ಸಿಎಂ ಡಿಕೆಶಿ ಭೇಟಿ ಮಾಡಿದ
ಕೆಯುಡಬ್ಲೂಜೆ ನಿಯೋಗ
ಪತ್ರಕರ್ತರ ಬೇಡಿಕೆ ಬಗ್ಗೆ ಚರ್ಚೆ,
ಪತ್ರಿಕಾ ದಿನಾಚರಣೆಗೆ ಆಹ್ವಾನ
ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಭೇಟಿ ಮಾಡಿ, ಪುಸ್ತಕ ಮತ್ತು ಗಣಪತಿ ಮೂರ್ತಿಯನ್ನು ನೀಡಿ ಅಭಿನಂದಿಸಿತು.
ಇದೇ ಸಂದರ್ಭದಲ್ಲಿ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಯೋಜನೆಯನ್ನು ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕು ಎಂದು ಕೆಯುಡಬ್ಲೂಜೆ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.
ಜುಲೈ 1 ರಂದು ಪತ್ರಿಕಾ ದಿನಾಚರಣೆಯನ್ನು ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷವೂ ಮುಖ್ಯಮಂತ್ರಿಗಳು ಪತ್ರಿಕಾ ದಿನಾಚರಣೆ ಉದ್ಘಾಟನೆ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ತಾವು ಉದ್ಘಾಟನೆಗೆ ಆಗಮಿಸಬೇಕು ಎಂದು ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಬ್ಯೂಸಿ ಇದ್ದೇನೆ. ಆದರೂ, ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಇದ್ದರು.
ನಿಯೋಗದಲ್ಲಿ ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಚಾಮರಾಜನಗರದ ಮಹೇಂದ್ರ, ಪತ್ರಕರ್ತರು ಜೊತೆಯಲ್ಲಿದ್ದರು
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಆನಂದ್ ದೇವಪ್ಪ ಹಾಗೂ ಸಂಘದ ಪದಾಧಿಕಾರಿಗಳು ಬೀದರನಲ್ಲಿ ನಡೆದ ರಾಜ್ಯ ಸಮ್ಮೇಳನದ ಗೌರವವನ್ನು ಸಮರ್ಪಿಸಿದರು.
ಸಮ್ಮೇಳನಕ್ಕೆ ಅನಿವಾರ್ಯ ಕಾರಣಗಳಿಂದ ಬರಲಾಗಲಿಲ್ಲ ಎಂದ ಅವರು, ಸಮ್ಮೇಳನ ಯಶಸ್ವಿಯಾಗಿ ನಡೆದಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗಡಿ ಜಿಲ್ಲೆಗಳಲ್ಲಿ ಭಾಷೆ ಉಳಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ಹೊಂದಿರುವ ಗಡಿ ಜಿಲ್ಲೆಯ ಪತ್ರಿಕೆಗಳಿಗೆ ವಿಶೇಷ ಜಾಹಿರಾತುಗಳನ್ನು ನಿಲ್ಲಿಸಬಾರದು. ಈ ಹಿಂದಿನಂತೆಯೇ ಜಾಹಿರಾತು ಮುಂದುವರಿಸಬೇಕು ಎಂದು ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಬೀದರ್ ಜಿಲ್ಲಾ ಪ್ರವಾಸದಲ್ಲಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರಾದ ರೇವಣಸಿದ್ದಯ್ಯಸ್ವಾಮಿ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಜಿಲ್ಲಾಧ್ಯಕ್ಷ ಆನಂದ ದೇವಪ್ಪ, ಪ್ರದಾನ ಕಾರ್ಯದರ್ಶಿ ಶಿವಕುಮಾರಸ್ವಾಮಿ, ರಾಜ್ಯ ಸಂಘದ ಭವಾನಿಸಿಂಗ್ ಠಾಕೂರ್ ಇದ್ದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಬೀದರ್ ನಲ್ಲಿ ನಡೆಸಲು ಬೀದರ್ ಪತ್ರಕರ್ತರ ಭವನದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಸಂಘದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ಜವಾಬ್ದಾರಿ ಹೊತ್ತ ಬೀದರ್ ಜಿಲ್ಲಾ ಸಂಘಕ್ಕೆ ಅಭಿನಂದನೆಗಳು @CMofKarnataka@DKShivakumar
ಬೀದರ್ ಜನದನಿ ಪತ್ರಿಕೆ ವರದಿಗಾರ&ಜಿಲ್ಲಾ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ,ರೇವಣಸಿದ್ದಯ್ಯ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸಂತಾಪ ವ್ಯಕ್ತಪಡಿಸಿದ್ದಾರೆ.ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ತಂದೆ ಭೀಮಣ್ಣಖಂಡ್ರೆ ಹೆಸರಿನಲ್ಲಿ ಕೆಯುಡಬ್ಲ್ಯೂಜೆ ದತ್ತಿನಿಧಿ ಸ್ಥಾಪಿಸಲು ನ.24ರಂದು ಗಾಂಧೀ ಭವನದಲ್ಲಿ ಹೇಳಿದ್ದಂತೆಯೇ, ಬೀದರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ 3ಲಕ್ಷ ರೂ ಚೆಕ್ ನೀಡುವ ಮೂಲಕ ನುಡಿದಂತೆ ನಡೆದುಕೊಂಡ ಸಚಿವ ಈಶ್ವರ್ ಖಂಡ್ರೆ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆಗಳು@CMofKarnataka