ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತರೀಕೆರೆ ತಾಲೂಕಿನ ಸಿದ್ದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಿ, ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ನ ಮಿತ ಬಳಕೆ ಹಾಗೂ ಸಮರ್ಪಕ ನಿರ್ವಹಣೆ ಕುರಿತು ಮಕ್ಕಳಿಗೆ ಅರಿವು ಮೂಡಿಸಲಾಯಿತು.
ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಇಂದು " *ವಿಶ್ವ ಪರಿಸರ ದಿನಾಚರಣೆ* " ಅಂಗವಾಗಿ **ಸುರಕ್ಷಿತ ಹವಾಮಾನ ವಿಶೇಷ ಅಭಿಯಾನ** ದಡಿ ಗಿಡವನ್ನು ನೆಡಲಾಯಿತು ಹಾಗೂ ವಿಶೇಷ ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಯಿತು.
@rdwsd_gok@KeerthanaSDilip@rdprgok@MoRD_GoI
ವಿಶ್ವ ಪರಿಸರ ದಿನ
ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ವಿಲೇವಾರಿ ಮಾಡೋಣ. ನಮ್ಮ ಗ್ರಾಮ ಪಂಚಾಯತಿಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಪ್ರತಿಜ್ಞೆ ಮಾಡೋಣ. ಪರಿಸರ ಮತ್ತು ಪ್ರಕೃತಿಯನ್ನು ಸಂರಕ್ಷಿಸಿ, ಸ್ವಚ್ಛ ಹಾಗೂ ಆರೋಗ್ಯಕರ ಭವಿಷ್ಯವನ್ನು ನಿರ್ಮಿಸೋಣ."
#RDPR#WorldEnvironmentDay#plantmoretrees
ನಮ್ಮ ಪರಿಸರವನ್ನು ಸಂರಕ್ಷಿಸುವುದು ಮತ್ತು ಸ್ವಚ್ಛವಾಗಿಡುವುದು ಕೇವಲ ಒಂದು ದಿನದ ಕೆಲಸವಲ್ಲ; ಅದು ನಮ್ಮ ಜೀವನದ ಅವಿಭಾಜ್ಯ ಅಂಗ. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ, ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಂಡು, ಸ್ವಚ್ಛ ಮತ್ತು ಸಮೃದ್ಧ ಪರಿಸರ ನಿರ್ಮಾಣಕ್ಕೆ ಕೈಜೋಡಿಸುವ ಮೂಲಕ ಅರ್ಥಪೂರ್ಣವಾಗಿ ಪರಿಸರ ದಿನವನ್ನು ಆಚರಿಸುವಂತೆ RDWSD ಆಯುಕ್ತರಾದ ಬಿ. ಫೌಜಿಯಾ ತರನ್ನುಮ್ ಅವರು ಕರ್ನಾಟಕದ ಜನತೆಗೆ ಕರೆ ನೀಡಿದ್ದಾರೆ.🌎
ಸ್ವಚ್ಛ ಗ್ರಾಮವೇ ಸ್ವಚ್ಛ ಕರ್ನಾಟಕ ಮತ್ತು ಸ್ವಚ್ಛ ಭಾರತದ ಅಡಿಪಾಯ🌱
@swachhbharat@DoWRRDGR_MoJS@jaljeevan_
#WorldEnvironmentDay #CleanVillage #RDWSD #SwachhBharat #EnvironmentDay #SBMG
ವ್ಯಾಲ್ಯುಮೆಟ್ರಿಕ್ ಬಿಲ್ಲಿಂಗ್ ವ್ಯವಸ್ಥೆಯಿಂದಾಗಿ ರಾಜ್ಯಾದ್ಯಂತ ಮಹತ್ತರ ಸುಧಾರಣೆಯಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯಿತಿಯು ಸ್ಪಷ್ಟ ನಿದರ್ಶನವಾಗಿ ನಿಂತಿದೆ.✅
ನೀರಿನ ಬಳಕೆಯ ಆಧಾರದಲ್ಲಿ ಶುಲ್ಕ ವಿಧಿಸುವುದರಿಂದ ಜನರು ಹೆಚ್ಚು ಜಾಗರೂಕರಾಗಿದ್ದು, ಜೀವಜಲವನ್ನು ಜವಾಬ್ದಾರಿಯಿಂದ ಬಳಸುತ್ತಿದ್ದಾರೆ.💧
#jjm #JalJeevanMission #karnataka #RDWSD
ನಗರದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ನಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ಸಮಾರಂಭವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭ ಆರೈಸಿ, ಶಿಕ್ಷಣದ ಮಹತ್ವ, ಶಿಸ್ತು, ಉತ್ತಮ ಮೌಲ್ಯಗಳು ಕುರಿತು ಸಂದೇಶ ನೀಡಿದರು.
ಗ್ರಾಮೀಣ ಕರ್ನಾಟಕದಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಗಳು–2026ರ ಅನುಷ್ಠಾನ ಕುರಿತು ರಾಜ್ಯಮಟ್ಟದ ವರ್ಚುವಲ್ ಕಾರ್ಯಾಗಾರವು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಉಪಸ್ಥಿತಿಯಲ್ಲಿ ನಡೆಯಿತು. 1/3
ಮಕ್ಕಳು ಬೇಸಿಗೆ ರಜೆಯ ಬಿಡುವಿನ ಅವಧಿಯನ್ನು ಬೌದ್ಧಿಕ ಬೆಳವಣಿಗೆ ಹಾಗೂ ಮನರಂಜನೆಗಾಗಿ ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯ ಅರಿವು ಕೇಂದ್ರಗಳಲ್ಲಿ ಆಯೋಜಿಸಲಾಗಿದ್ದ ‘ಬೇಸಿಗೆ–ಬೆಸುಗೆ’ ಶಿಬಿರವು ಯಶಸ್ವಿಯಾಗಿ ನಡೆದು, ಇದೀಗ ಸಮಾರೋಪಗೊಂಡಿವೆ.
@readingkafka@PriyankKharge
ಚಿಕ್ಕಮಗಳೂರು ತಾಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿಯ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಜ್ಞಾನ ಹಾಗೂ ಚಾತುರ್ಯವನ್ನು ಪ್ರದರ್ಶಿಸಿದರು.
@readingkafka@PriyankKharge@thekjgeorge@CommrPR@rdprgok
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್ ಎಸ್ ಕೀರ್ತನಾ ರವರು ಇಂದು ಕೊಪ್ಪ ತಾಲೂಕಿನ ಜಯಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳು ಹಾಗೂ ಆಡಳಿತಾತ್ಮಕ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಇದೇ ವೇಳೆ ಅರಿವು ಕೇಂದ್ರದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರಕ್ಕೂ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಕಡೂರು ತಾಲೂಕಿನ ಕಾಮನಕೆರೆ ಅರಿವು ಕೇಂದ್ರದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರದಲ್ಲಿ ಮಕ್ಕಳು ವೀರಗಾಸೆ ವಚನ ಪಠಣ ಹಾಗೂ ವೀರಗಾಸೆ ನೃತ್ಯ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ವೀರಗಾಸೆ ತಂಡದವರು ಭಾಗವಹಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.
@readingkafka
ಚಿಕ್ಕಮಗಳೂರು ಜಿಲ್ಲೆಯ ಅರಿವು ಕೇಂದ್ರಗಳಲ್ಲಿ 'ಬೇಸಿಗೆ ಬೆಸುಗೆ' ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳು ಬೇಸಿಗೆ ರಜೆಯ ಬಿಡುವಿನ ಅವಧಿಯನ್ನು ತಮ್ಮ ಬೌದ್ಧಿಕ ಬೆಳವಣಿಗೆಗೆ ಹಾಗೂ ಮನರಂಜನೆಗೆ ಸದ್ಬಳಕೆ ಮಾಡಿಕೊಳ್ಳಲು ಈ ಶಿಬಿರಗಳು ನೆರವಾಗುತ್ತಿವೆ.
#RDPR#Grampanchayat#SummerCamp#summeractivities#karnataka
ಚಿಕ್ಕಮಗಳೂರು ಜಿಲ್ಲೆಯ ಅರಿವು ಕೇಂದ್ರಗಳಲ್ಲಿ 'ಬೇಸಿಗೆ ಬೆಸುಗೆ' ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳು ಬೇಸಿಗೆ ರಜೆಯ ಬಿಡುವಿನ ಅವಧಿಯನ್ನು ತಮ್ಮ ಬೌದ್ಧಿಕ ಬೆಳವಣಿಗೆಗೆ ಹಾಗೂ ಮನರಂಜನೆಗೆ ಸದ್ಬಳಕೆ ಮಾಡಿಕೊಳ್ಳಲು ಈ ಶಿಬಿರಗಳು ನೆರವಾಗುತ್ತಿವೆ.
#RDPR#Grampanchayat#SummerCamp#summeractivities#karnataka