free Palestine🇵🇸
ಅರಣ್ಯ ಭೂಮಿಯನ್ನು ಮಾರಾಟ, ದಾನ ಮಾಡಲು ಯಾರಿಗೂ ಅವಕಾಶವಿಲ್ಲ, ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಬಳಿಕ ಅಲ್ಲಿ ವೃಕ್ಷೋಧ್ಯಾನ ನಿರ್ಮಿಸಲಾಗುವುದು.
@hd_kumaraswamy ಅವರೇ ಎಚ್.ಎಂ.ಟಿ. ವಶದಲ್ಲಿರುವ ���ಮೀನು ಪಡೆದು ಯಾರಿಗೆ ಮಾರುತ್ತೀರಿ ಎಂದು ಕೇಳಿದ್ದೀರಿ. ಅರಣ್ಯ ಭೂಮಿ ಮಾರಾಟ ಮಾಡಿರುವುದು ಈಗ ನಿಮ್ಮ ಇಲಾಖಾ ವ್ಯಾಪ್ತಿಯಲ್ಲಿರುವ ಎಚ್.ಎಂ.ಟಿ.ಯೇ ಹೊರತು ಅರಣ್ಯ ಇಲಾಖೆ ಅಲ್ಲ. ಬೆಂಗಳೂರಿನ ಪ್ರಮುಖ ಭಾಗದಲ್ಲಿರುವ ಪೀಣ್ಯ ಜಾಲಹಳ್ಳಿ ಅರಣ್ಯ ಜಮೀನು ಮರು ವಶಕ್ಕೆಪಡೆದು ಶುದ್ಧ ಉಸಿರಾಟಕ್ಕೊಂದು ತಾಣ (ಲಂಗ್ ಸ್ಪೇಸ್) ನಿರ್ಮಾಣ ಮಾಡುವ ಉದ್ದೇಶ ನನ್ನದಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ರಿಯಲ್ ಎಸ್ಟೇಟ್ ಸಂಸ್ಥೆಯಂತೆ ವರ್ತಿಸುತ್ತಿದೆ. 1997ರಿಂದ 2011ರವರೆಗೆ ಎಚ್.ಎಂ.ಟಿ. ಸಂಸ್ಥೆ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯನ್ನು ಅಕ್ರಮವಾಗಿ ಡಾಲರ್ಸ್ ಕನ್ ಸ್ಟ್ರಕ್ಷನ್ಸ್ ಅಂಡ್ ಎಂಜಿನಿಯರ್ಸ್ ಪ್ರೈ.ಲಿ., ಯು.ಎಸ್. ಸ್ಟೀಲ್ ಕಂಪನಿ, ಸಿಲ್ವರ್ ಲೈನ್ ಎಸ್ಟೇಟ್ಸ್, ಮನೆ ಕನ್ ಸ್ಟ್ರಕ್ಷನ್ಸ್ ಲಿ, ಎಂ.ಎಂ.ಆರ್. ಕನ್ ಸ್ಟ್ರಕ್ಷನ್ಸ್, ಬ್ರಿಗೇಡ್ ಎಂಟರ್ ಪ್ರೈಸಸ್, ಬಾಗಮನೆ ಡೆವಲಪರ್ಸ್ ಪ್ರೈ.ಲಿ. ಸೇರಿದಂತೆ ಹಲವು ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿಗೆ 165 ಎಕರೆ ಭೂಮಿಯನ್ನು 313 ಕೋಟಿಗೂ ಹೆಚ್ಚು ಹಣಕ್ಕೆ ಮಾರಾಟ ಮಾಡಿದೆ. ಪರಿಸರ ಹೋರಾಟಗಾರರೊಬ್ಬರು ಕಳೆದ ಜುಲೈ 11ರಂದು ತಮ್ಮ ಕಚೇರಿಗೆ ನೀಡಿದ ದೂರು ಆಧರಿಸಿ, ಅಧಿಕಾರಿಗಳ ಸಭೆ ಕರೆದು ಚರ್ಚಿಸಿದಾಗ ಸತ್ಯ ಹೊರಬಿತ್ತು. ಹೀಗಾಗಿ ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1896 ಜೂನ್ 11ರಲ್ಲೇ ಅಧಿಸೂಚಿತ ಅರಣ್ಯ ಗೆಜೆಟ್ ಆಗಿದೆ. ಈ ಭೂಮಿಯನ್ನು 1963ರಲ್ಲಿ ಎಚ್.ಎಂ.ಟಿ.ಗೆ ದಾನ ನೀಡಿರುವುದಾಗಿ ಹೇಳಲಾಗಿದೆ. ಈಗ ನೀವು(ಕುಮಾರಸ್ವಾಮಿ) ಅವರು ಭೂಮಿಯನ್ನು ಎಚ್.ಎಂ.ಟಿ. ಸಂಸ್ಥೆ ಖರೀದಿಸಿರುವುದಾಗಿ ಹೇಳುತ್ತಿದ್ದೀರಿ. ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಮಾಡದೆ, 1980ರ ಅರಣ್ಯ ಸಂರಕ್ಷಣಾ ಕಾಯಿದೆ ಸೆಕ್ಷನ್ 2ರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ಮಾರಾಟ ಮಾಡಲು ಅಥವಾ ದಾನ ಮಾಡಲು ಕಾನೂನಿನಲ್ಲಿ ಅವಕಾಶವೇ ಇರುವುದಿಲ್ಲ. ರಾಜ್ಯಕ್ಕೆ ಬೆಳಕು ನೀಡಿ, ಪ್ರಸ್ತುತ ಕತ್ತಲಲ್ಲಿ ಬದುಕು ಕಳೆಯುವಂತಾಗಿರುವ ಶರಾವತಿ ಸಂತ್ರಸ್ತರಿಗೆ ಭೂಮಿ ನೀಡಿರುವ ಕುರಿತಂತೆ ರಾಜ್ಯ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಖ್ಯೆ 43037-2019ಕ್ಕೆ ಸಂಬಂಧಿಸಿದಂತೆ ಮಾರ್ಚ್ 4, 2021ರಂದು ಬಂದಿರುವ ತೀರ್ಪು ಇದನ್ನು ಸ್ಪಷ್ಟಪಡಿಸುತ್ತದೆ. ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ Once a Forest is Always a Forest – Environment is more important than civil rights ಎಂದು ಅಭಿಪ್ರಾಯಪಟ್ಟಿದೆ, ಇದು ಅರಣ್ಯ ಅಲ್ಲದಿದ್ದರೆ ಏಕೆ ಮಧ್ಯಂತರ ಅರ್ಜಿ (IA) ಹಾಕುತ್ತಿದ್ದರು ?
ಮಾನ್ಯ ಕುಮಾರಸ್ವಾಮಿ ಅವರೇ ನಾನು ಹಿಂದೆಯೂ ದ್ವೇಷದ ರಾಜಕೀಯ ಮಾಡಿಲ್ಲ, ಮುಂದೆಯೂ ಮಾಡಲ್ಲ. ನಾನು ಯಾವುದೇ ಪೂರ್ವಾಗ್ರಹ ಪೀ��ಿತನಾಗಿ ಎಚ್.ಎಂ.ಟಿ. ಭೂಮಿ ವಿಚಾರ ಪ್ರಸ್ತಾಪಿಸಿಲ್ಲ. ಬದಲಾಗಿ ತಮಗೆ ಬಂದ ದೂರಿನ ಮೇಲೆ ಸಚಿವನಾಗಿ ಕ್ರಮ ವಹಿಸಿದ್ದೇನೆ.
ತಾವು ಅರಣ್ಯ ಸಚಿವನಾಗಿ ಅಧಿಕಾರ ವಹಿಸಿಕೊಂಡ ತರುವಾಯ, ಅರಣ್ಯ ವಿಸ್ತರಣೆ ಮತ್ತು ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸುವ ನಿಟ್ಟಿನಲ್ಲಿ ಶ್ರಮ ವಹಿಸುತ್ತಿದ್ದೇನೆ. ಬೆಂಗಳೂರಿನ ಕೊತ್ತನೂರಿನಲ್ಲಿ ಸುಮಾರು 500 ಕೋಟಿ ರೂ. ಬೆಲೆ ಬಾಳುವ 17.34 ಎಕರೆ, ಬಿ.ಎಂ. ಕಾವಲಿನಲ್ಲಿ ಸುಮಾರು 100 ಕೋಟಿ ರೂ.ಮೌಲ್ಯದ 15 ಎಕರೆ, ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲಿನ��್ಲಿ 200 ಕೋಟಿ ರೂ.ಮೌಲ್ಯದ 18 ಎಕರೆ, ತುರಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು 50 ಕೋಟಿ ರೂ. ಬೆಲೆ ಬಾಳುವ 7 ಎಕರೆ ಸೇರಿದಂತೆ ಒಟ್ಟು 101 ಎಕರೆ 20 ಗುಂಟೆ ಜಮೀನು ವಶಪಡಿಸಿಕೊಳ್ಳಲಾಗಿದೆ.
ಉತ್ತರ ಕನ್ನಡದ ಶಿರೂರು ಮತ್ತು ವಯನಾಡಿನಲ್ಲಿ ಗುಡ್ಡ ಕುಸಿತ ಆದ ಬಳಿಕ ನೂರಾರು ಜನರು ಮೃತಪಟ್ಟಿರುವ ದಾರುಣ ಘಟನೆಯ ಬಳಿಕವೂ ನಾವು ಅರಣ್ಯ, ಪ್ರಕೃತಿ ಪರಿಸರ ಉಳಿಸದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ.
#WayanadLandslides is a warning bell for karnataka too. Such mishaps are increasing due to the natural, nature endowed hills being cut down to make gardens, home stay, resorts. Illegal felling of trees that hold the soil hard by their roots and destruction of grassland are also causing the disasters.
#Wayanad
ಕೇರಳದ ವಯನಾಡಿನಲ್ಲಿ ಇಂದು ಸಂಭವಿಸಿರುವ ಭೂಕುಸಿತದಿಂದಾಗಿ ಬಹಳಷ್ಟು ಸಾವು ನೋವಾಗಿದೆ. ದೇಶದ ಯಾವುದೇ ಭಾಗದಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಪರಸ್ಪರ ನೆರವಿಗೆ ನಿಲ್ಲಬೇಕಿರುವುದು ನಮ್ಮ ಕರ್ತವ್ಯ ಎಂದು ಭಾವಿಸಿದ್ದೇನೆ.
ಈ ಹಿನ್ನೆಲೆಯಲ್ಲಿ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಸಮನ್ವಯಕ್ಕಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳಾದ ಸಿ. ಜಾಫರ್ (ಮೊಬೈಲ್ ಸಂಖ್ಯೆ 9448355577) ಹಾಗೂ ದಿಲೀಶ್ ಶಶಿ (9446000514) ಅವರನ್ನು ರಾಜ್ಯ ��ರ್ಕಾರ ನಿಯೋಜಿಸಿದೆ.
ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಮಾನವೀಯ ನೆಲೆಯಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ.
ಸಂತ್ರಸ್ತರ ಪ್ರಾಣ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳನ್ನು ತ್ವರಿತವಾಗಿ ರವಾನಿಸಲಾಗಿದೆ. ಈ ತಂಡಗಳ ಜೊತೆಗೆ ಅಗತ್ಯ ಉಪಕರಣಗಳು ಮತ್ತು ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲ�� ನೆರವು ನೀಡಲಾಗಿದೆ.
ರಕ್ಷಣಾ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳ��ಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್ ಕಾರಿಡಾರ್ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.
ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಒದಗಿಸಲಿದೆ.
ಕೇರಳ ಸರ್ಕಾರದ ವಿಪತ್ತು ನಿರ್ವಹಣೆಯ ಅಧಿಕಾರಿಗಳೊಂದಿಗೆ ರಾಜ್ಯ ಸರ್ಕಾರ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ. ವೈದ���ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್ ಗಳನ್ನು ಹೆಚ್.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ.
ಚಾಮರಾಜ ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:
08226-223163
08226-223161
08226-223160
ವಾಟ್ಸಾಪ್ ಸಂಖ್ಯೆ: 9740942901
ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಗರಿಷ್ಠ ಪ್ರಯತ್ನವನ್ನು ಮಾಡಲಾಗುತ್ತಿದೆ.
#WayanadLandslide #Kerala