ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.
ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ ❤
ಅಧಿಕಾರ ಇದ್ದಾಗ ನವರಂಗಿ ಆಟ,
ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..!
ಅಧಿಕಾರ ಇದ್ದಾಗ ಹಗಲುವೇಷ,
ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..!
ಸನ್ಮಾನ್ಯ @RAshokaBJP ಅವರೇ,
ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ.
ಸಾರಿಗೆ ನೌಕರರು ಮೊದಲ ಬಾರಿ ವೇತನ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ ಅಲ್ಲವೇ?
ತಮ್ಮ ಪಕ್ಷದ ಅಧಿಕಾರದ ಅವಧಿಯಲ್ಲಿ ಸಾರಿಗೆ ನೌಕರರ ತಿಂಗಳ ವೇತನ ಹೇಗೆ ಪಾವತಿಯಾಗುತ್ತಿತ್ತು ಎಂದು ಮಾಹಿತಿ ಪಡೆದು ತಿಳಿಸುವಿರಾ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿ ಸಾರಿಗೆ ನೌಕರರಿಗೆ ಅರ್ಧ ಸಂಬಳ, ಈ ತಿಂಗಳ ಸಂಬಳ ಮುಂದಿನ ತಿಂಗಳು ನೀಡುತ್ತಿದ್ದಾಗ ಅಧಿಕಾರದಲ್ಲಿದ್ದದ್ದು ನಿಮ್ಮದೇ ಪಕ್ಷ ಅಲ್ಲವೇ?
ನಮ್ಮ ಸರ್ಕಾರದ ಅವಧಿಯಲ್ಲಿ 2012-2016 ರವರೆಗೆ ವೇತನ ಹೆಚ್ಚಳ ಮಾಡಿ ಅದನ್ನು 2012 ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಿದ್ದೆವು. 2016-2020 ರವರೆಗೆ ವೇತನ ಹೆಚ್ಚಳ ಮಾಡಿದಾಗ 2016 ರಿಂದ ಜಾರಿ ಮಾಡಿದ್ದೆವು.
ಆದರೆ ತಮ್ಮ ಪಕ್ಷದ ಆಡಳಿತದ ಅವಧಿಯಲ್ಲಿ ಸಾರಿಗೆ ನೌಕರರು 2020ರಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿದ್ದರೂ 01-03-2023ರಿಂದ ಜಾರಿಗೊಳಿಸಿ ( ಸರ್ಕಾರದ ಆದೇಶ ಸಂಖ್ಯೆ: ಟಿಡಿ 12 ಟಿಸಿಬಿ 2023, ಬೆಂಗಳೂರು) ನೌಕರರಿಗೆ ಅನ್ಯಾಯ ಮಾಡಿದ್ದು ನೀವೇ ಅಲ್ಲವೇ?
ತಮ್ಮ @BJP4Karnataka ಸರ್ಕಾರದ ಅವಧಿಯಲ್ಲಿ ನೇಮಕಾತಿ ಮತ್ತು ಹೊಸ ಬಸ್ ಸೇರ್ಪಡೆ ಸ್ಥಗಿತಗೊಂಡಿತ್ತು, ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಹಣ ಪಾವತಿ, ಇತರೆ ಹೊಣೆಗಾರಿಕೆ ಹೀಗೆ ರೂ.5,900 ಕೋಟಿ ಬಾಕಿ ಇತ್ತು ಎಂಬುದರ ಬಗ್ಗೆ ನಿಮಗೆ ಮಾಹಿತಿಯಿದೆಯೇ?
ನಿಮ್ಮ ಪಕ್ಷದ ಅಧಿಕಾರವಾಧಿಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದ ನೇಮಕಾತಿಗೆ ಚಾಲನೆ ನೀಡಿದವರು ನಾವು. 10,000 ಹೊಸ ನೇಮಕಾತಿ ಮಾಡಿದ್ದೆವು. ಇದರಲ್ಲಿ 8 ವರ್ಷಗಳಿಂದ ಅನುಕಂಪದ ಆಧಾರದ ನೌಕರಿ ನೀಡದಿರುವ 1,000 ಮೃತರ ಅವಲಂಬಿತರು ಇದ್ದಾರೆ. 5,200 ಹೊಸ ಬಸ್ಸುಗಳ ಸೇರ್ಪಡೆ ಮಾಡಿದ್ದೇವೆ. ಕನಿಷ್ಠ ಈ ಮಾಹಿತಿಯಾದರೂ ನಿಮಗೆ ತಿಳಿದಿಯೇ?
ನಿಮ್ಮ ಕಾಲದ ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಮೊತ್ತ ಪಾವತಿ ಬಾಕಿ ಪಾವತಿಗಾಗಿ ನಮ್ಮ ಸರ್ಕಾರವು ರೂ.2000 ಕೋಟಿ ಹಣವನ್ನು ಬ್ಯಾಂಕ್ ಗಳಿಂದ ಸಾಲ ಪಡೆಯಲು ಸಾರಿಗೆ ನಿಗಮಗಳಿಗೆ ಅವಕಾಶ ಕಲ್ಪಿಸಿ, ಅದರ ಅಸಲು ಮತ್ತು ಬಡ್ಡಿಯನ್ನು ನಮ್ಮ ಸರ್ಕಾರವೇ ಮರುಪಾವತಿ ಮಾಡುತ್ತಿದೆ. ಇದೇನಾ ನಿಮ್ಮ ಸರ್ಕಾರದ ಸಾಧನೆ?
ನಾನು ಖುದ್ದಾಗಿ ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜೊತೆ ಮಾತುಕತೆ ನಡೆಸಿದ್ದೆ. ಇದಕ್ಕಿಂತ ಮೊದಲು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರೂ ಸಂಧಾನದ ಪ್ರಯತ್ನ ಮಾಡಿದ್ದಾರೆ.
ಆರ್ .ಅಶೋಕರ್ ಅವರೇ, ನಿಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ರಚಿಸಿದ್ದ ಏಕಸದಸ್ಯ ಸಮಿತಿ ರೂ.718 ಕೋಟಿ ವೇತನಪರಿಷ್ಕರಣೆ ಬಾಕಿ ನೀಡಲು ಶಿಫಾರಸು ಮಾಡಿತ್ತು. ಆದರೆ ನಿಮ್ಮ ಸರ್ಕಾರ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಿರಲಿಲ್ಲ. ಆ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಲು ನಮ್ಮ ಸರ್ಕಾರ ಬದ್ದವಾಗಿದೆ. ನಮ್ಮ ಸರ್ಕಾರದ ಈ ನಿಲುವನ್ನು ಸಾರಿಗೆ ನೌಕರರಿಗೆ ತಿಳಿಸಿ ಮುಷ್ಕರ ಕೈಬಿಟ್ಟು ಮುಂದಿನ ದಿನಗಳಲ್ಲಿ ಮಾತುಕತೆ ಮುಂದುವರಿಸಬಹುದು ಎಂದು ಮನವಿ ಮಾಡಿದ್ದರೂ ನೌಕರರ ಸಂಘಟನೆಗಳು ಮುಷ್ಕರ ಹೂಡಿದ್ದಾರೆ.
ನಮ್ಮದು ಕಾರ್ಮಿಕರ ಪರ ಸರ್ಕಾರ, ಅವರ ಹಿತಾಸಕ್ತಿ ಕಾಪಾಡಲು ನಾವು ಬದ್ಧರಾಗಿದ್ದೇವೆ. ಭಾರತೀಯ ಜನತಾ ಪಕ್ಷ ರೈತರು ಮತ್ತು ಕಾರ್ಮಿಕರ ವಿರೋಧಿ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿ.
ನಿಮ್ಮ ಮರೆಗುಳಿತನಕ್ಕೆ ನನ್ನ ಅನುಕಂಪ ಇದೆ. ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದಲು, ಸಾರಿಗೆ ಸಚಿವರಾಗಿ ನೀವು ಮತ್ತು ನಿಮ್ಮ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಮಾಡಿರುವ ಮೋಸ ಮತ್ತು ದ್ರೋಹದ ಇತಿಹಾಸವನ್ನು ನೆನಪು ಮಾಡಿಕೊಳ್ಳಿ.
#KSRTCProtest
@DrAnjaliTai@siddaramaiah@nsitharaman Exactly Madam, You said it the right way, by the way FM can’t even compete with our CM in terms of Managing Money in any way
HYPOCRISY EXPOSED (SHARE) 🔥
Delhi CM Rekha Gupta and many BJP leaders attended Iftar party at Islamic Center
They enjoyed the iftar with Muslims 😂
Will Sinha, Malviya or BALA call her out for appeasing minorities?
In the upcoming Budget Session in Karnataka, Congress Govt is looking to bring up the Greater Bengaluru Governance Bill. The legislative journey of this Bill is yet another instance of @Siddaramaiah Govt's misplaced priorities & poor policymaking.
This thread explains why.
1/11