Deeply humbled and touched to receive a thoughtful birthday letter from Hon’ble PM Shri @narendramodi ji.
Your inspiring words and warm wishes made my day truly special and memorable.
Birthday greetings to Shri Sunil Bose ji, Lok Sabha MP from Chamarajanagar(Karnataka). May God bless you with a happy, healthy and long life.
ಶ್ರೀ ಸುನಿಲ್ ಬೋಸ್ ಅವರು ಲೋಕ ಸಭಾ ಸದಸ್ಯರು, ಚಾಮರಾಜ ನಗರ (ಕರ್ನಾಟಕ) ಹುಟ್ಟು ಹಬ್ಬದ ಶುಭಾಶಯಗಳು. ನಿಮಗೆ ದೇವರು ಒಳ್ಳೆಯ ಆರೋಗ್ಯ, ಆಯುಷ್ಯ ಸುಖ ಸಮೃದ್ಧಿಗಳನ್ನು ನೀಡಲಿ.
ಸಿದ್ದರಾಮಯ್ಯ ವ್ಯಕ್ತಿ ಅಲ್ಲ - ಶಕ್ತಿ :
ಗಣಿ ಧೂಳಿನಿಂದ,ರಾಜಕೀಯ ಅರಾಜಕತೆಯಿಂದ ಅಕ್ಷರಶಃ ನಲುಗಿ ಹೋಗಿದ್ದ ಬಳ್ಳಾರಿಯ ನಾಡಿಗೆ ಪಾದಯಾತ್ರೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಅಮೋಘ ಗೆಲುವಿಗೆ ಮುನ್ನುಡಿ ಬರೆದ ಸಿದ್ದರಾಮಯ್ಯನವರು 2013 ರಿಂದ 2018 ವರೆಗೆ ನೀಡಿದ ಆಡಳಿತ ಒಂದು ದೊಡ್ಡ ಇತಿಹಾಸ.
ಮೈಸೂರಿನ ಪುಟ್ಟ ಗ್ರಾಮದಿಂದ ಬಂದು, ರಾಜಕೀಯವಾಗಿ ದೊಡ್ಡ ಮಟ್ಟಕ್ಕೆ ಬೆಳೆದು ಸಾಮಾಜಿಕ ನ್ಯಾಯವನ್ನು ಸಾಕಾರಗೊಳಿಸಲು ಎದೆಗಾರಿಕೆಯಿಂದ ಶ್ರಮಿಸಿದ ಸಿದ್ದರಾಮಯ್ಯ ಅಂತಹ ನಾಯಕರು ಕನ್ನಡ ನಾಡಿಗೆ ಅತ್ಯಂತ ಅಪರೂಪ.
40 ವರ್ಷಗಳ ಅವರೊಂದಿಗಿನ ಒಡನಾಟದಲ್ಲಿ ಹಲವು ಏಳು ಬೀಳುಗಳ ನಡುವೆಯೂ ಜನರ ಪ್ರೀತಿ ಮತ್ತು ಬೆಂಬಲದಿಂದ ಎಲ್ಲ ಮತೀಯ ಮತ್ತು ಫ್ಯೂಡಲ್ ಶಕ್ತಿಗಳ ವಿರುದ್ಧ ಗೆದ್ದು ನಿಂತ ಸಿದ್ದರಾಮಯ್ಯನವರ ಎದೆಗಾರಿಕೆಯು ಸಾರ್ವಜನಿಕ ಜೀವನಕ್ಕೆ ಬರುವ ಪ್ರತಿಯೊಬ್ಬ ವ್ಯಕ್ತಿಗೂ ಮಾದರಿ ಆಗುವಂತದ್ದು.
ಸಾಮಾನ್ಯ ಮನುಷ್ಯರ ಎಲ್ಲ ಭಾವನೆಗಳ ಹದವಾದ ಮಿಶ್ರಣವಾಗಿ ರೂಪುಗೊಂಡಿದ್ದ ಸಿದ್ದರಾಮಯ್ಯನವರು, ತಮ್ಮ Aggressive nature ಅನ್ನು ಬದಿಗಿಟ್ಟು ಕಳೆದ ಒಂದು ದಶಕದಲ್ಲಿ ರೂಢಿಸಿಕೊಂಡ ಸಮಚಿತ್ತ ಮನಸ್ಸು ಮತ್ತು ಅದರೊಳಗೆ ಇದ್ದ ರಾಜಕೀಯ ನೈಪುಣ್ಯತೆಯ ಕಾರಣವೇ ಅವರ ಯಶಸ್ಸಿಗೆ ಹಿಡಿದ ಕನ್ನಡಿ ಎಂದು ಕಾಣುತ್ತದೆ.
ಇಂತಹ ಧೀಮಂತ ನಾಯಕ, ಆಧುನಿಕ ರಾಜಕೀಯ ಸಂದರ್ಭದ ಅರಸು ಎಂದೇ ಕರೆಯಬಹುದಾದ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಈ ದಿನ ರಾಜೀನಾಮೆ ಸಲ್ಲಿಸಿದ್ದಾರೆ.
ಜಾತಿ, ಧರ್ಮದ ಬೇಧವಿಲ್ಲದೇ ಎಲ್ಲರಿಗೂ ಒಳ್ಳೆಯದನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ ಸಿದ್ದರಾಮಯ್ಯನವರಿಗೆ ಒಳ್ಳೆಯದೇ ಆಗಲಿ ಎಂದು ಮನದುಂಬಿ ಆಶಿಸುತ್ತೇನೆ.
ಇಂದು ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದ ವಿವಿಧ ದಲಿತ ಮುಖಂಡರು ಹಾಗೂ ಸಂಘಟನೆಗಳೊಂದಿಗೆ ಜರುಗಿದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಪರಿಶಿಷ್ಟ ಸಮುದಾಯದ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
#ಬಜೆಟ್_ಪೂರ್ವಭಾವಿ_ಸಭೆ
Dalit IPS officer Puran Kumar, known for speaking against casteism and admin bias, was found dead by suicide with a gunshot wound at his Chandigarh home. He had questioned unfair promotions and postings. Casteism doesn’t see your money or position — it sees your caste.
ಇಂದು ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಮೈಸೂರು ನಗರ ಮತ್ತು ತಾಲ್ಲೂಕು ನಾಯಕ ಜನಾಂಗದ ಸಂಘಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅವರು ಉದ್ಘಾಟಿಸಿದೆನು.
ಇದೇ ವೇಳೆ ಎಸ್.ಎಸ್. ಎಲ್.ಸಿ ಯಲ್ಲಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಹೆಚ್ಚು ಹೆಸರು ಮಾಡಿದ ಪರಿಶಿಷ್ಟ ವರ್ಗದ ಶಾಲೆಗಳ ಪ್ರಾಧ್ಯಾಪಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ನ ಶಾಸಕರಾದ ಡಾ ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಕೆ. ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್. ಯುಕೇಶ್ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ್. ಎನ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳಾದ ಎಂ. ಕೆ ಮಲ್ಲೇಶ್, ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಸಿ. ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.
ಇಂದಿನಿಂದ ಜಾಗತಿಕವಾಗಿ ಮನ್ನಣೆಯನ್ನು ಪಡೆದಂತಹ ನಾಡಹಬ್ಬ ದಸರಾಗೆ ಅಧಿಕೃತ ಚಾಲನೆಯನ್ನು ದೊರೆಯಲಿದೆ.
ಬಹು ಜನರ ಹಬ್ಬವಾಗಿರುವ ಈ ದಸರಾ ಉತ್ಸವವು ಸಾಂಗವಾಗಿ ಜರುಗಲಿದ್ದು ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
#Dasara
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಮುಖ್ಯಮಂತ್ರಿ @siddaramaiah ಅವರು ಕನ್ನಡದ ಹೆಮ್ಮೆಯ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರ ಜೊತೆಗೂಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
#ಮೈಸೂರುದಸರಾ#MysuruDasara
ಮೈಸೂರಿನಲ್ಲಿ ಜರುಗಿದ ಸಮೃದ್ಧಿ ಕೋ ಆಪರೇಟಿವ್ ಸೊಸೈಟಿಯ ಸಾಮಾನ್ಯ ಮಹಾಸಭೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಶ್ರೀ ಜಿ ಟಿ ದೇವೇಗೌಡ ಹಾಗೂ ಮುಳಬಾಗಿಲು ಕ್ಷೇತ್ರದ ಶಾಸಕರಾದ ಶ್ರೀ ಸಮೃದ್ಧಿ ಮಂಜುನಾಥ್ ಅವರು ಉಪಸ್ಥಿತರಿದ್ದರು
#ಸಮೃದ್ಧಿ
ವಿಶ್ವ ವಿಖ್ಯಾತ ಮೈಸೂರು ದಸರಾ 2025ಕ್ಕೆ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯ ಮೂಲಕ ಚಾಲನೆ ನೀಡಿದ ಬಾನು ಮುಷ್ತಾಖ್ ಅವರು.
Banu Mushtaq inaugurates the World Famous Mysuru Dasara 2025 through performing the Agra Pooja to Goddess Chamundeshwari
@BanuMushtaq#ಎಲ್ಲರದಸರಾ#ಮಾಸೂರುದಸರಾ#MysoreDasara2025
ಗೋಡಾ ಹೈ - ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ.
ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ.
ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು.
ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನವು ಜಾತ್ಯತೀತ ಮತ್ತು ಧರ್ಮಾತೀತವಾದುದ್ದು. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ.
ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆ ಸಂವಿಧಾನ ಗೊತ್ತಿರಬೇಕು.
ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬರಬೇಕು, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು.
ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ? ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ಜನರ ತಲಾದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಎಸ್ಡಿಪಿ ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ.
- ಮುಖ್ಯಮಂತ್ರಿ @siddaramaiah ಅವರು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು
#ಮೈಸೂರುದಸರಾ #MysuruDasara
ಇಂದು ಮೈಸೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭವನ್ನು ಅವರು ಉದ್ಘಾಟಿಸಿದೆನು.
ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದಂತೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಶೇ.18 ರ ಅನುದಾನದಲ್ಲಿ ಮುಂದುವರೆದ ಕಾಮಗಾರಿಗೆ ಅನುದಾನವನ್ನು ಬಳಕೆ ಮಾಡಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಅವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಿವಕುಮಾರ್, ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ ಅವರು, ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷರಾದ ಅರುಣ್ ಕುಮಾರ್ ಅವರು, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರು, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಕ್ಷಿತ್ ಅವರು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ರಂಗೇಗೌಡ ಅವರು, ಮಾಜಿ ಮೇಯರ್ ಪುರುಷೋತ್ತಮ ಅವರು ಸೇರಿದಂತೆ ಇತರರು ಇದ್ದರು.