ಮಾತು ಅಂದರೆ ಕೇವಲ ಶಬ್ದಗಳಲ್ಲ, ಅದು ನಂಬಿಕೆಯ ಬೆಸುಗೆ.
ಜನಸಾಮಾನ್ಯರ ಅಂತರಾಳದ ದನಿಯಾಗಿ, ಅವರ ನೋವು-ನಲಿವುಗಳಿಗೆ ಕಿವಿಯಾಗುವ ಈ ಕ್ಷಣಗಳೇ ನಿಜವಾದ ಮಾತುಕತೆ..
ಕಾಯಕ ಜೀವಿಗಳೊಂದಿಗೆ ಮಾತುಕತೆ
📍ಎಪಿಎಂಸಿ, ಯಶವಂತಪುರ
ಅಭಿನೇತ್ರಿ ಪದಕ್ಕೆ ಅನ್ವರ್ಥ ನಮ್ಮ ಉಮಾಶ್ರೀ ಅಮ್ಮ. ಅವರು ಅಭಿನಯಿಸಿದ ಒಂದೊಂದು ಪಾತ್ರವೂ ಅನನ್ಯ. ರಾಜಕೀಯದಲ್ಲೂ, ಜನಸೇವೆಯಲ್ಲೂ ಉಮಾಶ್ರೀ ಅವರು ಅಕ್ಷರಶಃ ಅಮ್ಮನೇ.
ಈ ತಾಯಿಯ ಜೀವ ತಣ್ಣಗಿರಲಿ.
#Umashree
1989ರಿಂದ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 36 ವರ್ಷಗಳ ರಾಜಕೀಯ ಪಯಣದಲ್ಲಿ ಇದು ಐತಿಹಾಸಿಕ, ಜನಪರವಾದ, ಎಲ್ಲ ವರ್ಗದ ಜನರಿಗೂ ನ್ಯಾಯ ಕೊಡಿಸುವ ದೂರದೃಷ್ಟಿಯ ಬಜೆಟ್.
- @DKShivakumar#ಸ��್ವೋದಯಬಜೆಟ್
ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ, ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ. ರಾಜ್ಯ ಸರ್ಕಾರ ಸಾಲ ಮಾಡಿದೆ ಎನ್ನುವುದಾದರೆ ಕೇಂದ್ರ ಸರ್ಕಾರವೂ ಸಾಲ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವ ಬಜೆಟ್ ಮಂಡಿಸಲಾಗಿದೆ.
- @DKShivakumar#ಸರ್ವೋದಯಬಜೆಟ್
ಕರ್ನಾಟಕ ಬಜೆಟ್ 2025-26 ರಲ್ಲಿ 4 ಲಕ್ಷ ಕೋಟಿಗೂ ಮೀರಿದ ಬಜೆಟ್ ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಗೆ ಆದ್ಯತೆ ನೀಡಲಾಗಿದ್ದು, ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ನೀಡಲಾಗಿದೆ.
- @DKShivakumar#ಸರ್ವೋದಯಬಜೆಟ್
ಕರ್ನಾಟಕ ಬಜೆಟ್ 2025-26 ರಲ್ಲಿ ಬೆಂಗಳೂರು ನಗರದ ಅತಿ ಹೆಚ್ಚು ಯೋಜನೆಗಳಿಗೆ ಸಹಾಯ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜ��ೆಗೆ ಸುಮಾರು 1 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
- @DKShivakumar
#ಸರ್ವೋದಯಬಜೆಟ್
ಶಕ್ತಿ ಯೋಜನೆಯಡಿ 2024-25ನೇ ಸಾಲಿನಲ್ಲಿ ₹226.53 ಕೋಟಿ ಮಹಿಳಾ ಪ್ರಯಾಣಿಕರಿಗೆ ಅನುಕೂಲ ಶಕ್ತಿ ಯೋಜನೆ ವೆಚ್ಚ ₹5,015 ಕೋಟಿಗಳಿಂದ ರಂಜಿ ₹5,300 ಕೋಟಿಗಳಿಗೆ ಹೆಚ್ಚಳ.
#ಸರ್ವೋದಯಬಜೆಟ್
ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು.
ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ���ೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾ��ೆ.
ಎಸ್.ಎಂ.ಕೃಷ್ಣ ಅವರು 1962ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.
ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.
ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿತ್ತು, ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.
ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ, ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾ��್ ವ್ಯಾಲಿ ಆಫ್ ಇಂಡಿ��ಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ.
ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.
ಅವರ ಅಗಲಿಕೆ ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
- ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ವಿಧಾನಸಭಾ ಅಧಿವೇಶನದಲ್ಲಿ ನನ್ನ ಸಂತಾಪದ ನುಡಿಗಳು