ಮಾಜಿ ಸಚಿವರು ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಸಿ.ವೀರಣ್ಣ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಮತ್ತು ಎಸ್.ಆರ್. ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ವೀರಣ್ಣ, ನನ್ನ ಸಹೋದ್ಯೋಗಿಯಾಗಿದ್ದರು. ಇತ್ತೀಚೆಗಷ್ಟೇ ನಾನು ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಬಂದಿದ್ದೆ. ಇಷ್ಟು ಬೇಗ ನಮ್ಮನ್ನು ಅಗಲಿ ಹೋಗುತ್ತಾರೆ ಎಂದು ಊಹಿಸಿರಲಿಲ್ಲ.
ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಯಾರೂ ಬಯಸದ, ಎಲ್ಲರಿಂದಲೂ ನಿರ್ಲಕ್ಷ್ಯಗೊಳಗಾಗಿದ್ದ ಸಣ್ಣ ಉಳಿತಾಯ ಖಾತೆಯ ಸಚಿವರಾಗಿದ್ದ ವೀರಣ್ಣ, ಆ ಖಾತೆಗೆ ತಮ್ಮ ಆಡಳಿತ ಸಾಮರ್ಥ್ಯ ಮತ್ತು ಜನಪರ ಕಾಳಜಿಯ ಮೂಲಕ ದೊಡ್ಡ ಹೆಸರನ್ನು ತಂದುಕೊಟ್ಟಿದ್ದರು. ಉಪಸಭಾಪತಿಯಾಗಿಯೂ ಮಾದರಿ ನಡೆಯನ್ನು ಹಾಕಿಕೊಟ್ಟಿದ್ದರು.
ಸರಳ, ಸಜ್ಜನ, ಪ್ರಾಮಾಣಿಕ ರಾಜಕಾರಣಿಯಾಗಿದ್ದ ವೀರಣ್ಣ ವರ್ತಮಾನದ ರಾಜಕಾರಣಕ್ಕೆ ಹೊಂದಿಕೊಳ್ಳಲಾಗದೆ ಬಹಳ ಬೇಗ ಸಾರ್ವಜನಿಕ ಜೀವನದಿಂದ ದೂರಸರಿದು, ಕೊರಟಗೆರೆಯ ತಮ್ಮ ಸ್ವಗೃಹದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.
ವೀರಣ್ಣ ಅವರ ನಿಧನದಿಂದ ದು:ಖಿತರಾಗಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತಿ ಕಾರ್ಯಾಗಾರದಲ್ಲಿ ಭಾಗವಹಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ ಸೇರಿ ಸಂಪುಟದ ಎಲ್ಲಾ ಸಚಿವರು, ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಆಹ್ವಾನಿತ ನಾಯಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ.
ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು ಕೆಹೆಚ್ಬಿ ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ದೂರದೃಷ್ಟಿಯಾಗಿದೆ ಹೆಜ್ಜೆಯಾಗಿದೆ. ಇದಕ್ಕಾಗಿ ಶಿವಲಿಂಗೇಗೌಡರು ಮತ್ತು ಜಮೀರ್ ಅಹ್ಮದ್ ಅವರು ಅಭಿನಂದನಾರ್ಹರು.
ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ ಆಸನ ವ್ಯವಸ್ಥೆ ಇರುವಂಥದ್ದು. ನಮ್ಮ ರಾಜ್ಯದ್ದು ಎರಡನೇ ದೊಡ್ಡ ಕ್ರೀಡಾಂಗಣವಾಗಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತ ಮುತ್ತಲ ಊರುಗಳ ಆರ್ಥಿಕತೆಯೂ ಬೆಳೆಯುತ್ತದೆ, ಉದ್ಯೋಗವೂ ಹೆಚ್ಚುತ್ತದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ ಕೆಹೆಚ್ಬಿ ಹಣದಿಂದಲೇ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ಶಿವಲಿಂಗೇಗೌಡರು ಹೇಳಿದ್ದಾರೆ. ಇದೊಂದು ಮಹತ್ತರ ಬೆಳವಣಿಗೆ.
ಖಾಲಿ ಇರುವ ಕೆಹೆಚ್ಬಿ ನಿವೇಶನಗಳ ಮಾರಾಟದಿಂದ ಕೆಹೆಚ್ಬಿ ಗೆ 20 ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ನೆತ್ತಿ ಮೇಲೆ ಸೂರು ಇರಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಕೆಹೆಚ್ಬಿ ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ.
ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ.
ಹೀಗಾಗಿ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ.
- ಇಂದು ಬೆಂಗಳೂರಿನ ಸೂರ್ಯನಗರದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಮಾತನಾಡಿದೆ
ಇಂಧನಗಳ ಮೇಲೆ ಅಧಿಕ ಅಬಕಾರಿ ಸುಂಕದ ಜತೆಗೆ ನಿರಂತರ ಬೆಲೆ ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರ ಕಳೆದ 11 ವರ್ಷಗಳಲ್ಲಿ ಜನಸಾಮಾನ್ಯರ ಜೇಬಿನಿಂದ ಸುಮಾರು 43 ಲಕ್ಷ ಕೋಟಿ ರೂಪಾಯಿ ಸುಲಿಗೆ ಮಾಡಿದೆ.
ಬಿಜೆಪಿಯ ಬೆಲೆ ಏರಿಕೆ ಸುಲಿಗೆಯಿಂದ ಜನಸಾಮಾನ್ಯರಿಗೆ ಆರ್ಥಿಕ ಭದ್ರತೆ ಒದಗಿಸಿರುವುದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು.
ಸರ್ಕಾರಿ ಸೈಟಿನ ಆಸೆಗೆ ಹೆಂಡತಿಯನ್ನು ತಂಗಿ ಎಂದು ಸುಳ್ಳು ಹೇಳಿದ್ದ ಹರಾಮ್ ಕೋರ್ ನೀನು @mepratap
ಲೋಕಸಭೆಗೆ ಪಾಸ್ ಕೊಟ್ಟು ಸಿಕ್ಕಾಕೊಂಡಾಗ ನಿನ್ನ ಮೊಬೈಲ್ ಜಪ್ತಿ ಆಗಿತ್ತಲ್ಲ ಆವಾಗ್ಲೇ ಅದರಲ್ಲಿದ್ದ ನಿನ್ನ ತುದಿಯನ್ನು ಮತ್ತು ಅದರ ಆಟವನ್ನು ನೋಡಿ ನಿನ್ನ ಹೈ ಕಮಾಂಡ್ ನಿನಗೆ ಟಿಕೆಟ್ ನಿರಾಕರಿಸಿದ್ದು ಅಲ್ವೇನೋ ಚಪ್ಪರ್, ಲೋಫರ್, ಹಲ್ಕಟ್?
ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಮೋದಿ ಸರ್ಕಾರದ ಕೈಗೊಂಬೆಗಳು ಎಂದು ಎಲ್ಲರಿಗೂ ಅರ್ಥವಾಗಿದೆ.
ಸಂಸದರು ರಾಜ್ಯದ ನೀರಾವರಿ ಯೋಜನೆಗಳ ವಿಚಾರದಿಂದ ಅನುದಾನ ತಾರತಮ್ಯದವರೆಗೆ ವಹಿಸಿರುವ ಮೂಕತನವನ್ನು ಜನರು ಅರಿತು ಆಕ್ರೋಶ ಹೊರಹಾಕುತ್ತಿದ್ದಾರೆ.
Karnataka’s pride, the Nandini brand, is now the official dairy partner of Royal Challengers Bengaluru, the champions of the last IPL season.
The synergy between Nandini’s trusted legacy and RCB’s sporting excellence will be a key highlight of this IPL season.
ಕರ್ನಾಟಕದ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಕಳೆದ ಐಪಿಎಲ್ ಸೀಸನ್ನ ಚಾಂಪಿಯನ್ ತಂಡ ಆರ್ಸಿಬಿಯ ಅಧಿಕೃತ ಡೈರಿ ಪಾಲುದಾರನಾಗಿದೆ.
ನಂದಿನಿಯ ವಿಶ್ವಾಸಾರ್ಹತೆ ಮತ್ತು ಆರ್ಸಿಬಿಯ ಕ್ರೀಡಾ ಬದ್ಧತೆ ಈ ಬಾರಿಯ ಐಪಿಎಲ್ನ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ.
#KMFNandini #RCB #IPL2026
ಗೃಹಬಳಕೆ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಬೆಲೆ ಏರಿಸಿದ ಬಡವರ ವಿರೋಧಿ ಮೋದಿ..
2 ರೂಪಾಯಿ ಮೆಟ್ರೋ ರೇಟ್ ಜಾಸ್ತಿ ಆದ್ರೆ ಬೀದೀಲಿ ಬಿದ್ದು ಒದ್ದಾಡೋ @Tejasvi_Surya ಎಲ್ಲಿದಿಯಪ್ಪ?
@BJP4Karnataka ಮಾನ ಮರ್ಯಾದೆ ಇದ್ರೆ ಬನ್ರೋ ಬೀದಿಗೆ ಇವಾಗ.
#lpgpricehike#lpgprice
ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ.
ಕಲಬುರಗಿ ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯಕ್ಕೆ ಮೂಲ ಸೌಕರ್ಯ ಒದಗಿಸುವುದಕ್ಕಾಗಿ, ವೈದ್ಯಕೀಯ ಶಿಕ್ಷಣ ಆಸ್ಪತ್ರೆಗಳು & ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ₹85.60 ಕೋಟಿ ವೆಚ್ಚದಲ್ಲಿ MRI ಯಂತ್ರಗಳ ಖರೀದಿ ಮಾಡಲಾಗುತ್ತಿದೆ.
ಈ MRI ಯಂತ್ರಗಳಿಂದ ಜಿಲ್ಲೆಯ ರೋಗಿಗಳು ಹೆಚ್ಚಿನ ಅನುಕೂಲವಾಗಲಿದೆ.
#ಕಲಬುರಗಿಕಲ್ಯಾಣ
ನುಡಿದಂತೆ ನಡೆಯುವ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು ಇಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದೆ.
ಈ ಬಜೆಟ್ ನಲ್ಲಿ ಎಲ್ಲಾ ವರ್ಗದ ಬದುಕಿಗೆ ಬಲ ತುಂಬಲು ಅನೇಕ ಜನಪರ ಕಾರ್ಯಕ್ರಮಗಳನ್ನು ಘೋಷಿಸಲಾಗದೆ.
#KarnatakaBudget2026
ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಇಂದು ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಸಭೆ ನಡೆಸಿ, ಸಾರ್ವಜನಿಕರ ಕುಂದು ಕೊರತೆ ಆಲಿಸಿ, ಅಹವಾಲು ಸ್ವೀಕರಿಸಿದೆ.
೧/೩