Government had made a rule that more than 50 people we cannot conduct any functions, prayer anything. And now you want to conduct exams where the strength is in lakhs. #SAVERGUHSSTUDNETS
ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ ವಿಶ್ವಾಸ ಕಳೆದುಕೊಳ್ಳದೆ, ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ,ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ.
ಕನ್ನಡ ಸಾಹಿತ್ಯ, ಪತ್ರಿಕೋದ್ಯಮ, ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ ನೀಡಿ ಕನ್ನಡ ಕುಲಪುರೋಹಿತರು ಎನಿಸಿದ್ದ ಆಲೂರು ವೆಂಕಟರಾಯರ ಜಯಂತಿಯಂದು ನನ್ನ ಗೌರವ ಪ್ರಣಾಮಗಳು.
ಕರ್ನಾಟಕದ ಏಕೀಕರಣ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆ, ಮುಂತಾದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರ ವ್ಯಕ್ತಿತ್ವ ನಾಡಿಗೇ ಮಾದರಿ.
ಕೆಲವು ದಿನಗಳ ಹಿಂದೆ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು UGC ಮಾರ್ಗಸೂಚಿಯನ್ನು ಹೊರತಂದಿತ್ತು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಒಳಿತನ್ನು ಗಮನದಲ್ಲಿರಿಸಿಕೊಳ್ಳುವುದರ ಜೊತೆಗೆ, ಉನ್ನತ ಶಿಕ್ಷಣ ಇಲಾಖೆಯು ಈ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡು ಒಂದು ತೀರ್ಮಾನಕ್ಕೆ ಬಂದಿದೆ.
1/4